< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 23 >
1 ದಾವೀದನು ಮುದುಕನಾದ ಮೇಲೆ ತನ್ನ ಮಗ ಸೊಲೊಮೋನನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಮಾಡಿದನು.
Давид, состарившись и насытившись жизнью, воцарил над Израилем сына своего Соломона.
2 ಇದಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರಮಾಡಿದನು.
И собрал всех князей Израилевых и священников и левитов,
3 ಲೇವಿಯರು ಮೂವತ್ತು ವರ್ಷ ಪ್ರಾಯದವರು ಮೊದಲುಗೊಂಡು ಎಣಿಕೆಯಾಗಿದ್ದರು. ಅವರ ಪುರುಷರ ಲೆಕ್ಕವು ಮೂವತ್ತೆಂಟು ಸಾವಿರವಾಗಿತ್ತು.
и исчислены были левиты, от тридцати лет и выше, и было число их, считая поголовно, тридцать восемь тысяч человек.
4 ದಾವೀದನು ಹೇಳಿದ್ದೇನೆಂದರೆ, “ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಯೆಹೋವ ದೇವರ ಮನೆಯ ಕೆಲಸವನ್ನು ನಡಿಸುವವರಾಗಿದ್ದರು. ಮತ್ತು ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿಪತಿಗಳೂ ಆಗಿದ್ದರು.
Из них назначены для дела в доме Господнем двадцать четыре тысячи, писцов же и судей шесть тысяч,
5 ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು. ನಾಲ್ಕು ಸಾವಿರ ಮಂದಿ ಸ್ತುತಿಸುವುದಕ್ಕೆ ತಾನು ಸಿದ್ಧಮಾಡಿದ ವಾದ್ಯಗಳಿಂದ ಯೆಹೋವ ದೇವರನ್ನು ಸ್ತುತಿಸಿದರು.”
и четыре тысячи привратников, и четыре тысячи прославляющих Господа на музыкальных орудиях, которые он сделал для прославления.
6 ಇದಲ್ಲದೆ ದಾವೀದನು ಗೇರ್ಷೋನ್ಯರು, ಕೊಹಾತ್ಯರು, ಮೆರಾರೀಯರು ಎಂಬ ಲೇವಿಯರನ್ನು ಮೂರು ವರ್ಗಗಳಾಗಿ ವಿಭಾಗಿಸಿದನು.
И разделил их Давид на череды по сынам Левия - Гирсону, Каафу и Мерари.
7 ಗೇರ್ಷೋನ್ಯರಲ್ಲಿ, ಲದ್ದಾನ್ ಮತ್ತು ಶಿಮ್ಮೀ.
Из Гирсонян - Лаедан и Шимей.
8 ಲದ್ದಾನನ ಪುತ್ರರು: ಮೊದಲನೆಯವನು ಯೆಹೀಯೇಲ್, ಜೇತಾಮ್, ಯೋಯೇಲ್ ಎಂಬ ಮೂರು ಮಕ್ಕಳಿದ್ದರು.
Сыновья Лаедана: первый Иехиил, Зефам и Иоиль, трое.
9 ಶಿಮ್ಮೀಯ ಪುತ್ರರು: ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಂದಿಯು. ಇವರು ಲದ್ದಾನನ ಕುಟುಂಬಗಳಲ್ಲಿ ಮುಖ್ಯಸ್ಥರಾಗಿದ್ದರು.
Сыновья Шимея: Шеломиф, Хазиил и Гаран, трое. Они главы поколений Лаедановых.
10 ಶಿಮ್ಮೀಯ ಪುತ್ರರು: ಯಹತ್, ಜೀನ, ಯೆಯೂಷ್, ಬೆರೀಯ ಶಿಮ್ಮನ ಈ ನಾಲ್ಕು ಮಂದಿ ಪುತ್ರರಲ್ಲಿ
Еще сыновья Шимея: Иахаф, Зиза, Иеуш и Берия. Это сыновья Шимея, четверо.
11 ಯಹತನು ಮೊದಲನೆಯವನು, ಜೀಜನು ಎರಡನೆಯವನಾಗಿದ್ದನು. ಯೆಯೂಷನಿಗೂ ಬೆರೀಯನಿಗೂ ಹೆಚ್ಚು ಮಕ್ಕಳು ಇಲ್ಲದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಕೆಯಾಗಿದ್ದರು.
Иахаф был главным, Зиза вторым; Иеуш и Берия имели детей немного, и потому они были в одном счете при доме отца.
12 ಕೊಹಾತನ ಪುತ್ರರು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಎಂಬ ನಾಲ್ಕು ಮಂದಿ ಮಕ್ಕಳಿದ್ದರು.
Сыновья Каафа: Амрам, Ицгар, Хеврон и Озиил, четверо.
