< ಅರಸುಗಳು - ಪ್ರಥಮ ಭಾಗ 10 >
1 ಶೆಬದ ರಾಣಿಯು ಯೆಹೋವ ದೇವರ ನಾಮದ ಮಹತ್ತಿನಿಂದ ಸೊಲೊಮೋನನ ಕೀರ್ತಿಯನ್ನು ಕೇಳಿದಾಗ, ಒಗಟುಗಳಿಂದ ಅವನನ್ನು ಪರೀಕ್ಷಿಸಲು ಬಂದಳು.
१जब शेबा की रानी ने यहोवा के नाम के विषय सुलैमान की कीर्ति सुनी, तब वह कठिन-कठिन प्रश्नों से उसकी परीक्षा करने को चल पड़ी।
2 ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ, ಬಹಳಷ್ಟು ಬಂಗಾರವನ್ನೂ, ಅಮೂಲ್ಯವಾದ ರತ್ನಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.
२वह तो बहुत भारी दल के साथ, मसालों, और बहुत सोने, और मणि से लदे ऊँट साथ लिये हुए यरूशलेम को आई; और सुलैमान के पास पहुँचकर अपने मन की सब बातों के विषय में उससे बातें करने लगी।
3 ಆಗ ಸೊಲೊಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಅವುಗಳಲ್ಲಿ ಅರಸನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದ್ದರಿಂದ ಎಲ್ಲವುಗಳಿಗೂ ಉತ್ತರಿಸಿದನು.
३सुलैमान ने उसके सब प्रश्नों का उत्तर दिया, कोई बात राजा की बुद्धि से ऐसी बाहर न रही कि वह उसको न बता सका।
4 ಶೆಬದ ರಾಣಿಯು ಸೊಲೊಮೋನನ ಸಮಸ್ತ ಜ್ಞಾನವನ್ನೂ, ಅವನು ಕಟ್ಟಿಸಿದ ಅರಮನೆಯನ್ನೂ,
४जब शेबा की रानी ने सुलैमान की सब बुद्धिमानी और उसका बनाया हुआ भवन, और उसकी मेज पर का भोजन देखा,
5 ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.
५और उसके कर्मचारी किस रीति बैठते, और उसके टहलुए किस रीति खड़े रहते, और कैसे-कैसे कपड़े पहने रहते हैं, और उसके पिलानेवाले कैसे हैं, और वह कैसी चढ़ाई है, जिससे वह यहोवा के भवन को जाया करता है, यह सब जब उसने देखा, तब वह चकित रह गई।
6 ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಸಾಧನೆಗಳ ಕುರಿತೂ, ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯ.
६तब उसने राजा से कहा, “तेरे कामों और बुद्धिमानी की जो कीर्ति मैंने अपने देश में सुनी थी वह सच ही है।
7 ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವವರೆಗೂ ಜನರ ಮಾತುಗಳನ್ನು ನಂಬದೆ ಹೋದೆನು. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ. ನಿನ್ನ ಜ್ಞಾನವೂ, ನಿನ್ನ ಸಂಪತ್ತೂ ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಎಷ್ಟೋ ಅಧಿಕವಾಗಿದೆ.
७परन्तु जब तक मैंने आप ही आकर अपनी आँखों से यह न देखा, तब तक मैंने उन बातों पर विश्वास न किया, परन्तु इसका आधा भी मुझे न बताया गया था; तेरी बुद्धिमानी और कल्याण उस कीर्ति से भी बढ़कर है, जो मैंने सुनी थी।
8 ನಿನ್ನ ಜನರು ಭಾಗ್ಯವಂತರು. ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಅಧಿಪತಿಗಳು ಭಾಗ್ಯವಂತರು.
८धन्य हैं तेरे जन! धन्य हैं तेरे ये सेवक! जो नित्य तेरे सम्मुख उपस्थित रहकर तेरी बुद्धि की बातें सुनते हैं।
9 ಇಸ್ರಾಯೇಲಿನ ಸಿಂಹಾಸನದ ಮೇಲೆ ನಿನ್ನನ್ನು ಕುಳ್ಳಿರಿಸಿದ ನಿನ್ನಲ್ಲಿ ಹರ್ಷಗೊಂಡ ನಿನ್ನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಯೆಹೋವ ದೇವರು ಯುಗಯುಗಕ್ಕೂ ಇಸ್ರಾಯೇಲರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ, ನೀತಿಯನ್ನೂ ನಡೆಸಲು ಅವರು ನಿನ್ನನ್ನು ಅರಸನನ್ನಾಗಿ ಮಾಡಿದರು,” ಎಂದಳು.
