< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 10 >

1 ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಮಾಡಿದರು. ಆಗ ಇಸ್ರಾಯೇಲರು ಫಿಲಿಷ್ಟಿಯರಿಂದ ಸೋತು ಓಡಿಹೋಗಿ, ಗಿಲ್ಬೋವ ಬೆಟ್ಟದಲ್ಲಿ ಹತರಾದರು.
Basi Wafilisti wakapigana na Israeli. Waisraeli wakawakimbia, na wengi wakauawa katika mlima Gilboa.
2 ಫಿಲಿಷ್ಟಿಯರು ಸೌಲನನ್ನೂ, ಅವನ ಪುತ್ರರನ್ನೂ ಬಿಡದೆ ಬೆನ್ನಟ್ಟಿ, ಸೌಲನ ಪುತ್ರರಾದ ಯೋನಾತಾನನನ್ನೂ ಅಬೀನಾದಾಬನನ್ನೂ, ಮಲ್ಕೀಷೂವನನ್ನೂ ಕೊಂದುಬಿಟ್ಟರು.
Wafilisti wakawafuatia kwa bidii Sauli na wanawe, wakawaua Yonathani, Abinadabu na Malki-Shua.
3 ಯುದ್ಧವು ಸೌಲನಿದ್ದ ಕಡೆಯಲ್ಲಿ ಬಹುಘೋರವಾಗಿತ್ತು; ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದಾಗ ಅವನು ತೀವ್ರವಾಗಿ ಗಾಯಗೊಂಡನು.
Mapigano yakawa makali kumzunguka Sauli na wakati wapiga mishale walipompata, wakamjeruhi.
4 ಆಗ ಸೌಲನು ತನ್ನ ಆಯುಧಗಳನ್ನು ಹೊರುವವನಿಗೆ, “ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅವಮಾನ ಮಾಡದ ಹಾಗೆ, ನೀನು ನಿನ್ನ ಖಡ್ಗವನ್ನು ಹಿರಿದು ನನ್ನನ್ನು ತಿವಿ,” ಎಂದನು. ಆದರೆ ಅವನ ಆಯುಧ ಹೊರುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಖಡ್ಗವನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.
Sauli akamwambia mbeba silaha wake, “Futa upanga wako unichome nao, la sivyo hawa watu wasiotahiriwa watakuja na kunidhalilisha.” Lakini mbeba silaha wake akaogopa sana wala hakuweza kufanya hivyo. Kwa hiyo Sauli akachukua upanga wake mwenyewe na kuuangukia.
5 ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹೊರುವವನು ಕಂಡಾಗ, ಅವನೂ ತನ್ನ ಖಡ್ಗದ ಮೇಲೆ ಬಿದ್ದು, ಅವನ ಸಂಗಡ ಸತ್ತನು.
Mbeba silaha wake alipoona kwamba Sauli amekufa, naye pia akauangukia upanga wake akafa.
6 ಸೌಲನೂ, ಅವನ ಮೂರು ಮಂದಿ ಪುತ್ರರೂ, ಅವನ ಮನೆಯವರೆಲ್ಲರೂ ಒಟ್ಟಾಗಿ ಅದೇ ದಿನ ಸತ್ತರು.
Kwa hiyo Sauli na wanawe watatu wakafa, pamoja na nyumba yake yote.
7 ಇಸ್ರಾಯೇಲರ ಸೈನಿಕರು ಸೋತು ಹೋದರೆಂದೂ, ಸೌಲನೂ, ಅವನ ಪುತ್ರರೂ ಸತ್ತರೆಂದೂ ತಗ್ಗಿನಲ್ಲಿ ವಾಸವಾಗಿದ್ದ ಇಸ್ರಾಯೇಲರೆಲ್ಲರು ಕಂಡಾಗ, ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.
Waisraeli wote waliokuwa bondeni walipoona kwamba jeshi limekimbia na kwamba Sauli na wanawe wamekufa, waliacha miji yao wakakimbia. Nao Wafilisti wakaja na kukaa humo.
