< ಜೆಕರ್ಯನು 1 >
1 ೧ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಅದ ಜೆಕರ್ಯನೆಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು.
En la oka monato, en la dua jaro de Dario, aperis vorto de la Eternulo al la profeto Zeĥarja, filo de Bereĥja, filo de Ido, dirante:
2 ೨ ಅದೇನೆಂದರೆ, “ಯೆಹೋವನು ನಿಮ್ಮ ಪೂರ್ವಿಕರ ಮೇಲೆ ಬಹು ಕೋಪಗೊಂಡಿದ್ದಾನೆ.
Forte koleris la Eternulo kontraŭ viaj patroj.
3 ೩ ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, ‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’” ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Diru do al ili: Tiele diras la Eternulo Cebaot: Revenu al Mi, diras la Eternulo Cebaot, kaj tiam Mi returnos Min al vi, diras la Eternulo Cebaot.
4 ೪ ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.
Ne estu kiel viaj patroj, al kiuj vokadis la antaŭaj profetoj, dirante: Tiele diras la Eternulo Cebaot: Deturnu vin de viaj malbonaj vojoj kaj de viaj malbonaj agoj — sed ili ne aŭskultis kaj ne atentis Min, diras la Eternulo.
5 ೫ “ನಿಮ್ಮ ಪೂರ್ವಿಕರು ಎಲ್ಲಿ? ಪ್ರವಾದಿಗಳು ಸದಾಕಾಲ ನಿತ್ಯನಿರಂತರವಾಗಿ ಇರುವರೇ?
Kie estas viaj patroj? kaj eĉ la profetoj, ĉu ili povas vivi eterne?
6 ೬ ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.
Sed Miaj vortoj kaj decidoj, pri kiuj Mi diris al Miaj servantoj, la profetoj, ĉu ili ne trafis viajn patrojn? Kaj ili pentis, kaj diris: Kiel la Eternulo Cebaot decidis agi kun ni pro niaj vojoj kaj pro niaj agoj, tiel Li agis kun ni.
7 ೭ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಹನ್ನೊಂದನೆಯ ತಿಂಗಳಿನ ಅಂದರೆ ಶೆಬಾಟ್ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನ ವಾಕ್ಯವು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನಾದ ಜೆಕರ್ಯನೆಂಬ ಪ್ರವಾದಿಗೆ ಕೇಳಿಬಂತು,
En la dudek-kvara tago de la dek-unua monato, tio estas de la monato Ŝebat, en la dua jaro de Dario, aperis vorto de la Eternulo al la profeto Zeĥarja, filo de Bereĥja, filo de Ido, dirante:
8 ೮ “ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು, ಕಂದು, ಬಿಳಿ ಕುದುರೆಗಳು ಮತ್ತು ಅವರ ಸವಾರರಿದ್ದರು.
Mi vidis en la nokto: jen viro sidas sur ruĝa ĉevalo, kaj li troviĝas inter mirtoj en ombrita loko, kaj post li troviĝas ĉevaloj ruĝaj, brunaj, kaj blankaj.
9 ೯ ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು, ‘ಸ್ವಾಮಿ ಇವರು ಯಾರು?’” ಎಂದು ನಾನು ಕೇಳಲು ಆತನು ನನಗೆ, “ಇವರು ಇಂಥವರೆಂದು ನಿನಗೆ ತೋರಿಸುವೆನು” ಎಂಬುದಾಗಿ ಹೇಳಿದನು.
Mi demandis: Kiuj ili estas, mia sinjoro? Kaj la anĝelo, kiu parolis kun mi, diris al mi: Mi montros al vi, kiuj ili estas.
10 ೧೦ ಕೂಡಲೆ ಸುಗಂಧವೃಕ್ಷಗಳ ನಡುವೆ ನಿಂತಿದ್ದವನು, “ಇವರು ಲೋಕಸಂಚಾರಾರ್ಥವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟನು.
Kaj la viro, kiu troviĝis inter la mirtoj, ekparolis kaj diris: Ili estas tiuj, kiujn la Eternulo sendis, por trairi la teron.
11 ೧೧ ಆಗ ಅವರು ಸುಗಂಧವೃಕ್ಷಗಳ ನಡುವೆ ನಿಂತಿದ್ದ ಆ ಯೆಹೋವನ ದೂತನಿಗೆ, “ನಾವು ಲೋಕದಲ್ಲಿ ಸಂಚರಿಸಿ ಬಂದಿದ್ದೇವೆ. ಇಗೋ ಲೋಕವೆಲ್ಲಾ ನೆಮ್ಮದಿಯಾಗಿ ಸುಮ್ಮನಿದೆ” ಎಂದು ಅರಿಕೆಮಾಡಿದರು.
Kaj ili mem ekparolis al la anĝelo de la Eternulo, kiu troviĝis inter la mirtoj, kaj diris: Ni trairis la teron, kaj ni trovis, ke la tuta tero estas trankvila kaj paca.
