< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 22 >

1 ಆಗ ದಾವೀದನು, “ಇದೇ ದೇವರಾದ ಯೆಹೋವ ದೇವರ ಆಲಯ, ಮತ್ತು ಇದೇ ಇಸ್ರಾಯೇಲರ ದಹನಬಲಿಪೀಠ,” ಎಂದನು.
וַיֹּאמֶר דָּוִיד זֶה הוּא בֵּית יְהֹוָה הָאֱלֹהִים וְזֶה־מִּזְבֵּחַ לְעֹלָה לְיִשְׂרָאֵֽל׃
2 ದಾವೀದನು ಇಸ್ರಾಯೇಲ್ ದೇಶದಲ್ಲಿರುವ ಪರದೇಶಸ್ಥರನ್ನು ಕೂಡಿಸಲು ಹೇಳಿ, ದೇವರ ಆಲಯವನ್ನು ಕಟ್ಟಿಸುವುದಕ್ಕೆ ಕೆತ್ತಿದ ಕಲ್ಲುಗಳನ್ನು ಕಡಿಯುವ ಹಾಗೆ ಕಲ್ಲುಕುಟಿಗರನ್ನು ನೇಮಿಸಿದನು.
וַיֹּאמֶר דָּוִיד לִכְנוֹס אֶת־הַגֵּרִים אֲשֶׁר בְּאֶרֶץ יִשְׂרָאֵל וַיַּעֲמֵד חֹצְבִים לַחְצוֹב אַבְנֵי גָזִית לִבְנוֹת בֵּית הָאֱלֹהִֽים׃
3 ದಾವೀದನು ಬಾಗಿಲುಗಳ ಕದಗಳನ್ನು ಜೋಡಿಸುವುದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಬಹಳ ಕಬ್ಬಿಣವನ್ನೂ, ಲೆಕ್ಕವಿಲ್ಲದಷ್ಟು ಕಂಚನ್ನೂ ಸಿದ್ಧಮಾಡಿಸಿದನು.
וּבַרְזֶל ׀ לָרֹב לַֽמִּסְמְרִים לְדַלְתוֹת הַשְּׁעָרִים וְלַֽמְחַבְּרוֹת הֵכִין דָּוִיד וּנְחֹשֶׁת לָרֹב אֵין מִשְׁקָֽל׃
4 ಲೆಕ್ಕವಿಲ್ಲದಷ್ಟು ದೇವದಾರು ಮರಗಳನ್ನು ಸಿದ್ಧಮಾಡಿಸಿದನು. ಏಕೆಂದರೆ ಸೀದೋನ್ಯರೂ, ಟೈರಿನವರೂ ದಾವೀದನಿಗೆ ಹೆಚ್ಚಾಗಿ ದೇವದಾರು ಮರಗಳನ್ನು ತಂದರು.
וַעֲצֵי אֲרָזִים לְאֵין מִסְפָּר כִּֽי־הֵבִיאוּ הַצִּידֹנִים וְהַצֹּרִים עֲצֵי אֲרָזִים לָרֹב לְדָוִֽיד׃
5 ದಾವೀದನು, “ನನ್ನ ಮಗ ಸೊಲೊಮೋನನು ಎಳೆಯ ಪ್ರಾಯದವನಾಗಿದ್ದಾನೆ. ಯೆಹೋವ ದೇವರಿಗೆ ಕಟ್ಟಬೇಕಾದ ಆಲಯವು ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ, ಸೌಂದರ್ಯದಲ್ಲಿಯೂ ಅಧಿಕ ಘನವುಳ್ಳದ್ದಾಗಿರಬೇಕು. ನಾನು ಅದಕ್ಕೋಸ್ಕರ ಈಗ ಸಿದ್ಧಮಾಡುವೆನು,” ಎಂದು ಹೇಳಿದನು. ಆದ್ದರಿಂದ ದಾವೀದನು ಸಾಯುವುದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.
