< ಅರಸುಗಳು - ಪ್ರಥಮ ಭಾಗ 11 >

1 ಅರಸನಾದ ಸೊಲೊಮೋನನು ಫರೋಹನ ಮಗಳನ್ನಲ್ಲದೆ ಮೋವಾಬ್ಯರ, ಅಮ್ಮೋನ್ಯರ, ಎದೋಮ್ಯರ, ಸೀದೋನ್ಯರ, ಹಿತ್ತಿಯರ ಸ್ತ್ರೀಯರನ್ನೂ ಪ್ರೀತಿಮಾಡಿದನು.
וְהַמֶּלֶךְ שְׁלֹמֹה אָהַב נָשִׁים נָכְרִיּוֹת רַבּוֹת וְאֶת־בַּת־פַּרְעֹה מוֹאֲבִיּוֹת עַמֳּנִיּוֹת אֲדֹמִיֹּת צֵדְנִיֹּת חִתִּיֹּֽת׃
2 ಈ ಜನಾಂಗಗಳನ್ನು ಕುರಿತು ಯೆಹೋವ ದೇವರು ಇಸ್ರಾಯೇಲರಿಗೆ, “ನೀವು ಅವರ ಬಳಿಗೆ ಪ್ರವೇಶಿಸಬಾರದು. ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು,” ಎಂದು ಹೇಳಿದ್ದರು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.
מִן־הַגּוֹיִם אֲשֶׁר אָֽמַר־יְהוָה אֶל־בְּנֵי יִשְׂרָאֵל לֹֽא־תָבֹאוּ בָהֶם וְהֵם לֹא־יָבֹאוּ בָכֶם אָכֵן יַטּוּ אֶת־לְבַבְכֶם אַחֲרֵי אֱלֹהֵיהֶם בָּהֶם דָּבַק שְׁלֹמֹה לְאַהֲבָֽה׃
3 ಅವನಿಗೆ ರಾಜಪುತ್ರಿಯರಾದ ಏಳು ನೂರು ಮಂದಿ ಪತ್ನಿಯರೂ, ಮುನ್ನೂರು ಮಂದಿ ಉಪಪತ್ನಿಯರೂ ಇದ್ದರು. ಅವನ ಪತ್ನಿಯರು ಅವನನ್ನು ದಾರಿ ತಪ್ಪಿಸಿದರು.
וַיְהִי־לוֹ נָשִׁים שָׂרוֹת שְׁבַע מֵאוֹת וּפִֽלַגְשִׁים שְׁלֹשׁ מֵאוֹת וַיַּטּוּ נָשָׁיו אֶת־לִבּֽוֹ׃
4 ಸೊಲೊಮೋನನು ಮುದುಕನಾದ ಕಾಲದಲ್ಲಿ ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗಿಸಿದರು. ಅವನ ಹೃದಯವು ತನ್ನ ತಂದೆ ದಾವೀದನ ಹೃದಯದ ಹಾಗೆ ತನ್ನ ದೇವರಾದ ಯೆಹೋವ ದೇವರ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.
וַיְהִי לְעֵת זִקְנַת שְׁלֹמֹה נָשָׁיו הִטּוּ אֶת־לְבָבוֹ אַחֲרֵי אֱלֹהִים אֲחֵרִים וְלֹא־הָיָה לְבָבוֹ שָׁלֵם עִם־יְהוָה אֱלֹהָיו כִּלְבַב דָּוִיד אָבִֽיו׃
5 ಸೊಲೊಮೋನನು ಸೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾಲಿಸಿದನು.
