< ಜೆಕರ್ಯನು 4 >

1 ಅನಂತರ ವಿವರಿಸುವ ದೇವದೂತನು ಮತ್ತೆ ಬಂದು ನಿದ್ರೆಹತ್ತಿದವನ ಹಾಗಿದ್ದ ನನ್ನನ್ನು ಎಚ್ಚರಗೊಳಿಸಿ “ಏನು ನೋಡುತ್ತೀ?” ಎಂದು ಕೇಳಲು ನಾನು,
Потом врати се анђео који ми говораше, и пробуди ме као човека који се буди ода сна.
2 “ಇಗೋ, ಏಳು ದೀಪಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;
И рече ми: Шта видиш? А ја рекох: Видим, ето, свећњак сав од злата, и горе на њему чаша, и седам жижака његових на њему, и седам левака за седам жижака што су горе на њему,
3 ಆ ಪಾತ್ರೆಯ ಬಲಗಡೆಯಲ್ಲಿ ಒಂದು ಎಣ್ಣೆಯ ಮರ, ಎಡಗಡೆಯಲ್ಲಿ ಒಂದು ಎಣ್ಣೆಯ ಮರ, ಮತ್ತು ಎರಡು ಮರಗಳು ಅದರ ಪಕ್ಕಗಳಲ್ಲಿ ಇದೆ” ಎಂದು ಹೇಳಿದೆನು.
И две маслине уза њ, једна с десне стране чаши а једна с леве.
4 ಪುನಃ ನಾನು ಪ್ರಸ್ತಾಪವನ್ನೆತ್ತಿ ವಿವರಿಸುವ ದೇವದೂತನನ್ನು, “ಸ್ವಾಮೀ, ಇವು ಏನನ್ನು ಸೂಚಿಸುತ್ತದೆ?” ಎಂದು ಕೇಳಿದ್ದಕ್ಕೆ,
И проговорих анђелу који говораше са мном, и рекох: Шта је то, господару мој?
5 ಆ ದೇವದೂತನು “ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ?” ಎಂಬುದಾಗಿ ನನ್ನನ್ನು ಪ್ರಶ್ನೆಮಾಡಲು, “ನಾನು ಇಲ್ಲ ಸ್ವಾಮಿ” ಎಂದು ಅರಿಕೆ ಮಾಡಿದೆನು.
А анђео који говораше са мном одговори и рече ми: Зар не знаш шта је то? И рекох: Не, господару мој.
6 ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.
А он одговори и рече ми говорећи: То је реч Господња Зоровавељу: не силом ни крепошћу него Духом мојим, вели Господ над војскама.
7 ದೊಡ್ಡ ಬೆಟ್ಟವೇ, “ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆ ಮಾಡುವನು; ಇದರ ಮೇಲೆ ದೇವರ ದಯೆಯಿರಲಿ” ಎಂಬ ಜನಘೋಷವಾಗುವುದು.
Шта си ти, горо велика, пред Зоровавељем? Равница; и он ће изнети највиши камен, с усклицима: Милост, милост њему.
8 ಅಲ್ಲದೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ,
И дође ми реч Господња говорећи:
9 “ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ. ಆ ಕೈಗಳೇ ಇದನ್ನು ಪೂರೈಸುವವು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರನಾದ ಯೆಹೋವನೇ” ಎಂದು ನನಗೆ ಗೊತ್ತಾಗುವುದು.
Руке Зоровавељеве основаше овај дом, руке ће његове и довршити, и познаћеш да ме је Господ над војскама послао к вама.
10 ೧೦ ಆಗ ದೂತನು “ಈ ದೀಪಗಳಿಂದ ಸೂಚಿತವಾದ ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವುದನ್ನು ಸಂತೋಷದಿಂದ ನೋಡುತ್ತೇವೆ. ಹೀಗಿರುವಲ್ಲಿ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?
Јер ко је презрео дан малих ствари? Јер ће се радовати кад види камен мерачки у руци Зоровавељу, оних седам очију Господњих који прелазе сву земљу.
11 ೧೧ ಆಗ ನಾನು ದೇವದೂತನಿಗೆ, ದೀಪಸ್ತಂಭದ ಎಡಬಲದಲ್ಲಿರುವ ಈ ಎಣ್ಣೆಯ ಮರಗಳು ಏನು?” ಎಂದೆನು.
Тада одговарајући рекох му: Шта су оне две маслине с десне стране свећњаку и с леве?
12 ೧೨ ಮತ್ತೆ ನಾನು ಅವನಿಗೆ, ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ. ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು? ಎಂದು ಕೇಳಿದೆ.
И опет проговорих и рекох му: Шта су оне две гранчице маслинове, што су међу два левка златна, који точе злато?
13 ೧೩ ಅದಕ್ಕೆ ಆ ದೂತನು ನನಗೆ, “ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ?” ಎಂದು ಕೇಳಿದಾಗ ನಾನು, “ಇಲ್ಲ ಸ್ವಾಮೀ” ಎಂದೆ.
И рече ми говорећи: Зар не знаш шта је то? А ја рекох: Не, господару мој.
14 ೧೪ ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಆ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವ ಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ” ಎಂದು ಹೇಳಿದನು.
Тада рече: То су две маслине које стоје код Господа све земље.

< ಜೆಕರ್ಯನು 4 >