< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 16 >
1 ಈಗ ದೇವಜನರಿಗೋಸ್ಕರ ಹಣ ಕೂಡಿಸಿಡುವುದನ್ನು ಕುರಿತು: ನಾನು ಗಲಾತ್ಯದ ಸಭೆಗಳಿಗೆ ಹೇಳಿದ್ದನ್ನೇ ನೀವೂ ಮಾಡಿರಿ.
Men vedkommende innsamlingen til de hellige, da skal I gjøre således som jeg har ordnet det for menighetene i Galatia.
2 ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಆದಾಯಕ್ಕೆ ತಕ್ಕಂತೆ ವಾರದ ಮೊದಲನೆಯ ದಿನದಲ್ಲಿ ಕೂಡಿಟ್ಟುಕೊಂಡಿರಲಿ. ಹೀಗೆ ಮಾಡಿದರೆ, ನಾನು ಬಂದಾಗ ನೀವು ಹಣ ಕೂಡಿಸುವ ಅವಶ್ಯವಿರುವುದಿಲ್ಲ.
På hver første dag i uken legge enhver av eder hjemme hos sig selv til side det han får lykke til, forat innsamlingen ikke skal skje først da når jeg kommer.
3 ನಾನು ನಿಮ್ಮಲ್ಲಿಗೆ ಬಂದಾಗ, ನೀವು ಯಾರನ್ನು ಅನುಮೋದಿಸುವಿರೋ, ಅವರಿಗೆ ಪತ್ರ ಕೊಟ್ಟು ನಿಮ್ಮ ಕೊಡುಗೆಯನ್ನು ತೆಗೆದುಕೊಂಡು ಯೆರೂಸಲೇಮಿಗೆ ಹೋಗುವಂತೆ ಕಳುಹಿಸುವೆನು.
Når jeg så er kommet, skal jeg sende dem som I selv velger, med brev, for å føre eders kjærlighetsgave til Jerusalem;
4 ನಾನು ಸಹ ಹೋಗುವುದು ಯುಕ್ತವಾಗಿದ್ದರೆ, ಅವರು ನನ್ನೊಂದಿಗೆ ಬರಲಿ.
men er det verdt at jeg selv reiser, skal de reise i følge med mig.
5 ಮಕೆದೋನ್ಯವನ್ನು ದಾಟಿದ ಮೇಲೆ, ಅದೇ ಮಾರ್ಗವಾಗಿ ನಾನು ಪುನಃ ನಿಮ್ಮ ಬಳಿಗೆ ಬರುವೆನು.
Jeg kommer til eder når jeg har reist igjennem Makedonia; for Makedonia reiser jeg igjennem;
6 ಬಹುಶಃ ನಾನು ಸ್ವಲ್ಪ ಸಮಯ ನಿಮ್ಮೊಂದಿಗೆ ಇದ್ದ ಮೇಲೆ ಅಥವಾ ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮೊಂದಿಗೆ ಕಳೆಯಲು ಬಯಸುತ್ತೇನೆ. ಹೀಗೆ ನಾನು ಹೋಗಬೇಕಾದ ಸ್ಥಳಗಳಲ್ಲಿ ನೀವು ನನಗೆ ಸಹಾಯ ಮಾಡಬಹುದು.
men hos eder blir jeg kan hende nogen tid, eller endog vinteren over, forat jeg kan få følge av eder dit jeg siden skal reise.
7 ನಾನು ಹಾದುಹೋಗುವಾಗ, ನಿಮ್ಮನ್ನು ಸ್ವಲ್ಪ ಸಮಯ ಮಾತ್ರ ಸಂದರ್ಶಿಸುವುದಕ್ಕೆ ನನಗೆ ಇಷ್ಟವಿಲ್ಲ. ಕರ್ತನು ಅನುಮತಿಸಿದರೆ, ನಿಮ್ಮ ಬಳಿಯಲ್ಲಿ ಬಂದು ಹೆಚ್ಚುಕಾಲ ಇರುವೆನೆಂದು ನಿರೀಕ್ಷಿಸುತ್ತೇನೆ.
For jeg tenker ikke å se eder nu på gjennemreisen; for jeg håper å bli nogen tid hos eder, om Herren tillater det.
8 ಆದರೆ ಐವತ್ತು ದಿನಗಳ ಹಬ್ಬದ ತನಕ ಎಫೆಸದಲ್ಲಿರುವೆನು.
I Efesus blir jeg inntil pinsen;
9 ಏಕೆಂದರೆ, ಪರಿಣಾಮಕಾರಿಯಾದ ಸೇವೆಗೆ ದೊಡ್ಡದಾಗಿ ಬಾಗಿಲು ನನಗೆ ತೆರೆದಿದೆ, ಬಹಳ ಜನ ವಿರೋಧಿಗಳೂ ಇದ್ದಾರೆ.
for en stor og virksom dør er oplatt for mig, og det er mange motstandere.
10 ನನ್ನ ಹಾಗೆಯೇ ತಿಮೊಥೆ ಕರ್ತನ ಸೇವೆ ಮಾಡುತ್ತಿದ್ದಾನೆ. ಅವನು ಬಂದರೆ, ಅವನು ನಿಮ್ಮೊಂದಿಗಿರುವಾಗ ಅವನಿಗೆ ಯಾವ ಭಯವೂ ಇಲ್ಲದಂತೆ ನೋಡಿಕೊಳ್ಳಿರಿ.