וַיֵּלֶךְ שְׁלֹמֹה אַחֲרֵי עַשְׁתֹּרֶת אֱלֹהֵי צִדֹנִים וְאַחֲרֵי מִלְכֹּם שִׁקֻּץ עַמֹּנִֽים׃
6 ಸೊಲೊಮೋನನು ತನ್ನ ತಂದೆ ದಾವೀದನ ಹಾಗೆ ಯೆಹೋವ ದೇವರನ್ನು ಪೂರ್ಣವಾಗಿ ಹಿಂಬಾಲಿಸದೆ ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
וַיַּעַשׂ שְׁלֹמֹה הָרַע בְּעֵינֵי יְהוָה וְלֹא מִלֵּא אַחֲרֵי יְהוָה כְּדָוִד אָבִֽיו׃
7 ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷಿಗೋಸ್ಕರವೂ, ಅಮ್ಮೋನ್ಯರ ಅಸಹ್ಯಕರವಾದ ಮೋಲೆಕನಿಗೋಸ್ಕರವೂ ಯೆರೂಸಲೇಮಿನ ಪೂರ್ವದಲ್ಲಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.
אָז יִבְנֶה שְׁלֹמֹה בָּמָה לִכְמוֹשׁ שִׁקֻּץ מוֹאָב בָּהָר אֲשֶׁר עַל־פְּנֵי יְרוּשָׁלָ͏ִם וּלְמֹלֶךְ שִׁקֻּץ בְּנֵי עַמּֽוֹן׃
8 ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು, ಬಲಿಗಳನ್ನು ಅರ್ಪಿಸುವ ತನ್ನ ಅನ್ಯಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು.
וְכֵן עָשָׂה לְכָל־נָשָׁיו הַנָּכְרִיּוֹת מַקְטִירוֹת וּֽמְזַבְּחוֹת לֵאלֹהֵיהֶֽן׃
9 ಇಸ್ರಾಯೇಲಿನ ದೇವರಾದ ಯೆಹೋವ ದೇವರು ಸೊಲೊಮೋನನಿಗೆ ಎರಡು ಸಾರಿ ಪ್ರತ್ಯಕ್ಷರಾಗಿದ್ದರೂ, ಅವನ ಹೃದಯವು ದೇವರಿಂದ ತಿರುಗಿ ಹೋದುದರಿಂದ, ಅವನ ಮೇಲೆ ಕೋಪಿಸಿಕೊಂಡಿದ್ದರು.
וַיִּתְאַנַּף יְהוָה בִּשְׁלֹמֹה כִּֽי־נָטָה לְבָבוֹ מֵעִם יְהוָה אֱלֹהֵי יִשְׂרָאֵל הַנִּרְאָה אֵלָיו פַּעֲמָֽיִם׃
10 ಅನ್ಯದೇವರುಗಳ ಹಿಂದೆ ಹೋಗಬಾರದೆಂದು ಅವರು ಇದನ್ನು ಕುರಿತು ಅವನಿಗೆ ಆಜ್ಞಾಪಿಸಿದ್ದರೂ, ಅವನು, ಯೆಹೋವ ದೇವರು ಆಜ್ಞಾಪಿಸಿದ್ದನ್ನು ಕೈಗೊಳ್ಳದೆ ಹೋದನು.
וְצִוָּה אֵלָיו עַל־הַדָּבָר הַזֶּה לְבִלְתִּי־לֶכֶת אַחֲרֵי אֱלֹהִים אֲחֵרִים וְלֹא שָׁמַר אֵת אֲשֶׁר־צִוָּה יְהוָֽה׃
11 ಆದಕಾರಣ ಯೆಹೋವ ದೇವರು ಸೊಲೊಮೋನನಿಗೆ, “ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳದೆ ಹೋದುದರಿಂದ ನಿಶ್ಚಯವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಿದುಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.
וַיֹּאמֶר יְהוָה לִשְׁלֹמֹה יַעַן אֲשֶׁר הָֽיְתָה־זֹּאת עִמָּךְ וְלֹא שָׁמַרְתָּ בְּרִיתִי וְחֻקֹּתַי אֲשֶׁר צִוִּיתִי עָלֶיךָ קָרֹעַ אֶקְרַע אֶת־הַמַּמְלָכָה מֵֽעָלֶיךָ וּנְתַתִּיהָ לְעַבְדֶּֽךָ׃
12 ಆದರೆ ನಿನ್ನ ತಂದೆ ದಾವೀದನಿಗೋಸ್ಕರ ನಿನ್ನ ಕಾಲದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಿದುಕೊಳ್ಳುವೆನು.
