< ಜೆಕರ್ಯನು 2 >
1 ೧ ನಾನು ಕಣ್ಣಿತ್ತಿ ನೋಡಲು ಇಗೋ, ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡಿದ್ದವನು ಕಾಣಿಸಿದನು.
Esi mefɔ kɔ dzi la, mekpɔ ŋutsu aɖe wòlé nudzidzeka ɖe asi.
2 ೨ ನಾನು ಅವನನ್ನು, “ಎಲ್ಲಿಗೆ ಹೋಗುತ್ತಿ?” ಎಂದು ಕೇಳಲು ಅವನು ನನಗೆ, “ಯೆರೂಸಲೇಮಿನ ಅಗಲ, ಉದ್ದ ಎಷ್ಟಿರಬೇಕೆಂದು ಅಳೆದು ನೋಡುವುದಕ್ಕೆ ಹೋಗುತ್ತಿದ್ದೇನೆ” ಎಂದು ಹೇಳಿದನು.
Mebiae be, “Afi ka yim nèle?” Eɖo eŋu be, “Meyina be madzidze Yerusalem, ne makpɔ eƒe kekeme kple eƒe didime.”
3 ೩ ನನ್ನ ಸಂಗಡ ಮಾತನಾಡಿದ ದೇವದೂತನು ಬರುತ್ತಿರಲು ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು ಹೀಗೆ ಹೇಳಿದನು,
Mawudɔla si nɔ nu ƒom kplim la dzo le gbɔnye, eye mawudɔla bubu zɔ va kpee.
4 ೪ “ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.
Mawudɔla si zɔ va kpee la gblɔ nɛ be, “Ƒu du nàgblɔ na ɖekakpui sia be, ŋkeke li gbɔna esi amewo ayɔ Yerusalem ale gbegbe be womakpɔ nɔƒe na ame sia ame kple woƒe lãhawo o.
5 ೫ ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.
Nye ŋutɔ manye dzo bibi ƒe gli aƒo xlã wo, eye manye eƒe ŋutikɔkɔe.” Yehowae gblɔe.
6 ೬ ಎಲೈ, ಎಲೈ ಉತ್ತರದೇಶದಿಂದ ಓಡಿ ಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದುರಿಸಿದ್ದೆನಲ್ಲಾ; ಇದು ಯೆಹೋವನ ನುಡಿ.
“‘Miva! Miva! Misi tso anyiehenyigba dzi,’ Yehowae gblɔe, elabena mekaka mi de dziƒowo ƒe ya eneawo katã dzi!” Yehowae gblɔe.
7 ೭ ಎಲೈ, ಬಾಬೆಲ್ ಪುರಿಯಲ್ಲಿ ವಾಸಿಸುವ ಚೀಯೋನಿನವರೇ, ತಪ್ಪಿಸಿಕೊಂಡು ಬನ್ನಿರಿ.
“Va, O Zion! Si, wò ame si li kple Babilon vinyɔnu!”
8 ೮ ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,
Elabena ale Yehowa, Dziƒoʋakɔwo ƒe Aƒetɔ la gblɔe nye esi, “Esi wòde bubu ŋutinye, eye wòdɔm ɖe dukɔ siwo ha mi ŋuti, elabena ame si ka asi mia ŋuti la, ka asi eƒe gadaglamakui ŋuti.
9 ೯ “ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ. ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬುದು ನಿಮಗೆ ಗೊತ್ತಾಗುವುದು.
Nye la, makɔ nye asi dzi ɖe wo ŋuti kokoko, ale woƒe kluviwo aha wo. Ekema mianyae be Yehowa, Dziƒoʋakɔwo ƒe Aƒetɔ lae dɔm.
10 ೧೦ ಯೆಹೋವನು ಇಂತೆನ್ನುತ್ತಾನೆ, “ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು.
“O, Zion vinyɔnu, tso aseye nàkpɔ dzidzɔ, elabena megbɔna be manɔ dowòme.” Yehowae gblɔe.
11 ೧೧ ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.
“Dukɔ geɖewo ava ƒo ƒu ɖe Yehowa ŋu gbe ma gbe, eye woanye nye amewo. Manɔ mia dome eye mianya be Yehowa, Dziƒoʋakɔwo ƒe Aƒetɔ lae dɔm ɖe mia gbɔ.
12 ೧೨ ಯೆಹೋವನು ಮೀಸಲಾದ ದೇಶದಲ್ಲಿ ಯೆಹೂದವನ್ನು ತನ್ನ ಸ್ವತ್ತಾಗಿ ಅನುಭವಿಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.
Yuda azu Yehowa ƒe gome kple domenyinu le anyigba kɔkɔe la dzi, eye wòagatia Yerusalem.
13 ೧೩ ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಮಾನವರೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.
Mi anyigbadzitɔwo katã mizi ɖoɖoe le Yehowa ŋkume, elabena etso le eƒe nɔƒe kɔkɔe la.”