< ಯೋಹಾನನು ಬರೆದ ಮೊದಲನೆಯ ಪತ್ರಿಕೆ 5 >

1 ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.
Всякий, верующий, что Иисус есть Христос, от Бога рожден, и всякий, любящий Родившего, любит и Рожденного от Него.
2 ನಾವು ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
Что мы любим детей Божиих, узнаем из того, когда любим Бога и соблюдаем заповеди Его.
3 ದೇವರ ಪ್ರೀತಿ ಏನೆಂದರೆ: ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವುದೇ. ಅವರ ಆಜ್ಞೆಗಳು ಕಠಿಣವಾದವುಗಳಲ್ಲ.
Ибо это есть любовь к Богу, чтобы мы соблюдали заповеди Его; и заповеди Его не тяжки.
4 ದೇವರಿಂದ ಹುಟ್ಟಿರುವ ಪ್ರತಿಯೊಬ್ಬರು ಲೋಕವನ್ನು ಜಯಿಸುತ್ತಾರೆ. ಲೋಕವನ್ನು ಜಯಿಸುವಂಥದು ನಮ್ಮ ನಂಬಿಕೆಯೇ.
Ибо всякий, рожденный от Бога, побеждает мир; и сия есть победа, победившая мир, вера наша.
5 ಯೇಸುವು ದೇವಪುತ್ರ ಎಂದು ನಂಬಿದವರೇ ಹೊರತು ಲೋಕವನ್ನು ಜಯಿಸುವವರು ಯಾರು?
Кто побеждает мир, как не тот, кто верует, что Иисус есть Сын Божий?
6 ಕ್ರಿಸ್ತ ಯೇಸುವೇ ನೀರಿನಿಂದಲೂ ರಕ್ತದಿಂದಲೂ ಬಂದವರು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದರು, ಇದಕ್ಕೆ ಸಾಕ್ಷಿಕೊಡುವವರು ಪವಿತ್ರಾತ್ಮ ದೇವರೇ, ಏಕೆಂದರೆ ಪವಿತ್ರಾತ್ಮ ದೇವರು ಸತ್ಯವಾಗಿದ್ದಾರೆ.
Сей есть Иисус Христос, пришедший водою, и Кровию, и Духом; не водою только, но водою и кровию, и Дух свидетельствует о Нем, потому что Дух есть истина.
7 ಇದಲ್ಲದೆ ಸಾಕ್ಷಿಕೊಡುವವರು ಮೂವರಿದ್ದಾರೆ.
Ибо три свидетельствуют на небе: Отец, Слово и Святый Дух; и Сии три суть едино.
8 ಆತ್ಮ, ಜಲ, ರಕ್ತ ಎಂಬ ಮೂರು ಸಾಕ್ಷಿಗಳು ಇವೆ. ಇವು ಕೊಡುವ ಸಾಕ್ಷಿ ಒಂದೇ ಆಗಿರುತ್ತದೆ.
И три свидетельствуют на земле: Дух, вода и Кровь; и сии три об одном.
9 ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವುದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಏಕೆಂದರೆ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.
Если мы принимаем свидетельство человеческое, свидетельство Божие - больше, ибо это есть свидетельство Божие, которым Бог свидетельствовал о Сыне Своем.
10 ದೇವಪುತ್ರ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟವರು ಆ ಸಾಕ್ಷಿಯನ್ನು ಸ್ವೀಕರಿಸುತ್ತಾರೆ. ದೇವರನ್ನು ನಂಬದವರು ದೇವರನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾರೆ. ಹೇಗೆಂದರೆ ದೇವರು ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅಂಥವರು ನಂಬಿಕೆಯಿಡಲಿಲ್ಲ.
Верующий в Сына Божия имеет свидетельство в себе самом; не верующий Богу представляет Его лживым, потому что не верует в свидетельство, которым Бог свидетельствовал о Сыне Своем.