אַךְ־בְּיָמֶיךָ לֹא אֶעֱשֶׂנָּה לְמַעַן דָּוִד אָבִיךָ מִיַּד בִּנְךָ אֶקְרָעֶֽנָּה׃
13 ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಿದುಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ, ನಾನು ಆಯ್ದುಕೊಂಡ ಯೆರೂಸಲೇಮಿಗೋಸ್ಕರವೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು,” ಎಂದರು.
רַק אֶת־כָּל־הַמַּמְלָכָה לֹא אֶקְרָע שֵׁבֶט אֶחָד אֶתֵּן לִבְנֶךָ לְמַעַן דָּוִד עַבְדִּי וּלְמַעַן יְרוּשָׁלַ͏ִם אֲשֶׁר בָּחָֽרְתִּי׃
14 ಆಗ ಯೆಹೋವ ದೇವರು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಎದುರಾಳಿಯಾಗಿ ಎಬ್ಬಿಸಿದರು.
וַיָּקֶם יְהוָה שָׂטָן לִשְׁלֹמֹה אֵת הֲדַד הָאֲדֹמִי מִזֶּרַע הַמֶּלֶךְ הוּא בֶּאֱדֽוֹם׃
15 ದಾವೀದನು ಎದೋಮಿನಲ್ಲಿರುವಾಗ ಸೇನಾಧಿಪತಿಯಾದ ಯೋವಾಬನು ಎದೋಮಿನ ಗಂಡಸರೆಲ್ಲರನ್ನು ಕೊಂದುಹಾಕಿದನು. ತರುವಾಯ ಇಸ್ರಾಯೇಲರಲ್ಲಿ ಹತರಾದವರನ್ನು ಸಮಾಧಿಮಾಡಲು ಹೋದನು.
וַיְהִי בִּֽהְיוֹת דָּוִד אֶת־אֱדוֹם בַּעֲלוֹת יוֹאָב שַׂר הַצָּבָא לְקַבֵּר אֶת־הַחֲלָלִים וַיַּךְ כָּל־זָכָר בֶּאֱדֽוֹם׃
16 ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು.
כִּי שֵׁשֶׁת חֳדָשִׁים יָֽשַׁב־שָׁם יוֹאָב וְכָל־יִשְׂרָאֵל עַד־הִכְרִית כָּל־זָכָר בֶּאֱדֽוֹם׃
17 ಆದರೆ ಆ ಸಮಯದಲ್ಲಿ ಇನ್ನೂ ಬಾಲಕನಾದ ಹದಾದನು ತನ್ನ ತಂದೆಯ ಕೆಲವು ಸೇವಕರಾದ ಎದೋಮ್ಯರ ಸಂಗಡ ಈಜಿಪ್ಟಿಗೆ ಓಡಿಹೋಗಬೇಕೆಂದು ಹೊರಟನು.
וַיִּבְרַח אֲדַד הוּא וַאֲנָשִׁים אֲדֹמִיִּים מֵעַבְדֵי אָבִיו אִתּוֹ לָבוֹא מִצְרָיִם וַהֲדַד נַעַר קָטָֽן׃
18 ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಈಜಿಪ್ಟಿನಲ್ಲಿ ಪ್ರವೇಶಿಸಿ ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಮನೆಯನ್ನು, ಆಹಾರವನ್ನು ಮತ್ತು ಭೂಮಿಯನ್ನು ಕೊಟ್ಟನು.
וַיָּקֻמוּ מִמִּדְיָן וַיָּבֹאוּ פָּארָן וַיִּקְחוּ אֲנָשִׁים עִמָּם מִפָּארָן וַיָּבֹאוּ מִצְרַיִם אֶל־פַּרְעֹה מֶֽלֶךְ־מִצְרַיִם וַיִּתֶּן־לוֹ בַיִת וְלֶחֶם אָמַר לוֹ וְאֶרֶץ נָתַן לֽוֹ׃
19 ಇದಲ್ಲದೆ ಫರೋಹನು ಹದದನನ್ನು ಬಹಳವಾಗಿ ಮೆಚ್ಚಿಕೊಂಡನು. ಫರೋಹನು ತನ್ನ ಹೆಂಡತಿಯೂ ರಾಣಿಯೂ ಆದ ತಪ್ನೆಸ್ ಎಂಬವಳ ಸಹೋದರಿಯನ್ನು ಅವನಿಗೆ ಮದುವೆ ಮಾಡಿಕೊಟ್ಟನು.