וַיֹּאמֶר דָּוִיד שְׁלֹמֹה בְנִי נַעַר וָרָךְ וְהַבַּיִת לִבְנוֹת לַֽיהֹוָה לְהַגְדִּיל ׀ לְמַעְלָה לְשֵׁם וּלְתִפְאֶרֶת לְכׇל־הָאֲרָצוֹת אָכִינָה נָּא לוֹ וַיָּכֶן דָּוִיד לָרֹב לִפְנֵי מוֹתֽוֹ׃
6 ತನ್ನ ಮಗ ಸೊಲೊಮೋನನನ್ನು ಕಳುಹಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಆಲಯವನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.
וַיִּקְרָא לִשְׁלֹמֹה בְנוֹ וַיְצַוֵּהוּ לִבְנוֹת בַּיִת לַיהֹוָה אֱלֹהֵי יִשְׂרָאֵֽל׃
7 ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸಬೇಕೆಂಬುದು ನನ್ನ ಹೃದಯದಲ್ಲಿ ಇತ್ತು.
וַיֹּאמֶר דָּוִיד לִשְׁלֹמֹה (בנו) [בְּנִי] אֲנִי הָיָה עִם־לְבָבִי לִבְנוֹת בַּיִת לְשֵׁם יְהֹוָה אֱלֹהָֽי׃
8 ಆದರೆ ಯೆಹೋವ ದೇವರಿಂದ ನನಗೆ ಉಂಟಾದ ವಾಕ್ಯವೇನೆಂದರೆ: ‘ನೀನು ಬಹು ರಕ್ತವನ್ನು ಚೆಲ್ಲಿದ್ದೀಯೆ; ಮಹಾ ಯುದ್ಧಗಳನ್ನು ಮಾಡಿದ್ದೀಯೆ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ. ಏಕೆಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಚೆಲ್ಲಿದಿ.
וַיְהִי עָלַי דְּבַר־יְהֹוָה לֵאמֹר דָּם לָרֹב שָׁפַכְתָּ וּמִלְחָמוֹת גְּדֹלוֹת עָשִׂיתָ לֹא־תִבְנֶה בַיִת לִשְׁמִי כִּי דָּמִים רַבִּים שָׁפַכְתָּ אַרְצָה לְפָנָֽי׃
9 ಶಾಂತಿ ಸಮಾಧಾನದ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು. ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ವಿಶ್ರಾಂತಿಯನ್ನು ಕೊಡುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಶಾಂತಿ ಸಮಾಧಾನವನ್ನೂ ಕೊಡುವೆನು.
הִנֵּה־בֵן נוֹלָד לָךְ הוּא יִֽהְיֶה אִישׁ מְנוּחָה וַהֲנִיחוֹתִי לוֹ מִכׇּל־אוֹיְבָיו מִסָּבִיב כִּי שְׁלֹמֹה יִֽהְיֶה שְׁמוֹ וְשָׁלוֹם וָשֶׁקֶט אֶתֵּן עַל־יִשְׂרָאֵל בְּיָמָֽיו׃
10 ಅವನು ನನ್ನ ನಾಮಕ್ಕೆ ಆಲಯವನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗಯುಗಾಂತರಕ್ಕೂ ಸ್ಥಿರಪಡಿಸುವೆನು,’ ಎಂದು ಹೇಳಿದ್ದಾರೆ.
הֽוּא־יִבְנֶה בַיִת לִשְׁמִי וְהוּא יִֽהְיֶה־לִּי לְבֵן וַאֲנִי־לוֹ לְאָב וַהֲכִינוֹתִי כִּסֵּא מַלְכוּתוֹ עַל־יִשְׂרָאֵל עַד־עוֹלָֽם׃
11 “ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಕುರಿತು ಹೇಳಿದ ಪ್ರಕಾರ, ನೀನು ಕೃತಾರ್ಥನಾಗಿ, ನೀನು ನಿನ್ನ ದೇವರಾದ ಯೆಹೋವ ದೇವರ ಆಲಯವನ್ನು ಕಟ್ಟಿಸುವಂತೆ ಅವರು ನಿನ್ನ ಸಂಗಡ ಇರಲಿ.
