< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 19 >
1 ಇದರ ತರುವಾಯ, ಅಮ್ಮೋನಿಯರ ಅರಸನಾದ ನಾಹಾಷನು ಮರಣಹೊಂದಿದನು; ಅವನಿಗೆ ಬದಲಾಗಿ ಅವನ ಮಗನು ಅರಸನಾದನು.
१इसके बाद अम्मोनियों का राजा नाहाश मर गया, और उसका पुत्र उसके स्थान पर राजा हुआ।
2 ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ದೂತರು ಹಾನೂನನಿಗೆ ಸಂತಾಪ ಸೂಚಿಸಲು, ಅಮ್ಮೋನಿಯರ ದೇಶಕ್ಕೆ ಬಂದರು.
२तब दाऊद ने यह सोचा, “हानून के पिता नाहाश ने जो मुझ पर प्रीति दिखाई थी, इसलिए मैं भी उस पर प्रीति दिखाऊँगा।” तब दाऊद ने उसके पिता के विषय शान्ति देने के लिये दूत भेजे। और दाऊद के कर्मचारी अम्मोनियों के देश में हानून के पास उसे शान्ति देने को आए।
3 ಆಗ ಅಮ್ಮೋನಿಯರ ಪ್ರಧಾನರು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ಅವನ ದೂತರು ಈ ದೇಶವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಬರಲಿಲ್ಲವೋ?” ಎಂದರು.
३परन्तु अम्मोनियों के हाकिम हानून से कहने लगे, “दाऊद ने जो तेरे पास शान्ति देनेवाले भेजे हैं, वह क्या तेरी समझ में तेरे पिता का आदर करने की मनसा से भेजे हैं? क्या उसके कर्मचारी इसी मनसा से तेरे पास नहीं आए, कि ढूँढ़-ढाँढ़ करें और नष्ट करें, और देश का भेद लें?”
4 ಆದ್ದರಿಂದ ಹಾನೂನನು ದಾವೀದನ ದೂತರನ್ನು ಹಿಡಿದು ಅವರ ಗಡ್ಡ, ತಲೆ ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು.
४इसलिए हानून ने दाऊद के कर्मचारियों को पकड़ा, और उनके बाल मुँण्डवाए, और आधे वस्त्र अर्थात् नितम्ब तक कटवाकर उनको जाने दिया।
5 ಆಗ ಕೆಲವರು ಹೋಗಿ, ಈ ಮನುಷ್ಯರನ್ನು ಕುರಿತು ದಾವೀದನಿಗೆ ತಿಳಿಸಿದಾಗ, ಬಹಳ ಅಪಮಾನ ಹೊಂದಿದ ಅವರಿಗೆ ದಾವೀದನು ತನ್ನ ಆಳುಗಳನ್ನು ಅವರಿಗೆದುರಾಗಿ ಕಳುಹಿಸಿ, “ನಿಮ್ಮ ಗಡ್ಡಗಳು ಬೆಳೆಯುವವರೆಗೂ ಯೆರಿಕೋವಿನಲ್ಲಿ ಇರಿ. ಆಮೇಲೆ ತಿರುಗಿ ಬನ್ನಿರಿ,” ಎಂದು ಹೇಳಿಸಿದನು.
५तब कुछ लोगों ने जाकर दाऊद को बता दिया कि उन पुरुषों के साथ कैसा बर्ताव किया गया, अतः उसने लोगों को उनसे मिलने के लिये भेजा क्योंकि वे पुरुष बहुत लज्जित थे, और राजा ने कहा, “जब तक तुम्हारी दाढ़ियाँ बढ़ न जाएँ, तब तक यरीहो में ठहरे रहो, और बाद को लौट आना।”
6 ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನಿಗೆ ಮತ್ತು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅರಾಮಿನಲ್ಲಿಯೂ, ಅರಾಮ್ ಮಾಕದಲ್ಲಿಯೂ, ಚೋಬದಲ್ಲಿಯೂ ರಥಗಳನ್ನೂ, ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು.