९धन्य है तेरा परमेश्वर यहोवा! जो तुझ से ऐसा प्रसन्न हुआ कि तुझे इस्राएल की राजगद्दी पर विराजमान किया यहोवा इस्राएल से सदा प्रेम रखता है, इस कारण उसने तुझे न्याय और धार्मिकता करने को राजा बना दिया है।”
10 ಅವಳು ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂ ತೂಕ ಬಂಗಾರವನ್ನೂ, ಬಹು ಸಮೃದ್ಧಿಯಾದ ಸುಗಂಧದ್ರವ್ಯಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧದ್ರವ್ಯಗಳ ಹಾಗೆ ಬೇರೆ ಯಾರೂ ಕೊಟ್ಟಿರಲಿಲ್ಲ.
१०उसने राजा को एक सौ बीस किक्कार सोना, बहुत सा सुगन्ध-द्रव्य, और मणि दिया; जितना सुगन्ध-द्रव्य शेबा की रानी ने राजा सुलैमान को दिया, उतना फिर कभी नहीं आया।
11 ಹೀರಾಮನ ಹಡಗುಗಳು ಓಫೀರನಿಂದ ಬಂಗಾರ ಮಾತ್ರವಲ್ಲದೆ ಅನೇಕ ಸುಗಂಧದ ಮರಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ತಂದವು.
११फिर हीराम के जहाज भी जो ओपीर से सोना लाते थे, बहुत सी चन्दन की लकड़ी और मणि भी लाए।
12 ಅರಸನು ಆ ಸುಗಂಧದ ಮರಗಳಿಂದ ಯೆಹೋವ ದೇವರ ಆಲಯಕ್ಕೋಸ್ಕರವೂ ಅರಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ, ವೀಣೆಗಳನ್ನೂ ಮಾಡಿಸಿದನು. ಅಂದಿನಿಂದ ಈ ದಿನದವರೆಗೂ ಅಂಥಾ ಸುಗಂಧದ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ.
१२और राजा ने चन्दन की लकड़ी से यहोवा के भवन और राजभवन के लिये खम्भे और गवैयों के लिये वीणा और सारंगियाँ बनवाईं; ऐसी चन्दन की लकड़ी आज तक फिर नहीं आई, और न दिखाई पड़ी है।
13 ಅರಸನಾದ ಸೊಲೊಮೋನನು ಶೆಬದ ರಾಣಿಗೆ ಔದಾರ್ಯವಾಗಿ ಕೊಟ್ಟ ಕಾಣಿಕೆಗಳ ಹೊರತಾಗಿ, ಅವಳು ಬಯಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಅನಂತರ ಅವಳು ತನ್ನ ಸೇವಕರೊಡನೆ ತಿರುಗಿ ತಮ್ಮ ದೇಶಕ್ಕೆ ಹೋದಳು.
१३शेबा की रानी ने जो कुछ चाहा, वही राजा सुलैमान ने उसकी इच्छा के अनुसार उसको दिया, फिर राजा सुलैमान ने उसको अपनी उदारता से बहुत कुछ दिया, तब वह अपने जनों समेत अपने देश को लौट गई।
14 ಸೊಲೊಮೋನನಿಗೆ ಪ್ರತಿ ವರುಷ ಸುಮಾರು ಇಪ್ಪತ್ತಮೂರು ಸಾವಿರ ಕಿಲ್ರೊಗ್ರಾಂ ಬಂಗಾರವು ದೊರಕುತ್ತಿತ್ತು.
१४जो सोना प्रतिवर्ष सुलैमान के पास पहुँचा करता था, उसका तौल छः सौ छियासठ किक्कार था।
15 ಇದಲ್ಲದೆ ಸೊಲೊಮೋನನಿಗೆ ವರ್ತಕರಿಂದಲೂ, ವರ್ತಕರ ವ್ಯಾಪಾರದಿಂದಲೂ, ಅರೇಬಿಯದ ಅರಸರಿಂದಲೂ, ದೇಶದ ಅಧಿಪತಿಗಳಿಂದಲೂ ಸಹ ಬಂಗಾರವು ದೊರಕುತ್ತಿತ್ತು.