עַתָּה בְנִי יְהִי יְהֹוָה עִמָּךְ וְהִצְלַחְתָּ וּבָנִיתָ בֵּית יְהֹוָה אֱלֹהֶיךָ כַּאֲשֶׁר דִּבֶּר עָלֶֽיךָ׃
12 ನೀನು ನಿನ್ನ ದೇವರಾದ ಯೆಹೋವ ದೇವರ ನಿಯಮವನ್ನು ಕೈಗೊಳ್ಳುವಂತೆ ದೇವರು ನಿನಗೆ ಬುದ್ಧಿಯನ್ನೂ, ಗ್ರಹಿಕೆಯನ್ನೂ ಕೊಟ್ಟು ಇಸ್ರಾಯೇಲನ್ನು ಕುರಿತು ನಿನಗೆ ಆಜ್ಞಾಪಿಸಲಿ.
אַךְ יִֽתֶּן־לְךָ יְהֹוָה שֵׂכֶל וּבִינָה וִֽיצַוְּךָ עַל־יִשְׂרָאֵל וְלִשְׁמוֹר אֶת־תּוֹרַת יְהֹוָה אֱלֹהֶֽיךָ׃
13 ಯೆಹೋವ ದೇವರು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನ್ಯಾಯವಿಧಿಗಳನ್ನು ಕೈಗೊಳ್ಳಲು ನೀನು ಜಾಗ್ರತೆಯಾಗಿರು. ಆಗ ಸಫಲನಾಗುವಿ. ಬಲವಾಗಿರು, ದೃಢವಾಗಿರು. ಭಯಪಡಬೇಡ, ಹೆದರಬೇಡ.
אָז תַּצְלִיחַ אִם־תִּשְׁמוֹר לַֽעֲשׂוֹת אֶת־הַחֻקִּים וְאֶת־הַמִּשְׁפָּטִים אֲשֶׁר צִוָּה יְהֹוָה אֶת־מֹשֶׁה עַל־יִשְׂרָאֵל חֲזַק וֶאֱמָץ אַל־תִּירָא וְאַל־תֵּחָֽת׃
14 “ಇಗೋ, ಕಷ್ಟಪಟ್ಟು ನಾನು ಯೆಹೋವ ದೇವರ ಆಲಯಕ್ಕೋಸ್ಕರ ಮೂರು ಸಾವಿರದ ನಾನೂರ ಎಪ್ಪತ್ತು ಮೆಟ್ರಿಕ್ ಟನ್ ಬಂಗಾರವನ್ನೂ, ಮೂವತ್ತ ನಾಲ್ಕು ಸಾವಿರದ ಐನೂರು ಮೆಟ್ರಿಕ್ ಟನ್ ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ಕಂಚನ್ನೂ, ಕಬ್ಬಿಣವನ್ನೂ ಮರಗಳನ್ನೂ, ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಸೇರಿಸಬಹುದು.
וְהִנֵּה בְעׇנְיִי הֲכִינוֹתִי לְבֵית־יְהֹוָה זָהָב כִּכָּרִים מֵֽאָה־אֶלֶף וְכֶסֶף אֶלֶף אֲלָפִים כִּכָּרִים וְלַנְּחֹשֶׁת וְלַבַּרְזֶל אֵין מִשְׁקָל כִּי לָרֹב הָיָה וְעֵצִים וַֽאֲבָנִים הֲכִינוֹתִי וַעֲלֵיהֶם תּוֹסִֽיף׃
15 ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ, ಕಲ್ಲು ಕೆಲಸದವರೂ, ಕಲ್ಲುಕುಟಿಗರೂ, ಬಡಗಿಯವರೂ, ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ.
