< ಜೆಕರ್ಯನು 5 >
1 ೧ ಆಗ ನಾನು ಕಣ್ಣೆತ್ತಿ ನೋಡಲು ಇಗೋ, ಹಾರುತ್ತಿರುವ ಒಂದು ಸುರುಳಿಯು ಕಾಣಿಸಿತು.
Ka mael tih, ka mik ka huel tih ka sawt vaengah cayol te tarha ding.
2 ೨ ಆಗ ದೂತನು ನನಗೆ, “ನಿನಗೆ ಏನು ಕಾಣಿಸುತ್ತದೆ?” ಎಂದಾಗ ನಾನು, ಹಾರುತ್ತಿರುವ ಒಂದು ಸುರುಳಿಯು ಕಾಣಿಸುತ್ತದೆ ಅದರ ಉದ್ದ ಇಪ್ಪತ್ತು ಮೊಳ, ಅಗಲ ಹತ್ತು ಮೊಳ ಎಂದು ಉತ್ತರಕೊಟ್ಟೆನು.
Te vaengah kai te, “Balae na hmuh,” a ti. Te dongah, “Cayol aka ding te ka hmuh, a yun dong kul, a daang dong rha lo,” ka ti nah.
3 ೩ ಆಗ ದೂತನು ನನಗೆ, “ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪವು ಇದೇ. ಕಳ್ಳತನ ಮಾಡುವ ಪ್ರತಿಯೊಬ್ಬರೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವರು. ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳು ಸಾಕ್ಷಿಯೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವನು.
Te vaengah kai taengah, “He tah diklai hman boeih ah aka pha thaephoeinah ni. Aka huen boeih soah te dongkah bangla a hmil vetih aka toemngam boeih soah te dongkah bangla a hmil ni.
4 ೪ ನಾನು ಶಾಪವನ್ನು ಕಳುಹಿಸುತ್ತೇನೆ. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಅಪ್ಪಣೆಯಂತೆ ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರೆತ್ತಿ ಸುಳ್ಳು ಸಾಕ್ಷಿಹೇಳುವವನ ಮನೆಯೊಳಗೆ ನುಗ್ಗಿ ಮತ್ತು ಅವನ ಮನೆಯಲ್ಲಿನ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು’” ಎಂದು ಹೇಳಿದನು.
He tah caempuei BOEIPA kah olphong ni. Cayol ka khuen vetih hlanghuen im khui la, kai ming neh a honghi la aka toemngam im khuila kun ni. A im khui ah rhaehrhong vetih im khaw, a thing neh a lungto khaw a khah pah ni,” a ti.
5 ೫ ಆಗ ನನ್ನ ಸಂಗಡ ಮಾತನಾಡುತ್ತಿದ್ದ ದೂತನು ಬಂದು, “ಕಂಡು ಬರುತ್ತಿರುವ ಆ ವಸ್ತು ಏನೆಂದು ನೋಡು” ಎಂಬುದಾಗಿ ನನಗೆ ಹೇಳಿದನು.
Te phoeiah kai taengkah aka cal puencawn ha pai tih kai taengah, “Na mik huel laeh lamtah mebang a thoeng he hmu,” a ti.
6 ೬ ನಾನು, “ಏನದು?” ಎಂದು ಕೇಳಿದ್ದಕ್ಕೆ ಅವನು, “ಇದು ಅಳೆಯುವ ಬುಟ್ಟಿ” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು” ಎಂದನು.
Te dongah, “Balae te,” ka ti nah hatah, “Cangnoek la aka thoeng he,” a ti. Te phoeiah, “He tah diklai tom kah amih mueimae ni,” a ti.
7 ೭ ಇಗೋ, ತಟ್ಟೆಯಾಕಾರದ ಸೀಸದ ಮುಚ್ಚಳವು ತೆರೆಯಲ್ಪಡಲಾಗಿ ಆಹಾ, ಒಬ್ಬ ಸ್ತ್ರೀ ಅದರಲ್ಲಿ ಕುಳಿತುಕೊಂಡಿದ್ದಳು.
Te vaengah kawnlawk amsing te tarha rhoep uh tih cangnoek khui ah huta pakhat ana ngol.
8 ೮ ಆಗ ದೂತನು ಹೇಳಿದ್ದೇನೆಂದರೆ, “ಇದು ದುಷ್ಟತ್ವವು” ಎಂದು ಹೇಳಿ ಅವಳನ್ನು ಬುಟ್ಟಿಯೊಳಗೆ ಪುನಃ ಅದುಮಿ ಆ ಬುಟ್ಟಿಯ ಮುಚ್ಚಳವನ್ನು ಮುಚ್ಚಿದನು.
Te phoeiah, “Halangnah he,” a ti tih anih te cangnoek khui la a det. Te phoeiah tah a rhai te kawnlawk lung neh a nan.
9 ೯ ನಾನು ಕಣ್ಣೆತ್ತಿ ನೋಡಲು, ಆಹಾ ಕೊಕ್ಕರೆಯ ರೆಕ್ಕೆಯಂತಿರುವ ರೆಕ್ಕೆಯುಳ್ಳ ಇಬ್ಬರು ಹೆಂಗಸರು ಕಂಡುಬಂದರು. ಅವರ ರೆಕ್ಕೆಗಳೊಳಗೆ ಗಾಳಿಯು ತುಂಬಿಕೊಂಡಿತ್ತು. ಅವರು ಅಳತೆಯ ಬುಟ್ಟಿಯನ್ನು ಎತ್ತಿಕೊಂಡು ಹಾರಿ ಹೋದರು.
Ka mik ka huel bal tih ka sawt vaengah, huta rhoi te khohli dongah a phae neh tarha thoeng. Te rhoi kah a phae tah bungrho phae bangla om tih cangnoek te diklai laklo neh vaan laklo ah a khuen rhoi.
10 ೧೦ ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ, “ಇವರು ಅಳತೆಯ ಬುಟ್ಟಿಯನ್ನು ಎಲ್ಲಿಗೆ ಹೊತ್ತುಕೊಂಡು ಹೋಗುತ್ತಾರೆ?” ಎಂದು ಹೇಳಿದೆನು.
Te dongah kai taengah aka cal puencawn te, “Cangnoek te melam a khuen rhoi?,” ka ti nah.
11 ೧೧ ದೂತನು ನನಗೆ, “ಶಿನಾರ್ ದೇಶದಲ್ಲಿ ಅವಳಿಗೆ ಮನೆಕಟ್ಟುವುದಕ್ಕಾಗಿ ಹೋಗುತ್ತಾರೆ. ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ವಂತ ಸ್ಥಾನದಲ್ಲಿ ಇರಿಸಲ್ಪಡುವುದು” ಎಂದನು.
Te vaengah kai taengah, “Shinar kho ah a im la a sak. Sikim coeng tih a tungkho dongah pahoi a hol ni,” a ti.