१५इसके अतिरिक्त सौदागरों से, और व्यापारियों के लेन-देन से, और अरब देशों के सब राजाओं, और अपने देश के राज्यपालों से भी बहुत कुछ मिलता था।
16 ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿ ಸುಮಾರು ಏಳು ಕಿಲೋಗ್ರಾಂ ತೂಕದ ಬಂಗಾರವಿತ್ತು.
१६राजा सुलैमान ने सोना गढ़वाकर दो सौ बड़ी-बड़ी ढालें बनवाई; एक-एक ढाल में छः छः सौ शेकेल सोना लगा।
17 ಹಾಗೆಯೇ ಬಂಗಾರದಿಂದ ಮುನ್ನೂರು ಸಣ್ಣ ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ಸುಮಾರು ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
१७फिर उसने सोना गढ़वाकर तीन सौ छोटी ढालें भी बनवाईं; एक-एक छोटी ढाल में, तीन माने सोना लगा; और राजा ने उनको लबानोन का वन नामक महल में रखवा दिया।
18 ಅರಸನು ದಂತದಿಂದ ದೊಡ್ಡ ಸಿಂಹಾಸನವನ್ನು ಮಾಡಿಸಿ, ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿದನು.
१८राजा ने हाथी दाँत का एक बड़ा सिंहासन भी बनवाया, और उत्तम कुन्दन से मढ़वाया।
19 ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳಿದ್ದವು. ಈ ಸಿಂಹಾಸನದ ಹಿಂಭಾಗವು ದುಂಡಾಗಿತ್ತು. ಕುಳಿತುಕೊಳ್ಳುವ ಆಸನದ ಎರಡು ಕಡೆಗಳಲ್ಲಿ ಕೈಗಳಿದ್ದವು. ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.
१९उस सिंहासन में छः सीढ़ियाँ थीं; और सिंहासन का पिछला भाग गोलाकार था, और बैठने के स्थान के दोनों ओर टेक लगी थीं, और दोनों टेकों के पास एक-एक सिंह खड़ा हुआ बना था।
20 ಹನ್ನೆರಡು ಸಿಂಹಗಳು, ಆರು ಮೆಟ್ಟಲುಗಳ ಮೇಲೆ ಎರಡು ಕಡೆಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇರಲಿಲ್ಲ.
२०और छहों सीढ़ियों के दोनों ओर एक-एक सिंह खड़ा हुआ बना था, कुल बारह सिंह बने थे। किसी राज्य में ऐसा सिंहासन कभी नहीं बना;
21 ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಎಲ್ಲಾ ಸಾಮಗ್ರಿಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ, ಆದುದರಿಂದ ಅವನಲ್ಲಿ ಬೆಳ್ಳಿಯ ವಸ್ತು ಒಂದಾದರೂ ಕಾಣಿಸಲಿಲ್ಲ.
२१राजा सुलैमान के पीने के सब पात्र सोने के बने थे, और लबानोन का वन नामक महल के सब पात्र भी शुद्ध सोने के थे, चाँदी का कोई भी न था। सुलैमान के दिनों में उसका कुछ मूल्य न था।
22 ಹೀರಾಮನ ಹಡಗುಗಳ ಜೊತೆಯಲ್ಲಿ ಅರಸನ ಹಡಗುಗಳು ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೆ ಒಂದು ಸಾರಿ ಬಂಗಾರ, ಬೆಳ್ಳಿ, ದಂತ, ಕೋತಿ, ನವಿಲು ಇವುಗಳನ್ನೂ ತರುತ್ತಿದ್ದವು.
२२क्योंकि समुद्र पर हीराम के जहाजों के साथ राजा भी तर्शीश के जहाज रखता था, और तीन-तीन वर्ष पर तर्शीश के जहाज सोना, चाँदी, हाथी दाँत, बन्दर और मयूर ले आते थे।
23 ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಸಮಸ್ತ ಅರಸರಿಗಿಂತ ಮಿಗಿಲಾಗಿದ್ದನು.
