< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 18 >

1 ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಅದರ ಸುತ್ತಲಿನ ಗ್ರಾಮಗಳನ್ನೂ ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
וַיְהִי אַחֲרֵי־כֵן וַיַּךְ דָּוִיד אֶת־פְּלִשְׁתִּים וַיַּכְנִיעֵם וַיִּקַּח אֶת־גַּת וּבְנֹתֶיהָ מִיַּד פְּלִשְׁתִּֽים׃
2 ಹಾಗೆಯೇ ಅವನು ಮೋವಾಬ್ಯರನ್ನು ಸಹ ಸೋಲಿಸಿದನು, ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.
וַיַּךְ אֶת־מוֹאָב וַיִּהְיוּ מוֹאָב עֲבָדִים לְדָוִיד נֹשְׂאֵי מִנְחָֽה׃
3 ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದದೆಜೆರನನ್ನು ಸೋಲಿಸಿದನು.
וַיַּךְ דָּוִיד אֶת־הֲדַדְעֶזֶר מֶֽלֶךְ־צוֹבָה חֲמָתָה בְּלֶכְתּוֹ לְהַצִּיב יָדוֹ בִּֽנְהַר־פְּרָֽת׃
4 ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು.
וַיִּלְכֹּד דָּוִיד מִמֶּנּוּ אֶלֶף רֶכֶב וְשִׁבְעַת אֲלָפִים פָּֽרָשִׁים וְעֶשְׂרִים אֶלֶף אִישׁ רַגְלִי וַיְעַקֵּר דָּוִיד אֶת־כָּל־הָרֶכֶב וַיּוֹתֵר מִמֶּנּוּ מֵאָה רָֽכֶב׃
5 ದಮಸ್ಕದ ಅರಾಮ್ಯರು ಚೋಬದ ಅರಸ ಹದದೆಜೆರನಿಗೆ ಸಹಾಯಮಾಡಲು ಬಂದಾಗ, ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸಂಹರಿಸಿಬಿಟ್ಟನು.
וַיָּבֹא אֲרַם דַּרְמֶשֶׂק לַעְזוֹר לַהֲדַדְעֶזֶר מֶלֶךְ צוֹבָה וַיַּךְ דָּוִיד בַּאֲרָם עֶשְׂרִֽים־וּשְׁנַיִם אֶלֶף אִֽישׁ׃
6 ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.
וַיָּשֶׂם דָּוִיד בַּאֲרַם דַּרְמֶשֶׂק וַיְהִי אֲרָם לְדָוִיד עֲבָדִים נֹשְׂאֵי מִנְחָה וַיּוֹשַׁע יְהוָה לְדָוִיד בְּכֹל אֲשֶׁר הָלָֽךְ׃
7 ಆಗ ದಾವೀದನು ಹದದೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು, ಅವುಗಳನ್ನು ಯೆರೂಸಲೇಮಿಗೆ ತಂದನು.
וַיִּקַּח דָּוִיד אֵת שִׁלְטֵי הַזָּהָב אֲשֶׁר הָיוּ עַל עַבְדֵי הֲדַדְעָזֶר וַיְבִיאֵם יְרוּשָׁלָֽ͏ִם׃
8 ಇದಲ್ಲದೆ ಹದದೆಜೆರನ ಪಟ್ಟಣಗಳಾದ ಟಿಭತಿನಿಂದಲೂ, ಕೂನ್‌ದಿಂದಲೂ ದಾವೀದನು ಅತ್ಯಧಿಕವಾಗಿ ಕಂಚನ್ನು ತೆಗೆದುಕೊಂಡು ಬಂದನು. ಅದರಿಂದ ಸೊಲೊಮೋನನು ಕಂಚಿನ ಕೊಳವನ್ನೂ, ಸ್ತಂಭಗಳನ್ನೂ, ವಿವಿಧ ಪಾತ್ರೆಗಳನ್ನೂ ಮಾಡಿಸಿದನು.
