< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 9 >

1 ಇಸ್ರಾಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದ್ರೋಹಿಗಳಾದದರಿಂದ ಬಾಬೆಲಿಗೆ ಸೆರೆಯವರಾಗಿ ಹೋಗಬೇಕಾಯಿತು.
Haka aka lissafta dukan Isra’ila a tarihin zuriyoyi a littafin sarakunan Isra’ila. Aka kwasa mutanen Yahuda zuwa zaman bauta a Babilon domin rashin aminci.
2 ತಮ್ಮ ಸ್ವಾಸ್ತ್ಯಗಳಲ್ಲಿ, ತಮ್ಮ ಪಟ್ಟಣಗಳಲ್ಲಿ ಮೊದಲು ವಾಸವಾಗಿದ್ದವರಲ್ಲಿ ಕೆಲವರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ ಮತ್ತು ದೇವಾಲಯದ ಸೇವಕರೂ ಆಗಿದ್ದರು.
To, na farkon da aka sāke zaunar da su a mallakarsu a garuruwansu, su ne waɗansu Isra’ilawa, firistoci, Lawiyawa da kuma masu hidimar haikali.
3 ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಹೂದನ ಮಕ್ಕಳೂ, ಬೆನ್ಯಾಮೀನನ ಮಕ್ಕಳೂ, ಎಫ್ರಾಯೀಮ್, ಮನಸ್ಸೆ ಎಂಬವರ ಮಕ್ಕಳು ಯಾರೆಂದರೆ:
Waɗanda suke daga Yahuda, daga Benyamin, da kuma daga Efraim da Manasse waɗanda suka zauna a Urushalima su ne,
4 ಯೆಹೂದನ ಮಗನಾದ ಪೆರೆಚನ ಮಕ್ಕಳಲ್ಲಿ ಒಬ್ಬನಾದ ಬಾನೀಯ ಮಗನಾದ ಇಮ್ರಿಯು, ಇವನ ಮಗನಾದ ಒಮ್ರಿ, ಇವನ ಮಗನು ಅಮ್ಮೀಹೂದನು, ಇವನ ಮಗನು ಉತೈ.
Uttai ɗan Ammihud, ɗan Omri, ɗan Imri, ɗan Bani, zuriyar Ferez ɗan Yahuda.
5 ಶೇಲಾಹನರಲ್ಲಿ ಚೊಚ್ಚಲಮಗನಾದ ಅಸಾಯನು, ಅವನ ಪುತ್ರರು.
Na mutanen Shilo kuwa su ne, Asahiya ɗan fari da’ya’yansa maza.
6 ಜೆರಹನ ಪುತ್ರರಲ್ಲಿ ಯೆಯೂವೇಲನೂ, ಅವನ ಸಹೋದರರೂ 690 ಮಂದಿ.
Na mutanen Zera su ne, Yewuyel. Mutane daga Yahuda sun kai 690.
7 ಬೆನ್ಯಾಮೀನ್ಯರಲ್ಲಿ ಹಸ್ಸೆನುವಾಹನ ಮಗನು ಹೋದವ್ಯನ ಮಗನು ಮೆಷುಲ್ಲಾಮನ ಮಗ ಸಲ್ಲು,
Na Benyamin su ne, Sallu ɗan Meshullam, ɗan Hodawiya, ɗan Hassenuwa;
8 ಯೆರೋಹಾಮನ ಮಗ ಇಬ್ನೇಯಾಹನೂ; ಮಿಕ್ರಿಯ ಮಗ ಉಜ್ಜೀಯ ಮಗ ಏಲಾನೂ; ಇಬ್ನಿಯನ ಮಗ ರೆಯೂವೇಲನ ಮಗ, ಶೆಫಟ್ಯನ ಮಗ ಮೆಷುಲ್ಲಾಮನೂ,
Ibnehiya ɗan Yeroham; Ela ɗan Uzzi, ɗan Mikri; da Meshullam ɗan Shefatiya, ɗan Reyuwel, ɗan Ibniya.
9 ಅವರ ಸಹೋದರರೂ ತಮ್ಮ ವಂಶಗಳ ಪ್ರಕಾರ 956 ಮಂದಿ. ಇವರೆಲ್ಲರು ತಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದರು.
