< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 2 >

1 ಇಸ್ರಾಯೇಲನ ಪುತ್ರರು: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,
Ето синовете на Израиля: Рувим, Симеон, Левий, Юда, Исахар, Завулон,
2 ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಆಶೇರ್.
Дан, Иосиф, Вениамин, Нефталим, Гад и Асир.
3 ಯೆಹೂದನ ಪುತ್ರರು: ಏರ್, ಓನಾನ್, ಶೇಲಹ. ಈ ಮೂವರು ಅವನಿಗೆ ಶೂನನ ಮಗಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಯೆಹೂದನ ಚೊಚ್ಚಲಮಗನಾದ ಏರನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟವನಾದ್ದರಿಂದ, ದೇವರು ಅವನನ್ನು ಮರಣಕ್ಕೆ ಒಪ್ಪಿಸಿದರು.
Юдови синове: Ир, Онан и Шела: тримата му се родиха от ханаанката, дъщерята на Суя. А първородният на Юда, Ир, бе лош пред Господа, та Той го умъртви.
4 ಯೆಹೂದನ ಸೊಸೆ ತಾಮಾರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಪುತ್ರರೆಲ್ಲರೂ ಐದು ಮಂದಿ.
И снаха му Тамар му роди Фареса и Зара, Всичките Юдови синове бяха петима.
5 ಪೆರೆಚನ ಪುತ್ರರು: ಹೆಚ್ರೋನ್, ಹಾಮೂಲ್.
Фаресови синове: Есрон и Амул.
6 ಜೆರಹನ ಪುತ್ರರು: ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರಾ, ಒಟ್ಟು ಐದು ಮಂದಿ.
А Зарови синове: Зимрий, Етан, Еман, Халкол и Дара(; всичко петима.
7 ಕರ್ಮೀಯ ಪುತ್ರರು: ಮೀಸಲಾಗಿಟ್ಟಿದ್ದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲರನ್ನು ಆಪತ್ತಿಗೆ ಗುರಿಪಡಿಸಿದ ಆಕಾನನು.
А Хармиев син: Ахар
8 ಏತಾನನ ಮಗನು ಅಜರ್ಯನು.
А Етанов син - Азария.
9 ಹೆಚ್ರೋನನಿಗೆ ಹುಟ್ಟಿದ ಪುತ್ರರು: ಯೆರಹ್ಮೇಲ್, ರಾಮ್, ಕೆಲೂಬಾಯ್.
А синове, които се родиха на Есрона: Ерамеил, Арам и Халев
10 ರಾಮನು ಅಮ್ಮೀನಾದಾಬನ ತಂದೆಯಾಗಿದ್ದನು. ಅಮ್ಮೀನಾದಾಬನು ಯೆಹೂದನ ಮಕ್ಕಳಿಗೆ ನಾಯಕನಾದ ನಹಶೋನನ ತಂದೆ.
И Арам роди Аминадава: а Аминадав роди Наасона, първенец на Юдовите потомци.
11 ನಹಶೋನನು ಸಲ್ಮನನ ತಂದೆಯಾಗಿದ್ದನು, ಸಲ್ಮನ ಬೋವಜನ ತಂದೆ,
А Наасон роди Салмона: Салмон роди Вооза;
12 ಬೋವಜನು ಓಬೇದನ ತಂದೆ, ಓಬೇದನು ಇಷಯನ ತಂದೆ.
Вооз роди Овида: Овид роди Есея;
13 ಇಷಯನು ತನ್ನ ಚೊಚ್ಚಲ ಮಗ ಎಲೀಯಾಬನನ್ನೂ, ಎರಡನೆಯವನಾದ ಅಬೀನಾದಾಬನನ್ನೂ, ಮೂರನೆಯವನಾದ ಶಿಮ್ಮನನ್ನೂ,
а Есей роди първородния си Елиав, втория Авинадав, третия Сама,
14 ನಾಲ್ಕನೆಯವನಾದ ನೆತನೆಯೇಲನನ್ನೂ, ಐದನೆಯವನಾದ ರದ್ದೈನನ್ನೂ,
четвъртия Натанаил, петия Радай,
15 ಆರನೆಯವನಾದ ಓಚೆಮನನ್ನೂ, ಏಳನೆಯವನಾದ ದಾವೀದನಿಗೆ ತಂದೆಯಾಗಿದ್ದನು.
