< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 5 >
1 ಯೆಹೂದ್ಯರಲ್ಲದವರಲ್ಲಿ ನಡೆಯದೇ ಇರುವಂಥ ಅನೈತಿಕತೆ ನಿಮ್ಮಲ್ಲಿದೆಯೆಂದು ವಾಸ್ತವವಾಗಿ ವರದಿ ಬಂದಿದೆ: ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ.
Fornication is truly heard of among you, and such fornication which is not among the heathens, that one should have the wife of his father.
2 ಹೀಗಿದ್ದರೂ ಗರ್ವಪಡುತ್ತಿದ್ದೀರಲ್ಲಾ! ನೀವು ದುಃಖಪಟ್ಟು, ಈ ಕಾರ್ಯ ಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸಬೇಕಲ್ಲವೇ?
And have you been inflated, and have not rather mourned, that the one having done this work may be taken from your midst?
3 ನಾನು ಸ್ವತಃ ನಿಮ್ಮ ಮಧ್ಯದಲ್ಲಿ ಇರದಿದ್ದರೂ ಆತ್ಮದಲ್ಲಿ ನಿಮ್ಮೊಂದಿಗಿದ್ದೇನೆ. ಈ ಕಾರ್ಯಮಾಡಿದವನ ಮೇಲೆ ಆಗಲೇ ಹತ್ತಿರವಿದ್ದವನಂತೆ ನಮಗೆ ಕರ್ತ ಆಗಿರುವ ಯೇಸುವಿನ ಹೆಸರಿನಲ್ಲಿ ತೀರ್ಪುಮಾಡಿದ್ದೇನೆ.
For indeed I, being absent in body but present in spirit, have already judged the one having thus done this, as being present,
4 ನೀವು ಕರ್ತ ಯೇಸುವಿನ ಹೆಸರಿನಲ್ಲಿ ಸಭೆಯಾಗಿ ಬಂದು ಸೇರಿದಾಗ, ನಾನೂ ಆತ್ಮದಲ್ಲಿ ನಿಮ್ಮೊಂದಿಗಿದ್ದು ನಮಗೆ ಕರ್ತ ಆಗಿರುವ ಯೇಸುವಿನ ಸಾನಿಧ್ಯ ಶಕ್ತಿಯೊಂದಿರುವಾಗ,
in the name of the Lord Jesus, you and my spirit being assembled, with the power of the Lord Jesus,
5 ಕರ್ತ ಯೇಸುವಿನ ಪುನರಾಗಮನ ದಿನದಲ್ಲಿ ಆ ಮನುಷ್ಯನ ಆತ್ಮವು ರಕ್ಷಣೆ ಹೊಂದುವಂತೆಯೂ ಅವನ ಪಾಪಭರಿತ ಶರೀರವು ನಾಶವಾಗುವಂತೆಯೂ ಅವನನ್ನು ಸೈತಾನನಿಗೆ ಒಪ್ಪಿಸಿ ಬಿಡುತ್ತೇನೆ.
to turn over such a one to Satan for the destruction of carnality, in order that the spirit may be saved in the day of the Lord Jesus.
6 ನೀವು ಜಂಬ ಕೊಚ್ಚಿಕೊಳ್ಳುವುದು ಸರಿಯಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?
Your boasting is not good. Do you not know that a little leaven leavens the whole lump?
7 ಹೊಸ ಕಣಕವಾಗುವಂತೆ ಹುಳಿಯನ್ನು ತೆಗೆದುಹಾಕಿರಿ. ನೀವು ಹುಳಿಯಿಲ್ಲದವರಾಗಿದ್ದೀರಲ್ಲ. ಏಕೆಂದರೆ ನಮ್ಮ ಪಸ್ಕದ ಕುರಿಯಾದ ಕ್ರಿಸ್ತ ಯೇಸು ಯಜ್ಞಾರ್ಪಿತನಾಗಿದ್ದಾರೆ.