Mutane daga Benyamin, kamar yadda aka lissafta zuriyarsu, sun kai 956. Dukan waɗannan mutane kawunan iyalansu ne.
10 ಯಾಜಕರಲ್ಲಿ ಯಾರೆಂದರೆ ಯೆದಾಯನೂ, ಯೆಹೋಯಾರೀಬನೂ, ಯಾಕೀನನೂ;
Na firistoci su ne, Yedahiya; Yehoyarib; Yakin;
11 ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗ ಮೆರಾಯೋತನ ಮಗ ಚಾದೋಕನ ಮಗ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ;
Azariya ɗan Hilkiya, ɗan Meshullam, ɗan Zadok, ɗan Merahiyot, ɗan Ahitub, shugaban da yake lura da gidan Allah;
12 ಮಲ್ಕೀಯನ ಮಗ ಪಷ್ಹೂರನ ಮಗ ಯೆರೋಹಾಮನ ಮಗ ಅದಾಯನು. ಇಮ್ಮೇರನ ಮಗ ಮೆಷಿಲ್ಲೇಮೋತನ ಮಗ ಮೆಷುಲ್ಲಾಮನ ಮಗ ಯಹ್ಜೇರನ ಮಗ ಅದೀಯೇಲನ ಮಗ ಮಾಸೈಯನೂ;
Adahiya ɗan Yeroham, ɗan Fashhur, ɗan Malkiya; da Ma’asai ɗan Adiyel, ɗan Yazera, ɗan Meshullam, ɗan Meshillemit, ɗan Immer.
13 ಅವರ ಸಹೋದರರೂ ತಮ್ಮ ಕುಟುಂಬಗಳಲ್ಲಿ ಯಜಮಾನರು 1,760 ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿಗಳಾಗಿದ್ದರು.
Firistocin da suke kawunan iyalai, sun kai 1,760. Dukansu ƙwararru ne, masu hakkin hidima a cikin gidan Allah.
14 ಲೇವಿಯರಲ್ಲಿ ಯಾರೆಂದರೆ: ಮೆರಾರೀಯ ಪುತ್ರರಲ್ಲಿ ಒಬ್ಬನಾದ ಹಷ್ಷೂಬನ ಮಗ ಅಜ್ರೀಕಾಮನ ಮಗ ಹಷಬ್ಯನ ಮಗ ಶೆಮಾಯನೂ;
Na Lawiyawa su ne, Shemahiya ɗan Hasshub, ɗan Azrikam, ɗan Hashabiya, mutumin Merari;
15 ಬಕ್ಬಕ್ಕರನೂ, ಹೆರೆಷನೂ, ಗಲಾಲನೂ, ಆಸಾಫನ ಮಗ, ಜಿಕ್ರಿಯ ಮಗ, ಮೀಕನ ಮಗ ಮತ್ತನ್ಯನೂ;
Bakbakkar, Heresh, Galal da Mattaniya ɗan Mika, ɗan Zikri, ɗan Asaf;
16 ಯೆದುತೂನನ ಮಗ, ಗಲಾಲನ ಮಗ, ಶೆಮಾಯನ ಮಗ, ಓಬದ್ಯನೂ; ಎಲ್ಕಾನನ ಮಗ ಆಸನ ಮಗ ಬೆರೆಕ್ಯನೂ ಇವರು ನೆಟೋಫದವರ ಊರುಗಳಲ್ಲಿ ವಾಸವಾಗಿದ್ದರು.
Obadiya ɗan Shemahiya, ɗan Galal, ɗan Yedutun; da Berekiya ɗan Asa, ɗan Elkana, wanda ya zauna a ƙauyukan Netofawa.
17 ದ್ವಾರಪಾಲಕರು ಯಾರೆಂದರೆ: ಶಲ್ಲೂಮನೂ, ಅಕ್ಕೂಬನೂ, ಟಲ್ಮೋನನೂ, ಅಹೀಮನ್‌ನೂ, ಅವರ ಸಹೋದರರೂ. ಅವರಲ್ಲಿ ಶಲ್ಲೂಮನು ಮುಖ್ಯಸ್ಥನಾಗಿದ್ದನು.