8 ಮಾರನೆಯ ದಿವಸದಲ್ಲಿ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳಲು ಬಂದಾಗ, ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವ ಸೌಲನನ್ನೂ, ಅವನ ಪುತ್ರರನ್ನೂ ಕಂಡರು.
Kesho yake Wafilisti walipokuja kuwavua maiti silaha, walimkuta Sauli na wanawe wameanguka katika Mlima Gilboa.
9 ಅವರು ಅವನನ್ನು ಸುಲಿದುಕೊಂಡು ಅವನ ತಲೆಯನ್ನೂ, ಅವನ ಆಯುಧಗಳನ್ನೂ ತೆಗೆದುಕೊಂಡು, ತಮ್ಮ ವಿಗ್ರಹಗಳ ಮಂದಿರಗಳಿಗೂ, ಜನರಿಗೂ ಜಯವಾರ್ತೆಯನ್ನು ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿಸಿದರು.
Wakamvua mavazi, wakachukua kichwa chake pamoja na silaha zake, wakawatuma wajumbe katika nchi yote ya Wafilisti kutangaza habari hizi miongoni mwa sanamu zao na watu wao.
10 ಸೌಲನ ಆಯುಧಗಳನ್ನು ತಮ್ಮ ದೇವರುಗಳ ಮಂದಿರದಲ್ಲಿ ಇಟ್ಟು, ಅವನ ತಲೆಯನ್ನು ದಾಗೋನನ ಆಲಯದಲ್ಲಿ ನೇತುಹಾಕಿದರು.
Waliweka silaha zake katika hekalu la miungu yao, wakatundika kichwa chake katika hekalu la Dagoni.
11 ಫಿಲಿಷ್ಟಿಯರು ಸೌಲನಿಗೆ ಮಾಡಿದ್ದನ್ನೆಲ್ಲಾ ಯಾಬೇಷ್ ಗಿಲ್ಯಾದಿನವರೆಲ್ಲರು ಕೇಳಿದಾಗ,
Wakazi wote wa Yabeshi-Gileadi waliposikia yote Wafilisti waliyomtendea Sauli,
12 ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶವವನ್ನೂ, ಅವನ ಪುತ್ರರ ಶವಗಳನ್ನೂ ತೆಗೆದುಕೊಂಡು ಯಾಬೇಷಿಗೆ ಬಂದು, ಅವರ ಎಲುಬುಗಳನ್ನು ತೆಗೆದುಕೊಂಡು, ಅವುಗಳನ್ನು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಸಮಾಧಿಮಾಡಿ, ಏಳು ದಿವಸ ಉಪವಾಸ ಮಾಡಿದರು.
mashujaa wao wote wakaondoka, wakautwaa mwili wa Sauli na miili ya wanawe, wakaileta Yabeshi. Wakaizika mifupa yao chini ya mti mkubwa huko Yabeshi, nao wakafunga kwa siku saba.
13 ಹೀಗೆಯೇ ಸೌಲನು ಯೆಹೋವ ದೇವರಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಯೆಹೋವ ದೇವರ ವಾಕ್ಯವನ್ನು ಕೈಗೊಳ್ಳದೆ, ಅದಕ್ಕೆ ವಿರೋಧವಾಗಿ ನಡೆದು, ಯೆಹೋವ ದೇವರನ್ನು ವಿಚಾರಿಸದೆ, ಯಕ್ಷಿಣಿಗಾರರನ್ನು ವಿಚಾರಿಸಿದ್ದರಿಂದ,
Sauli alikufa kwa sababu hakuwa mwaminifu kwa Bwana. Hakulishika neno la Bwana, hata akataka shauri kwa mwaguzi kwa ajili ya uongozi,
14 ಯೆಹೋವ ದೇವರು ಅವನನ್ನು ಕೊಂದುಹಾಕಿ, ರಾಜ್ಯವನ್ನು ಇಷಯನ ಮಗನಾದ ದಾವೀದನ ಕಡೆಗೆ ತಿರುಗಿಸಿದರು.
hakumuuliza Bwana. Kwa hiyo Bwana alimuua, na ufalme akampa Daudi mwana wa Yese.

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 10 >