< ಅರಸುಗಳು - ಪ್ರಥಮ ಭಾಗ 12 >

1 ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವುದಕ್ಕೆ ಸಮಸ್ತ ಇಸ್ರಾಯೇಲರು ಶೆಕೆಮಿಗೆ ಬಂದರು.
וַיֵּ֥לֶךְ רְחַבְעָ֖ם שְׁכֶ֑ם כִּ֥י שְׁכֶ֛ם בָּ֥א כָל־יִשְׂרָאֵ֖ל לְהַמְלִ֥יךְ אֹתֹֽו׃
2 ಅರಸನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಈಜಿಪ್ಟಿನಲ್ಲಿ ವಾಸವಾಗಿದ್ದ ನೆಬಾಟನ ಮಗ ಯಾರೊಬ್ಬಾಮನು ಇದನ್ನು ಕೇಳಿದಾಗ, ಅವನು ಈಜಿಪ್ಟಿನಿಂದ ತಿರುಗಿಬಂದನು.
וַיְהִ֞י כִּשְׁמֹ֣עַ ׀ יָרָבְעָ֣ם בֶּן־נְבָ֗ט וְהוּא֙ עֹודֶ֣נּוּ בְמִצְרַ֔יִם אֲשֶׁ֣ר בָּרַ֔ח מִפְּנֵ֖י הַמֶּ֣לֶךְ שְׁלֹמֹ֑ה וַיֵּ֥שֶׁב יָרָבְעָ֖ם בְּמִצְרָֽיִם׃
3 ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲರೂ ರೆಹಬ್ಬಾಮನ ಬಳಿಗೆ ಬಂದು, ಅವನ ಸಂಗಡ ಮಾತನಾಡಿ,
וַֽיִּשְׁלְחוּ֙ וַיִּקְרְאוּ־לֹ֔ו וַיָּבֹאוּ (וַיָּבֹ֥א) יָרָבְעָ֖ם וְכָל־קְהַ֣ל יִשְׂרָאֵ֑ל וַֽיְדַבְּר֔וּ אֶל־רְחַבְעָ֖ם לֵאמֹֽר׃
4 “ನಿನ್ನ ತಂದೆಯು ನಮ್ಮ ನೊಗವನ್ನು ಭಾರವಾಗಿ ಮಾಡಿದನು. ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ, ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ, ನಾವು ನಿನಗೆ ಸೇವೆಮಾಡುತ್ತೇವೆ,” ಎಂದರು.
אָבִ֖יךָ הִקְשָׁ֣ה אֶת־עֻלֵּ֑נוּ וְאַתָּ֡ה עַתָּ֣ה הָקֵל֩ מֵעֲבֹדַ֨ת אָבִ֜יךָ הַקָּשָׁ֗ה וּמֵעֻלֹּ֧ו הַכָּבֵ֛ד אֲשֶׁר־נָתַ֥ן עָלֵ֖ינוּ וְנַעַבְדֶֽךָּ׃
5 ಅವನು ಅವರಿಗೆ, “ನೀವು ಹೋಗಿ ಮೂರು ದಿವಸಗಳಾದ ತರುವಾಯ ತಿರುಗಿ ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದ್ದರಿಂದ ಜನರು ಹೊರಟು ಹೋದರು.
וַיֹּ֣אמֶר אֲלֵיהֶ֗ם לְכ֥וּ עֹ֛ד שְׁלֹשָׁ֥ה יָמִ֖ים וְשׁ֣וּבוּ אֵלָ֑י וַיֵּלְכ֖וּ הָעָֽם׃
6 ಆಗ ಅರಸನಾದ ರೆಹಬ್ಬಾಮನು ತನ್ನ ತಂದೆ ಸೊಲೊಮೋನನು ಬದುಕಿರುವಾಗ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ಅವರಿಗೆ, “ನಾನು ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ನಿಮ್ಮ ಆಲೋಚನೆಯೇನು?” ಎಂದು ಕೇಳಿದನು.