וַיִּמְצָא הֲדַד חֵן בְּעֵינֵי פַרְעֹה מְאֹד וַיִּתֶּן־לוֹ אִשָּׁה אֶת־אֲחוֹת אִשְׁתּוֹ אֲחוֹת תַּחְפְּנֵיס הַגְּבִירָֽה׃
20 ತಪ್ನೆಸ್ ಸಹೋದರಿಯು ಅವನಿಗೆ ಗೆನುಬತ್ ಎಂಬ ಮಗನನ್ನು ಹೆತ್ತಳು. ತಪ್ನೆಸ್ ಇವನನ್ನು ಫರೋಹನ ಮನೆಯಲ್ಲಿ ಬೆಳೆಸಿದಳು. ಗೆನುಬತನು ಫರೋಹನ ಮನೆಯಲ್ಲಿ ಫರೋಹನ ಮಕ್ಕಳ ಸಂಗಡ ಇದ್ದನು.
וַתֵּלֶד לוֹ אֲחוֹת תַּחְפְּנֵיס אֵת גְּנֻבַת בְּנוֹ וַתִּגְמְלֵהוּ תַחְפְּנֵס בְּתוֹךְ בֵּית פַּרְעֹה וַיְהִי גְנֻבַת בֵּית פַּרְעֹה בְּתוֹךְ בְּנֵי פַרְעֹֽה׃
21 ಆದರೆ ದಾವೀದನು ಮರಣ ಹೊಂದಿದನೆಂದೂ, ಸೇನಾಧಿಪತಿಯಾದ ಯೋವಾಬನು ಸತ್ತು ಹೋದನೆಂದೂ, ಹದದನು ಈಜಿಪ್ಟಿನಲ್ಲಿ ಕೇಳಿದಾಗ, ಹದದನು ಫರೋಹನಿಗೆ, “ನಾನು ನನ್ನ ದೇಶಕ್ಕೆ ಹೋಗುವಹಾಗೆ ನನ್ನನ್ನು ಕಳುಹಿಸು,” ಎಂದನು.
וַהֲדַד שָׁמַע בְּמִצְרַיִם כִּֽי־שָׁכַב דָּוִד עִם־אֲבֹתָיו וְכִי־מֵת יוֹאָב שַֽׂר־הַצָּבָא וַיֹּאמֶר הֲדַד אֶל־פַּרְעֹה שַׁלְּחֵנִי וְאֵלֵךְ אֶל־אַרְצִֽי׃
22 ಫರೋಹನು ಅವನಿಗೆ, “ನೀನು ನಿನ್ನ ದೇಶಕ್ಕೆ ಹೋಗಬೇಕೆನ್ನುವ ಹಾಗೆ ನಿನಗೆ ನನ್ನ ಸಂಗಡ ಇರುವಾಗ ಏನು ಕೊರತೆಯಾಯಿತು?” ಎಂದು ಕೇಳಿದನು. ಅವನು, “ಏನೂ ಇಲ್ಲ, ಆದರೆ ನಾನು ಅಲ್ಲಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದನು.
וַיֹּאמֶר לוֹ פַרְעֹה כִּי מָה־אַתָּה חָסֵר עִמִּי וְהִנְּךָ מְבַקֵּשׁ לָלֶכֶת אֶל־אַרְצֶךָ וַיֹּאמֶר ׀ לֹא כִּי שַׁלֵּחַ תְּשַׁלְּחֵֽנִי׃
23 ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಸೊಲೊಮೋನನ ಮೇಲೆ ಎಬ್ಬಿಸಿದರು. ಅವನು ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೆಜೆರನನ್ನು ಬಿಟ್ಟು ಓಡಿ ಹೋದ ಎಲ್ಯಾದಾವನ ಮಗನಾದ ರೆಜೋನನು.
