< ಚೆಫನ್ಯನು 2 >

1 ನಾಚಿಕೆಗೇಡಿ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ, ಯೆಹೋವನ ಉಗ್ರಕೋಪವು ನಿಮ್ಮ ಮೇಲೆ ಬರುವುದಕ್ಕೆ ಮೊದಲೇ ಯೆಹೋವನ ಸಿಟ್ಟಿನ ದಿನವೂ ಉರಿದು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ, ನೀವೆಲ್ಲರೂ ಸೇರಿ ಬನ್ನಿರಿ, ಒಟ್ಟಾಗಿ ಕೂಡಿರಿ.
הִֽתְקוֹשְׁשׁ֖וּ וָק֑וֹשּׁוּ הַגּ֖וֹי לֹ֥א נִכְסָֽף׃
2 ಆ ಕಾಲವು ಹೊಟ್ಟಿನಂತೆ ಹಾರಿಹೋಗುತ್ತದಲ್ಲಾ.
בְּטֶ֙רֶם֙ לֶ֣דֶת חֹ֔ק כְּמֹ֖ץ עָ֣בַר י֑וֹם בְּטֶ֣רֶם ׀ לֹא־יָב֣וֹא עֲלֵיכֶ֗ם חֲרוֹן֙ אַף־יְהוָ֔ה בְּטֶ֙רֶם֙ לֹא־יָב֣וֹא עֲלֵיכֶ֔ם י֖וֹם אַף־יְהוָֽה׃
3 ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ.
בַּקְּשׁ֤וּ אֶת־יְהוָה֙ כָּל־עַנְוֵ֣י הָאָ֔רֶץ אֲשֶׁ֥ר מִשְׁפָּט֖וֹ פָּעָ֑לוּ בַּקְּשׁוּ־צֶ֙דֶק֙ בַּקְּשׁ֣וּ עֲנָוָ֔ה אוּלַי֙ תִּסָּ֣תְר֔וּ בְּי֖וֹם אַף־יְהוָֽה׃
4 ಗಾಜ ಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು, ಅಷ್ಡೋದ್ ನಿವಾಸಿಗಳನ್ನು ನಡು ಮಧ್ಯಾಹ್ನದಲ್ಲಿ ಆಕ್ರಮಿಸಿ ಓಡಿಸಿಬಿಡುವರು, ಎಕ್ರೋನ್ ನಗರ ನಿರ್ಮೂಲವಾಗುವುದು.
כִּ֤י עַזָּה֙ עֲזוּבָ֣ה תִֽהְיֶ֔ה וְאַשְׁקְל֖וֹן לִשְׁמָמָ֑ה אַשְׁדּ֗וֹד בַּֽצָּהֳרַ֙יִם֙ יְגָ֣רְשׁ֔וּהָ וְעֶקְר֖וֹן תֵּעָקֵֽר׃ ס
5 ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ವಾಸಿಸುವ ಜನರೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.
ה֗וֹי יֹֽשְׁבֵ֛י חֶ֥בֶל הַיָּ֖ם גּ֣וֹי כְּרֵתִ֑ים דְּבַר־יְהוָ֣ה עֲלֵיכֶ֗ם כְּנַ֙עַן֙ אֶ֣רֶץ פְּלִשְׁתִּ֔ים וְהַאֲבַדְתִּ֖יךְ מֵאֵ֥ין יוֹשֵֽׁב׃
6 ಸಮುದ್ರ ತೀರದ ಆ ಪ್ರಾಂತ್ಯವು ಹುಲ್ಲುಗಾವಲಾಗಿ, ಕುರುಬರ ಗುಡಿಸಲಾಗಿ, ಹಿಂಡುಗಳ ದೊಡ್ಡಿಗಳು ಇವೇ ಅಲ್ಲಿರುವವು.
וְֽהָיְתָ֞ה חֶ֣בֶל הַיָּ֗ם נְוֺ֛ת כְּרֹ֥ת רֹעִ֖ים וְגִדְר֥וֹת צֹֽאן׃
7 ಆ ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.
וְהָ֣יָה חֶ֗בֶל לִשְׁאֵרִ֛ית בֵּ֥ית יְהוּדָ֖ה עֲלֵיהֶ֣ם יִרְע֑וּן בְּבָתֵּ֣י אַשְׁקְל֗וֹן בָּעֶ֙רֶב֙ יִרְבָּצ֔וּן כִּ֧י יִפְקְדֵ֛ם יְהוָ֥ה אֱלֹהֵיהֶ֖ם וְשָׁ֥ב שבותם׃
8 ಮೋವಾಬ್ಯರೂ, ಅಮ್ಮೋನ್ಯರೂ ಅಹಂಕಾರದಿಂದ ನನ್ನ ಜನರ ಮೇರೆಯನ್ನು ಮೀರಿ, ಅವರನ್ನು ನಿಂದಿಸಿ, ಅವರ ಮೇಲೆ ಹೊರಿಸಿರುವ ದೂರುದೂಷಣೆಗಳು ನನ್ನ ಕಿವಿಗೆ ಬಿದ್ದಿವೆ.