וַיִּוָּעַ֞ץ הַמֶּ֣לֶךְ רְחַבְעָ֗ם אֶת־הַזְּקֵנִים֙ אֲשֶׁר־הָי֣וּ עֹמְדִ֗ים אֶת־פְּנֵי֙ שְׁלֹמֹ֣ה אָבִ֔יו בִּֽהְיֹתֹ֥ו חַ֖י לֵאמֹ֑ר אֵ֚יךְ אַתֶּ֣ם נֹֽועָצִ֔ים לְהָשִׁ֥יב אֶת־הָֽעָם־הַזֶּ֖ה דָּבָֽר׃
7 ಅವರು ಅವನಿಗೆ, “ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ, ಒಳ್ಳೆಯ ಮಾತುಗಳಿಂದ ಅವರಿಗೆ ಉತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು,” ಎಂದು ಹೇಳಿದರು.
וַיְדַבֵּר (וַיְדַבְּרוּ֙) אֵלָ֜יו לֵאמֹ֗ר אִם־הַ֠יֹּום תִּֽהְיֶה־עֶ֜בֶד לָעָ֤ם הַזֶּה֙ וַֽעֲבַדְתָּ֔ם וַעֲנִיתָ֕ם וְדִבַּרְתָּ֥ אֲלֵיהֶ֖ם דְּבָרִ֣ים טֹובִ֑ים וְהָי֥וּ לְךָ֛ עֲבָדִ֖ים כָּל־הַיָּמִֽים׃
8 ಆದರೆ ರೆಹಬ್ಬಾಮನು, ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು, ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಕೇಳಿ,
וַֽיַּעֲזֹ֛ב אֶת־עֲצַ֥ת הַזְּקֵנִ֖ים אֲשֶׁ֣ר יְעָצֻ֑הוּ וַיִּוָּעַ֗ץ אֶת־הַיְלָדִים֙ אֲשֶׁ֣ר גָּדְל֣וּ אִתֹּ֔ו אֲשֶׁ֥ר הָעֹמְדִ֖ים לְפָנָֽיו׃
9 ಅವನು ಅವರಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಉತ್ತರ ಕೊಡಲು ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.
וַיֹּ֣אמֶר אֲלֵיהֶ֗ם מָ֚ה אַתֶּ֣ם נֹֽועָצִ֔ים וְנָשִׁ֥יב דָּבָ֖ר אֶת־הָעָ֣ם הַזֶּ֑ה אֲשֶׁ֨ר דִּבְּר֤וּ אֵלַי֙ לֵאמֹ֔ר הָקֵל֙ מִן־הָעֹ֔ל אֲשֶׁר־נָתַ֥ן אָבִ֖יךָ עָלֵֽינוּ׃
10 ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವನಿಗೆ, “ನಿನ್ನ ತಂದೆಯು ನಮ್ಮ ನೊಗವನ್ನು ಭಾರಮಾಡಿದನು. ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರುವುದು.
וַיְדַבְּר֣וּ אֵלָ֗יו הַיְלָדִים֙ אֲשֶׁ֨ר גָּדְל֣וּ אִתֹּו֮ לֵאמֹר֒ כֹּֽה־תֹאמַ֣ר לָעָ֣ם הַזֶּ֡ה אֲשֶׁר֩ דִּבְּר֨וּ אֵלֶ֜יךָ לֵאמֹ֗ר אָבִ֙יךָ֙ הִכְבִּ֣יד אֶת־עֻלֵּ֔נוּ וְאַתָּ֖ה הָקֵ֣ל מֵעָלֵ֑ינוּ כֹּ֚ה תְּדַבֵּ֣ר אֲלֵיהֶ֔ם קָֽטָנִּ֥י עָבָ֖ה מִמָּתְנֵ֥י אָבִֽי׃
11 ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು. ಆದರೆ ನಾನು ನಿಮ್ಮ ನೊಗವನ್ನು ಇನ್ನೂ ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಚೇಳು ಕೊರಡೆಗಳಿಂದ ಶಿಕ್ಷಿಸುವೆನು,’ ಎಂದು ನೀನು ಅವರಿಗೆ ಹೇಳು,” ಎಂದರು.
וְעַתָּ֗ה אָבִי֙ הֶעְמִ֤יס עֲלֵיכֶם֙ עֹ֣ל כָּבֵ֔ד וַאֲנִ֖י אֹוסִ֣יף עַֽל־עֻלְּכֶ֑ם אָבִ֗י יִסַּ֤ר אֶתְכֶם֙ בַּשֹּׁוטִ֔ים וַאֲנִ֕י אֲיַסֵּ֥ר אֶתְכֶ֖ם בָּעַקְרַבִּֽים׃
12 ಆಗ, “ಮೂರನೆಯ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ,” ಎಂದು ಅರಸನು ಹೇಳಿದ ಪ್ರಕಾರ, ಮೂರನೆಯ ದಿವಸದಲ್ಲಿ ಯಾರೊಬ್ಬಾಮನೂ, ಸಮಸ್ತ ಜನರೂ ಅರಸನಾದ ರೆಹಬ್ಬಾಮನ ಬಳಿಗೆ ಬಂದರು.