Matsaran ƙofofi su ne, Shallum, Akkub, Talmon, Ahiman da’yan’uwansu. Shallum ne babbansu
18 ಇವರು ಈವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲಲ್ಲಿ ಕಾದುಕೊಂಡಿದ್ದರು. ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.
da aka ajiye a Ƙofar Sarki a gabas, har zuwa wannan lokaci. Waɗannan su ne matsaran ƙofofi na sansanin Lawiyawa.
19 ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮೊಮ್ಮಗನೂ ಕೋರೇಯನ ಮರಿಮಗನಾದ ಶಲ್ಲೂಮನೂ, ಅವನ ತಂದೆಯ ಮನೆಯವರಾಗಿರುವ ತನ್ನ ಸಹೋದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲಿದ್ದು, ದೇವದರ್ಶನ ಗುಡಾರದ ಬಾಗಿಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಯೆಹೋವ ದೇವರ ಗುಡಾರದ ದ್ವಾರಗಳ ಕಾವಲಿನವರಾಗಿದ್ದರು.
Shallum ɗan Kore, ɗan Ebiyasaf, ɗan Kora, da’yan’uwansa matsaran ƙofofi daga iyalin (mutanen Kohat) su suke da hakkin tsaron madogaran ƙofar Tenti kamar dai yadda kakanninsu suka kasance da hakkin tsaron mashigin mazaunin Ubangiji.
20 ಎಲಿಯಾಜರನ ಮಗನಾದ ಫೀನೆಹಾಸನು ಮುಂಚೆ ಅವರ ಮೇಲೆ ಅಧಿಕಾರಿಯಾಗಿದ್ದನು. ಯೆಹೋವ ದೇವರು ಅವರ ಸಂಗಡ ಇದ್ದರು.
A dā Finehas ɗan Eleyazar ne yake lura da matsaran, kuma Ubangiji ya kasance tare da shi.
21 ಮೆಷೆಲೆಮ್ಯನ ಮಗನಾದ ಜೆಕರ್ಯನು ದೇವದರ್ಶನ ಗುಡಾರದ ದ್ವಾರಪಾಲಕನಾಗಿದ್ದನು.
Zakariya ɗan Meshelemiya shi ne mai tsaro a mashigin Tentin Sujada.
22 ಬಾಗಿಲುಗಳಲ್ಲಿ ದ್ವಾರಪಾಲಕರಾಗಿರಲು ಆಯ್ಕೆಯಾದ ಇವರೆಲ್ಲರು 212 ಮಂದಿಯಾಗಿದ್ದರು. ಇವರು ಹೆಸರುಗಳು ಅವರವರ ಗ್ರಾಮಗಳಲ್ಲಿ ಅವರ ವಂಶಾವಳಿಯ ಪ್ರಕಾರ ಲಿಖಿತವಾಗಿದ್ದವು. ಇವರು ನಂಬಿಗಸ್ತರಾದ್ದರಿಂದ ದಾವೀದನೂ, ದರ್ಶಿಯಾದ ಸಮುಯೇಲನೂ ಇವರನ್ನು ಜವಾಬ್ದಾರಿಯ ಸ್ಥಾನಗಳಿಗೆ ನೇಮಿಸಿದರು.
Duka-duka, waɗanda aka zaɓa don su zama matsaran madogaran ƙofa sun kai 212. Aka rubuta su zuriya-zuriya a ƙauyukansu. Dawuda da Sama’ila mai duba ne suka sa matsaran a wurarensu na aminci.
23 ಹೀಗೆಯೇ ಅವರಿಗೂ, ಅವರ ಮಕ್ಕಳಿಗೂ ಯೆಹೋವ ದೇವರ ಮನೆಯ ಬಾಗಿಲು ಕಾವಲಿತ್ತು. ಅದು ದೇವದರ್ಶನ ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರರಿಂದ ಕಾಯಬೇಕಾಗಿತ್ತು.
Su da zuriyarsu, su suke lura da tsaron ƙofofin gidan Ubangiji, gidan da ake kira Tenti.
24 ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು.
Matsaran suna a kusurwoyi huɗu, gabas, yamma, arewa da kudu.
25 ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು.
’Yan’uwansu a ƙauyukansu sukan zo lokaci, lokaci su yi ayyukansu kwana bakwai, bakwai.