६जब अम्मोनियों ने देखा, कि हम दाऊद को घिनौने लगते हैं, तब हानून और अम्मोनियों ने एक हजार किक्कार चाँदी, अरम्नहरैम और अरम्माका और सोबा को भेजी, कि रथ और सवार किराये पर बुलाए।
7 ಹೀಗೆಯೇ ಅವರು ಮೂವತ್ತೆರಡು ಸಾವಿರ ರಥಗಳನ್ನೂ, ಮಾಕದ ಅರಸನನ್ನೂ, ಅವನ ಜನರನ್ನೂ ಕೂಲಿಗೆ ತೆಗೆದುಕೊಂಡರು. ಇವರು ಬಂದು ಮೇದೆಬ ಊರಿನ ಬಳಿಯಲ್ಲಿ ದಂಡಿಳಿದರು. ಇದಲ್ಲದೆ ಅಮ್ಮೋನಿಯರು ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.
७सो उन्होंने बत्तीस हजार रथ, और माका के राजा और उसकी सेना को किराये पर बुलाया, और इन्होंने आकर मेदबा के सामने, अपने डेरे खड़े किए। और अम्मोनी अपने-अपने नगर में से इकट्ठे होकर लड़ने को आए।
8 ದಾವೀದನು ಇದನ್ನು ಕೇಳಿದಾಗ, ಅವನು ಯೋವಾಬನನ್ನೂ, ಪರಾಕ್ರಮಶಾಲಿಗಳಾದ ಸಮಸ್ತ ಸೈನಿಕರನ್ನೂ ಕಳುಹಿಸಿದನು.
८यह सुनकर दाऊद ने योआब और शूरवीरों की पूरी सेना को भेजा।
9 ಆಗ ಅಮ್ಮೋನಿಯರು ಹೊರಟು, ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.
९तब अम्मोनी निकले और नगर के फाटक के पास पाँति बाँधी, और जो राजा आए थे, वे उनसे अलग मैदान में थे।
10 ಯೋವಾಬನು, ಯುದ್ಧವು ತನ್ನ ವಿರೋಧವಾಗಿ ಹಿಂದೆಯೂ, ಮುಂದೆಯೂ ಇರುವುದನ್ನು ಕಂಡಾಗ, ಅವನು ಇಸ್ರಾಯೇಲಿನ ಎಲ್ಲಾ ಶ್ರೇಷ್ಠ ಸೈನಿಕರನ್ನು ಆಯ್ದುಕೊಂಡು, ಅರಾಮ್ಯರಿಗೆ ಎದುರಾಗಿ ನಿಲ್ಲಿಸಿದನು.
१०यह देखकर कि आगे-पीछे दोनों ओर हमारे विरुद्ध पाँति बंधी हैं, योआब ने सब बड़े-बड़े इस्राएली वीरों में से कुछ को छांटकर अरामियों के सामने उनकी पाँति बँधाई;
11 ಆದರೆ ಉಳಿದ ಜನರನ್ನು ಅಮ್ಮೋನಿಯರಿಗೆದುರಾಗಿ ವ್ಯೂಹ ಕಟ್ಟುವ ಹಾಗೆ, ಅವರನ್ನು ತನ್ನ ತಮ್ಮನಾದ ಅಬೀಷೈಯನ ಕೈಯಲ್ಲಿ ಒಪ್ಪಿಸಿಕೊಟ್ಟು,
११और शेष लोगों को अपने भाई अबीशै के हाथ सौंप दिया, और उन्होंने अम्मोनियों के सामने पाँति बाँधी।
12 ಅವನಿಗೆ ಯೋವಾಬನು, “ಅರಾಮ್ಯರು ನನಗಿಂತ ಬಲವುಳ್ಳವರಾದರೆ, ನೀನು ನನಗೆ ಸಹಾಯಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳವರಾದರೆ, ನಾನು ಬಂದು ನಿನಗೆ ಸಹಾಯ ಮಾಡುವೆನು.
१२और उसने कहा, “यदि अरामी मुझ पर प्रबल होने लगें, तो तू मेरी सहायता करना; और यदि अम्मोनी तुझ पर प्रबल होने लगें, तो मैं तेरी सहायता करूँगा।
13 ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ, ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ. ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು.
१३तू हियाव बाँध और हम सब अपने लोगों और अपने परमेश्वर के नगरों के निमित्त पुरुषार्थ करें; और यहोवा जैसा उसको अच्छा लगे, वैसा ही करेगा।”
14 ಆಗ ಯೋವಾಬನೂ, ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ದಾಳಿಮಾಡಲು ಹತ್ತಿರವಾದಾಗ, ಅರಾಮ್ಯರು ಓಡಿಹೋದರು.