וַיָּבֹו (וַיָּבֹ֨וא) יָרָבְעָ֧ם וְכָל־הָעָ֛ם אֶל־רְחַבְעָ֖ם בַּיֹּ֣ום הַשְּׁלִישִׁ֑י כַּאֲשֶׁ֨ר דִּבֶּ֤ר הַמֶּ֙לֶךְ֙ לֵאמֹ֔ר שׁ֥וּבוּ אֵלַ֖י בַּיֹּ֥ום הַשְּׁלִישִֽׁי׃
13 ಆದರೆ ಅರಸನು ಜನರಿಗೆ ಕಠಿಣವಾದ ಉತ್ತರವನ್ನು ಕೊಟ್ಟು, ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ನಿರಾಕರಿಸಿ,
וַיַּ֧עַן הַמֶּ֛לֶךְ אֶת־הָעָ֖ם קָשָׁ֑ה וַֽיַּעֲזֹ֛ב אֶת־עֲצַ֥ת הַזְּקֵנִ֖ים אֲשֶׁ֥ר יְעָצֻֽהוּ׃
14 ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ, “ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗಿ ಮಾಡಿದನು. ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಶಿಕ್ಷಿಸಿದನು. ಆದರೆ ನಾನು ಮುಳ್ಳು ಕೊರಡೆಗಳಿಂದ ಶಿಕ್ಷಿಸುವೆನು,” ಎಂದನು.
וַיְדַבֵּ֣ר אֲלֵיהֶ֗ם כַּעֲצַ֤ת הַיְלָדִים֙ לֵאמֹ֔ר אָבִי֙ הִכְבִּ֣יד אֶֽת־עֻלְּכֶ֔ם וַאֲנִ֖י אֹסִ֣יף עַֽל־עֻלְּכֶ֑ם אָבִ֗י יִסַּ֤ר אֶתְכֶם֙ בַּשֹּׁוטִ֔ים וַאֲנִ֕י אֲיַסֵּ֥ר אֶתְכֶ֖ם בָּעַקְרַבִּֽים׃
15 ಅರಸನು ಜನರ ಮಾತನ್ನು ಕೇಳದೆಹೋದದ್ದು ಯೆಹೋವ ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.
וְלֹֽא־שָׁמַ֥ע הַמֶּ֖לֶךְ אֶל־הָעָ֑ם כִּֽי־הָיְתָ֤ה סִבָּה֙ מֵעִ֣ם יְהוָ֔ה לְמַ֜עַן הָקִ֣ים אֶת־דְּבָרֹ֗ו אֲשֶׁ֨ר דִּבֶּ֤ר יְהוָה֙ בְּיַד֙ אֲחִיָּ֣ה הַשִּׁילֹנִ֔י אֶל־יָרָבְעָ֖ם בֶּן־נְבָֽט׃
16 ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, “ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” ಎಂದು ಹೇಳಿ, ಇಸ್ರಾಯೇಲರು ತಮ್ಮ ತಮ್ಮ ಡೇರೆಗಳಿಗೆ ಹೋದರು.
וַיַּ֣רְא כָּל־יִשְׂרָאֵ֗ל כִּ֠י לֹֽא־שָׁמַ֣ע הַמֶּלֶךְ֮ אֲלֵיהֶם֒ וַיָּשִׁ֣בוּ הָעָ֣ם אֶת־הַמֶּ֣לֶךְ דָּבָ֣ר ׀ לֵאמֹ֡ר מַה־לָּנוּ֩ חֵ֨לֶק בְּדָוִ֜ד וְלֹֽא־נַחֲלָ֣ה בְּבֶן־יִשַׁ֗י לְאֹהָלֶ֙יךָ֙ יִשְׂרָאֵ֔ל עַתָּ֕ה רְאֵ֥ה בֵיתְךָ֖ דָּוִ֑ד וַיֵּ֥לֶךְ יִשְׂרָאֵ֖ל לְאֹהָלָֽיו׃
17 ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲರ ಮೇಲೆ ರೆಹಬ್ಬಾಮನು ಆಳಿದನು.