וַיָּקֶם אֱלֹהִים לוֹ שָׂטָן אֶת־רְזוֹן בֶּן־אֶלְיָדָע אֲשֶׁר בָּרַח מֵאֵת הֲדַדְעֶזֶר מֶֽלֶךְ־צוֹבָה אֲדֹנָֽיו׃
24 ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಜನರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾಗಿ ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ, ಅರಸನಾದನು.
וַיִּקְבֹּץ עָלָיו אֲנָשִׁים וַיְהִי שַׂר־גְּדוּד בַּהֲרֹג דָּוִד אֹתָם וַיֵּלְכוּ דַמֶּשֶׂק וַיֵּשְׁבוּ בָהּ וַֽיִּמְלְכוּ בְּדַמָּֽשֶׂק׃
25 ಹದದನು ಮಾಡಿದ ಕೇಡಿಗೆ ಹೊರತಾಗಿ ಇವನು ಸೊಲೊಮೋನನ ದಿವಸಗಳಲ್ಲೆಲ್ಲಾ ಇಸ್ರಾಯೇಲಿಗೆ ಶತ್ರುವಾಗಿದ್ದನು. ಅವನು ಇಸ್ರಾಯೇಲನ್ನು ಹಗೆಮಾಡಿ, ಅರಾಮ್ ದೇಶವನ್ನು ಆಳುತ್ತಾ ಇದ್ದನು.
וַיְהִי שָׂטָן לְיִשְׂרָאֵל כָּל־יְמֵי שְׁלֹמֹה וְאֶת־הָרָעָה אֲשֶׁר הֲדָד וַיָּקָץ בְּיִשְׂרָאֵל וַיִּמְלֹךְ עַל־אֲרָֽם׃
26 ಇದಲ್ಲದೆ, ಅರಸನಾದ ಸೊಲೊಮೋನನಿಗೆ ವಿರೋಧವಾಗಿ ದಂಗೆ ಎದ್ದವರಲ್ಲಿ ಅವನ ಸೇವಕನೂ ಚರೇದ ಪಟ್ಟಣದ ಎಫ್ರಾಯೀಮ್ಯನಾದ ನೆಬಾಟನ ಮಗ ಯಾರೊಬ್ಬಾಮನು ಇದ್ದನು, ಚೆರೂಯಳೆಂಬ ವಿಧವೆಯು ಅವನ ತಾಯಿಯು.
וְיָרָבְעָם בֶּן־נְבָט אֶפְרָתִי מִן־הַצְּרֵדָה וְשֵׁם אִמּוֹ צְרוּעָה אִשָּׁה אַלְמָנָה עֶבֶד לִשְׁלֹמֹה וַיָּרֶם יָד בַּמֶּֽלֶךְ׃
27 ಅವನು ಅರಸನಿಗೆ ವಿರೋಧವಾಗಿ ದಂಗೆಯೆದ್ದ ಕಾರಣವೇನೆಂದರೆ, ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿ, ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿಸುತ್ತಿರುವಾಗ,
וְזֶה הַדָּבָר אֲשֶׁר־הֵרִים יָד בַּמֶּלֶךְ שְׁלֹמֹה בָּנָה אֶת־הַמִּלּוֹא סָגַר אֶת־פֶּרֶץ עִיר דָּוִד אָבִֽיו׃
28 ಯಾರೊಬ್ಬಾಮನು ಪರಾಕ್ರಮಶಾಲಿಯಾಗಿರುವುದರಿಂದ ಸೊಲೊಮೋನನು ಈ ಪ್ರಾಯಸ್ಥನು ಕೆಲಸಮಾಡತಕ್ಕವನೆಂದು ಕಂಡು, ಯೋಸೇಫನ ಗೋತ್ರದ ಸಮಸ್ತ ಆಳುಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು.