13 ಅಮ್ರಾಮನ ಪುತ್ರರು: ಆರೋನ್ ಮತ್ತು ಮೋಶೆ; ಆರೋನನನ್ನು ಮತ್ತು ಅವನ ಪುತ್ರರನ್ನು ಮಹಾಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಶಾಶ್ವತವಾಗಿ ಪ್ರತ್ಯೇಕಿಸಲಾಯಿತು. ಇವರು ಯೆಹೋವ ದೇವರ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಅವರ ಸೇವೆ ಮಾಡುವವರೂ, ಅವರ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.
Сыновья Амрама: Аарон и Моисей. Аарон отделен был на посвящение ко Святому Святых, он и сыновья его, навеки, чтобы совершать курение пред лицем Господа, чтобы служить Ему и благословлять именем Его навеки.
14 ದೇವರ ಮನುಷ್ಯನಾದ ಮೋಶೆಯಾದರೋ, ಅವನ ಪುತ್ರರು ಲೇವಿಯ ಗೋತ್ರದಲ್ಲಿ ಲೆಕ್ಕಿತರಾಗಿದ್ದರು.
А Моисей, человек Божий, и сыновья его причтены к колену Левиину.
15 ಮೋಶೆಯ ಪುತ್ರರು: ಗೇರ್ಷೋಮ್ ಮತ್ತು ಎಲೀಯೆಜೆರ್.
Сыновья Моисея: Гирсон и Елиезер.
16 ಗೇರ್ಷೋಮನ ಪುತ್ರರಲ್ಲಿ ಶೆಬೂಯೇಲನು ಮೊದಲನೆಯವನಾಗಿದ್ದನು.
Сыновья Гирсона: первый был Шевуил.
17 ಎಲೀಯೆಜೆರನ ಪುತ್ರರು: ಮೊದಲನೆಯವನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಪುತ್ರರಿಲ್ಲ; ಆದರೆ ರೆಹಬ್ಯನ ಪುತ್ರರು ಬಹಳ ಮಂದಿ ಇದ್ದರು.
Сыновья Елиезера были: первый Рехавия. И не было у Елиезера других сыновей; у Рехавии же было очень много сыновей.
18 ಇಚ್ಹಾರನ ಪುತ್ರರಲ್ಲಿ ಶೆಲೋಮೋತನು ಮೊದಲನೆಯವನಾಗಿದ್ದನು.
Сыновья Ицгара: первый Шеломиф.
19 ಹೆಬ್ರೋನನ ಪುತ್ರರಲ್ಲಿ ಯೆರೀಯ ಮೊದಲನೆಯವನೂ ಅಮರ್ಯ ಎರಡನೆಯವನು, ಯಹಜಿಯೇಲ್ ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು.
Сыновья Хеврона: первый Иерия и второй Амария, третий Иахазиил и четвертый Иекамам.
20 ಉಜ್ಜೀಯೇಲನ ಪುತ್ರರಲ್ಲಿ ಮೀಕನು ಮೊದಲನೆಯವನು, ಇಷೀಯನು ಎರಡನೆಯವನು.
Сыновья Озиила: первый Миха и второй Ишшия.
21 ಮೆರಾರೀಯ ಪುತ್ರರು: ಮಹ್ಲೀ ಮತ್ತು ಮೂಷೀ. ಮಹ್ಲೀಯ ಪುತ್ರರು: ಎಲಿಯಾಜರ್ ಮತ್ತು ಕೀಷ್.
Сыновья Мерарины: Махли и Муши. Сыновья Махлия: Елеазар и Кис.
22 ಎಲಿಯಾಜರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಪುತ್ರಿಯರು ಮಾತ್ರ ಇದ್ದರು; ಇವರು ತಮ್ಮ ಬಂಧುಗಳಾದ ಕೀಷನ ಪುತ್ರರೊಂದಿಗೆ ಮದುವೆಯಾದರು.
И умер Елеазар, и не было у него сыновей, а только дочери; и взяли их за себя сыновья Киса, братья их.
23 ಮೂಷೀಯ ಪುತ್ರರು: ಮಹ್ಲೀ, ಏದೆರ್, ಯೆರೇಮೋತ್ ಎಂಬ ಈ ಮೂರು ಮಂದಿ.
Сыновья Мушия: Махли, Едер и Иремоф - трое.
24 ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಪುತ್ರರಾಗಿದ್ದರು. ತಮ್ಮ ಹೆಸರುಗಳಿಂದ, ಎಣಿಕೆಯಾಗಿದ್ದ ಇವರು ತಮ್ಮ ಕುಟುಂಬಗಳಲ್ಲಿ ಮುಖ್ಯಸ್ಥರಾಗಿದ್ದರು. ಇವರು ಇಪ್ಪತ್ತು ವರ್ಷ ಪ್ರಾಯದವರು ಮೊದಲುಗೊಂಡು, ಯೆಹೋವ ದೇವರ ಮನೆಯ ಸೇವೆಗೋಸ್ಕರ ಕೆಲಸಮಾಡಿದರು.