26 ಏಕೆಂದರೆ ದ್ವಾರಪಾಲಕರಲ್ಲಿರುವ ನಾಲ್ಕು ಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯದ ಉಗ್ರಾಣಗಳ ಮೇಲೆಯೂ ಬೊಕ್ಕಸಗಳ ಜವಾಬ್ದಾರಿಯನ್ನು ವಹಿಸಲಾಗಿತ್ತು.
Amma manyan matsara huɗu, waɗanda suke Lawiyawa, an danƙa musu hakkin lura da ɗakuna da kuma wuraren ajiya a gidan Allah.
27 ಅವರು ದೇವರ ಆಲಯದ ಸುತ್ತಲೂ ರಾತ್ರಿಯನ್ನು ಕಳೆಯುತ್ತಿದ್ದರು, ಏಕೆಂದರೆ ಅವರು ಅದನ್ನು ಕಾವಲು ಕಾಯಬೇಕಾಗಿತ್ತು. ಮತ್ತು ಪ್ರತಿದಿನ ಬೆಳಿಗ್ಗೆ ಬಾಗಿಲುಗಳನ್ನು ತೆರೆಯುತ್ತಿದ್ದರು.
Sukan kwana a kewayen gidan Allah, domin dole su tsare shi; kuma su suke lura da mabuɗi don buɗewa a kowace safiya.
28 ಸೇವೆಯ ಸಲಕರಣೆಗಳನ್ನು ಒಳಗೆ ಲೆಕ್ಕದ ಪ್ರಕಾರ ತರುವುದಕ್ಕೂ, ಹೊರಗೆ ಲೆಕ್ಕದ ಪ್ರಕಾರ ತರುವುದಕ್ಕೂ ಅವರಲ್ಲಿ ಕೆಲವರು ಅವುಗಳ ಮೇಲೆ ನೇಮಕವಾಗಿದ್ದರು.
Waɗansunsu su ne suke lura da kayayyakin da ake amfani da su a hidimar haikali; sukan ƙirga su sa’ad da ake shigar da su da sa’ad da ake fitar da su.
29 ಅವರಲ್ಲಿ ಕೆಲವರು ಸಲಕರಣೆಗಳನ್ನೂ, ಪರಿಶುದ್ಧ ಸ್ಥಾನದಲ್ಲಿರುವ ಎಲ್ಲಾ ಸಾಮಗ್ರಿಗಳನ್ನೂ, ನಯವಾದ ಹಿಟ್ಟನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ, ಸಾಂಬ್ರಾಣಿಯನ್ನೂ, ಸುಗಂಧಗಳನ್ನೂ ಕಾಯಲು ನೇಮಕರಾಗಿದ್ದರು.
An sa waɗansu su lura da kayayyakin da kuma dukan waɗansu kayan wuri mai tsarki, da kuma gari da ruwan inabi, da mai, turare da kuma kayan yaji.
30 ಯಾಜಕರ ಪುತ್ರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು.
Amma waɗansu firistoci ne suke harhaɗa kayan yajin.
31 ಕೋರಹಿಯನಾದ ಶಲ್ಲೂಮನ ಚೊಚ್ಚಲಮಗನಾದ ಮತ್ತಿತ್ಯನು ಲೇವಿಯರಲ್ಲಿ ಒಬ್ಬನಾಗಿದ್ದು, ತಟ್ಟೆಗಳ ಮೇಲೆ ಮಾಡುವ ಭಕ್ಷ್ಯಗಳ ಕೆಲಸದ ಮೇಲ್ವಿಚಾರಕನಾಗಿದ್ದನು.
Wani Balawe mai suna Mattitiya, ɗan farin Shallum mutumin Kora ne aka danƙa masa hakkin toya burodin miƙawa.
32 ಕೊಹಾತ್ಯರ ಪುತ್ರರಾದ ಅವರ ಸಹೋದರರಲ್ಲಿ ಇನ್ನೂ ಕೆಲವರು ಸಮ್ಮುಖದ ರೊಟ್ಟಿಯನ್ನು ಪ್ರತಿ ಸಬ್ಬತ್ ದಿನದಲ್ಲಿ ಸಿದ್ಧಮಾಡುವ ಜವಾಬ್ದಾರಿಯನ್ನು ಹೊಂದಿದ್ದರು.
Waɗansu’yan’uwansu Kohatawa ne suke lura da shiryawa burodin da ake kaiwa a tebur a kowane Asabbaci.