Cleanse away the old leaven, in order that you may be a new lump, as you are free from leaven; for Christ has truly become our Passover.
8 ಆದಕಾರಣ ಹಗೆತನ, ದುಷ್ಟತನ, ಎಂಬ ಹಳೇ ಹುಳಿಯಿಂದಲ್ಲ, ಯಥಾರ್ಥತೆ ಹಾಗೂ ಸತ್ಯ ಎಂಬ ಹುಳಿಯಿಲ್ಲದ ರೊಟ್ಟಿಯಿಂದಲೇ ಹಬ್ಬವನ್ನು ಆಚರಿಸೋಣ.
So let us feast, not on the old leaven, nor on the leaven of sin and iniquity, but on the unleavened bread of purity and truth.
9 ಅನೈತಿಕರೊಡನೆ ಸಹವಾಸ ಮಾಡಬಾರದೆಂದು ನಾನು ಪತ್ರದಲ್ಲಿ ಬರೆದಿದ್ದೆನಷ್ಟೆ.
I have written unto you in a letter to have no fellowship with fornicators;
10 ಈ ಲೋಕದಲ್ಲಿರುವ ಎಲ್ಲಾ ಅನೈತಿಕರು, ಲೋಭಿಗಳು, ಸುಲಿಗೆ ಮಾಡುವವರು, ವಿಗ್ರಹಾರಾಧಕರು ಇಂಥವರ ಸಹವಾಸವನ್ನು ನೀವು ಬಿಟ್ಟು ಇರಬೇಕೆಂಬುದು ನನ್ನ ಅರ್ಥವಲ್ಲ. ಹಾಗಿದ್ದರೆ, ನೀವು ಈ ಲೋಕವನ್ನೇ ಬಿಟ್ಟು ಹೋಗಬೇಕಾಗುವುದು.
not at all with the fornicators of this world, or with the covetous and the extortioners, or with the idolators; since you ought therefore to come out of the world.
11 ಆದರೆ ಸಹೋದರಿ ಅಥವಾ ಸಹೋದರನೆನಿಸಿಕೊಂಡವನು ಜಾರನಾದರೂ ಲೋಭಿಯಾದರೂ ವಿಗ್ರಹಾರಾಧಕನಾದರೂ ಪರನಿಂದಕನಾದರೂ ಕುಡುಕನಾದರೂ ಸುಲಿಗೆ ಮಾಡುವವನಾದರೂ ಆಗಿದ್ದರೆ, ಅಂಥವರ ಸಹವಾಸ ಮಾಡಬೇಡಿರಿ. ಅಂಥವರ ಸಂಗಡ ಊಟ ಮಾಡಲೂ ಬೇಡಿರಿ ಎಂದು ಈಗ ಬರೆಯುತ್ತಿದ್ದೇನೆ.
For now I have written unto you not to keep company with him, if any one denominated a brother may be a fornicator, or covetous, or an idolater, or a scold, or drunken, or an extortioner; with such a one not to eat.
12 ಸಭೆಗೆ ಸೇರದಿರುವ ಹೊರಗಿನವರನ್ನು ತೀರ್ಪುಮಾಡುವುದಕ್ಕೆ ನಾನು ಯಾರು? ಸಭೆಯ ಒಳಗಿನವರನ್ನು ತೀರ್ಪುಮಾಡಬೇಕಾದವರು ನೀವಲ್ಲವೇ?
For why is it for me to judge the outsiders? Do you not judge those within? But God will judge those without.
13 ಆದರೆ ಹೊರಗಿನವರನ್ನು ತೀರ್ಪುಮಾಡುವವರು ದೇವರೇ. “ಆ ದುಷ್ಟನನ್ನು ನಿಮ್ಮಿಂದ ತೆಗೆದು ಹೊರಗೆ ಹಾಕಿರಿ.”
Take away the wicked person from you, yourselves.