11 ಆ ಸಾಕ್ಷಿ ಯಾವುದೆಂದರೆ: ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಈ ಜೀವವು ದೇವರ ಪುತ್ರ ಕ್ರಿಸ್ತ ಯೇಸುವಿನಲ್ಲಿ ಇದೆ ಎಂಬುದೇ. (aiōnios g166)
Свидетельство сие состоит в том, что Бог даровал нам жизнь вечную и сия жизнь в Сыне Его. (aiōnios g166)
12 ಯಾರು ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಹೊಂದಿದ್ದಾರೊ ಅವರಿಗೆ ಜೀವವಿದೆ. ಯಾರಲ್ಲಿ ದೇವರ ಪುತ್ರ ಆಗಿರುವ ಕ್ರಿಸ್ತ ಯೇಸು ಇರುವುದಿಲ್ಲವೋ ಅಂಥವರಿಗೆ ಜೀವವಿಲ್ಲ.
Имеющий Сына Божия имеет жизнь; не имеющий Сына Божия не имеет жизни.
13 ದೇವಪುತ್ರ ಆಗಿರುವವರ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆ ನಾನು ನಿಮಗೆ ಇವುಗಳನ್ನು ಬರೆದಿದ್ದೇನೆ. (aiōnios g166)
Сие написал я вам, верующим во имя Сына Божия, дабы вы знали, что вы, веруя в Сына Божия, имеете жизнь вечную. (aiōnios g166)
14 ದೇವರ ಚಿತ್ತಾನುಸಾರವಾಗಿ ನಾವು ಏನಾದರೂ ಬೇಡಿಕೊಂಡರೆ, ದೇವರು ಕೇಳುತ್ತಾರೆ. ಇದೇ ದೇವರಲ್ಲಿ ನಮಗಿರುವ ನಿಶ್ಚಯ.
И вот какое дерзновение мы имеем к Нему, что, когда просим чего по воле Его, Он слушает нас.
15 ನಾವು ಏನು ಬೇಡಿಕೊಂಡರೂ ದೇವರು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾರೆ ಎಂದು ತಿಳಿದಿದ್ದರೆ, ನಾವು ಬೇಡಿದವುಗಳು ನಮಗೆ ದೊರೆಯುತ್ತವೆ ಎಂಬ ದೃಢನಿಶ್ಚಯ ನಮಗಿದೆ.
А когда мы знаем, что Он слушает нас во всем, чего бы мы ни просили, - знаем и то, что получаем просимое от Него.
16 ಮರಣಕರವಲ್ಲದ ಪಾಪವನ್ನು ಮಾಡುವ ಸಹೋದರ ಅಥವಾ ಸಹೋದರಿಯನ್ನು ಯಾರಾದರೂ ಕಂಡರೆ, ಆ ಸಹೋದರ ಅಥವಾ ಸಹೋದರಿಯರಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಅವರಿಗೆ ಜೀವವನ್ನು ದಯಪಾಲಿಸುವರು. ಮರಣಕರವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಆದರೆ ಮರಣಕರವಾದ ಪಾಪವೂ ಉಂಟು. ಈ ಮರಣಕರವಾದ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.
Если кто видит брата своего согрешающего грехом не к смерти, то пусть молится, и Бог даст ему жизнь, то есть согрешающему грехом не к смерти. Есть грех к смерти: не о том говорю, чтобы он молился.
17 ಅನೀತಿಯೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು.
Всякая неправда есть грех; но есть грех не к смерти.
18 ದೇವರಿಂದ ಹುಟ್ಟಿರುವವರು ಪಾಪದಲ್ಲಿ ಮುಂದುವರೆಯುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವರನ್ನು ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ಅಂಥವರನ್ನು ಕಾಪಾಡುವರು, ಕೆಡುಕನು ಅಂಥವರನ್ನು ಮುಟ್ಟುವುದಿಲ್ಲ.
Мы знаем, что всякий, рожденный от Бога, не грешит; но рожденный от Бога хранит себя, и лукавый не прикасается к нему.
19 ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.
Мы знаем, что мы от Бога и что весь мир лежит во зле.
20 ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ. (aiōnios g166)
Знаем также, что Сын Божий пришел и дал нам свет и разум, да познаем Бога истинного и да будем в истинном Сыне Его Иисусе Христе. Сей есть истинный Бог и жизнь вечная. (aiōnios g166)
21 ಪ್ರಿಯ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.
Дети! храните себя от идолов. Аминь

< ಯೋಹಾನನು ಬರೆದ ಮೊದಲನೆಯ ಪತ್ರಿಕೆ 5 >