Вот сыновья Левиины, по домам отцов их, главы семейств, по именному счислению их поголовно, которые отправляли дела служения в доме Господнем, от двадцати лет и выше.
25 ದಾವೀದನು, “ಇಸ್ರಾಯೇಲಿನ ದೇವರಾದ ಯೆಹೋವ ದೇವರು, ಅವರು ಯುಗಯುಗಾಂತರಕ್ಕೂ ಯೆರೂಸಲೇಮಿನಲ್ಲಿ ವಾಸಿಸುವ ಹಾಗೆ ತಮ್ಮ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾರೆ,” ಎಂದು ಹೇಳಿ,
Ибо Давид сказал: Господь, Бог Израилев, дал покой народу Своему и водворил его в Иерусалиме навеки,
26 ಲೇವಿಯರನ್ನು ಕುರಿತು ಅವರು ಗುಡಾರವನ್ನೂ, ಅವರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.
и левитам не нужно носить скинию и всякие вещи ее для служения в ней.
27 ಏಕೆಂದರೆ ದಾವೀದನ ಕಡೇ ಮಾತುಗಳ ಪ್ರಕಾರ, ಲೇವಿಯರು ಇಪ್ಪತ್ತು ವರ್ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯದವರು ಮೊದಲುಗೊಂಡು ಎಣಿಕೆಯಾಗಿದ್ದರು.
Посему, по последним повелениям Давида, исчислены левиты от двадцати лет и выше,
28 ಅವರು ಆರೋನನ ವಂಶಸ್ಥರ ಕೈಕೆಳಗಿದ್ದುಕೊಂಡು ಯೆಹೋವ ದೇವರ ಆಲಯದ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳಲ್ಲಿಯೂ ಸಮಸ್ತ ಪರಿಶುದ್ಧ ಸಾಮಗ್ರಿಗಳನ್ನು ಶುದ್ಧ ಮಾಡುವುದರಲ್ಲಿಯೂ,
чтоб они были при сынах Аароновых, для служения дому Господню, во дворе и в пристройках, для соблюдения чистоты всего святилища и для исполнения всякой службы при доме Божием,
29 ಯೆಹೋವ ದೇವರ ಮಂದಿರದ ಸೇವೆಯ ಕಾರ್ಯದಲ್ಲಿರುವ ಸಮ್ಮುಖದ ರೊಟ್ಟಿಗೋಸ್ಕರವೂ, ಅರ್ಪಣೆ ಬಲಿಯ ನಯವಾದ ಹಿಟ್ಟಿಗೋಸ್ಕರವೂ, ಹುಳಿಯಿಲ್ಲದ ರೊಟ್ಟಿಗಳಿಗೋಸ್ಕರವೂ, ಬಾಂಡ್ಲಿಯಲ್ಲಿ ಮಾಡಿದ್ದಕ್ಕೋಸ್ಕರವೂ, ಕರಿದಿದ್ದಕ್ಕೋಸ್ಕರವೂ, ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳ ಬಳಿಯಲ್ಲಿ ಅವರಿಗೆ ನೇಮಕವಾಗಿತ್ತು.
для наблюдения за хлебами предложения и пшеничною мукою для хлебного приношения и пресными лепешками, за печеным, жареным и за всякою мерою и весом,
30 ಇದಲ್ಲದೆ ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ ನಿಂತು, ಯೆಹೋವ ದೇವರನ್ನು ಕೊಂಡಾಡುವುದಕ್ಕೂ, ಯೆಹೋವ ದೇವರನ್ನು ಸ್ತುತಿಸುವುದಕ್ಕೂ,
и чтобы становились каждое утро благодарить и славословить Господа, также и вечером,
31 ಯೆಹೋವ ದೇವರ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವುದು.
и при всех всесожжениях, возносимых Господу в субботы, в новомесячия и в праздники по числу, как предписано о них, - постоянно пред лицем Господа,
32 ಯೆಹೋವ ದೇವರ ಮನೆಯ ಸೇವೆಯಲ್ಲಿ ದೇವದರ್ಶನ ಗುಡಾರದ ಕಾವಲನ್ನೂ, ಪರಿಶುದ್ಧ ಸ್ಥಾನದ ಕಾವಲನ್ನೂ, ತಮ್ಮ ಸಹೋದರರಾದ ಆರೋನನ ಪುತ್ರರ ಆಜ್ಞೆಯನ್ನೂ ಕೈಗೊಳ್ಳುವುದು ಅವರಿಗೆ ನೇಮಕವಾಗಿತ್ತು.
и чтобы охраняли скинию откровения и святилище и сынов Аароновых, братьев своих, при службах дому Господню.