< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 13 >

1 ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ನನಗೆ ಪ್ರೀತಿಯಿಲ್ಲದಿದ್ದರೆ, ನಾದ ಕೊಡುವ ಕಂಚೂ ಗಣಗಣಿಸುವ ತಾಳವೂ ಆಗಿದ್ದೇನೆ.
Если я говорю языками человеческими и ангельскими, а любви не имею, то я - медь звенящая или кимвал звучащий.
2 ನನಗೆ ಪ್ರವಾದನ ವರವಿದ್ದರೂ ನಾನು ಎಲ್ಲಾ ರಹಸ್ಯಗಳನ್ನೂ, ಸಕಲ ವಿದ್ಯೆಯನ್ನು ತಿಳಿದಿದ್ದರೂ ಬೆಟ್ಟಗಳನ್ನು ಕದಲಿಸುವಷ್ಟು ನಂಬಿಕೆಯಿದ್ದರೂ ನನಗೆ ಪ್ರೀತಿಯಿಲ್ಲದಿದ್ದರೆ, ಶೂನ್ಯನಾಗಿದ್ದೇನೆ.
Если имею дар пророчества, и знаю все тайны, и имею всякое познание и всю веру, так что могу и горы переставлять, а не имею любви, - то я ничто.
3 ನಾನು ನನ್ನ ಎಲ್ಲಾ ಆಸ್ತಿಯನ್ನು ದಾನಮಾಡಿದರೂ, ನಾನು ಹೊಗಳಿಕೊಳ್ಳುವಂತೆ ನನ್ನ ದೇಹವನ್ನು ಸುಡುವುದಕ್ಕಾಗಿ ಒಪ್ಪಿಸಿಕೊಟ್ಟರೂ ಪ್ರೀತಿಯು ನನಗಿಲ್ಲದಿದ್ದರೆ, ನನಗೇನೂ ಪ್ರಯೋಜನವಾಗುವುದಿಲ್ಲ.
И если я раздам все имение мое и отдам тело мое на сожжение, а любви не имею, нет мне в том никакой пользы.
4 ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ,
Любовь долготерпит, милосердствует, любовь не завидует, любовь не превозносится, не гордится,
5 ಪ್ರೀತಿಯು ಇತರರನ್ನು ಅವಮಾನಪಡಿಸುವುದಿಲ್ಲ, ಸ್ವಹಿತವನ್ನೇ ಹುಡುಕುವುದಿಲ್ಲ, ಸುಲಭವಾಗಿ ಸಿಟ್ಟುಗೊಳ್ಳುವುದಿಲ್ಲ, ಅಪಕಾರವನ್ನು ಎಣಿಸುವುದಿಲ್ಲ,
не бесчинствует, не ищет своего, не раздражается, не мыслит зла,
6 ಪ್ರೀತಿ ಕೆಟ್ಟದ್ದರಲ್ಲಿ ಸಂತೋಷಪಡುವುದಿಲ್ಲ, ಸತ್ಯದೊಂದಿಗೆ ಸಂತೋಷ ಪಡುತ್ತದೆ.
не радуется неправде, а сорадуется истине;
7 ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ.
все покрывает, всему верит, всего надеется, все переносит.
8 ಪ್ರೀತಿಯು ಎಂದಿಗೂ ಅಳಿದುಹೋಗುವುದಿಲ್ಲ, ಪ್ರವಾದನೆಗಳಾದರೋ ಇಲ್ಲದಂತಾಗುವುವು, ಅನ್ಯ ಭಾಷೆಗಳು ಗತಿಸಿ ಹೋಗುವುವು, ವಿದ್ಯೆಯೋ ಇಲ್ಲದಂತಾಗುವುವು.
Любовь никогда не перестает, хотя и пророчества прекратятся, и языки умолкнут, и знание упразднится.
9 ನಾವು ಅಪೂರ್ಣವಾಗಿ ತಿಳಿದುಕೊಂಡಿದ್ದೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ.
Ибо мы отчасти знаем, и отчасти пророчествуем;
10 ಆದರೆ ಸಂಪೂರ್ಣವಾದದ್ದು ಬಂದಾಗ, ಭಾಗವಾದದ್ದು ಅಳಿದುಹೋಗುವುದು.
когда же настанет совершенное, тогда то, что отчасти, прекратится.
11 ನಾನು ಬಾಲಕನಾಗಿದ್ದಾಗ, ಬಾಲಕನ ಮಾತುಗಳನ್ನಾಡಿದೆನು, ಬಾಲಕನಂತೆ ಯೋಚಿಸಿದೆನು, ಬಾಲಕನಂತೆಯೇ ತರ್ಕಿಸಿದೆನು. ಪ್ರೌಢನಾದಾಗ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.
Когда я был младенцем, то по-младенчески говорил, по-младенчески мыслил, по-младенчески рассуждал; а как стал мужем, то оставил младенческое.
12 ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ಆಗ ಮುಖಾಮುಖಿಯಾಗಿ ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದಿದೆ. ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ, ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.
Теперь мы видим как бы сквозь тусклое стекло, гадательно, тогда же лицем к лицу; теперь знаю я отчасти, а тогда познаю, подобно как я познан.
13 ಆದರೆ ಈಗ ನಂಬಿಕೆ, ನಿರೀಕ್ಷೆ, ಪ್ರೀತಿ, ಈ ಮೂರೇ ಉಳಿದಿರುತ್ತವೆ. ಇವುಗಳಲ್ಲಿ ಮಹತ್ತಾದದ್ದು ಪ್ರೀತಿಯೇ.
А теперь пребывают сии три: вера, надежда, любовь; но любовь из них больше.

< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 13 >