< ಯೋಹಾನನು ಬರೆದ ಮೊದಲನೆಯ ಪತ್ರಿಕೆ 4 >

1 ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
Dear friends, do not trust every spirit, but test the spirits to see whether they are from God, because many false prophets have gone out into the world.
2 ನೀವು ದೇವರಾತ್ಮನನ್ನು ಹೀಗೆ ಗುರುತಿಸಬಹುದು: ಕ್ರಿಸ್ತ ಯೇಸು ನರಮಾಂಸರಾಗಿ ಬಂದರೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದು.
This is the way to recognise the Spirit of God: those who acknowledge Jesus Christ as come in the flesh have God’s Spirit,
3 ನರಮಾಂಸದಲ್ಲಿ ಬಂದ ಯೇಸುವನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುವುದೆಂಬುದನ್ನು ನೀವು ಕೇಳಿದ್ದೀರಲ್ಲಾ. ಈಗಲೂ ಅದು ಲೋಕದಲ್ಲಿ ಇದೆ.
while a spirit that doesn’t acknowledge Jesus isn’t from God. Instead it is the spirit of the antichrist; you have heard that it was coming, and it is now already in the world!
4 ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರಾಗಿದ್ದೀರಿ, ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವ ದೇವರು ಲೋಕದಲ್ಲಿ ಇರುವವನಿಗಿಂತ ದೊಡ್ಡವರಾಗಿದ್ದಾರೆ.
You, my children, come from God, and you have successfully resisted such people as these, because he who is in you is greater than the one who is in the world.
5 ಅವರು ಲೋಕಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಅವರು ಲೋಕ ಸಂಬಂಧವಾಗಿ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
Those people belong to the world and therefore they speak as the world speaks, and the world listens to them.
6 ನಾವಂತೂ ದೇವರಿಗೆ ಸೇರಿದವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸೇರದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದು ಸತ್ಯದ ಆತ್ಮ. ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದುಕೊಳ್ಳುತ್ತೇವೆ.
We come from God. Whoever knows God listens to us; the person who does not come from God does not listen to us. This is how we distinguish the spirit of truth and the spirit of deception.
7 ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರೂ ದೇವರನ್ನು ಬಲ್ಲವರೂ ಆಗಿದ್ದಾರೆ.
Dear friends, let us love one another, because love comes from God and everyone who loves is a child of God and knows God.
8 ಪ್ರೀತಿಯಿಲ್ಲದವರು ದೇವರನ್ನು ಬಲ್ಲವರಲ್ಲ. ಏಕೆಂದರೆ ದೇವರು ಪ್ರೀತಿಯಾಗಿದ್ದಾರೆ.
Those who do not love know nothing of God, for God is love.
9 ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮೂಲಕ ನಾವು ಜೀವಿಸುವುದಕ್ಕಾಗಿ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ಇದರಿಂದಲೇ ದೇವರು ತಮ್ಮ ಪ್ರೀತಿಯನ್ನು ನಮ್ಮ ನಡುವೆ ತೋರಿಸಿದರು.
This is how God showed his love among us: he sent his one and only Son into the world that we might live through him.
10 ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.
This is what love is: it is not that we have loved God, but that he loved us and sent his Son to be an atoning sacrifice for our sins.
11 ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು.
Dear friends, since God loved us in this way, we should love one another.
12 ದೇವರನ್ನು ಯಾರೂ ಎಂದೂ ನೋಡಿಲ್ಲ, ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಗೊಂಡಿದ್ದಾರೆ ಮತ್ತು ಅವರ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
No one has ever seen God, but if we love one another, God lives in us and his love reaches perfection within us.
13 ದೇವರು ನಮಗೆ ತಮ್ಮ ಆತ್ಮವನ್ನು ಕೊಟ್ಟಿರುವುದರಿಂದಲೇ, ನಾವು ದೇವರಲ್ಲಿಯೂ ದೇವರು ನಮ್ಮಲ್ಲಿಯೂ ಬಾಳುವವರಾಗಿದ್ದಾರೆಂದು ತಿಳಿದುಕೊಳ್ಳುತ್ತೇವೆ.
