< ಚೆಫನ್ಯನು 3 >
1 ೧ ಅಯ್ಯೋ, ಅವಿಧೇಯತೆ ಮಲಿನವೂ ಆದ ದಬ್ಬಾಳಿಕೆ ನಡೆಸುವ ನಗರದ ಗತಿಯನ್ನು ಏನು ಹೇಳಲಿ!
১ধিক সেই বিদ্রোহী যিরূশালেম শহরকে! সেই হিংস্র শহর কলুষিত হয়েছে!
2 ೨ ಅದು ದೇವರ ವಾಕ್ಯಕ್ಕಾಗಲೀ ಆತನ ತಿದ್ದುಪಾಟಿಗಾಗಲಿ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲೇ ಇಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.
২সে ঈশ্বরের কথা শোনেনি, সদাপ্রভুর শাসনও গ্রহণ করে নি৷ সে সদাপ্রভুর উপর আস্থা রাখেনি, তারা ঈশ্বরের কাছে যায়নি৷
3 ೩ ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು.
৩তার রাজপুত্ররা যেন গর্জনকারী সিংহ আর শাসনকর্তারা সন্ধ্যাবেলার নেকড়ে বাঘ; যারা সকালের জন্য কিছুই ফেলে রাখে না৷
4 ೪ ಅಲ್ಲಿರುವ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರು, ವಿಶ್ವಾಸ ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.
৪তার ভাববাদীরা উদ্ধত ও রাষ্ট্রদ্রোহী৷ তার যাজকেরা পবিত্রকে অপবিত্র করে এবং ব্যবস্থার বিরুদ্ধে কাজ করে৷
5 ೫ ಅದರ ಮಧ್ಯ ನೆಲೆಗೊಂಡಿರುವ ಯೆಹೋವನು ನೀತಿಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಪ್ರತಿ ಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡುವುದಿಲ್ಲ.
৫তার মধ্যে সদাপ্রভু ধার্মিক; তিনি কোন অন্যায় করেন না৷ প্ রত্যেক সকালে তিনি ন্যায়বিচার করেন; যা আলোতে গোপন থাকবে না৷ তবুও অন্যায়কারীদের লজ্জা নেই৷
6 ೬ ಯೆಹೋವನು ಇಂತೆನ್ನುತ್ತಾನೆ, “ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೋಟೆ ಕೊತ್ತಲುಗಳು ಪಾಳು ಬಿದ್ದವು; ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ; ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಾಮವಾಗಿವೆ.
৬“আমি জাতিদের শেষ করে দিয়েছি; তাদের দুর্গগুলো ধ্বংস হয়ে গেছে৷ আমি তাদের রাস্তাগুলো ধ্বংস করেছি; কোনো মানুষ সেখান দিয়ে আর যায় না৷ তাদের সব শহর ধ্বংস হয়ে গেছে; সেখানে কেউ নেই, কেউ থাকে না৷
7 ೭ ಇದರಿಂದ ಯೆರೂಸಲೇಮೇ, ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣಕ್ಕೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ ತಗಲದು” ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.
৭আমি বললাম, ‘তুমি নিশ্চয়ই আমাকে ভয় করবে এবং আমার সংশোধন মানবে৷’ তাহলে তার থাকবার জায়গায় নষ্ট করা হবে না, যা আমি তোমাদের জন্য পরিকল্পনা করেছি কিন্তু তারা আগ্রহের সঙ্গে প্রত্যেক সকালে খারাপ কাজ করতে শুরু করল৷
8 ೮ ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವುದಷ್ಟೇ.
৮তাই তুমি আমার জন্য অপেক্ষা কর৷” এটা সদাপ্রভু বলেন, “যতদিন না ধ্বংসের জন্য উঠে দাঁড়াই৷ আমি ঠিক করেছি যে, জাতিদের আমি জড়ো করব, রাজ্যগুলো একত্র করব এবং তাদের উপর আমার রাগ ঢেলে দেব, আমার সব জ্বলন্ত রাগ ঢেলে দেব৷ আমার অন্তরের জ্বালার আগুনে সমস্ত দেশ পুড়ে যাবে৷
9 ೯ “ಆಗ ಎಲ್ಲರೂ ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.
৯কিন্তু তারপর আমি লোকেদের ঠোঁট শুচি করব, সদাপ্রভুর নামে তাদের ডাকবো যাতে কাঁধে কাঁধ মিলিয়ে আমার সেবা করতে পারে৷
10 ೧೦ ಚದರಿಹೋಗಿರುವ ನನ್ನ ಜನರು, ನನ್ನ ಭಕ್ತರು, ಕೂಷಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದು ಸಮರ್ಪಿಸುವರು.
১০কূশ দেশের নদীগুলোর ওপার থেকে আমার আরাধনাকারীরা, আমার ছড়িয়ে পড়া লোকেরা আমার জন্য উপহারের নিয়ে আসবে৷
11 ೧೧ “ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.
