< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 5 >
1 ಇಸ್ರಾಯೇಲಿನ ಚೊಚ್ಚಲಮಗನಾದ ರೂಬೇನನ ಪುತ್ರರು ಇವರು: ಅವನು ಚೊಚ್ಚಲ ಮಗನಾಗಿದ್ದನು. ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರ ಮಾಡಿದ್ದರಿಂದ ಅವನ ಚೊಚ್ಚಲುತನದ ಹಕ್ಕು ಇಸ್ರಾಯೇಲಿನ ಮಗ ಯೋಸೇಫನ ಪುತ್ರರಿಗೆ ಕೊಡಲಾಗಿತ್ತು. ಆದ್ದರಿಂದ ಈ ವಂಶಾವಳಿಯು ಚೊಚ್ಚಲುತನದ ಪ್ರಕಾರ ಬರೆದಿರುವುದಿಲ್ಲ.
이스라엘의 장자 르우벤의 아들들은 이러하니라 (르우벤은 장자라도 그 아비의 침상을 더럽게 하였으므로 장자의 명분이 이스라엘의 아들 요셉의 자손에게로 돌아갔으나 족보에는 장자의 명분대로 기록할 것이 아니니라
2 ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲುತನವು ಯೋಸೇಫನದಾಗಿತ್ತು.
유다는 형제보다 뛰어나고 주권자가 유다로 말미암아 났을지라도 장자의 명분은 요셉에게 있으니라)
3 ಇಸ್ರಾಯೇಲಿನ ಚೊಚ್ಚಲ ಮಗ ರೂಬೇನನ ಪುತ್ರರು: ಹನೋಕ್, ಪಲ್ಲೂ, ಹೆಚ್ರೋನನು, ಕರ್ಮೀ.
이스라엘의 장자 르우벤의 아들들은 하녹과, 발루와, 헤스론과, 갈미요
4 ಯೋಯೇಲನ ವಂಶಜರು: ಅವನ ಮಗ ಶೆಮಾಯನು; ಅವನ ಮಗ ಗೋಗನು; ಅವನ ಮಗ ಶಿಮ್ಮೀಯಿ.
요엘의 아들은 스마야요, 그 아들은 곡이요, 그 아들은 시므이요
5 ಅವನ ಮಗ ಮೀಕಾಯನು; ಅವನ ಮಗ ರೆವಾಯನು, ಅವನ ಮಗ ಬಾಳನು.
그 아들은 미가요, 그 아들은 르아야요, 그 아들은 바알이요
6 ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರಿನಿಂದ ಸೆರೆಯಾಗಿ ಒಯ್ದ ಅವನ ಮಗ ಬೇರನು; ಅವನೇ ರೂಬೇನ್ಯರಲ್ಲಿ ನಾಯಕನಾಗಿದ್ದನು.
그 아들은 브에라니 저는 르우벤 자손의 두목으로서 앗수르 왕 디글랏빌레셀에게 사로잡힌자라
7 ಇವನ ಸಹೋದರರು ತಮ್ಮ ಸಂತತಿಗಳಲ್ಲಿ ವಂಶಗಳ ವಂಶಾವಳಿಯನ್ನು ಲೆಕ್ಕಿಸಿದ ಅವನ ಮುಖ್ಯಸ್ಥರು ಯಾರೆಂದರೆ, ಯೆಹಿಯೇಲ್, ಜೆಕರ್ಯ,
저의 형제가 종족과 보계대로 족장 된자는 여이엘과, 스가랴와
8 ಅಜಾಜನ ಮಗನೂ ಶೆಮಯನ ಮಗನೂ ಯೋಯೇಲನ ಮಗನೂ ಆದ ಬೆಳ. ಇವರು ಅರೋಯೇರು ಮೊದಲ್ಗೊಂಡು ನೆಬೋ, ಬಾಳ್ ಮೆಯೋನ್ ಎಂಬ ಸ್ಥಳಗಳವರೆಗೂ ವಾಸವಾಗಿದ್ದರು.
