< ಯೋಹಾನನು ಬರೆದ ಮೊದಲನೆಯ ಪತ್ರಿಕೆ 1 >
1 ಆದಿಯಿಂದ ಇರುವಂಥದ್ದೂ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದ ಆ ಜೀವವಾಕ್ಯವನ್ನೇ ಸಾರುತ್ತಿದ್ದೇವೆ.
Що́ було́ від поча́тку, що́ ми чули, що́ бачили власними очима, що́ розглядали, і чого руки наші торкалися, — про Слово життя, —
2 ಈ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು, ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ. (aiōnios )
а життя з'явилось, і ми бачили, і сві́дчимо, і звіщаємо вам життя вічне, що в Отця перебува́ло й з'явилося нам, — (aiōnios )
3 ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು.
що́ ми бачили й чули — про те ми звіщаємо вам, щоб і ви мали спільність із нами. Спільність же наша з Отцем і Сином Його Ісусом Христом.
4 ನಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತಿದ್ದೇವೆ.
А це пишемо вам, щоб повна була́ ваша радість!
5 ನಾವು ಕ್ರಿಸ್ತ ಯೇಸುವಿನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವುದೆಂದರೆ: ದೇವರು ಬೆಳಕಾಗಿದ್ದಾರೆ, ಅವರಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ, ಎಂಬುದೇ.
А це звістка, що ми її чули від Нього і звіщаємо вам: Бог є світло, і немає в Нім жа́дної те́мряви!
6 ನಾವು ದೇವರ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೂ ಸುಳ್ಳಾಡುವವರಾಗಿದ್ದರೆ, ನಾವು ಸತ್ಯವನ್ನು ಅನುಸರಿಸುವವರಲ್ಲ.
Коли ж кажемо, що маємо спільність із Ним, а ходимо в те́мряві, то неправду говоримо й правди не чинимо!
7 ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
Коли ж ходимо в світлі, як Сам Він у світлі, то маємо спільність один із о́дним, і кров Ісуса Христа, Його Сина, очищує нас від усякого гріха.
8 ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.
Коли ж кажемо, що не маєм гріха́, то себе обманюємо, і немає в нас правди!
9 ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.
Коли ми свої гріхи визнаємо, то Він вірний та праведний, щоб гріхи нам простити, та очистити нас від неправди всілякої.
10 ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ. ಅವರ ವಾಕ್ಯವು ನಮ್ಮಲ್ಲಿ ಬಾಳುವುದಿಲ್ಲ.
А як кажемо, що ми не згрішили, то чинимо з Нього неправдомовця, і сло́ва Його нема в нас!