וּמִטִּבְחַת וּמִכּוּן עָרֵי הֲדַדְעֶזֶר לָקַח דָּוִיד נְחֹשֶׁת רַבָּה מְאֹד בָּהּ ׀ עָשָׂה שְׁלֹמֹה אֶת־יָם הַנְּחֹשֶׁת וְאֶת־הָֽעַמּוּדִים וְאֵת כְּלֵי הַנְּחֹֽשֶׁת׃
9 ದಾವೀದನು ಚೋಬದ ಅರಸನಾದ ಹದದೆಜೆರನ ಸಮಸ್ತ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವನ್ನು ಹಮಾತಿನ ಅರಸನಾದ ತೋವು ಕೇಳಿದಾಗ,
וַיִּשְׁמַע תֹּעוּ מֶלֶךְ חֲמָת כִּי הִכָּה דָוִיד אֶת־כָּל־חֵיל הֲדַדְעֶזֶר מֶֽלֶךְ־צוֹבָֽה׃
10 ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.
וַיִּשְׁלַח אֶת־הֲדֽוֹרָם־בְּנוֹ אֶל־הַמֶּֽלֶךְ־דָּוִיד לשאול־לִשְׁאָל־לוֹ לְשָׁלוֹם וּֽלְבָרֲכוֹ עַל אֲשֶׁר נִלְחַם בַּהֲדַדְעֶזֶר וַיַּכֵּהוּ כִּי־אִישׁ מִלְחֲמוֹת תֹּעוּ הָיָה הֲדַדְעָזֶר וְכֹל כְּלֵי זָהָב וָכֶסֶף וּנְחֹֽשֶׁת׃
11 ಇವುಗಳನ್ನು ಅರಸನಾದ ದಾವೀದನು ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿಬಂಗಾರವನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು.
גַּם־אֹתָם הִקְדִּישׁ הַמֶּלֶךְ דָּוִיד לַיהוָה עִם־הַכֶּסֶף וְהַזָּהָב אֲשֶׁר נָשָׂא מִכָּל־הַגּוֹיִם מֵֽאֱדוֹם וּמִמּוֹאָב וּמִבְּנֵי עַמּוֹן וּמִפְּלִשְׁתִּים וּמֵֽעֲמָלֵֽק׃
12 ಇದಲ್ಲದೆ ಚೆರೂಯಳ ಮಗ ಅಬೀಷೈಯನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಎದೋಮ್ಯರ ಸೈನಿಕರನ್ನು ಕೊಂದನು.
וְאַבְשַׁי בֶּן־צְרוּיָה הִכָּה אֶת־אֱדוֹם בְּגֵיא הַמֶּלַח שְׁמוֹנָה עָשָׂר אָֽלֶף׃
13 ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.
וַיָּשֶׂם בֶּֽאֱדוֹם נְצִיבִים וַיִּהְיוּ כָל־אֱדוֹם עֲבָדִים לְדָוִיד וַיּוֹשַׁע יְהוָה אֶת־דָּוִיד בְּכֹל אֲשֶׁר הָלָֽךְ׃
14 ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.
וַיִּמְלֹךְ דָּוִיד עַל־כָּל־יִשְׂרָאֵל וַיְהִי עֹשֶׂה מִשְׁפָּט וּצְדָקָה לְכָל־עַמּֽוֹ׃
15 ಚೆರೂಯಳ ಮಗ ಯೋವಾಬನು ಸೈನ್ಯದ ಅಧಿಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು.
וְיוֹאָב בֶּן־צְרוּיָה עַל־הַצָּבָא וִיהוֹשָׁפָט בֶּן־אֲחִילוּד מַזְכִּֽיר׃
16 ಅಹೀಟೂಬನ ಮಗ ಚಾದೋಕನೂ, ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಕಾರ್ಯದರ್ಶಿಯಾಗಿದ್ದನು.
וְצָדוֹק בֶּן־אֲחִיטוּב וַאֲבִימֶלֶךְ בֶּן־אֶבְיָתָר כֹּהֲנִים וְשַׁוְשָׁא סוֹפֵֽר׃
17 ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ, ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಅರಸನ ಬಳಿಯಲ್ಲಿ ಪ್ರಧಾನರಾಗಿದ್ದರು.
וּבְנָיָהוּ בֶּן־יְהוֹיָדָע עַל־הַכְּרֵתִי וְהַפְּלֵתִי וּבְנֵי־דָוִיד הָרִאשֹׁנִים לְיַד הַמֶּֽלֶךְ׃

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 18 >