< ಚೆಫನ್ಯನು 2 >
1 ೧ ನಾಚಿಕೆಗೇಡಿ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ, ಯೆಹೋವನ ಉಗ್ರಕೋಪವು ನಿಮ್ಮ ಮೇಲೆ ಬರುವುದಕ್ಕೆ ಮೊದಲೇ ಯೆಹೋವನ ಸಿಟ್ಟಿನ ದಿನವೂ ಉರಿದು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ, ನೀವೆಲ್ಲರೂ ಸೇರಿ ಬನ್ನಿರಿ, ಒಟ್ಟಾಗಿ ಕೂಡಿರಿ.
ऐ बेहया क़ौम, जमा' हो, जमा' हो;
2 ೨ ಆ ಕಾಲವು ಹೊಟ್ಟಿನಂತೆ ಹಾರಿಹೋಗುತ್ತದಲ್ಲಾ.
इससे पहले के फ़रमान — ए — इलाही ज़ाहिर हो, और वह दिन भुस की तरह जाता रहे, और ख़ुदावन्द का बड़ा क़हर तुम पर नाज़िल हो, और उसके ग़ज़ब का दिन तुम पर आ पहुँचे।
3 ೩ ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ.
ऐ मुल्क के सब हलीम लोगों, जो ख़ुदावन्द के हुक्मों पर चलते हो, उसके तालिब हो, रास्तबाज़ी को ढूँढों, फ़रोतनी की तलाश करो; शायद ख़ुदावन्द के ग़ज़ब के दिन तुम को पनाह मिले।
4 ೪ ಗಾಜ ಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು, ಅಷ್ಡೋದ್ ನಿವಾಸಿಗಳನ್ನು ನಡು ಮಧ್ಯಾಹ್ನದಲ್ಲಿ ಆಕ್ರಮಿಸಿ ಓಡಿಸಿಬಿಡುವರು, ಎಕ್ರೋನ್ ನಗರ ನಿರ್ಮೂಲವಾಗುವುದು.
क्यूँकि ग़ज़्ज़ा मतरूक होगा, और अस्क़लोन वीरान किया जाएगा, और अशदूद दोपहर को ख़ारिज कर दिया जाएगा, और अक़रून की बेख़कनी की जाएगी।
5 ೫ ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ವಾಸಿಸುವ ಜನರೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.
समन्दर के साहिल के रहने वालो, या'नी करेतियों की क़ौम पर अफ़सोस! ऐ कना'न, फ़िलिस्तियों की सरज़मीन, ख़ुदावन्द का कलाम तेरे ख़िलाफ़ है; मैं तुझे हलाक — ओ — बर्बाद करूँगा यहाँ तक कि कोई बसने वाला न रहे।
6 ೬ ಸಮುದ್ರ ತೀರದ ಆ ಪ್ರಾಂತ್ಯವು ಹುಲ್ಲುಗಾವಲಾಗಿ, ಕುರುಬರ ಗುಡಿಸಲಾಗಿ, ಹಿಂಡುಗಳ ದೊಡ್ಡಿಗಳು ಇವೇ ಅಲ್ಲಿರುವವು.
और समन्दर के साहिल, चरागाहें होंगे, जिनमें चरवाहों की झोपड़ियाँ और भेड़ख़ाने होंगे।
7 ೭ ಆ ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.
और वही साहिल, यहूदाह के घराने के बक़िया के लिए होंगे; वह उनमें चराया करेंगे, वह शाम के वक़्त अस्क़लून के मकानों में लेटा करेंगे, क्यूँकि ख़ुदावन्द उनका ख़ुदा, उन पर फिर नज़र करेगा, और उनकी ग़ुलामी को ख़त्म करेगा।
8 ೮ ಮೋವಾಬ್ಯರೂ, ಅಮ್ಮೋನ್ಯರೂ ಅಹಂಕಾರದಿಂದ ನನ್ನ ಜನರ ಮೇರೆಯನ್ನು ಮೀರಿ, ಅವರನ್ನು ನಿಂದಿಸಿ, ಅವರ ಮೇಲೆ ಹೊರಿಸಿರುವ ದೂರುದೂಷಣೆಗಳು ನನ್ನ ಕಿವಿಗೆ ಬಿದ್ದಿವೆ.