шестия Осем и седмия Давид.
16 ಅವರ ಇಬ್ಬರು ಸಹೋದರಿಯರು ಚೆರೂಯಳು, ಅಬೀಗೈಲಳು. ಚೆರೂಯಳ ಮೂವರು ಮಕ್ಕಳು ಅಬೀಷೈ, ಯೋವಾಬ್, ಅಸಾಯೇಲ್.
А техни сестри бяха Саруия и Авигея; а Саруините синове бяха трима: Ависей, Иоав и Асаил;
17 ಅಬೀಗೈಲಳು ಅಮಾಸನ ತಾಯಿ, ಅಮಾಸನ ತಂದೆಯು ಇಷ್ಮಾಯೇಲನ ವಂಶದ ಯೆತೆರನು.
и Авигея роди Амаса; а баща на Амаса беше исмаилецът Иетер.
18 ಹೆಚ್ರೋನನ ಮಗನಾದ ಕಾಲೇಬನು ಅಜೂಬಳಿಂದಲೂ ಯೆರ್ಯೋತಳಿಂದಲೂ ಮಕ್ಕಳನ್ನು ಪಡೆದನು. ಇವಳ ಪುತ್ರರು: ಯೇಷೆರನು, ಶೋಬಾಬನು, ಅರ್ದೋನನು.
И Халев, Есроновият син, роди синове от жена си Азува и от Ериота: синовете му бяха Есер, Совав и Ардон.
19 ಅಜೂಬಳ ಮರಣದ ನಂತರ, ಕಾಲೇಬನು ಎಫ್ರಾತಳನ್ನು ಮದುವೆಯಾದನು. ಅವಳು ಅವನಿಗೆ ಹೂರನನ್ನು ಹೆತ್ತಳು.
И като умря Азува, Халев си взе Ефрата, която му роди Ора.
20 ಹೂರನು ಊರಿಯನ ತಂದೆ; ಊರಿಯನು ಬೆಚಲಯೇಲನ ತಂದೆ.
А Ор роди Урия; а Урия роди Веселеила.
21 ತರುವಾಯ ಹೆಚ್ರೋನನು ಅರವತ್ತು ವರ್ಷದವನಾಗಿರುವಾಗ ಗಿಲ್ಯಾದನ ತಂದೆಯಾದ ಮಾಕೀರನ ಮಗಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬ ಎಂಬ ಮಗನನ್ನು ಹೆತ್ತಳು.
И после Есрон влезе при дъщерята на Махира Галаадовия баща; той я взе като беше на шестдесет години на възраст, и тя му роди Сегува;
22 ಸೆಗೂಬನು ಯಾಯೀರನ ತಂದೆ, ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತು ಮೂರು ಪಟ್ಟಣಗಳು ಇದ್ದವು.
А Сегув роди Яира, който имаше двадесет и три града в галаадската земя.
23 ಇವನಿಗೆ ಗಿಲ್ಯಾದಿನ ದೇಶದಲ್ಲಿ ಅರುವತ್ತು ಪಟ್ಟಣಗಳು ಇದ್ದವು. ಇದಲ್ಲದೆ ಅವನು ಗೆಷೂರ್ಯರನ್ನೂ, ಅರಾಮ್ಯರನ್ನೂ, ಯಾಯೀರನ ಪಟ್ಟಣಗಳನ್ನೂ, ಕೆನಾತ್ ಮತ್ತು ಅದರ ಪಟ್ಟಣಗಳನ್ನೂ, ಒಟ್ಟು ಅರವತ್ತು ಪಟ್ಟಣಗಳನ್ನು ಗೆದ್ದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ವಂಶದವರಿಗೆ ಇದ್ದವು.
И Гесур и Арам превзеха от тях Яировите паланки, с Кенат и селата му, шестдесет града, Всички тия бяха синове на Махира, Галаадовия баща.
24 ಹೆಚ್ರೋನನು ಕಾಲೇಬ್ ಎಫ್ರಾತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವನ ತಂದೆಯು.
