< ಯೋಹಾನನು ಬರೆದ ಮೊದಲನೆಯ ಪತ್ರಿಕೆ 5 >
1 ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.
Jeder der glaubt, daß Jesus der Christus ist, ist aus Gott gezeugt. Und jeder, der seinen Erzeuger liebt, liebt auch den, der von ihm gezeugt ist;
2 ನಾವು ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
daran erkennen wir, daß wir die Kinder Gottes lieben, wofern wir Gott lieben und seine Gebote thun.
3 ದೇವರ ಪ್ರೀತಿ ಏನೆಂದರೆ: ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವುದೇ. ಅವರ ಆಜ್ಞೆಗಳು ಕಠಿಣವಾದವುಗಳಲ್ಲ.
Denn dies ist die Liebe Gottes, daß wir seine Gebote halten.
4 ದೇವರಿಂದ ಹುಟ್ಟಿರುವ ಪ್ರತಿಯೊಬ್ಬರು ಲೋಕವನ್ನು ಜಯಿಸುತ್ತಾರೆ. ಲೋಕವನ್ನು ಜಯಿಸುವಂಥದು ನಮ್ಮ ನಂಬಿಕೆಯೇ.
Und seine Gebote sind nicht drückend, weil alles, was aus Gott gezeugt ist, die Welt überwindet, und dies ist der Sieg, der die Welt überwunden hat: unser Glaube.
5 ಯೇಸುವು ದೇವಪುತ್ರ ಎಂದು ನಂಬಿದವರೇ ಹೊರತು ಲೋಕವನ್ನು ಜಯಿಸುವವರು ಯಾರು?
Wer ist es, der die Welt überwindet, als der da glaubt, daß Jesus der Sohn Gottes ist?
6 ಕ್ರಿಸ್ತ ಯೇಸುವೇ ನೀರಿನಿಂದಲೂ ರಕ್ತದಿಂದಲೂ ಬಂದವರು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದರು, ಇದಕ್ಕೆ ಸಾಕ್ಷಿಕೊಡುವವರು ಪವಿತ್ರಾತ್ಮ ದೇವರೇ, ಏಕೆಂದರೆ ಪವಿತ್ರಾತ್ಮ ದೇವರು ಸತ್ಯವಾಗಿದ್ದಾರೆ.
Dieser ist es, der gekommen ist durch Wasser und Blut: Jesus Christus; nicht mit dem Wasser allein, sondern mit dem Wasser und mit dem Blut; und der Geist ist es, der zeugt, weil der Geist die Wahrheit ist.
7 ಇದಲ್ಲದೆ ಸಾಕ್ಷಿಕೊಡುವವರು ಮೂವರಿದ್ದಾರೆ.
So sind es drei die da zeugen:
8 ಆತ್ಮ, ಜಲ, ರಕ್ತ ಎಂಬ ಮೂರು ಸಾಕ್ಷಿಗಳು ಇವೆ. ಇವು ಕೊಡುವ ಸಾಕ್ಷಿ ಒಂದೇ ಆಗಿರುತ್ತದೆ.
der Geist, das Wasser, und das Blut, und die drei sind einig.
9 ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವುದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಏಕೆಂದರೆ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.
Wenn wir das Zeugnis der Menschen annehmen, nun das Zeugnis Gottes ist größer; denn dies ist Gottes Zeugnis, daß er gezeugt hat von seinem Sohn.
10 ದೇವಪುತ್ರ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟವರು ಆ ಸಾಕ್ಷಿಯನ್ನು ಸ್ವೀಕರಿಸುತ್ತಾರೆ. ದೇವರನ್ನು ನಂಬದವರು ದೇವರನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾರೆ. ಹೇಗೆಂದರೆ ದೇವರು ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅಂಥವರು ನಂಬಿಕೆಯಿಡಲಿಲ್ಲ.
Wer an den Sohn Gottes glaubt, hat das Zeugnis durch ihn; wer Gott nicht glaubt, hat ihn zum Lügner gemacht, weil er nicht geglaubt hat an das Zeugnis, welches Gott gezeugt hat über seinen Sohn.