וְהָאִישׁ יָרָבְעָם גִּבּוֹר חָיִל וַיַּרְא שְׁלֹמֹה אֶת־הַנַּעַר כִּֽי־עֹשֵׂה מְלָאכָה הוּא וַיַּפְקֵד אֹתוֹ לְכָל־סֵבֶל בֵּית יוֹסֵֽף׃
29 ಆ ಕಾಲದಲ್ಲಿ, ಯಾರೊಬ್ಬಾಮನು ಯೆರೂಸಲೇಮಿನೊಳಗಿಂದ ಹೊರಟು ಹೋಗುವಾಗ, ಶೀಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿಯಲ್ಲಿ ಕಂಡನು. ಅವನು ಹೊಸ ಕಂಬಳಿಯನ್ನು ಹೊದ್ದುಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾಗಿದ್ದರು.
וַֽיְהִי בָּעֵת הַהִיא וְיָֽרָבְעָם יָצָא מִירוּשָׁלָ͏ִם וַיִּמְצָא אֹתוֹ אֲחִיָּה הַשִּׁילֹנִי הַנָּבִיא בַּדֶּרֶךְ וְהוּא מִתְכַּסֶּה בְּשַׂלְמָה חֲדָשָׁה וּשְׁנֵיהֶם לְבַדָּם בַּשָּׂדֶֽה׃
30 ಆಗ ಅಹೀಯನು ತನ್ನ ಮೇಲೆ ಇರುವ ಹೊಸ ಕಂಬಳಿಯನ್ನು ತೆಗೆದುಕೊಂಡು ಅದನ್ನು ಹನ್ನೆರಡು ತುಂಡುಗಳಾಗಿ ಹರಿದು,
וַיִּתְפֹּשׂ אֲחִיָּה בַּשַּׂלְמָה הַחֲדָשָׁה אֲשֶׁר עָלָיו וַיִּקְרָעֶהָ שְׁנֵים עָשָׂר קְרָעִֽים׃
31 ಯಾರೊಬ್ಬಾಮನಿಗೆ ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ. ಇಸ್ರಾಯೇಲಿನ ದೇವರಾದ ಯೆಹೋವ ದೇವರು, “ಇಗೋ, ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನು ಹರಿದು ತೆಗೆದುಕೊಂಡು, ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು.
וַיֹּאמֶר לְיָֽרָבְעָם קַח־לְךָ עֲשָׂרָה קְרָעִים כִּי כֹה אָמַר יְהוָה אֱלֹהֵי יִשְׂרָאֵל הִנְנִי קֹרֵעַ אֶת־הַמַּמְלָכָה מִיַּד שְׁלֹמֹה וְנָתַתִּי לְךָ אֵת עֲשָׂרָה הַשְּׁבָטִֽים׃
32 ಆದರೆ, ನನ್ನ ಸೇವಕ ದಾವೀದನಿಗೋಸ್ಕರವೂ, ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವುದು.
וְהַשֵּׁבֶט הָאֶחָד יִֽהְיֶה־לּוֹ לְמַעַן ׀ עַבְדִּי דָוִד וּלְמַעַן יְרוּשָׁלִַם הָעִיר אֲשֶׁר בָּחַרְתִּי בָהּ מִכֹּל שִׁבְטֵי יִשְׂרָאֵֽל׃
33 ಏಕೆಂದರೆ ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ, ನನ್ನ ನ್ಯಾಯಗಳನ್ನೂ ಕೈಗೊಳ್ಳುವುದಕ್ಕೂ, ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡುವುದಕ್ಕೂ, ಸೊಲೊಮೋನನೂ ಅವನ ಮನೆಯವರೂ ನನ್ನ ಮಾರ್ಗಗಳಲ್ಲಿ ನಡೆಯದೆ, ನನ್ನನ್ನು ಬಿಟ್ಟು ಸೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ, ಮೋವಾಬ್ಯರ ದೇವರಾದ ಕೆಮೋಷನ್ನೂ, ಅಮ್ಮೋನಿಯರ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.