А след като умря Есрон в Халев-ефрата, тогава Есроновата жена Авия му роди Асхора бащата на Текуе.
25 ಹೆಚ್ರೋನನ ಚೊಚ್ಚಲ ಮಗ ಯೆರಹ್ಮೇಲನ ಪುತ್ರರು: ಚೊಚ್ಚಲ ಮಗ ರಾಮ ಮತ್ತು ಬೂನ, ಓರೆನ, ಓಚೆಮ, ಅಹೀಯ.
И синовете на първородния на Есрона, Ерамеила, бяха: първородният Арам и Вуна, Орен, Осем и Ахия.
26 ಈ ಯೆರಹ್ಮೇಲನಿಗೆ ಮತ್ತೊಬ್ಬ ಹೆಂಡತಿ ಇದ್ದಳು. ಅವಳ ಹೆಸರು ಅಟಾರಳು; ಅವಳು ಓನಾಮನ ತಾಯಿ.
Ерамеил взе и друга жена, чието име бе Атара: тя бе майка на Онана.
27 ಯೆರಹ್ಮೇಲನ ಚೊಚ್ಚಲಮಗನಾದ ರಾಮನ ಪುತ್ರರು: ಮಾಚ್, ಯಾಮೀನ್, ಏಕೆರ್.
А синовете на първородния на Ерамеила, Арам, бяха: Маас, Ямин и Екер.
28 ಓನಾಮನ ಪುತ್ರರು: ಶಮ್ಮಾಯ, ಯಾದ; ಶಮ್ಮಾಯನ ಪುತ್ರರು: ನಾದಾಬನು, ಅಬಿಷೂರನು.
И синовете на Анама бяха: Самай и Ядай; а синовете на Самая: Надав и Ависур.
29 ಅಬಿಷೂರನ ಹೆಂಡತಿಯ ಹೆಸರು ಅಬೀಹೈಲ; ಅವಳು ಅವನಿಗೆ ಅಹ್ಬಾನನನ್ನೂ, ಮೋಲೀದನನ್ನೂ ಹೆತ್ತಳು.
И името на Ависуровата жена бе Авихаила, която му роди Аавана и Молида.
30 ನಾದಾಬನ ಪುತ್ರರು ಸೆಲೆದ್, ಅಪ್ಪಯಿಮ್; ಸೆಲೆದನು ಮಕ್ಕಳಿಲ್ಲದೆ ಸತ್ತನು.
А Надавови синове бяха: Селед Апаим; и Селед умря бездетен.
31 ಅಪ್ಪಯಿಮ್ ಇವನ ಪುತ್ರರು: ಇಷ್ಷೀಯು; ಇಷ್ಷೀಯನ ಮಗನು ಶೇಷಾನನು; ಶೇಷಾನನ ಮಗನು; ಅಹ್ಲಾಯಿಯನು;
А син на Апаима беше Есия; а син на Есия, Сисан; а син на Сисана, Аалай.
32 ಶಮ್ಮಾಯನ ಸಹೋದರನಾದ ಯಾದನ ಪುತ್ರರು: ಯೆತೆರನ ಮತ್ತು ಯೋನಾತಾನ್. ಯೆತೆರನು ಮಕ್ಕಳಿಲ್ಲದೆ ಸತ್ತನು;
А синове на Ядая Самаевия брат бяха: Етер и Ионатан; и Етер умря бездетен;
33 ಯೋನಾತಾನನ ಪುತ್ರರು: ಪೆಲೆತನು, ಜಾಜನು. ಇವರೇ ಯೆರಹ್ಮೇಲನ ವಂಶಜರು.
а синовете на Ионатана: Фалет и Зиза. Тия бяха потомците на Ерамеила.
34 ಶೇಷಾನನಿಗೆ ಪುತ್ರರಿರಲಿಲ್ಲ. ಪುತ್ರಿಯರಿದ್ದರು. ಶೇಷಾನನಿಗೆ ಯರ್ಹನೆಂಬ ಹೆಸರುಳ್ಳ ಈಜಿಪ್ಟಿನವನಾದ ಸೇವಕನಿದ್ದನು.
