< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 2 >
1 ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಮಾನವೀಯ ಜ್ಞಾನದಿಂದಾಗಲಿ ದೇವರ ವಾಕ್ಯವನ್ನು ಸಾರುವವನಾಗಿ ಬರಲಿಲ್ಲ.
So kam auch ich, Brüder, als ich zu euch kam zur Verkündigung des Zeugnisses von Gott, nicht als Meister der Rede oder Weisheit.
2 ಶಿಲುಬೆಗೆ ಹಾಕಲಾದ ಯೇಸು ಕ್ರಿಸ್ತನನ್ನೇ ಹೊರತು ನಿಮ್ಮಲ್ಲಿ ಬೇರೆ ಯಾವುದನ್ನೂ ತಿಳಿಯದವನಾಗಿರುವೆನೆಂದು ತೀರ್ಮಾನಿಸಿಕೊಂಡೆನು.
Mit keinem andern Wissen wollte ich unter euch treten als dem von Jesus Christus und zwar dem gekreuzigten.
3 ನಾನು ನಿಮ್ಮ ಬಳಿಗೆ ಬಂದಾಗ ಬಲಹೀನನೂ ಬಹಳವಾಗಿ ಭಯಪಟ್ಟು ನಡುಗುವವನೂ ಆಗಿದ್ದೆನು.
Und persönlich war ich bei euch in Schwachheit und Furcht und großem Zagen,
4 ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಜ್ಞಾನ ಹಾಗೂ ಮನವೊಲಿಸುವ ವಾಕ್ಯಗಳನ್ನು ಪ್ರಯೋಗಿಸದೆ, ದೇವರಾತ್ಮನ ಶಕ್ತಿಯನ್ನೇ ಪ್ರಯೋಗಿಸಿದೆನು.
und mein Wort und Verkünden stand nicht auf Ueberredungskunst der Weisheit, sondern auf dem Erweise von Geist und Kraft.
5 ನಿಮ್ಮ ನಂಬಿಕೆಯು ಮನುಷ್ಯ ಜ್ಞಾನದ ಮೇಲೆ ಅವಲಂಬಿಸದೆ ದೇವರ ಶಕ್ತಿಯ ಮೇಲೆ ಅವಲಂಬಿಸಬೇಕೆಂದು ನಾನು ಹೀಗೆ ಮಾಡಿದೆನು.
Damit euer Glaube nicht stehe auf Menschen-Weisheit, sondern auf Gottes-Kraft.
6 ಹೀಗಿದ್ದರೂ ಪರಿಪೂರ್ಣರಲ್ಲಿ ಜ್ಞಾನದ ಬಗ್ಗೆ ಮಾತನಾಡುತ್ತೇವೆ. ಅದು ಇಹಲೋಕದ ಜ್ಞಾನವಲ್ಲ. ಅಳಿದು ಹೋಗುವ ಇಹಲೋಕದ ಅಧಿಕಾರಿಗಳ ಜ್ಞಾನವೂ ಅಲ್ಲ. (aiōn )
Ja, wir reden Weisheit, wo wir es mit Gereiften zu thun haben, doch nicht die Weisheit dieser Welt, oder der Herrscher dieser Welt, die da zu nichte werden. (aiōn )
7 ನಾವು ದೇವರ ರಹಸ್ಯ ಜ್ಞಾನವನ್ನು ಕುರಿತು ಮಾತನಾಡುತ್ತೇವೆ. ಅದು ದೇವರು ನಮ್ಮ ಮಹಿಮೆಗಾಗಿ ಯುಗಗಳ ಮುಂಚೆಯೇ ನೇಮಿಸಿ, ಮರೆಮಾಡಿದ ಜ್ಞಾನವೇ ಆಗಿರುತ್ತದೆ. (aiōn )
Sondern was wir reden, ist Gottes Weisheit im Geheimnis, die verborgene, welche Gott verordnet hat vor aller Zeit zu unserer Herrlichkeit, (aiōn )
8 ಇದನ್ನು ಇಹಲೋಕದ ಅಧಿಕಾರಿಗಳಲ್ಲಿ ಒಬ್ಬರಾದರೂ ಅರಿಯಲಿಲ್ಲ. ಅರಿತಿದ್ದರೆ, ಅವರು ಮಹಿಮೆಯುಳ್ಳ ಕರ್ತದೇವರನ್ನು ಶಿಲುಬೆಗೇರಿಸುತ್ತಿರಲಿಲ್ಲ. (aiōn )
die keiner von den Herrschern dieser Welt erkannt hat: denn wenn sie sie erkannt hätten, so hätten sie den Herrn der Herrlichkeit nicht gekreuzigt. (aiōn )
9 ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ದೇವರು ತಮ್ಮನ್ನು ಪ್ರೀತಿಸುವವರಿಗಾಗಿ ಸಿದ್ಧ ಮಾಡಿರುವಂಥದ್ದನ್ನು ಯಾವ ಕಣ್ಣೂ ಕಾಣಲಿಲ್ಲ, ಯಾವ ಕಿವಿಯೂ ಕೇಳಲಿಲ್ಲ, ಅದು ಮನುಷ್ಯನ ಹೃದಯದಲ್ಲಿಯೂ ಹುಟ್ಟಲಿಲ್ಲ.”