וּבְנֵ֣י יִשְׂרָאֵ֔ל הַיֹּשְׁבִ֖ים בְּעָרֵ֣י יְהוּדָ֑ה וַיִּמְלֹ֥ךְ עֲלֵיהֶ֖ם רְחַבְעָֽם׃ פ
18 ಆಗ ರೆಹಬ್ಬಾಮನು ದಾಸರ ಮೇಲ್ವಿಚಾರಕನಾದ ಅದೋನೀರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲರೆಲ್ಲರು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು. ಆದ್ದರಿಂದ ಅರಸನಾದ ರೆಹಬ್ಬಾಮನು ಆತುರಪಟ್ಟು ತನ್ನ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.
וַיִּשְׁלַ֞ח הַמֶּ֣לֶךְ רְחַבְעָ֗ם אֶת־אֲדֹרָם֙ אֲשֶׁ֣ר עַל־הַמַּ֔ס וַיִּרְגְּמ֨וּ כָל־יִשְׂרָאֵ֥ל בֹּ֛ו אֶ֖בֶן וַיָּמֹ֑ת וְהַמֶּ֣לֶךְ רְחַבְעָ֗ם הִתְאַמֵּץ֙ לַעֲלֹ֣ות בַּמֶּרְכָּבָ֔ה לָנ֖וּס יְרוּשָׁלָֽ͏ִם׃
19 ಹೀಗೆ ಇಂದಿನವರೆಗೂ ಇಸ್ರಾಯೇಲರು ದಾವೀದನ ಕುಟುಂಬದವರೊಡನೆ ವಿರೋಧವಾಗಿ ತಿರುಗಿಬೀಳುತ್ತಲೇ ಇದ್ದಾರೆ.
וַיִּפְשְׁע֤וּ יִשְׂרָאֵל֙ בְּבֵ֣ית דָּוִ֔ד עַ֖ד הַיֹּ֥ום הַזֶּֽה׃ ס
20 ಇಸ್ರಾಯೇಲರು ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ, ಅವರು ಸಭೆಗೆ ಅವನನ್ನು ಕರೆಕಳುಹಿಸಿ, ಸಮಸ್ತ ಇಸ್ರಾಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
וַיְהִ֞י כִּשְׁמֹ֤עַ כָּל־יִשְׂרָאֵל֙ כִּֽי־שָׁ֣ב יָרָבְעָ֔ם וֽ͏ַיִּשְׁלְח֗וּ וַיִּקְרְא֤וּ אֹתֹו֙ אֶל־הָ֣עֵדָ֔ה וַיַּמְלִ֥יכוּ אֹתֹ֖ו עַל־כָּל־יִשְׂרָאֵ֑ל לֹ֤א הָיָה֙ אַחֲרֵ֣י בֵית־דָּוִ֔ד זוּלָתִ֥י שֵֽׁבֶט־יְהוּדָ֖ה לְבַדֹּֽו׃
21 ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ, ರಾಜ್ಯವನ್ನು ತಿರುಗಿ ಪಡೆಯುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಬೆನ್ಯಾಮೀನನ ಗೋತ್ರದ ಮತ್ತು ಯೆಹೂದನ ಸಮಸ್ತ ಕುಟುಂಬಗಳಿಂದ 1,80,000 ಸಮರ್ಥ ಸೈನಿಕರನ್ನು ಆಯ್ದುಕೊಂಡು ಒಟ್ಟುಗೂಡಿಸಿದನು.
