< ಜೆಕರ್ಯನು 8 >
1 ೧ ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
And the word of Jehovah of hosts came to me, saying,
2 ೨ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ.”
Thus saith Jehovah of hosts: I have been jealous for Zion with great jealousy, And with great wrath have I been jealous for her.
3 ೩ ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.”
Thus saith Jehovah: I have returned to Zion, And I will dwell in Jerusalem; And Jerusalem shall be called a city of truth, And the mountain of Jehovah of hosts the holy mountain.
4 ೪ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಯೆರೂಸಲೇಮಿನ ಚೌಕಗಳಲ್ಲಿ ಮುದುಕ ಮತ್ತು ಮುದುಕಿಯರು ಸೇರುವರು. ಅತಿ ವೃದ್ಧಾಪ್ಯದ ನಿಮಿತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವುದು.
Thus saith Jehovah of hosts: There shall yet old men and old women dwell In the streets of Jerusalem, Every one with his staff in his hand for great age.
5 ೫ ಆ ಪಟ್ಟಣದ ಚೌಕಗಳಲ್ಲಿ ಆಟವಾಡುವ ಬಾಲಕ ಮತ್ತು ಬಾಲಕಿಯರು ತುಂಬಿಕೊಂಡಿರುವರು.”
And the streets of the city shall be full Of boys and girls playing in her streets.
6 ೬ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ?” ಇದು ಸೇನಾಧೀಶ್ವರ ಯೆಹೋವನ ನುಡಿ.
Thus saith Jehovah of hosts: If it be difficult in the eyes Of the residue of this people in these days, Is it therefore difficult in my eyes, Saith Jehovah of hosts?
7 ೭ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮದಿಕ್ಕಿನ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು,
Thus saith Jehovah of hosts: Behold, I will save my people From the land of the rising, and from the land of the setting sun.
8 ೮ ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”
And I will bring them, and they shall dwell in Jerusalem; And they shall be my people, And I will be their God, In truth and in righteousness.
9 ೯ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ!
Thus saith Jehovah of hosts: Let your hands be strong, Ye that hear in these days These words by the mouth of the prophets, Who were in the day when the foundation of the house of Jehovah of hosts was laid, The temple, that it might be built.
10 ೧೦ ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ, ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿ ಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರೇಪಿಸುತ್ತಿದ್ದರು.
For before these days There was no recompense for men, Nor was there any recompense for beasts; Nor to him that went out, nor to him that came in, was there security from the enemy; For I set all men one against another.
11 ೧೧ ಇಂದಿನಿಂದಲೋ ಈ ಜನಶೇಷದವರ ವಿಷಯದಲ್ಲಿ ನಾನು ಪೂರ್ವಕಾಲದಲ್ಲಿ ಇದ್ದಂತೆ ಇರುವುದಿಲ್ಲ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
But now I will not be as in former days Toward the residue of this people, Saith Jehovah of hosts.
12 ೧೨ “ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.
For the seed shall be prosperous; The vine shall yield its fruit, And the earth shall yield her increase, And the heavens shall yield their dew; And I will cause the remnant of this people to possess all these.
13 ೧೩ ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!”
And it shall be, that as ye were a curse among the nations, O house of Judah and house of Israel, So will I save you, and ye shall be a blessing. Fear not; let your hands be strong!
14 ೧೪ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನಗೆ ಸಿಟ್ಟೆಬ್ಬಿಸಿದಾಗ ನಿಮಗೆ ಕೇಡುಮಾಡಬೇಕೆಂದು ನಾನು ಕರುಣೆಯಿಲ್ಲದೆ ಸಂಕಲ್ಪಸಿದಂತೆ
For thus saith Jehovah of hosts: As I thought to do you evil, When your fathers provoked me to anger, Saith Jehovah of hosts, And I repented not,
15 ೧೫ ಈ ಕಾಲದಲ್ಲಿಯೂ ಯೆರೂಸಲೇಮಿಗೂ, ಯೆಹೂದ ಕುಲಕ್ಕೂ ಮೇಲುಮಾಡಬೇಕೆಂದು ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ; ಹೆದರಬೇಡಿರಿ. ಇದು ಸೇನಾಧೀಶ್ವರನಾದ ಯೆಹೋವನ ನುಡಿ.
So have I again thought in these days To do good to Jerusalem, And to the house of Judah. Fear ye not!
16 ೧೬ “ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ;
These are the things which ye shall do: Speak ye every man the truth to his neighbor; Judge according to truth, and for peace in your gates;
17 ೧೭ ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.”
And meditate not evil against one another in your hearts, And love not a false oath! For all these are things which I hate, saith Jehovah.
18 ೧೮ “ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
And the word of Jehovah of hosts came to me, saying,
19 ೧೯ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.’”
Thus saith Jehovah of hosts: The fast of the fourth month, and the fast of the fifth month, And the fast of the seventh month, and the fast of the tenth month, Shall be to the house of Judah for joy and gladness, And cheerful festivals. But love ye truth and peace!
20 ೨೦ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;
Thus saith Jehovah of hosts: It shall yet come to pass, that many nations shall come, And the inhabitants of many cities;
21 ೨೧ ಒಂದು ಊರಿನವರು ಇನ್ನೊಂದು ಊರಿಗೆ ಹೋಗಿ, ‘ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ, ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ’ ಎಂದು ಹೇಳುವರು.
And the inhabitants of one city shall go to another, saying, “Let us go speedily to pray before Jehovah, And to seek Jehovah of hosts! I will go also!”
22 ೨೨ ಹೀಗೆ ಬಹು ದೇಶಗಳವರೂ, ಬಲವಾದ ಜನಾಂಗಗಳವರೂ ಯೆರೂಸಲೇಮಿನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ ಬರುವರು.”
Then shall come many nations and mighty kingdoms, To seek Jehovah of hosts in Jerusalem, And to pray before Jehovah.
23 ೨೩ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.
Thus saith Jehovah of hosts: In those days shall ten men of all languages of the nations take hold, They shall take hold of the skirt of him that is a Jew, Saying, “We will go with you, For we have heard that God is with you.”