יַעַן ׀ אֲשֶׁר עֲזָבוּנִי וַיִּֽשְׁתַּחֲווּ לְעַשְׁתֹּרֶת אֱלֹהֵי צִֽדֹנִין לִכְמוֹשׁ אֱלֹהֵי מוֹאָב וּלְמִלְכֹּם אֱלֹהֵי בְנֵֽי־עַמּוֹן וְלֹֽא־הָלְכוּ בִדְרָכַי לַעֲשׂוֹת הַיָּשָׁר בְּעֵינַי וְחֻקֹּתַי וּמִשְׁפָּטַי כְּדָוִד אָבִֽיו׃
34 “‘ಆದರೂ ನನ್ನ ಆಜ್ಞೆಗಳನ್ನೂ, ನನ್ನ ತೀರ್ಪುಗಳನ್ನೂ ಕೈಗೊಂಡದ್ದರಿಂದ, ನಾನು ಆಯ್ದು ತೆಗೆದುಕೊಂಡ ನನ್ನ ಸೇವಕನಾದ ದಾವೀದನಿಗೋಸ್ಕರ ನಾನು ಅವನ ಕೈಯಿಂದ ರಾಜ್ಯವನ್ನೆಲ್ಲಾ ತೆಗೆದುಕೊಳ್ಳದೆ, ಅವನ ಜೀವಮಾನದ ಸಕಲ ದಿವಸಗಳಲ್ಲಿ ಅವನನ್ನು ಪ್ರಭುವಾಗಿ ಇರಿಸುವೆನು.
וְלֹֽא־אֶקַּח אֶת־כָּל־הַמַּמְלָכָה מִיָּדוֹ כִּי ׀ נָשִׂיא אֲשִׁתֶנּוּ כֹּל יְמֵי חַיָּיו לְמַעַן דָּוִד עַבְדִּי אֲשֶׁר בָּחַרְתִּי אֹתוֹ אֲשֶׁר שָׁמַר מִצְוֺתַי וְחֻקֹּתָֽי׃
35 ಆದರೆ ನಾನು ಅವನ ಮಗನ ಕೈಯಿಂದ ರಾಜ್ಯವನ್ನು ತೆಗೆದುಕೊಂಡು, ಅದರಲ್ಲಿ ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು.
וְלָקַחְתִּי הַמְּלוּכָה מִיַּד בְּנוֹ וּנְתַתִּיהָ לְּךָ אֵת עֲשֶׂרֶת הַשְּׁבָטִֽים׃
36 ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಎಂದಿಗೂ ಬೆಳಕು ಆರಿಹೋಗದ ಹಾಗೆ, ಅವನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು.
וְלִבְנוֹ אֶתֵּן שֵֽׁבֶט־אֶחָד לְמַעַן הֱיֽוֹת־נִיר לְדָֽוִיד־עַבְדִּי כָּֽל־הַיָּמִים ׀ לְפָנַי בִּירוּשָׁלִַם הָעִיר אֲשֶׁר בָּחַרְתִּי לִי לָשׂוּם שְׁמִי שָֽׁם׃
37 ಇದಲ್ಲದೆ ನಾನು ನಿನ್ನನ್ನು ತೆಗೆದುಕೊಂಡು, ನಿನ್ನ ಪ್ರಾಣವು ಇಚ್ಛಿಸುವುದೆಲ್ಲಾದರಲ್ಲಿ ಅರಸುತನವನ್ನು ನಡೆಸಿ, ಇಸ್ರಾಯೇಲಿನ ಮೇಲೆ ಅರಸನಾಗಿರುವಿ.
וְאֹתְךָ אֶקַּח וּמָלַכְתָּ בְּכֹל אֲשֶׁר־תְּאַוֶּה נַפְשֶׁךָ וְהָיִיתָ מֶּלֶךְ עַל־יִשְׂרָאֵֽל׃
38 ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ, ನನ್ನ ಮಾರ್ಗಗಳಲ್ಲಿ ನಡೆದು, ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ, ನನ್ನ ತೀರ್ಪುಗಳನ್ನೂ, ನನ್ನ ಆಜ್ಞೆಗಳನ್ನೂ ಕೈಗೊಂಡು, ನನ್ನ ದೃಷ್ಟಿಗೆ ಯಥಾರ್ಥವಾದದ್ದನ್ನು ಮಾಡಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸಿ, ಇಸ್ರಾಯೇಲನ್ನು ನಿನಗೆ ಕೊಡುವೆನು.