וַיָּבֹאוּ (וַיָּבֹ֣א) רְחַבְעָם֮ יְרוּשָׁלַ͏ִם֒ וַיַּקְהֵל֩ אֶת־כָּל־בֵּ֨ית יְהוּדָ֜ה וְאֶת־שֵׁ֣בֶט בִּנְיָמִ֗ן מֵאָ֨ה וּשְׁמֹנִ֥ים אֶ֛לֶף בָּח֖וּר עֹשֵׂ֣ה מִלְחָמָ֑ה לְהִלָּחֵם֙ עִם־בֵּ֣ית יִשְׂרָאֵ֔ל לְהָשִׁיב֙ אֶת־הַמְּלוּכָ֔ה לִרְחַבְעָ֖ם בֶּן־שְׁלֹמֹֽה׃ פ
22 ಆದರೆ ದೇವರ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಗಿ,
וַיְהִי֙ דְּבַ֣ר הֽ͏ָאֱלֹהִ֔ים אֶל־שְׁמַעְיָ֥ה אִישׁ־הָאֱלֹהִ֖ים לֵאמֹֽר׃
23 “ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನನ ಸಮಸ್ತ ಮನೆಯವರಿಗೂ ಮತ್ತು ಮಿಕ್ಕಿದ ಜನರಿಗೂ ಹೇಳಬೇಕಾದದ್ದೇನೆಂದರೆ,
אֱמֹ֗ר אֶל־רְחַבְעָ֤ם בֶּן־שְׁלֹמֹה֙ מֶ֣לֶךְ יְהוּדָ֔ה וְאֶל־כָּל־בֵּ֥ית יְהוּדָ֖ה וּבִנְיָמִ֑ין וְיֶ֥תֶר הָעָ֖ם לֵאמֹֽר׃
24 ‘ನೀವು ಇಸ್ರಾಯೇಲರಾಗಿರುವ ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗಬೇಡಿರಿ. ಪ್ರತಿ ಮನುಷ್ಯನು ತನ್ನ ಮನೆಗೆ ಹಿಂದಿರುಗಲಿ.’ ಏಕೆಂದರೆ ಈ ಕಾರ್ಯವು ತಮ್ಮಿಂದ ಉಂಟಾಯಿತೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಆದ್ದರಿಂದ ಅವರು ಯೆಹೋವ ದೇವರ ವಾಕ್ಯವನ್ನು ಕೇಳಿ, ಯೆಹೋವ ದೇವರ ವಾಕ್ಯದ ಪ್ರಕಾರವೇ ಹಿಂದಿರುಗಿ ಹೋದರು.
כֹּ֣ה אָמַ֣ר יְהוָ֡ה לֹֽא־תַעֲלוּ֩ וְלֹא־תִלָּ֨חֲמ֜וּן עִם־אֲחֵיכֶ֣ם בְּנֵֽי־יִשְׂרָאֵ֗ל שׁ֚וּבוּ אִ֣ישׁ לְבֵיתֹ֔ו כִּ֧י מֵאִתִּ֛י נִהְיָ֖ה הַדָּבָ֣ר הַזֶּ֑ה וַיִּשְׁמְעוּ֙ אֶת־דְּבַ֣ר יְהוָ֔ה וַיָּשֻׁ֥בוּ לָלֶ֖כֶת כִּדְבַ֥ר יְהוָֽה׃ ס
25 ಯಾರೊಬ್ಬಾಮನು ಎಫ್ರಾಯೀಮನ ಬೆಟ್ಟದಲ್ಲಿ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ, ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೀಯೇಲ್ ಪಟ್ಟಣವನ್ನು ಭದ್ರಪಡಿಸಿದನು.
וַיִּ֨בֶן יָרָבְעָ֧ם אֶת־שְׁכֶ֛ם בְּהַ֥ר אֶפְרַ֖יִם וַיֵּ֣שֶׁב בָּ֑הּ וַיֵּצֵ֣א מִשָּׁ֔ם וַיִּ֖בֶן אֶת־פְּנוּאֵֽל׃
26 ಆದರೆ ಯಾರೊಬ್ಬಾಮನು ತನ್ನ ಮನಸ್ಸಿನಲ್ಲಿ, “ಈಗ ರಾಜ್ಯವು ದಾವೀದನ ಮನೆಯವರಿಗೆ ಹಿಂದಿರುಗುವುದು ಏನೋ,
וַיֹּ֥אמֶר יָרָבְעָ֖ם בְּלִבֹּ֑ו עַתָּ֛ה תָּשׁ֥וּב הַמַּמְלָכָ֖ה לְבֵ֥ית דָּוִֽד׃
27 ಈ ಜನರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ, ಆಗ ಇವರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಮತ್ತೆ ತಿರುಗುವುದು. ಅವರು ನನ್ನನ್ನು ಕೊಂದುಹಾಕಿ, ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ತಿರುಗಿ ಹೋದಾರು,” ಎಂದುಕೊಂಡನು.