Vielmehr gilt davon das Wort: was kein Auge gesehen und kein Ohr gehört hat, und in keines Menschen Herz gekommen ist, was Gott bereitet hat denen, die ihn lieben.
10 ನಮಗಾದರೋ ದೇವರು ತಮ್ಮ ಪವಿತ್ರಾತ್ಮರ ಮೂಲಕ ಇವುಗಳನ್ನು ಪ್ರಕಟಿಸಿದ್ದಾರೆ. ಪವಿತ್ರಾತ್ಮರು ಎಲ್ಲಾ ವಿಷಯಗಳನ್ನು ಹಾಗೂ ದೇವರ ಆಳವಾದ ರಹಸ್ಯಗಳನ್ನು ಪರಿಶೋಧಿಸುವವರಾಗಿದ್ದಾರೆ.
Uns aber hat es Gott enthüllt durch den Geist, denn der Geist erforscht alle Dinge, selbst die Tiefen Gottes.
11 ಮನುಷ್ಯನ ಆಲೋಚನೆಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿಯುವುದು? ಹಾಗೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಗ್ರಹಿಸಲಾರರು.
Unter Menschen - wer von ihnen kennt das Innere eines Menschen, als der Geist des Menschen, der in ihm ist? So hat auch noch niemand das Innere Gottes ergründet, als der Geist Gottes.
12 ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮರನ್ನು ಹೊಂದಿದ್ದೇವೆ.
Doch wir haben nicht den Geist der Welt empfangen, sondern den Geist, der aus Gott ist, um damit zu verstehen, was uns von Gott geschenkt ist,
13 ನಾವು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಮಾತನಾಡದೆ, ದೇವರ ಆತ್ಮರು ಕಲಿಸಿಕೊಟ್ಟ ಮಾತುಗಳಿಂದ ಇವುಗಳನ್ನು ಮಾತಾಡುತ್ತೇವೆ. ಹೀಗೆ ನಾವು ಆತ್ಮಿಕ ಸತ್ಯಗಳನ್ನು ದೇವರ ಆತ್ಮರ ಮಾತುಗಳಿಂದಲೇ ಸ್ಪಷ್ಟಪಡಿಸುತ್ತೇವೆ.
und davon reden wir auch nicht in Schulworten menschlicher Weisheit, sondern in solchen, wie sie der Geist lehrt, geistliche Sprache für geistliche Dinge.
14 ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.
Ein seelischer Mensch freilich nimmt nicht an, was vom Geist Gottes ist; es ist ihm Thorheit, er vermag es nicht zu verstehen, weil es geistlich ergründet werden will.
15 ಆದರೆ ಆತ್ಮಿಕ ಮನುಷ್ಯನು ಎಲ್ಲವನ್ನೂ ವಿವೇಚಿಸಿಕೊಳ್ಳುತ್ತಾನೆ. ಆದರೆ ಅವನಿಗೆ ಬೇರೆ ಯಾರೂ ತೀರ್ಪುಮಾಡಲಾಗದು.
Der geistliche Mensch aber ergründet alles, er selbst aber wird von niemand ergründet.
16 ಏಕೆಂದರೆ, “ಕರ್ತದೇವರ ಮನಸ್ಸನ್ನು ತಿಳಿದುಕೊಂಡು, ಅವರಿಗೆ ಉಪದೇಶಿಸುವವನಾರು?” ಆದರೆ ನಮಗೆ ಕ್ರಿಸ್ತ ಯೇಸುವಿನ ಮನಸ್ಸು ಇದೆ.
Denn wer hat den Verstand des Herrn erkannt, ihn zu meistern? Wir haben aber den Verstand Christus'.