벨라니 벨라는 아사스의 아들이요, 세마의 손자요, 요엘의 증손이라 저가 아로엘에 거하여 느보와 바알므온까지 미쳤고
9 ಗಿಲ್ಯಾದಿನ ದೇಶದಲ್ಲಿ ಅವನ ಪಶುಗಳು ಹೆಚ್ಚಾದುದರಿಂದ, ಅವನು ಪೂರ್ವದಿಕ್ಕಿನಲ್ಲಿ ಯೂಫ್ರೇಟೀಸ್ ನದಿ ಮೊದಲ್ಗೊಂಡು ಮರುಭೂಮಿಯ ಪ್ರದೇಶದವರೆಗೂ ವಾಸವಾಗಿದ್ದನು.
또 동으로 가서 거하여 유브라데강에서부터 광야 지경까지 미쳤으니 이는 길르앗 땅에서 그 생축이 번식함이라
10 ಸೌಲನ ದಿವಸಗಳಲ್ಲಿ ರೂಬೇನ್ ವಂಶದವರು ಹಗ್ರೀಯರ ಸಂಗಡ ಯುದ್ಧಮಾಡಿ, ಅವರ ಕೈಯಲ್ಲಿ ಸೋತುಹೋದರು. ರೂಬೇನ್ ವಂಶದವರು ಗಿಲ್ಯಾದಿನ ಸಮಸ್ತ ಪೂರ್ವ ದಿಕ್ಕಿನಾದ್ಯಂತ ಹಗ್ರೀಯರ ವಾಸಸ್ಥಾನಗಳನ್ನು ಆಕ್ರಮಿಸಿಕೊಂಡರು.
사울왕 때에 저희가 하갈 사람으로 더불어 싸워 쳐 죽이고 길르앗 동편 온 땅에서 장막에 거하였더라
11 ಗಾದನ ಮಕ್ಕಳು ಅವರಿಗೆದುರಾಗಿ ಬಾಷಾನ್ ದೇಶದಲ್ಲಿ ಸಲ್ಕದವರೆಗೂ ವಾಸವಾಗಿದ್ದರು.
갓 자손은 르우벤 사람을 마주 대하여 바산 땅에 거하여 살르가까지 미쳤으니
12 ಬಾಷಾನಿನಲ್ಲಿ ಮುಖ್ಯನಾದವನು ಯೋಯೇಲನು, ಎರಡನೆಯವನು ಶಾಫಾಮನು, ಅನಂತರ ಯನ್ನೈ, ಶಾಫಾಟನು.
족장은 요엘이요, 다음은 사밤이요, 또 야내와, 바산에 거한 사밧이요
13 ಕುಟುಂಬಗಳಾಗಿ ಅವರ ಬಂಧುಗಳು: ಮೀಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈನು, ಯಕ್ಕಾನನು, ಜೀಯನು, ಏಬೆರನು; ಒಟ್ಟು ಏಳುಮಂದಿ.
그 족속 형제에는 미가엘과, 므술람과, 세바와, 요래와, 야간과, 시아와, 에벨 일곱명이니
14 ಇವರು ಹೂರಿಯ ಮಗ ಅಬೀಹೈಲನ ಪುತ್ರರು: ಈ ಹೂರೀಯು ಯಾರೋಹನ ಮಗನು, ಅವನು ಗಿಲ್ಯಾದನ ಮಗನು, ಅವನು ಮೀಕಾಯೇಲನ ಮಗನು, ಅವನು ಯೆಷೀಷೈಯನ ಮಗನು, ಅವನು ಯಹ್ದೋವಿನ ಮಗನು, ಅವನು ಬೂಜನ ಮಗನು.