We know that we live in him, and he lives in us, because he has given us a measure of his Spirit.
14 ತಂದೆಯು ಮಗನನ್ನು ಲೋಕ ರಕ್ಷಕರನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ನೋಡಿದ್ದೇವೆ ಮತ್ತು ಅದಕ್ಕೆ ನಾವು ಸಾಕ್ಷಿ ಹೇಳುತ್ತೇವೆ.
Moreover, we have seen for ourselves and testify that the Father has sent the Son to be the Saviour of the world.
15 ಯೇಸು ದೇವರ ಪುತ್ರರಾಗಿದ್ದಾರೆಂದು ಯಾರು ಒಪ್ಪಿಕೊಳ್ಳುತ್ತಾರೋ, ಅವರಲ್ಲಿ ದೇವರು ಬಾಳುತ್ತಾರೆ ಮತ್ತು ಅವರು ದೇವರಲ್ಲಿ ಬಾಳುವವರಾಗಿದ್ದಾರೆ.
Whoever acknowledges that Jesus Christ is the Son of God, God lives in them, and they live in God.
16 ದೇವರು ನಮ್ಮನ್ನು ಪ್ರೀತಿಸುತ್ತಾರೆಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾರೆ, ಪ್ರೀತಿಯಲ್ಲಿ ಬಾಳುವವರು ದೇವರಲ್ಲಿ ಬಾಳುವವರಾಗಿದ್ದಾರೆ, ದೇವರು ಅವರಲ್ಲಿ ಬಾಳುವವರಾಗಿದ್ದಾರೆ.
And so we have come to know and believe the love which God has for us. God is love; and whoever lives in love lives in God, and God lives in them.
17 ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಏಕೆಂದರೆ ಯೇಸು ಎಂಥವರಾಗಿದ್ದಾರೋ ನಾವು ಅಂಥವರಾಗಿಯೇ ಈ ಲೋಕದಲ್ಲಿದ್ದೇವೆ.
This is the way love has reached its perfection among us, so that we may have confidence on the day of judgment, because in this world we are like Christ.
18 ಪ್ರೀತಿಯಲ್ಲಿ ಹೆದರಿಕೆಯಿಲ್ಲ ಆದರೆ ಪೂರ್ಣ ಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಏಕೆಂದರೆ ಭಯವಿರುವಲ್ಲಿ ಯಾತನೆಯಿರುವುದು. ಭಯಪಡುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.
There is no fear in love; perfect love drives out fear because fear has to do with punishment. So anyone who is afraid has not reached perfection in love.
19 ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ದೇವರನ್ನು ಪ್ರೀತಿಸುತ್ತೇವೆ.
We love, because God first loved us.
20 ಒಬ್ಬನು, “ನಾನು ದೇವರನ್ನು ಪ್ರೀತಿಸುತ್ತೇನೆ,” ಎಂದು ಹೇಳಿ ತನ್ನ ಸಹೋದರರನ್ನು ದ್ವೇಷ ಮಾಡಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು, ಕಾಣದಿರುವ ದೇವರನ್ನು ಪ್ರೀತಿಸಲಾರನು.
If someone says “I love God,” and yet hates others, they are a liar. For the person who does not love their brother or sister, whom they have seen, cannot love God, whom they have not seen.
21 ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಸಹೋದರಿಯನ್ನೂ ಪ್ರೀತಿಸಬೇಕೆಂಬ ಈ ಆಜ್ಞೆಯನ್ನು ನಾವು ದೇವರಿಂದ ಹೊಂದಿದ್ದೇವೆ.
Indeed, we have this command from Christ: Those who love God must also love each other.

< ಯೋಹಾನನು ಬರೆದ ಮೊದಲನೆಯ ಪತ್ರಿಕೆ 4 >