১১সেই দিন তোমার কাজের জন্য আমায় লজ্জায় ফেলো না আমার প্রতি যে সব অন্যায় করেছ তার জন্য তুমি সেই দিন লজ্জিত হবে না, কারণ এই শহর থেকে আমি সব অহঙ্কারী ও গর্বিত তাদের লোকদের বের করে দেব৷ আমার পবিত্র পাহাড়ের উপরে তুমি আর কখনও গর্ব করবে না৷
12 ೧೨ ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು,
১২কিন্তু আমি তোমাদের মধ্যে যারা নম্র ও দরিদ্র তাদের বাকি রাখবো এবং তারা সদাপ্রভুর নামে আশ্রয় নেবে৷
13 ೧೩ ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.”
১৩ইস্রায়েলের সেই বাকি লোকেরা অন্যায় করবে না; তারা মিথ্যা কথা বলবে না এবং তাদের মুখে ছলনার জিভ খুঁজে পাওয়া যাবে না৷ তারা খাবে এবং শোবে, কেউ তাদের ভয় দেখাবে না৷”
14 ೧೪ ಚೀಯೋನ್ ಕುವರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಜಯಘೋಷಮಾಡು! ಯೆರೂಸಲೇಮ್ ಕುವರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು!
১৪গান গাও, সিয়োন কন্যা, আনন্দ উল্লাস কর, ইস্রায়েল, যিরূশালেমের লোকেরা, খুশী হও ও তোমার সমস্ত অন্তর দিয়ে আনন্দ কর৷
15 ೧೫ ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.
১৫সদাপ্রভু তোমার শাস্তি দূর করেছেন, তিনি তোমার শত্রুকে তাড়িয়ে দিয়েছেন৷ তোমার মধ্যে ইস্রায়েলের রাজা সদাপ্রভু আছেন; আর কখনও অমঙ্গলের ভয় করবে না৷
16 ೧೬ ಆ ದಿನದಲ್ಲಿ ಯೆರೂಸಲೇಮಿಗೆ, “ಚೀಯೋನೇ, ಭಯಪಡಬೇಡ, ನಿನ್ನ ಕೈಗಳು ಜೋಲುಬೀಳದಿರಲಿ;
১৬ঐ দিন তারা যিরুশালেমকে বলবে, “তুমি ভয় কোরো না, সিয়োন, তোমার হাত ভয়ে পিছিয়ে না আসুক৷
17 ೧೭ ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.
১৭সদাপ্রভু তোমার ঈশ্বর তোমার মধ্যে আছেন, যিনি শক্তিশালী তিনি তোমাকে উদ্ধার করবেন৷ তিনি তোমার বিষয় নিয়ে আনন্দের অনুষ্টান করবেন, আর তাঁর ভালবাসার মাধ্যমে তোমায় নতুন করে গড়ে তুলবেন৷ তিনি তোমার বিষয় নিয়ে আনন্দে গান করবেন৷
18 ೧೮ ಅವಮಾನವು ನಮ್ಮ ಪಟ್ಟಣದ ಮೇಲೆ ಹೊರೆಯಾಗಿ ಕಾಡುತ್ತಿದೆ ಎಂದು ತಿಳಿದು ಹಬ್ಬ ಉತ್ಸವಗಳಿಗೆ ದೂರವಾಗಿ ಶೋಕಿಸುತ್ತಿರುವ ನಿನ್ನವರನ್ನು ಒಟ್ಟಿಗೆ ಬರಮಾಡುವೆನು.
১৮লোকজন যেমন উত্সবে করে৷ আমি তোমাদের লজ্জা ও ধ্বংসের ভয় দূরে সরিয়ে দেব৷ ৷
19 ೧೯ ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ರಕ್ಷಿಸುವೆನು, ಚದರಿ ಹೋದವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರ ಕೀರ್ತನೆಗಳನ್ನು ಉಂಟುಮಾಡುವೆನು.
১৯দেখ, তোমার অত্যাচারীদের সঙ্গে ঐ দিনের আমি সেরকম ব্যবহার করবো আমি খোঁড়াদের উদ্ধার করব, আমি তাদেরকে জড়ো করব যাদের তাড়িয়ে দেওয়া হয়েছে৷ আমি লজ্জার বদলে তাদের মহিমা দান করব৷
20 ೨೦ ಆ ಕಾಲದಲ್ಲಿ ನಿಮ್ಮನ್ನು ಕರೆದು ತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು. ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೇ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿ ಸ್ತೋತ್ರಗಳಿಗೆ ಗುರಿಮಾಡುವೆನು” ಇದು ಯೆಹೋವನ ನುಡಿ.
২০সেই দিনের আমি তোমাদের নিয়ে এসে জড়ো করব, সেই দিনের যখন আমি তোমাদের একসঙ্গে সমবেত করবো পৃথিবীর সমস্ত জাতির মধ্যে আমি তোমাদের একটি নাম ও গৌরব দেব তখন তোমরা তা নিজের চোখে দেখতে পাবে,” সদাপ্রভু এই কথা বলেন!