이는 다 아비하일의 아들이라 아비하일은 후리의 아들이요, 야로의 손자요, 길르앗의 증손이요, 미가엘의 현손이요, 여시새의 오대 손이요, 야도의 육대 손이요, 부스의 칠대 손이며,
15 ಅಬ್ದಿಯೇಲನ ಮಗನೂ ಗೂನೀಯ ಮೊಮ್ಮಗನೂ ಆದ ಅಹೀಯು ಈ ಗೋತ್ರದ ಮುಖ್ಯಸ್ಥನು.
또 구니의 손자 압디엘의 아들 아히가 족장이 되었고
16 ಅವರು ಗಿಲ್ಯಾದಿನಲ್ಲಿರುವ ಬಾಷಾನಿನಲ್ಲಿಯೂ, ಅವರ ಊರುಗಳಲ್ಲಿಯೂ, ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು.
저희가 바산길르앗과 그 향촌과 사론의 모든 들에 거하여 그 사방 변경에 미쳤더라
17 ಇವರೆಲ್ಲರು ಯೆಹೂದದ ಅರಸನಾದ ಯೋತಾಮನ ದಿವಸಗಳಲ್ಲಿಯೂ, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ಲಿಖಿತರಾದರು.
이상은 유다 왕 요담과 이스라엘 왕 여로보암 때에 족보에 기록 되었더라
18 ರೂಬೇನ್ಯರಲ್ಲಿಯೂ, ಗಾದ್ಯರಲ್ಲಿಯೂ, ಮನಸ್ಸೆಯ ಅರ್ಧ ಗೋತ್ರದಲ್ಲಿಯೂ, ಗುರಾಣಿಯನ್ನೂ, ಖಡ್ಗವನ್ನೂ ಹಿಡಿಯುವುದಕ್ಕೆ ಬಿಲ್ಲೆಸೆಯುವುದಕ್ಕೆ ಯುದ್ಧದಲ್ಲಿ ಪ್ರವೀಣರಾದ ಪರಾಕ್ರಮಶಾಲಿಗಳಾದ ಯುದ್ಧಕ್ಕೆ ಹೊರಡುವವರು 44,760 ಮಂದಿಯಾಗಿದ್ದರು.
르우벤 자손과 갓 사람과 므낫세 반 지파의 나가 싸울 만한 용사 곧 능히 방패와 칼을 들며 활을 당기어 싸움에 익숙한 자가 사만 사천 칠백 육십인이라
19 ಇವರು ಹಗ್ರೀಯರಾದ ಯೆಟೂರನು, ನಾಫೀಷನು, ನೊದಾಬನು ಎಂಬವರ ವಿರುದ್ಧ ಯುದ್ಧಮಾಡಿದರು.
저희가 하갈 사람과, 여두르와, 나비스와, 노답과 싸우는 중에
20 ಇವರು ಅವರಿಗೆ ವಿರೋಧವಾಗಿ ಸಹಾಯ ಹೊಂದಿದ್ದರಿಂದ, ಹಗ್ರೀಯರೂ, ಅವರ ಸಂಗಡ ಕೂಡಿದ್ದವರೆಲ್ಲರೂ ಇವರ ಕೈವಶವಾದರು. ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು, ಅವರಲ್ಲಿ ಭರವಸೆ ಇಟ್ಟಿದ್ದರಿಂದ, ದೇವರು ಅವರ ಮನವಿಯನ್ನು ಕೇಳಿದರು.
도우심을 입었으므로 하갈 사람과 그 함께한 자들이 다 저희 손에 패하였으니 이는 저희가 싸울 때에 하나님께 의뢰하고 부르짖음을 하나님이 들으셨음이라
21 ಅವರು ವೈರಿಗಳಿಂದ ಎಲ್ಲಾ ಪಶುಗಳನ್ನು ಅವರು ತಮ್ಮ ವಶಕ್ಕೆ ತೆಗೆದುಕೊಂಡರು. ಐವತ್ತು ಸಾವಿರ ಒಂಟೆಗಳನ್ನು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳನ್ನು, ಎರಡು ಸಾವಿರ ಕತ್ತೆಗಳನ್ನು ಅಲ್ಲದೆ, ಒಂದು ಲಕ್ಷ ಜನರನ್ನು ಯುದ್ಧ ಕೈದಿಗಳನ್ನಾಗಿ ಸೆರೆಹಿಡಿದರು.
