< ಜೆಕರ್ಯನು 9 >
1 ೧ ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ. ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ; ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ,
The prophecy of the word of the Lord concerning the land of Chadrach, and Damascus his resting-place; for unto the Lord [will look] the eye of men, and [that of] all the tribes of Israel;
2 ೨ ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹಳ ಜಾಣರು ಎಂದು ಕೊಚ್ಚಿಕೊಂಡಿರುವ ತೂರ್, ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ.
And also concerning Chamath that is bordering thereon, Tyre, and Zidon, though it be very wise.
3 ೩ ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ, ಬಂಗಾರವನ್ನು ಬೀದಿಯ ಬದಿಯ ಕಸದ ರಾಶಿಯಂತೆ ಮಾಡಿಕೊಂಡಿದೆ.
And though Tyre have built herself a strong-hold, and heaped up silver as the dust, and fine gold as the mire of the streets:
4 ೪ ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರಮಿಸಿ ಪೌಳಿಗೋಡೆಯನ್ನು ಸಮುದ್ರದೊಳಗೆ ಹೊಡೆದುಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವುದು.
Behold, the Lord will drive her out, and he will strike down her power into the sea; and she herself shall be devoured with fire.
5 ೫ ಅಷ್ಕೆಲೋನು ಇದನ್ನು ನೋಡಿ ಹೆದರುವುದು; ಗಾಜವು ಸಹ ಅತಿ ಸಂಕಟಪಡುವುದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವುದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವುದು;
Ashkelon shall see it, and fear; Gazzah also, and tremble greatly: and 'Ekron, for her trust will be made ashamed: and the king shall vanish from Gazzah, and Ashkelon shall not be inhabited.
6 ೬ ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಮಾಡುವರು; ಹೀಗೆ ಫಿಲಿಷ್ಟಿಯದ ಗರ್ವವನ್ನು ಭಂಗಪಡಿಸುವೆನು.
And aliens shall dwell in Ashdod, and I will cut off the pride of the Philistines.
7 ೭ ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಮೀಸಲಾದ ಜನರಾಗಿ ಉಳಿಯುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು.
And I will remove their bloody [-sacrifices] out of their mouth, and their abominations from between their teeth; and their land also shall be left for our God, and it shall be as a prince's [dwelling] in Judah, and 'Ekron shall be like Jebusi.
8 ೮ ಯಾರೂ ಹಾದುಹೋಗದಂತೆ ನನ್ನ ಆಲಯದ ಸುತ್ತಲು ಪಾಳೆಯನ್ನು ಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ದಾಳಿಮಾಡುವುದಿಲ್ಲ; ಏಕೆಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.
And I will encamp about my house against armies, against those that pass to and fro, and there shall not pass over them any more an oppressor; for now do I look [on them] with my eyes.
9 ೯ ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.
Be greatly glad, O daughter of Zion; shout, O daughter of Jerusalem! behold, thy King will come unto thee, righteous and victorious is he, lowly, and riding upon an ass, and upon a colt the foal of a she-ass.
10 ೧೦ ನಾನು ಎಫ್ರಾಯೀಮಿನ ರಥಬಲವನ್ನೂ, ಯೆರೂಸಲೇಮಿನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವುದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವುದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಹರಡಿಕೊಂಡಿರುವುದು.
And I will cut off chariots from Ephraim, and horses from Jerusalem, and there shall be cut off the battle-bow, and he shall speak peace unto the nations; and his dominion shall be from sea to sea, and from the river to the ends of the earth.
11 ೧೧ ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.
As for thee also, because of the blood of thy covenant, do I send forth thy prisoners out of the pit wherein there is no water.
12 ೧೨ ನಿರೀಕ್ಷೆ ಹೊಂದಿದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು ಸುಖವನ್ನು ದಯಪಾಲಿಸುವೆನೆಂದು ಈಗಲೂ ಪ್ರಕಟಿಸುತ್ತೇನೆ.
Return you to the strong-hold, ye hopeful prisoners: even today do I declare, that I will recompense twofold [good] unto thee.
13 ೧೩ ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ. ಅದರಲ್ಲಿ ಎಫ್ರಾಯೀಮ್ ಎಂಬ ಬಾಣವನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು.
For I do bend Judah for me, grasp Ephraim [as] a bow; and I will stir up thy sons, O Zion, against thy sons, O Javan, and I will render thee as the sword of a mighty man.
14 ೧೪ ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು.
And the Lord will appear over them, and then will go forth like the lightning his arrow: and the Lord Eternal will blow on the cornet, and he will go along in the tempests of the south.
15 ೧೫ ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು.
The Lord of hosts will be a shield over them; and they shall devour [the prey], and subdue the sling-stones; and they shall drink, make a noise as one [drunken with] wine; and they shall be filled like the offering-bowls, like the corners of the altar.
16 ೧೬ ಆ ದಿನದಲ್ಲಿ ಅವರ ದೇವರಾದ ಯೆಹೋವನು ಅವರನ್ನು ತನ್ನ ಹಿಂಡಾಗಿರುವ ಜನರೆಂದು ರಕ್ಷಿಸುವನು; ಅವರು ಕಿರೀಟದಲ್ಲಿನ ರತ್ನಗಳಂತೆ ತಮ್ಮ ದೇಶದಲ್ಲಿ ಥಳಥಳಿಸುವರು.
And the Lord their God will save them on that day as the flock of his people; for [like] the stones of a crown, will they elevate themselves over his land.
17 ೧೭ ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.
For how great will be [that generation's] happiness, and how great its beauty! corn shall make the young men sing joyfully, and new wine the virgins.