12 ೧೨ ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು,
Tiam ekparolis la anĝelo de la Eternulo kaj diris: Ho Eternulo Cebaot, kiel longe Vi ne kompatos Jerusalemon kaj la urbojn de Judujo, kiujn Vi koleras jam dum sepdek jaroj?
13 ೧೩ ನನ್ನೊಂದಿಗೆ ಮಾತನಾಡಿದ ದೂತನಿಗೆ, ಯೆಹೋವನು ಕರುಣೆ ಹಾಗೂ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು.
Kaj la Eternulo respondis al la anĝelo, kiu parolis kun mi, vortojn bonajn, vortojn konsolajn.
14 ೧೪ ಆಗ ಆ ದೂತನು ನನಗೆ ಈ ಅಪ್ಪಣೆ ಮಾಡಿದನು, “ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲಾ’ ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ.
Tiam diris al mi la anĝelo, kiu parolis kun mi: Proklamu kaj diru: Tiele diras la Eternulo Cebaot: Mi ekfervoris pri Jerusalem kaj pri Cion per granda fervoro;
15 ೧೫ ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”
kaj per granda indigno Mi indignas kontraŭ la nacioj memfidaj; ĉar kiam Mi koleris malmulte, ili akcelis la malfeliĉon.
16 ೧೬ ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ನಾನು ಕನಿಕರವುಳ್ಳವನಾಗಿ ಯೆರೂಸಲೇಮಿಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಪುನಃ ಅಲ್ಲಿ ಕಟ್ಟಲ್ಪಡುವುದು; ಯೆರೂಸಲೇಮಿನಲ್ಲಿ ನೂಲು ಎಳೆಯಲ್ಪಡುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Tial tiele diras la Eternulo: Mi returnas Min al Jerusalem kun kompato; Mia domo estos konstruita en ĝi, diras la Eternulo Cebaot, kaj ŝnuro de ĉarpentistoj estos tirata en Jerusalem.
17 ೧೭ ಮತ್ತೊಮ್ಮೆ ಹೀಗೆ ಸಾರಿ ಹೇಳು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವುದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.”
Ankoraŭ proklamu jenon: Tiele diras la Eternulo Cebaot: Denove pleniĝos Miaj urboj per bonaĵo, denove la Eternulo konsolos Cionon, kaj denove Li elektos Jerusalemon.
18 ೧೮ ನಾನು ಕಣ್ಣೆತ್ತಿ ನೋಡಲು ಇಗೋ, ನಾಲ್ಕು ಕೊಂಬುಗಳು ಕಾಣಿಸಿದವು.
Mi levis miajn okulojn kaj ekvidis: jen estas kvar kornoj.
19 ೧೯ ವಿವರಿಸುವ ದೂತನನ್ನು ಕುರಿತು, “ಇವು ಏನು?” ಎಂದು ನಾನು ಕೇಳಿದ್ದಕ್ಕೆ ಅವನು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನು ಚದುರಿಸುವ ಕೊಂಬುಗಳು” ಎಂದು ಉತ್ತರಕೊಟ್ಟನು.
Kaj mi diris al la anĝelo, kiu parolis kun mi: Kion tio signifas? Kaj li respondis al mi: Tio estas la kornoj, kiuj disĵetis Jehudan, Izraelon, kaj Jerusalemon.
20 ೨೦ ಅನಂತರ ಯೆಹೋವನು ನನಗೆ ನಾಲ್ಕು ಮಂದಿ ಕಮ್ಮಾರರನ್ನು ತೋರಿಸಿದನು.
Kaj la Eternulo montris al mi kvar majstrojn.
21 ೨೧ ಆಗ ನಾನು, “ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?” ಎಂದು ಕೇಳಲು ಅವನು, “ಈ ಕೊಂಬುಗಳು ಯೆಹೂದದವರಲ್ಲಿ ಯಾರೂ ತಲೆಯೆತ್ತದಂತೆ ಅವರನ್ನು ಚದುರಿಸಿವೆಯಷ್ಟೆ; ಇವರಾದರೋ ಯೆಹೂದ ದೇಶದವರನ್ನು ಚದುರಿಸಬೇಕೆಂದು ತಲೆಯೆತ್ತಿದ ಜನಾಂಗಗಳ ಕೊಂಬುಗಳನ್ನು ಹೆದರಿಸಿ ಕೆಡುವುದಕ್ಕೆ ಬಂದಿದ್ದಾರೆ” ಎಂದು ಹೇಳಿದನು.
Mi diris: Kion ili intencas fari? Li respondis jene: Tiuj kornoj disĵetis Jehudan tiel, ke neniu povis levi sian kapon; tial nun venas ĉi tiuj, por fortimigi tiujn, por dehaki la kornojn de la nacioj, kiuj levis sian kornon kontraŭ la loĝantojn de Judujo, por disĵeti ilin.