שָׁמַ֙עְתִּי֙ חֶרְפַּ֣ת מוֹאָ֔ב וְגִדּוּפֵ֖י בְּנֵ֣י עַמּ֑וֹן אֲשֶׁ֤ר חֵֽרְפוּ֙ אֶת־עַמִּ֔י וַיַּגְדִּ֖ילוּ עַל־גְּבוּלָֽם ׃
9 ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”
לָכֵ֣ן חַי־אָ֡נִי נְאֻם֩ יְהוָ֨ה צְבָא֜וֹת אֱלֹהֵ֣י יִשְׂרָאֵ֗ל כִּֽי־מוֹאָ֞ב כִּסְדֹ֤ם תִּֽהְיֶה֙ וּבְנֵ֤י עַמּוֹן֙ כַּֽעֲמֹרָ֔ה מִמְשַׁ֥ק חָר֛וּל וּמִכְרֵה־מֶ֥לַח וּשְׁמָמָ֖ה עַד־עוֹלָ֑ם שְׁאֵרִ֤ית עַמִּי֙ יְבָזּ֔וּם וְיֶ֥תֶר גוי יִנְחָלֽוּם׃
10 ೧೦ ಆ ಪ್ರಾಂತ್ಯಗಳವರು ಸೇನಾಧೀಶ್ವರನಾದ ಯೆಹೋವನ ಜನರನ್ನು ದೂಷಿಸಿ, ಅವರ ಮೇಲೆ ಉಬ್ಬಿಕೊಂಡು ಬಂದುದ್ದರಿಂದ ಅವರ ಅಹಂಕಾರದ ನಿಮಿತ್ತವೇ ಅವರಿಗೆ ಈ ಗತಿಯಾಗುವುದು!
זֹ֥את לָהֶ֖ם תַּ֣חַת גְּאוֹנָ֑ם כִּ֤י חֵֽרְפוּ֙ וַיַּגְדִּ֔לוּ עַל־עַ֖ם יְהוָ֥ה צְבָאֽוֹת׃
11 ೧೧ ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.
נוֹרָ֤א יְהוָה֙ עֲלֵיהֶ֔ם כִּ֣י רָזָ֔ה אֵ֖ת כָּל־אֱלֹהֵ֣י הָאָ֑רֶץ וְיִשְׁתַּֽחֲווּ־לוֹ֙ אִ֣ישׁ מִמְּקוֹמ֔וֹ כֹּ֖ל אִיֵּ֥י הַגּוֹיִֽם׃
12 ೧೨ ಕೂಷಿನವರೇ, ನೀವು ಸಹ ನನ್ನ ಖಡ್ಗದಿಂದ ಹತರಾಗುವಿರಿ.
גַּם־אַתֶּ֣ם כּוּשִׁ֔ים חַֽלְלֵ֥י חַרְבִּ֖י הֵֽמָּה׃
13 ೧೩ ಯೆಹೋವನು ಉತ್ತರಕ್ಕೆ ಕೈಚಾಚಿ ಅಶ್ಶೂರವನ್ನು ಧ್ವಂಸ ಮಾಡುವನು; ನಿನವೆಯನ್ನು ಹಾಳುಮಾಡಿ ನೀರಿಲ್ಲದ ಮರುಭೂಮಿಯಂತೆ ಒಣಗಿಸಿಬಿಡುವನು.
וְיֵ֤ט יָדוֹ֙ עַל־צָפ֔וֹן וִֽיאַבֵּ֖ד אֶת־אַשּׁ֑וּר וְיָשֵׂ֤ם אֶת־נִֽינְוֵה֙ לִשְׁמָמָ֔ה צִיָּ֖ה כַּמִּדְבָּֽר׃
14 ೧೪ ಜನಾಂಗಗಳ ಪಶುಗಳೆಲ್ಲಾ ಮಂದೆಮಂದೆಯಾಗಿ ಅದರ ಮಧ್ಯದಲ್ಲಿ ಮಲಗಿಕೊಳ್ಳುವವು; ಕೊಕ್ಕರೆಯೂ, ಮುಳ್ಳುಹಂದಿಯೂ ಹಟ್ಟಿಗಳಲ್ಲಿ ವಾಸಮಾಡಿಕೊಳ್ಳುವವು. ಗೂಬೆಯು ಕಿಟಕಿಗಳಲ್ಲಿ ಮನೆಕಂಬಗಳ ಮೇಲೆ ಚಿಲಿಪಿಲಿ ಗಾನವು ತಂಗುವವು; ಕಾಗೆಗಳ ಕೂಗು ಹೊಸ್ತಿಲುಗಳಲ್ಲಿ ಕೇಳುವುದು; ದೇವದಾರು ಹಲಿಗೆಯ ಹೊದಿಕೆಯು ಕೀಳಲ್ಪಡುವುದು.
וְרָבְצ֨וּ בְתוֹכָ֤הּ עֲדָרִים֙ כָּל־חַיְתוֹ־ג֔וֹי גַּם־קָאַת֙ גַּם־קִפֹּ֔ד בְּכַפְתֹּרֶ֖יהָ יָלִ֑ינוּ ק֠וֹל יְשׁוֹרֵ֤ר בַּֽחַלּוֹן֙ חֹ֣רֶב בַּסַּ֔ף כִּ֥י אַרְזָ֖ה עֵרָֽה׃
15 ೧೫ ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.
זֹ֠את הָעִ֤יר הָעַלִּיזָה֙ הַיּוֹשֶׁ֣בֶת לָבֶ֔טַח הָאֹֽמְרָה֙ בִּלְבָבָ֔הּ אֲנִ֖י וְאַפְסִ֣י ע֑וֹד אֵ֣יךְ ׀ הָיְתָ֣ה לְשַׁמָּ֗ה מַרְבֵּץ֙ לַֽחַיָּ֔ה כֹּ֚ל עוֹבֵ֣ר עָלֶ֔יהָ יִשְׁרֹ֖ק יָנִ֥יעַ יָדֽוֹ׃ ס

< ಚೆಫನ್ಯನು 2 >