१४तब योआब और जो लोग उसके साथ थे, अरामियों से युद्ध करने को उनके सामने गए, और वे उसके सामने से भागे।
15 ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನಿಯರು ಕಂಡಾಗ, ಅವರೂ ಸಹ ಯೋವಾಬನ ತಮ್ಮನಾದ ಅಬೀಷೈಯನ ಎದುರಿನಿಂದ ಓಡಿಹೋಗಿ, ಪಟ್ಟಣದೊಳಗೆ ಅಡಗಿಕೊಂಡರು. ಆಗ ಯೋವಾಬನು ಯೆರೂಸಲೇಮಿಗೆ ತಿರುಗಿಹೋದನು.
१५यह देखकर कि अरामी भाग गए हैं, अम्मोनी भी उसके भाई अबीशै के सामने से भागकर नगर के भीतर घुसे। तब योआब यरूशलेम को लौट आया।
16 ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಸೋತುಹೋದೆವೆಂದು ತಿಳಿದಾಗ, ಅವರು ದೂತರನ್ನು ಕಳುಹಿಸಿ, ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಇತರ ಅರಾಮ್ಯರನ್ನು ಕರೆಯಿಸಿಕೊಂಡರು. ಹದದೆಜೆರನ ಸೇನಾಧಿಪತಿಯಾದ ಶೋಫಕನು ಅವರ ನಾಯಕನಾದನು.
१६फिर यह देखकर कि वे इस्राएलियों से हार गए हैं, अरामियों ने दूत भेजकर फरात के पार के अरामियों को बुलवाया, और हदादेजेर के सेनापति शोपक को अपना प्रधान बनाया।
17 ಅದನ್ನು ದಾವೀದನಿಗೆ ತಿಳಿಸಿದಾಗ, ಅವನು ಸಮಸ್ತ ಇಸ್ರಾಯೇಲರನ್ನು ಕೂಡಿಸಿಕೊಂಡು, ಯೊರ್ದನನ್ನು ದಾಟಿ, ಅವರಿಗೆದುರಾಗಿ ವ್ಯೂಹ ಕಟ್ಟಿದನು. ದಾವೀದನು ಅರಾಮ್ಯರಿಗೆದುರಾಗಿ ಸೈನ್ಯವನ್ನು ವ್ಯೂಹ ಕಟ್ಟಿದ ಮೇಲೆ, ಅವರು ಅವನ ವಿರುದ್ಧ ಯುದ್ಧಮಾಡಿದರು.
१७इसका समाचार पाकर दाऊद ने सब इस्राएलियों को इकट्ठा किया, और यरदन पार होकर उन पर चढ़ाई की और उनके विरुद्ध पाँति बँधाई, तब वे उससे लड़ने लगे।
18 ಆದರೆ ಅರಾಮ್ಯರು ಇಸ್ರಾಯೇಲರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ಸಾವಿರ ರಥಗಳನ್ನೂ ಹಾಳು ಮಾಡಿ, ನಲವತ್ತು ಸಾವಿರ ಕಾಲಾಳುಗಳನ್ನೂ, ಅವರ ಸೇನಾಧಿಪತಿಯಾದ ಶೋಫಕನನ್ನೂ ಕೊಂದುಹಾಕಿದನು.
१८परन्तु अरामी इस्राएलियों से भागे, और दाऊद ने उनमें से सात हजार रथियों और चालीस हजार प्यादों को मार डाला, और शोपक सेनापति को भी मार डाला।
19 ಹದದೆಜೆರನ ಅಧೀನ ರಾಜರು ತಾವು ಇಸ್ರಾಯೇಲರ ಮುಂದೆ ಸೋತುಹೋದದ್ದನ್ನು ಕಂಡಾಗ, ಅವರು ದಾವೀದನ ಸಂಗಡ ಸಂಧಾನ ಮಾಡಿಕೊಂಡು, ಅವನಿಗೆ ಅಧೀನರಾದರು. ತರುವಾಯ ಅರಾಮ್ಯರು ಅಮ್ಮೋನಿಯರಿಗೆ ಮತ್ತೆ ಸಹಾಯ ಮಾಡುವುದಕ್ಕೆ ಮನಸ್ಸಿಲ್ಲದವರಾದರು.
१९यह देखकर कि वे इस्राएलियों से हार गए हैं, हदादेजेर के कर्मचारियों ने दाऊद से संधि की और उसके अधीन हो गए; और अरामियों ने अम्मोनियों की सहायता फिर करनी न चाही।