А Сисан нямаше синове, но дъщери. А Сисан имаше слуга египтянин на име Яраа;
35 ಶೇಷಾನನು ತನ್ನ ಪುತ್ರಿಯನ್ನು ತನ್ನ ಸೇವಕ ಯರ್ಹನಿಗೆ ಮದುವೆಮಾಡಿಕೊಟ್ಟನು. ಅವಳು ಅವನಿಗೆ ಅತ್ತೈಯನ್ನು ಹೆತ್ತಳು.
и Сисан даде дъщеря си на слугата си Яраа за жена; и тя му роди Атая;
36 ಅತ್ತೈ ನಾತಾನನ ತಂದೆ; ನಾತಾನನು ಜಾಬಾದನ ತಂದೆ.
а Атай роди Натана; Натан роди Завада;
37 ಜಾಬಾದನು ಎಫ್ಲಾಲನನ್ನು ಪಡೆದನು; ಎಫ್ಲಾನನು ಓಬೇದನನ್ನು ಪಡೆದನು.
Завад роди Ефлала; Ефлал роди Овида;
38 ಓಬೇದನು ಯೇಹುವನ್ನು ಪಡೆದನು; ಯೇಹುವು ಅಜರ್ಯನನ್ನು ಪಡೆದನು.
Овид роди Ииуя; Ииуй роди Азария;
39 ಅಜರ್ಯನು ಹೆಲೆಚನನ್ನು ಪಡೆದನು; ಹೆಲೆಚನು ಎಲ್ಲಾಸನನ್ನು ಪಡೆದನು.
Азария роди Хелиса; Хелис роди Елеаса;
40 ಎಲ್ಲಾಸನು ಸಿಸ್ಮೈಯನ್ನು ಪಡೆದನು; ಸಿಸ್ಮೈಯು ಶಲ್ಲೂಮನನ್ನು ಪಡೆದನು.
Елеас роди Сисамая; Сисамай роди Селума;
41 ಶಲ್ಲೂಮನು ಯೆಕಮ್ಯಾಹನ ತಂದೆ; ಯೆಕಮ್ಯಾಹನು ಎಲೀಷಾಮನ ತಂದೆ.
Селум роди Екамия; а Екамия роди Елисама.
42 ಯೆರಹ್ಮೇಲನ ಸಹೋದರನಾದ ಕಾಲೇಬನ ಪುತ್ರರು: ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಹೆಬ್ರೋನನ ತಂದೆಯಾದ ಮಾರೇಷನಿಗೆ ಮಕ್ಕಳು ಜನಿಸಿದರು.
А синовете на Хелева Ерамеиловия брат, бяха: първородният му Миса, който бе баща на Зиф; и син на Мариса бе Ави-хеврон.
43 ಹೆಬ್ರೋನನ ಪುತ್ರರು: ಕೋರಹನು, ತಪ್ಪೂಹನು, ರೆಕೆಮನು, ಶೆಮನು.
А Хевронови синове: Корей, Тапфуа, Рекем и Сема;
44 ಶೆಮನು ರಹಮ್ಯನ ತಂದೆ ರಹಮ್ಯನು ಯೊರ್ಕೆಯಾಮನ ತಂದೆ. ರೆಕೆಮನು ಶಮ್ಮಾಯನನ್ನು ಪಡೆದನು.
А Сема роди Раама, Иоркоамовия баща; а Рекем роди Самая.
45 ಶಮ್ಮಾಯಿಯ ಮಗನು ಮಾವೋನ್ಯನು; ಈ ಮಾವೋನ್ಯನು ಬೇತ್ ಚೂರನಿಗೆ ತಂದೆಯಾಗಿದ್ದನು.
И Самаев син беше Маон; а Маон беше Ветсуровият баща.
46 ಕಾಲೇಬನ ಉಪಪತ್ನಿಯಾದ ಏಫಾಳು ಹಾರಾನ್, ಮೋಚ, ಗಾಜೇಜ ಎಂಬುವರನ್ನು ಹೆತ್ತಳು. ಹಾರಾನನು ಗಾಜೇಜನ ತಂದೆ.
А наложницата на Халева, Гефа, роди Харана, Моса и Газера; а Харан роди Газера.