וְעִמְּךָ לָרֹב עֹשֵׂי מְלָאכָה חֹצְבִים וְחָרָשֵׁי אֶבֶן וָעֵץ וְכׇל־חָכָם בְּכׇל־מְלָאכָֽה׃
16 ಚಿನ್ನ, ಬೆಳ್ಳಿ, ಕಂಚು, ಕಬ್ಬಿಣ, ಮುಂತಾದವುಗಳಲ್ಲಿ ನಿಪುಣರು ಲೆಕ್ಕವಿಲ್ಲದಷ್ಟು ಇದ್ದಾರೆ. ಎದ್ದು ಕೆಲಸ ಮಾಡು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.
לַזָּהָב לַכֶּסֶף וְלַנְּחֹשֶׁת וְלַבַּרְזֶל אֵין מִסְפָּר קוּם וַעֲשֵׂה וִיהִי יְהֹוָה עִמָּֽךְ׃
17 ಇದಲ್ಲದೆ, ದಾವೀದನು ತನ್ನ ಮಗ ಸೊಲೊಮೋನನಿಗೆ ಸಹಾಯಮಾಡಲು ಇಸ್ರಾಯೇಲಿನ ಪ್ರಧಾನರಿಗೆ ಆಜ್ಞಾಪಿಸಿ ಹೇಳಿದ್ದೇನೆಂದರೆ,
וַיְצַו דָּוִיד לְכׇל־שָׂרֵי יִשְׂרָאֵל לַעְזֹר לִשְׁלֹמֹה בְנֽוֹ׃
18 “ನಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ, ಅಲ್ಲವೇ? ಎಲ್ಲಾ ಕಡೆಗಳಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾರೆ, ಅಲ್ಲವೇ? ನಿಶ್ಚಯವಾಗಿ ಅವರು ದೇಶ ನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ, ದೇಶವು ಯೆಹೋವ ದೇವರ ಮುಂದೆಯೂ, ಅವರ ಜನರ ಮುಂದೆಯೂ ಸ್ವಾಧೀನವಾಯಿತು.
הֲלֹא יְהֹוָה אֱלֹֽהֵיכֶם עִמָּכֶם וְהֵנִיחַ לָכֶם מִסָּבִיב כִּי ׀ נָתַן בְּיָדִי אֵת יֹשְׁבֵי הָאָרֶץ וְנִכְבְּשָׁה הָאָרֶץ לִפְנֵי יְהֹוָה וְלִפְנֵי עַמּֽוֹ׃
19 ನಿಮ್ಮ ದೇವರಾದ ಯೆಹೋವ ದೇವರನ್ನು ಹುಡುಕಲು ನಿಮ್ಮ ಹೃದಯವನ್ನೂ, ನಿಮ್ಮ ಪ್ರಾಣವನ್ನೂ ಒಪ್ಪಿಸಿ, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ದೇವರ ಪರಿಶುದ್ಧ ಪಾತ್ರೆಗಳನ್ನು ಯೆಹೋವ ದೇವರ ನಾಮಕ್ಕಾಗಿ ಕಟ್ಟಲಾಗುವ ಆಲಯದೊಳಗೆ ತರುವ ಹಾಗೆ, ಎದ್ದು ಯೆಹೋವ ದೇವರಾದ ದೇವರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ,” ಎಂದನು.
עַתָּה תְּנוּ לְבַבְכֶם וְנַפְשְׁכֶם לִדְרוֹשׁ לַיהֹוָה אֱלֹהֵיכֶם וְקוּמוּ וּבְנוּ אֶת־מִקְדַּשׁ יְהֹוָה הָאֱלֹהִים לְהָבִיא אֶת־אֲרוֹן בְּרִית־יְהֹוָה וּכְלֵי קֹדֶשׁ הָאֱלֹהִים לַבַּיִת הַנִּבְנֶה לְשֵׁם־יְהֹוָֽה׃

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 22 >