33 ಇದಲ್ಲದೆ ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು, ಸ್ವತಂತ್ರವಾದ ಕೊಠಡಿಗಳಲ್ಲಿ ವಾಸವಾಗಿದ್ದರು. ಏಕೆಂದರೆ ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.
Waɗanda suke mawaƙa, kawunan iyalan Lawiyawa, sukan zauna a ɗakunan haikali kuma ba sa yin waɗansu ayyuka domin su suke da hakkin aiki dare da rana.
34 ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿನಲ್ಲಿ ವಾಸವಾಗಿದ್ದರು.
Dukan waɗannan su ne kawunan iyalan Lawiyawa, manya kamar yadda aka lissafta su a zuriyarsu, kuma suna zama a Urushalima.
35 ಇದಲ್ಲದೆ ಗಿಬ್ಯೋನನ ಮೂಲಪುರುಷನಾದ ಯೆಹಿಯೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.
Yehiyel mahaifin Gibeyon ya zauna a Gibeyon. Matarsa ita ce Ma’aka
36 ಅವನ ಚೊಚ್ಚಲ ಮಗನು ಅಬ್ದೋನನು ನಂತರ ಚೂರನು, ಕೀಷನು, ಬಾಳನು, ನೇರನು, ನಾದಾಬನು.
ɗansa na fari kuwa shi ne Abdon, sai Zur, Kish, Ba’al, Ner, Nadab,
37 ಗೆದೋರನು, ಅಹಿಯೋನು, ಜೆಕರೀಯನು, ಮಿಕ್ಲೋತನು.
Gedor, Ahiyo, Zakariya da Miklot.
38 ಮಿಕ್ಲೋತನು ಶಿಮಾಮನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ತಮ್ಮ ಸಹೋದರರ ಸಂಗಡ ವಾಸವಾಗಿದ್ದರು.
Miklot shi ne mahaifin Shimeyam. Su ma sun zauna kusa da danginsu a Urushalima.
39 ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನ ಮಕ್ಕಳು: ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ ಎಂಬವರು.
Ner shi mahaifin Kish, Kish mahaifin Shawulu, kuma Shawulu shi ne mahaifin Yonatan, Malki-Shuwa, Abinadab da Esh-Ba’al.
40 ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ಮೀಕನನ್ನು ಪಡೆದನು.
Ɗan Yonatan shi ne, Merib-Ba’al wanda shi ne mahaifin Mika.
41 ಮೀಕನ ಪುತ್ರರು: ಪಿತೋನನು, ಮೇಲಕನು, ತಹ್ರೀಯನು ಮತ್ತು ಆಹಾಜನು.
’Ya’yan Mika maza su ne, Fiton, Melek, Tareya da Ahaz.
42 ಆಹಾಜನು ಯಗ್ರಾಹನನ್ನು ಪಡೆದನು; ಯಗ್ರಾಹನು ಆಲೆಮೆತನನ್ನೂ, ಅಜ್ಮಾವೆತನನ್ನೂ, ಜಿಮ್ರಿಯನ್ನೂ ಪಡೆದನು; ಜಿಮ್ರಿಯು ಮೋಚನನ್ನು ಪಡೆದನು;
Ahaz shi ne mahaifin Yada, Yada shi ne mahaifin Alemet, Azmawet da Zimri, Zimri kuwa shi ne mahaifin Moza.
43 ಮೋಚನು ಬಿನ್ನನನ್ನು ಪಡೆದನು; ಅವನ ಮಗನು ರೆಫಾಯನು; ಅವನ ಮಗನು ಎಲ್ಲಾಸನು; ಅವನ ಮಗನು ಆಚೇಲನು.
Moza shi ne mahaifin Bineya; Refahiya, Eleyasa da kuma Azel.
44 ಈ ಆಚೇಲನಿಗೆ ಆರು ಮಂದಿ ಪುತ್ರರಿದ್ದರು: ಅವರ ಹೆಸರುಗಳು ಅಜ್ರೀಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು; ಇವರೆಲ್ಲರು ಆಚೇಲನ ಪುತ್ರರು.
Azel yana da’ya’ya maza shida, kuma ga sunayensu. Azrikam, Bokeru, Ishmayel, Sheyariya, Obadiya da Hanan. Waɗannan su ne’ya’yan Azel maza.

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 9 >