२३इस प्रकार राजा सुलैमान, धन और बुद्धि में पृथ्वी के सब राजाओं से बढ़कर हो गया।
24 ದೇವರು ಸೊಲೊಮೋನನ ಹೃದಯದಲ್ಲಿ ಕೊಟ್ಟಿದ್ದ ಜ್ಞಾನವನ್ನು ಕೇಳುವುದಕ್ಕಾಗಿ ಭೂಲೋಕದಲ್ಲಿರುವ ಸಮಸ್ತರೂ ಅವನ ದರ್ಶನವನ್ನು ಬಯಸಿದರು.
२४और समस्त पृथ्वी के लोग उसकी बुद्धि की बातें सुनने को जो परमेश्वर ने उसके मन में उत्पन्न की थीं, सुलैमान का दर्शन पाना चाहते थे।
25 ಅವರೆಲ್ಲರೂ ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ, ಬಂಗಾರದ ಪಾತ್ರೆಗಳನ್ನೂ, ವಸ್ತ್ರಗಳನ್ನೂ, ಆಯುಧಗಳನ್ನೂ, ಸುಗಂಧಗಳನ್ನೂ, ಕುದುರೆಗಳನ್ನೂ, ಹೇಸರಗತ್ತೆಗಳನ್ನೂ, ವರುಷ ವರುಷವೂ ನೇಮಕವಾದ ಪ್ರಕಾರ ತರುತ್ತಿದ್ದರು.
२५और वे प्रतिवर्ष अपनी-अपनी भेंट, अर्थात् चाँदी और सोने के पात्र, वस्त्र, शस्त्र, सुगन्ध-द्रव्य, घोड़े, और खच्चर ले आते थे।
26 ಇದಲ್ಲದೆ ಸೊಲೊಮೋನನು ರಥಗಳನ್ನೂ, ರಾಹುತರನ್ನೂ ಕೂಡಿಸಿದನು. ಸಾವಿರದ ನಾನೂರು ರಥಗಳು, ಹನ್ನೆರಡು ಸಾವಿರ ಕುದುರೆಯ ರಾಹುತರು ಇದ್ದರು. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೇ ಇರಿಸಿದನು, ಉಳಿದವುಗಳನ್ನು ರಥಗಳ ಪಟ್ಟಣಗಳಲ್ಲಿಯೂ ಇರಿಸಿದನು.
२६सुलैमान ने रथ और सवार इकट्ठे कर लिए, उसके चौदह सौ रथ, और बारह हजार सवार हो गए, और उनको उसने रथों के नगरों में, और यरूशलेम में राजा के पास ठहरा रखा।
27 ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು.
२७और राजा ने बहुतायत के कारण, यरूशलेम में चाँदी को तो ऐसा कर दिया जैसे पत्थर और देवदार को ऐसा जैसे नीचे के देश के गूलर।
28 ಇದಲ್ಲದೆ ಸೊಲೊಮೋನನಿಗೆ ಈಜಿಪ್ಟಿನಿಂದಲೂ ಕುವೆಯಿಂದಲೂ ಕುದುರೆಗಳು ಬರುತ್ತಿದ್ದವು. ಅರಸನ ವರ್ತಕರು ಅವುಗಳನ್ನು ಹಿಂಡುಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.
२८और जो घोड़े सुलैमान रखता था, वे मिस्र से आते थे, और राजा के व्यापारी उन्हें झुण्ड-झुण्ड करके ठहराए हुए दाम पर लिया करते थे।
29 ಹಾಗೆಯೇ ಈಜಿಪ್ಟಿನಿಂದ ಆರುನೂರು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ರಥವನ್ನೂ ನೂರ ಐವತ್ತು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ಕುದುರೆಯನ್ನೂ ತರಿಸುತ್ತಿದ್ದರು. ಈ ಪ್ರಕಾರ ಹಿತ್ತಿಯರ ಮತ್ತು ಅರಾಮಿನ ಅರಸುಗಳೆಲ್ಲರು ಇವರ ಮುಖಾಂತರವಾಗಿಯೇ ತರಿಸುತ್ತಿದ್ದರು.
२९एक रथ तो छः सौ शेकेल चाँदी में, और एक घोड़ा डेढ़ सौ शेकेल में, मिस्र से आता था, और इसी दाम पर वे हित्तियों और अराम के सब राजाओं के लिये भी व्यापारियों के द्वारा आते थे।