וְהָיָה אִם־תִּשְׁמַע אֶת־כָּל־אֲשֶׁר אֲצַוֶּךָ וְהָלַכְתָּ בִדְרָכַי וְעָשִׂיתָ הַיָּשָׁר בְּעֵינַי לִשְׁמוֹר חֻקּוֹתַי וּמִצְוֺתַי כַּאֲשֶׁר עָשָׂה דָּוִד עַבְדִּי וְהָיִיתִי עִמָּךְ וּבָנִיתִי לְךָ בַֽיִת־נֶאֱמָן כַּאֲשֶׁר בָּנִיתִי לְדָוִד וְנָתַתִּי לְךָ אֶת־יִשְׂרָאֵֽל׃
39 ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು, ಆದರೆ ನಿರಂತರವಾಗಿ ಅಲ್ಲ,’” ಎಂದು ಅಹೀಯನು ಹೇಳಿದನು.
וַֽאעַנֶּה אֶת־זֶרַע דָּוִד לְמַעַן זֹאת אַךְ לֹא כָל־הַיָּמִֽים׃
40 ಇದರ ನಿಮಿತ್ತ ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲಲು ಹುಡುಕಿದನು. ಆದ್ದರಿಂದ ಯಾರೊಬ್ಬಾಮನು ಎದ್ದು, ಈಜಿಪ್ಟಿನ ಅರಸನಾದ ಶೀಶಕನ ಬಳಿಗೆ ಈಜಿಪ್ಟಿಗೆ ಓಡಿಹೋಗಿ, ಸೊಲೊಮೋನನು ಸಾಯುವವರೆಗೂ ಅಲ್ಲಿ ಇದ್ದನು.
וַיְבַקֵּשׁ שְׁלֹמֹה לְהָמִית אֶת־יָרָבְעָם וַיָּקָם יָרָבְעָם וַיִּבְרַח מִצְרַיִם אֶל־שִׁישַׁק מֶֽלֶךְ־מִצְרַיִם וַיְהִי בְמִצְרַיִם עַד־מוֹת שְׁלֹמֹֽה׃
41 ಸೊಲೊಮೋನನ ಉಳಿದ ಕ್ರಿಯೆಗಳನ್ನು, ಅವನು ಮಾಡಿದ ಸಾಧನೆಗಳನ್ನು ಮತ್ತು ಅವನ ಜ್ಞಾನವನ್ನು ಕುರಿತು ಸೊಲೊಮೋನನ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತದೆ.
וְיֶתֶר דִּבְרֵי שְׁלֹמֹה וְכָל־אֲשֶׁר עָשָׂה וְחָכְמָתוֹ הֲלֽוֹא־הֵם כְּתֻבִים עַל־סֵפֶר דִּבְרֵי שְׁלֹמֹֽה׃
42 ಹೀಗೆ ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ನಾಲ್ವತ್ತು ವರ್ಷಗಳು ಆಳಿದನು.
וְהַיָּמִים אֲשֶׁר מָלַךְ שְׁלֹמֹה בִירוּשָׁלִַם עַל־כָּל־יִשְׂרָאֵל אַרְבָּעִים שָׁנָֽה׃
43 ಸೊಲೊಮೋನನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ತಂದೆ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ರೆಹಬ್ಬಾಮನು ಅವನಿಗೆ ಬದಲಾಗಿ ಅರಸನಾದನು.
וַיִּשְׁכַּב שְׁלֹמֹה עִם־אֲבֹתָיו וַיִּקָּבֵר בְּעִיר דָּוִד אָבִיו וַיִּמְלֹךְ רְחַבְעָם בְּנוֹ תַּחְתָּֽיו׃

< ಅರಸುಗಳು - ಪ್ರಥಮ ಭಾಗ 11 >