47 ಯಾದೈಯ ಪುತ್ರರು: ರೆಗೆಮ್, ಯೋತಾಮ್, ಗೇಷಾನ್, ಪೆಲಟ್, ಏಫ್, ಶಾಫ್.
А Ядаеви синове: Регем, Иотам, Гисан, Фелет, Гефа и Сагаф.
48 ಕಾಲೇಬನ ಇನ್ನೊಬ್ಬ ಉಪಪತ್ನಿಯಾದ ಮಾಕಳು ಶೇಬರ್, ತಿರ್ಹನ ಎಂಬುವರನ್ನು ಹೆತ್ತಳು.
И наложницата на Халева, Мааха, роди Севера и Тирхана;
49 ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್, ಮಕ್‌ಬೇನ ಮತ್ತು ಗಿಬೆಯ ಊರುಗಳವರ ಮೂಲಪುರುಷನಾದ ಶೆವ ಇವರು ಹುಟ್ಟಿದರು. ಕಾಲೇಬನ ಮಗಳು ಅಕ್ಸಾ.
роди още Сагафа, Мадмановия баща, Сева Махвановия баща и бащата на Гавая; и Халевова дъщеря бе Ахса.
50 ಇನ್ನುಳಿದ ಕಾಲೇಬನ ವಂಶಜರು: ಕಾಲೇಬನಿಗೆ ಅವನ ಹೆಂಡತಿ ಎಫ್ರಾತಳಿಂದ ಜನಿಸಿದ ಚೊಚ್ಚಲ ಮಗನ ಹೆಸರು ಹೂರ್. ಹೂರನ ಮಗ ಶೋಬಾಲ್ ಕಿರ್ಯತ್ ಯಾರೀಮ್ ಪಟ್ಟಣವನ್ನೂ,
Ето синовете на Халева, син на първородния на Ефрата, Ор: Совал Кириатиаримовият баща,
51 ಅವನ ಇನ್ನೊಬ್ಬ ಮಗ ಸಲ್ಮ ಬೇತ್ಲೆಹೇಮನ್ನೂ, ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.
Салма Витлеемовият баща, и Ареф Вет-гадеровият баща,
52 ಕಿರ್ಯತ್ ಯಾರೀಮ್ ಪಟ್ಟಣದ ಸ್ಥಾಪಕ ಶೋಬಾಲನು ಹಾರೋಯೆ ಜನರ, ಮಾನಹತಿಯರ ಅರ್ಧದಷ್ಟು ಜನರ,
А на Совала Кириатиаримовия баща синове бяха Арое и половината от манахатците.
53 ಹಾಗೂ ಕಿರ್ಯತ್ ಯಾರೀಮನವರ ಗೋತ್ರಗಳು: ಯೆತೆರಿಯರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು, ಇವರಿಂದ ಚೊರ್‍ರಾತ್ಯರೂ, ಎಷ್ಟಾವೋಲ್ಯರೂ ಹುಟ್ಟಿದರು.
А Кириатиаримовите семейства бяха: етерците, футците, суматците и мисрайците от тях произлязоха сарайците и естаолците.
54 ಸಲ್ಮನ ವಂಶಜರು: ಬೇತ್ಲೆಹೇಮ್, ನೆಟೋಫಾ, ಅಟರೋತ್ ಬೇತ್ಯೋವಾಬ್ ಊರುಗಳವರೂ, ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧ ಜನರೂ ಉತ್ಪತ್ತಿಯಾದರು.
Салмови синове: Витлеем, нетофатците, Атарот-вит-Иоав, половината от манахатците, сарайците,
55 ಯಾಬೇಚಿನಲ್ಲಿ ವಾಸಿಸುವ ಬರಹಗಾರರ ಕುಟುಂಬದವರಾದ ತಿರ್ರಾತ್ಯರು, ಶಿಮೆಯಾತ್ಯರು, ಸೂಕಾತ್ಯರು ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮ್ಮತನಿಂದ ಉತ್ಪನ್ನರಾದ ಕೇನ್ಯರು.
семействата на писците, които живеят в Явис, тиратците, симеатците и сухатците. Това са кенейците, които произлязоха от Амата, прадед на Рихавовия дом.

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 2 >