Når Timoteus kommer, da se til at han kan være hos eder uten frykt! for han gjør Herrens gjerning, likesom jeg;
11 ಯಾರೂ ಅವನನ್ನು ಹೀನಾಯವಾಗಿ ಕಾಣಬಾರದು. ಆದರೆ ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿಕೊಡಿರಿ. ಅವನು ಸಹೋದರರೊಂದಿಗೆ ಬರುವುದನ್ನು ಎದುರು ನೋಡುತ್ತಿದ್ದೇನೆ.
ingen må derfor ringeakte ham. Og følg ham på vei i fred, forat han kan komme til mig! for jeg venter på ham med brødrene.
12 ಈಗ ನಮ್ಮ ಸಹೋದರನಾದ ಅಪೊಲ್ಲೋಸನ ವಿಷಯವೇನೆಂದರೆ, ಅವನು ಇತರ ಸಹೋದರರೊಂದಿಗೆ ನಿಮ್ಮ ಬಳಿಗೆ ಬರಬೇಕೆಂದು ಅವನಿಗೆ ಬಹಳವಾಗಿ ಕೇಳಿಕೊಂಡೆನು. ಆದರೆ ಈಗ ಬರುವುದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿಲ್ಲ. ಅವನು ತನಗೆ ಸಂದರ್ಭ ಸಿಕ್ಕಿದಾಗ ಬರುವನು.
Vedkommende broderen Apollos, da bad jeg ham meget at han skulde fare til eder sammen med brødrene; han var aldeles ikke villig til å komme nu, men han vil komme når han får tid.
13 ಎಚ್ಚರವಾಗಿರಿ, ವಿಶ್ವಾಸದಲ್ಲಿ ಸ್ಥಿರವಾಗಿ ನಿಲ್ಲಿರಿ, ಧೈರ್ಯವಾಗಿರಿ, ಬಲಗೊಳ್ಳಿರಿ.
Vær årvåkne, stå fast i troen, vær mandige, vær sterke!
14 ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
La alt hos eder skje i kjærlighet!
15 ಸ್ತೆಫನನ ಕುಟುಂಬದವರು ಅಖಾಯದಲ್ಲಿ ಪ್ರಥಮವಾಗಿ ವಿಶ್ವಾಸಿಗಳಾದವರು ಎಂಬುದನ್ನು ನೀವು ಬಲ್ಲಿರಿ. ಅವರು ದೇವಜನರಿಗೆ ಸೇವೆ ಮಾಡುವುದಕ್ಕಾಗಿ ತಮ್ಮನ್ನೇ ಸಮರ್ಪಿಸಿಕೊಂಡವರಾಗಿದ್ದಾರೆ.
Jeg formaner eder, brødre: I kjenner Stefanas' hus, at det er førstegrøden av Akaia, og at de har stilt sig til tjeneste for de hellige;
16 ಪ್ರಿಯರೇ, ನೀವು ಇಂಥವರಿಗೂ ಈ ಸೇವೆಯಲ್ಲಿ ಅವರೊಂದಿಗೆ ಪ್ರಯಾಸಪಡುವವರಿಗೂ ವಿಧೇಯರಾಗಿರಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
vis og I ærbødighet mot dem og mot enhver som hjelper til og gjør sig møie!
17 ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದುದರಿಂದ ನನಗೆ ಸಂತೋಷವಾಯಿತು. ನೀವಿಲ್ಲದ್ದ ಕೊರತೆಯನ್ನು ಅವರು ನನಗೆ ಒದಗಿಸಿದ್ದಾರೆ.
Jeg gleder mig over at Stefanas og Fortunatus og Akaikus er her; for de har utfylt savnet av eder;
18 ಅವರು ನನ್ನ ಆತ್ಮವನ್ನೂ, ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ನೀವು ಇಂಥವರನ್ನು ಸನ್ಮಾನಿಸಿರಿ.
for de har vederkveget min og eders ånd. Skjønn derfor på slike!
19 ಏಷ್ಯಾದ ಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ನಿಮ್ಮನ್ನು ಹೃದಯಪೂರ್ವಕವಾಗಿ ವಂದಿಸುತ್ತಾರೆ.
Menighetene i Asia hilser eder. Akvilas og Priska tillikemed menigheten i deres hus hilser eder meget i Herren.
20 ಸಹೋದರರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು, ಒಬ್ಬರನ್ನೊಬ್ಬರು ವಂದಿಸಿರಿ.
Alle brødrene hilser eder. Hils hverandre med et hellig kyss!
21 ಪೌಲನೆಂಬ ನಾನು, ಸ್ವಂತ ಕೈಯಿಂದ ಈ ವಂದನೆಯನ್ನು ಬರೆದಿದ್ದೇನೆ.
Hilsen med min, Paulus' hånd:
22 ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ, ಅವನು ಶಾಪಗ್ರಸ್ತನಾಗಲಿ! ಕರ್ತನೇ, ಬಾ!
Om nogen ikke elsker Herren, han være forbannet! Maran ata.
23 ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೊಂದಿಗಿರಲಿ.
Den Herre Jesu nåde være med eder!
24 ಕ್ರಿಸ್ತ ಯೇಸುವಿನಲ್ಲಿ ನನ್ನ ಪ್ರೀತಿಯು ನಿಮ್ಮೆಲ್ಲರೊಂದಿಗೆ ಇದೆ. ಆಮೆನ್.
Min kjærlighet er med eder alle i Kristus Jesus.