< ಜೆಕರ್ಯನು 2 >

1 ನಾನು ಕಣ್ಣಿತ್ತಿ ನೋಡಲು ಇಗೋ, ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡಿದ್ದವನು ಕಾಣಿಸಿದನು.
И снова я поднял глаза мои и увидел: вот муж, у которого в руке землемерная вервь.
2 ನಾನು ಅವನನ್ನು, “ಎಲ್ಲಿಗೆ ಹೋಗುತ್ತಿ?” ಎಂದು ಕೇಳಲು ಅವನು ನನಗೆ, “ಯೆರೂಸಲೇಮಿನ ಅಗಲ, ಉದ್ದ ಎಷ್ಟಿರಬೇಕೆಂದು ಅಳೆದು ನೋಡುವುದಕ್ಕೆ ಹೋಗುತ್ತಿದ್ದೇನೆ” ಎಂದು ಹೇಳಿದನು.
Я спросил: куда ты идешь? И он сказал мне: измерять Иерусалим, чтобы видеть, какая широта его и какая длина его.
3 ನನ್ನ ಸಂಗಡ ಮಾತನಾಡಿದ ದೇವದೂತನು ಬರುತ್ತಿರಲು ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು ಹೀಗೆ ಹೇಳಿದನು,
И вот Ангел, говоривший со мною, выходит, а другой Ангел идет навстречу ему,
4 “ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.
и сказал он этому: иди скорее, скажи этому юноше: Иерусалим заселит окрестности по причине множества людей и скота в нем.
5 ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.
И Я буду для него, говорит Господь, огненною стеною вокруг него и прославлюсь посреди него.
6 ಎಲೈ, ಎಲೈ ಉತ್ತರದೇಶದಿಂದ ಓಡಿ ಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದುರಿಸಿದ್ದೆನಲ್ಲಾ; ಇದು ಯೆಹೋವನ ನುಡಿ.
Эй, эй! бегите из северной страны, говорит Господь: ибо по четырем ветрам небесным Я рассеял вас, говорит Господь.
7 ಎಲೈ, ಬಾಬೆಲ್ ಪುರಿಯಲ್ಲಿ ವಾಸಿಸುವ ಚೀಯೋನಿನವರೇ, ತಪ್ಪಿಸಿಕೊಂಡು ಬನ್ನಿರಿ.
Спасайся, Сион, обитающий у дочери Вавилона.
8 ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,
Ибо так говорит Господь Саваоф: для славы Он послал Меня к народам, грабившим вас, ибо касающийся вас касается зеницы ока Его.
9 “ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ. ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬುದು ನಿಮಗೆ ಗೊತ್ತಾಗುವುದು.
И вот, Я подниму руку Мою на них, и они сделаются добычею рабов своих, и тогда узнаете, что Господь Саваоф послал Меня.
10 ೧೦ ಯೆಹೋವನು ಇಂತೆನ್ನುತ್ತಾನೆ, “ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು.
Ликуй и веселись, дщерь Сиона! Ибо вот, Я приду и поселюсь посреди тебя, говорит Господь.
11 ೧೧ ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.
И прибегнут к Господу многие народы в тот день, и будут Моим народом; и Я поселюсь посреди тебя, и узнаешь, что Господь Саваоф послал Меня к тебе.
12 ೧೨ ಯೆಹೋವನು ಮೀಸಲಾದ ದೇಶದಲ್ಲಿ ಯೆಹೂದವನ್ನು ತನ್ನ ಸ್ವತ್ತಾಗಿ ಅನುಭವಿಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.
Тогда Господь возьмет во владение Иудею, Свой удел на святой земле, и снова изберет Иерусалим.
13 ೧೩ ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಮಾನವರೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.
Да молчит всякая плоть пред лицем Господа! Ибо Он поднимается от святаго жилища Своего.

< ಜೆಕರ್ಯನು 2 >