11 ಆ ಸಾಕ್ಷಿ ಯಾವುದೆಂದರೆ: ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಈ ಜೀವವು ದೇವರ ಪುತ್ರ ಕ್ರಿಸ್ತ ಯೇಸುವಿನಲ್ಲಿ ಇದೆ ಎಂಬುದೇ. (aiōnios )
Und dies ist das Zeugnis: daß uns Gott ewiges Leben gegeben hat, und dieses Leben in seinem Sohne ist. (aiōnios )
12 ಯಾರು ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಹೊಂದಿದ್ದಾರೊ ಅವರಿಗೆ ಜೀವವಿದೆ. ಯಾರಲ್ಲಿ ದೇವರ ಪುತ್ರ ಆಗಿರುವ ಕ್ರಿಸ್ತ ಯೇಸು ಇರುವುದಿಲ್ಲವೋ ಅಂಥವರಿಗೆ ಜೀವವಿಲ್ಲ.
Wer den Sohn hat, hat das Leben; wer den Sohn Gottes nicht hat, hat das Leben nicht.
13 ದೇವಪುತ್ರ ಆಗಿರುವವರ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆ ನಾನು ನಿಮಗೆ ಇವುಗಳನ್ನು ಬರೆದಿದ್ದೇನೆ. (aiōnios )
Dieses habe ich euch geschrieben, damit ihr wisset, daß ihr ewiges Leben habt, euch die ihr glaubt an den Namen des Sohnes Gottes. (aiōnios )
14 ದೇವರ ಚಿತ್ತಾನುಸಾರವಾಗಿ ನಾವು ಏನಾದರೂ ಬೇಡಿಕೊಂಡರೆ, ದೇವರು ಕೇಳುತ್ತಾರೆ. ಇದೇ ದೇವರಲ್ಲಿ ನಮಗಿರುವ ನಿಶ್ಚಯ.
Und dies ist die Zuversicht, die wir zu ihm haben, daß wenn wir etwas bitten nach seinem Willen, er uns erhört.
15 ನಾವು ಏನು ಬೇಡಿಕೊಂಡರೂ ದೇವರು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾರೆ ಎಂದು ತಿಳಿದಿದ್ದರೆ, ನಾವು ಬೇಡಿದವುಗಳು ನಮಗೆ ದೊರೆಯುತ್ತವೆ ಎಂಬ ದೃಢನಿಶ್ಚಯ ನಮಗಿದೆ.
Und wenn wir wissen, daß er uns auf unser Bitten erhört, so wissen wir, daß uns die Bitten sicher sind, die wir von ihm erbeten haben.
16 ಮರಣಕರವಲ್ಲದ ಪಾಪವನ್ನು ಮಾಡುವ ಸಹೋದರ ಅಥವಾ ಸಹೋದರಿಯನ್ನು ಯಾರಾದರೂ ಕಂಡರೆ, ಆ ಸಹೋದರ ಅಥವಾ ಸಹೋದರಿಯರಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಅವರಿಗೆ ಜೀವವನ್ನು ದಯಪಾಲಿಸುವರು. ಮರಣಕರವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಆದರೆ ಮರಣಕರವಾದ ಪಾಪವೂ ಉಂಟು. ಈ ಮರಣಕರವಾದ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.
Wenn einer seinen Bruder sündigen sieht, eine Sünde nicht zum Tode, so soll er bitten, und er wird ihm Leben geben, nämlich solchen, die nicht zum Tode sündigen. Es gibt eine Sünde zum Tode, davon rede ich nicht, daß man dafür bitten soll.
17 ಅನೀತಿಯೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು.
Jede Ungerechtigkeit ist Sünde, so gibt es auch Sünde die nicht zum Tode ist.
18 ದೇವರಿಂದ ಹುಟ್ಟಿರುವವರು ಪಾಪದಲ್ಲಿ ಮುಂದುವರೆಯುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವರನ್ನು ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ಅಂಥವರನ್ನು ಕಾಪಾಡುವರು, ಕೆಡುಕನು ಅಂಥವರನ್ನು ಮುಟ್ಟುವುದಿಲ್ಲ.
Wir wissen, daß jeder, der aus Gott gezeugt ist, nicht sündigt, sondern wer aus Gott gezeugt ward, hält fest an ihm, und der Böse rührt ihn nicht an.
19 ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.
Wir wissen, daß wir aus Gott sind, und die ganze Welt im Bösen liegt.
20 ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ. (aiōnios )
Wir wissen aber, daß der Sohn Gottes gekommen ist, und er hat uns Einsicht verliehen, daß wir den Wahrhaftigen erkennen, und wir sind in dem Wahrhaftigen, in seinem Sohne Jesus Christus; das ist der wahrhaftige Gott und ewiges Leben. (aiōnios )
21 ಪ್ರಿಯ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.
Kinder, hütet euch vor den Götzen.