저희가 대적의 짐승 곧 약대 오만과 양 이십 오만과 나귀 이천을 빼앗으며 사람 십만을 사로잡았고
22 ಏಕೆಂದರೆ ಯುದ್ಧವು ದೇವರಿಂದ ಉಂಟಾದ ಕಾರಣ, ಅನೇಕ ಜನರು ಹತರಾದರು. ಇವರು ಸೆರೆಯಾಗಿ ಹೋಗುವ ಕಾಲದವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.
죽임을 당한 자가 많았으니 이 싸움이 하나님께로 말미암았음이라 저희가 그 땅에 거하여 사로잡힐 때까지 이르렀더라
23 ಮನಸ್ಸೆಯ ಅರ್ಧ ಗೋತ್ರದ ಜನರು ದೇಶದಲ್ಲಿ ವಾಸಮಾಡಿ, ಬಾಷಾನ್ ಮೊದಲುಗೊಂಡು ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಬೆಟ್ಟದವರೆಗೂ ಹಬ್ಬಿಕೊಂಡರು.
므낫세 반 지파 자손들이 그 땅에 거하여 번성하여 바산에서부터 바알 헤르몬과 스닐과 헤르몬 산까지 미쳤으며
24 ಅವರ ಪಿತೃಗಳ ಮನೆಯಲ್ಲಿರುವ ಯಜಮಾನರು ಯಾರೆಂದರೆ: ಏಫೆರ್, ಇಷ್ಷೀ, ಎಲೀಯೇಲ್, ಅಜ್ರಿಯೇಲ್, ಯೆರೆಮೀಯ, ಹೋದವ್ಯ, ಯೆಹ್ತೀಯೇಲ್. ಇವರು ಪರಾಕ್ರಮಶಾಲಿಗಳಾಗಿಯೂ, ಹೆಸರುಗೊಂಡವರಾಗಿಯೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರಾಗಿಯೂ ಇದ್ದರು.
그 족장은 에벨과, 이시와, 엘리엘과, 아스리엘과, 예레미야와, 호다위야와, 야디엘이라 다 용력이 유명한 족장이었더라
25 ಆದರೆ ಅವರು ತಮ್ಮ ಪಿತೃಗಳ ದೇವರಿಗೆ ದ್ರೋಹಿಗಳಾಗಿದ್ದರು. ದೇವರು ತಮ್ಮ ಮುಂದೆ ನಾಶಮಾಡಿದ ಆ ದೇಶದ ಜನರ ದೇವರುಗಳ ಹಿಂದೆ ಜಾರರಾಗಿ ಹೋದರು.
저희가 그 열조의 하나님께 범죄하여 하나님이 저희 앞에서 멸하신 그 땅 백성의 신들을 간음하듯 섬긴지라
26 ಆದಕಾರಣ ಇಸ್ರಾಯೇಲಿನ ದೇವರು ಅಸ್ಸೀರಿಯದ ಅರಸನಾದ ಪೂಲನ ಆತ್ಮವನ್ನೂ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ, ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ, ಗಾದ್ಯರನ್ನೂ, ಮನಸ್ಸೆಯ ಅರ್ಧ ಗೋತ್ರದವರನ್ನೂ ಹಲಹ, ಹಾಬೋರ್, ಹಾರ, ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ತೆಗೆದುಕೊಂಡು ಹೋದರು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.
그러므로 이스라엘 하나님이 앗수르 왕 불의 마음을 일으키시며 앗수르 왕 디글랏 빌레셀의 마음을 일으키시매 곧 르우벤과 갓과 므낫세 반 지파를 사로잡아 할라와 하볼과 하라와 고산 하숫가에 옮긴지라 저희가 오늘날까지 거기 있으니라