मैंने मोआब की मलामत और बनी 'अम्मोन की लान'तान सुनी है उन्होंने मेरी क़ौम को मलामत की और उनकी हुदूद को दबा लिया है।
9 ೯ ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”
इसलिए रब्ब — उल — अफ़वाज इस्राईल का ख़ुदा फ़रमाता है, मुझे अपनी हयात की क़सम यक़ीनन मोआब सदूम की तरह होगा, और बनी 'अम्मोन 'अमूरा की तरह; वह पुरख़ार और नमकज़ार और हमेशा से हमेशा तक बर्बाद रहेंगे। मेरे लोगों के बाक़ी उनको ग़ारत करेंगे, और मेरी क़ौम के बाक़ी लोग उनके वारिस होंगे।
10 ೧೦ ಆ ಪ್ರಾಂತ್ಯಗಳವರು ಸೇನಾಧೀಶ್ವರನಾದ ಯೆಹೋವನ ಜನರನ್ನು ದೂಷಿಸಿ, ಅವರ ಮೇಲೆ ಉಬ್ಬಿಕೊಂಡು ಬಂದುದ್ದರಿಂದ ಅವರ ಅಹಂಕಾರದ ನಿಮಿತ್ತವೇ ಅವರಿಗೆ ಈ ಗತಿಯಾಗುವುದು!
ये सब कुछ उनके तकब्बुर की वजह से उन पर आएगा, क्यूँकि उन्होंने रब्ब — उल — अफ़वाज के लोगों को मलामत की और उन पर ज़ियादती की।
11 ೧೧ ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.
ख़ुदावन्द उनके लिए हैबतनाक होगा, और ज़मीन के तमाम मा'बूदों को लाग़र कर देगा, और बहरी ममालिक के सब बाशिन्दे अपनी अपनी जगह में उसकी इबादत करेंगे।
12 ೧೨ ಕೂಷಿನವರೇ, ನೀವು ಸಹ ನನ್ನ ಖಡ್ಗದಿಂದ ಹತರಾಗುವಿರಿ.
ऐ कूश के बाशिन्दो, तुम भी मेरी तलवार से मारे जाओगे।
13 ೧೩ ಯೆಹೋವನು ಉತ್ತರಕ್ಕೆ ಕೈಚಾಚಿ ಅಶ್ಶೂರವನ್ನು ಧ್ವಂಸ ಮಾಡುವನು; ನಿನವೆಯನ್ನು ಹಾಳುಮಾಡಿ ನೀರಿಲ್ಲದ ಮರುಭೂಮಿಯಂತೆ ಒಣಗಿಸಿಬಿಡುವನು.
और वह शिमाल की तरफ़ अपना हाथ बढ़ायेगा और असूर को हलाक करेगा, और नीनवा को वीरान और सेहरा की तरह ख़ुश्क कर देगा।
14 ೧೪ ಜನಾಂಗಗಳ ಪಶುಗಳೆಲ್ಲಾ ಮಂದೆಮಂದೆಯಾಗಿ ಅದರ ಮಧ್ಯದಲ್ಲಿ ಮಲಗಿಕೊಳ್ಳುವವು; ಕೊಕ್ಕರೆಯೂ, ಮುಳ್ಳುಹಂದಿಯೂ ಹಟ್ಟಿಗಳಲ್ಲಿ ವಾಸಮಾಡಿಕೊಳ್ಳುವವು. ಗೂಬೆಯು ಕಿಟಕಿಗಳಲ್ಲಿ ಮನೆಕಂಬಗಳ ಮೇಲೆ ಚಿಲಿಪಿಲಿ ಗಾನವು ತಂಗುವವು; ಕಾಗೆಗಳ ಕೂಗು ಹೊಸ್ತಿಲುಗಳಲ್ಲಿ ಕೇಳುವುದು; ದೇವದಾರು ಹಲಿಗೆಯ ಹೊದಿಕೆಯು ಕೀಳಲ್ಪಡುವುದು.
और जंगली जानवर उसमें लेटेंगे, और हर क़िस्म के हैवान, हवासिल और ख़ारपुश्त उसके सुतूनों के सिरों पर मक़ाम करेंगे; उनकी आवाज़ उसके झरोकों में होगी, उसकी दहलीज़ों में वीरानी होगी, क्यूँकि देवदार का काम खुला छोड़ा गया है।
15 ೧೫ ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.
ये वह शादमान शहर है जो बेफ़िक्र था, जिसने दिल में कहा, मैं हूँ, और मेरे अलावा कोई दूसरा नहीं। वह कैसा वीरान हुआ, हैवानों के बैठने की जगह! हर एक जो उधर से गुज़रेगा सुसकारेगा और हाथ हिलाएगा।