< ಜೆಕರ್ಯನು 3 >
1 ೧ ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.
И Господ ми показа великия свещеник Исуса стоящ пред ангела Господен; и Сатана стоеше отдясно му за да му се възпротиви.
2 ೨ ಆಗ ಯೆಹೋವನ ದೂತನು ಸೈತಾನನಿಗೆ, “ಯೆಹೋವನು ನಿನ್ನನ್ನು ಖಂಡಿಸಲಿ! ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ?” ಎಂದು ಹೇಳಿದನು.
И Господ рече на Сатана: Господ да те смъмри, Сатано, да! да те смъмри Господ, Който избра Ерусалим. Не е ли този една главня изтръгната из огън?
3 ೩ ಯೆಹೋಶುವನು ದೇವದೂತನ ಮುಂದೆ ಕೊಳೆಯಾದ ಬಟ್ಟೆಯನ್ನು ಧರಿಸಿ ನಿಂತಿರಲು,
А Исус бе в нацапани дрехи като стоеше пред ангела.
4 ೪ ದೇವದೂತನು ತನ್ನ ಸೇವಕರಿಗೆ, “ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ” ಎಂದು ಅಪ್ಪಣೆ ಕೊಟ್ಟು ಅವನಿಗೆ, “ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರವನ್ನು ತೊಡಿಸುವೆನು” ಎಂದು ಹೇಳಿದನು.
И ангелът проговаряйки рече на стоящите пред него, като думаше: Съблечете от него нацапаните дрехи. А нему рече: Ето, отнеха от тебе беззаконието ти, и ще те облека в богати одежди.
5 ೫ “ಇವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿರಿ” ಎಂದು ನಾನು ಅಪ್ಪಣೆಕೊಡಲು ಅವರು ಅವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿ ಅವನಿಗೆ ವಸ್ತ್ರಗಳನ್ನು ತೊಡಿಸಿದರು, ಆಗ ಯೆಹೋವನ ದೂತನು ಎದ್ದು ನಿಂತನು.
Тогава рекох: Нека турят хубава митра на главата му. И тъй, туриха хубава митра на главата му, и го облякоха с дрехи, докато ангелът Господен стоеше близо.
6 ೬ ಆಗ ಯೆಹೋವನ ದೂತನು ಯೆಹೋಶುವನಿಗೆ ಈ ಮಾತನ್ನು ಕೊಟ್ಟನು.
И ангелът Господен заяви на Исуса казвайки:
7 ೭ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನ ಮಾರ್ಗಗಳಲ್ಲಿ ನಡೆದು, ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡುವೆ; ನನ್ನ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.
Така казва Господ на Силите: Ако ходиш в пътищата Ми, и ако пазиш наредбите Ми, тогава ти пак ще пазиш дома Ми, и пак ще пазиш дворовете Ми, и ще ти дам свободен достъп до стоящите тук.
8 ೮ ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಕೇಳಿರಿ. ಇಗೋ, ಮೊಳಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೆನೆಂಬುದಕ್ಕೆ ಇವರೇ ಮುಂಗುರುತು.
Слушай сега велики свещениче Исусе, ти и другарите ти, които седят пред тебе, (понеже и те са човеци посветени за знамение; ) защото, ето, Аз ще доведа служителя Си Отрасъла.
9 ೯ ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು. ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಒಂದೇ ದಿನದೊಳಗೆ ಈ ದೇಶದ ಪಾಪವನ್ನು ಪರಿಹರಿಸುವೆನು.’
Защото, ето камъка, Който положих пред Исуса, на тоя единствен камък има седем очи; ето, Аз ще изсека издълбаното на него, казва Господ на Силите, и ще изгладя беззаконието на тая земя в един ден.
10 ೧೦ “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಆ ದಿನದಲ್ಲಿ ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ, ಅಂಜೂರಗಿಡ ಇವುಗಳ ನೆರಳಿನಲ್ಲಿ ನೆಮ್ಮದಿಯಿಂದ ವಿಶ್ರಮಿಸಲು ಕರೆಯುವಿರಿ.’”
В оня ден, казва Господ на Силите, ще поканите всеки ближния си под лозата си и под смоковницата си.