אִֽם־יַעֲלֶ֣ה ׀ הָעָ֣ם הַזֶּ֗ה לַעֲשֹׂ֨ות זְבָחִ֤ים בְּבֵית־יְהוָה֙ בִּיר֣וּשָׁלַ֔͏ִם וְ֠שָׁב לֵ֣ב הָעָ֤ם הַזֶּה֙ אֶל־אֲדֹ֣נֵיהֶ֔ם אֶל־רְחַבְעָ֖ם מֶ֣לֶךְ יְהוּדָ֑ה וַהֲרָגֻ֕נִי וְשָׁ֖בוּ אֶל־רְחַבְעָ֥ם מֶֽלֶךְ־יְהוּדָֽה׃
28 ಅರಸನು ತನ್ನ ಸಲಹೆಗಾರರನ್ನು ಕೇಳಿ, ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ಯೆರೂಸಲೇಮಿನವರೆಗೂ ಜಾತ್ರೆಗೆ ಹೋಗುವುದು ನಿಮಗೆ ಕಷ್ಟವಾಗಿದೆ. ಇಸ್ರಾಯೇಲರೇ, ಇಗೋ ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರುಗಳು,” ಎಂದನು.
וַיִּוָּעַ֣ץ הַמֶּ֔לֶךְ וַיַּ֕עַשׂ שְׁנֵ֖י עֶגְלֵ֣י זָהָ֑ב וַיֹּ֣אמֶר אֲלֵהֶ֗ם רַב־לָכֶם֙ מֵעֲלֹ֣ות יְרוּשָׁלַ֔͏ִם הִנֵּ֤ה אֱלֹהֶ֙יךָ֙ יִשְׂרָאֵ֔ל אֲשֶׁ֥ר הֶעֱל֖וּךָ מֵאֶ֥רֶץ מִצְרָֽיִם׃
29 ಒಂದನ್ನು ಬೇತೇಲಿನಲ್ಲಿಯೂ, ಒಂದನ್ನು ದಾನಿನಲ್ಲಿಯೂ ಸ್ಥಾಪಿಸಿದನು.
וַיָּ֥שֶׂם אֶת־הָאֶחָ֖ד בְּבֵֽית־אֵ֑ל וְאֶת־הָאֶחָ֖ד נָתַ֥ן בְּדָֽן׃
30 ಇದು ಪಾಪಕ್ಕೆ ಕಾರಣವಾಯಿತು. ದಾನಿನಲ್ಲಿರುವುದನ್ನು ಪೂಜಿಸಲು ಜನರು ಅಲ್ಲಿಯವರೆಗೆ ಹೋಗುತ್ತಿದ್ದರು.
וַיְהִ֛י הַדָּבָ֥ר הַזֶּ֖ה לְחַטָּ֑את וַיֵּלְכ֥וּ הָעָ֛ם לִפְנֵ֥י הָאֶחָ֖ד עַד־דָּֽן׃
31 ಅವನು ಉನ್ನತ ಸ್ಥಳಗಳಲ್ಲಿ ಪೂಜಾಸ್ಥಳಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.
וַיַּ֖עַשׂ אֶת־בֵּ֣ית בָּמֹ֑ות וַיַּ֤עַשׂ כֹּֽהֲנִים֙ מִקְצֹ֣ות הָעָ֔ם אֲשֶׁ֥ר לֹֽא־הָי֖וּ מִבְּנֵ֥י לֵוִֽי׃
32 ಯಾರೊಬ್ಬಾಮನು ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ, ಪೀಠದ ಮೇಲೆ ಬಲಿಗಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿನಲ್ಲಿ ಮಾಡಿ, ಅವನು ರೂಪಿಸಿದ ಕರುಗಳ ವಿಗ್ರಹಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ನೇಮಿಸಿದ ಉನ್ನತ ಸ್ಥಳಗಳ ಯಾಜಕರನ್ನೇ ಇರಿಸಿದನು.
וַיַּ֣עַשׂ יָרָבְעָ֣ם ׀ חָ֡ג בַּחֹ֣דֶשׁ הַשְּׁמִינִ֣י בַּחֲמִשָּֽׁה־עָשָׂר֩ יֹ֨ום ׀ לַחֹ֜דֶשׁ כֶּחָ֣ג ׀ אֲשֶׁ֣ר בִּיהוּדָ֗ה וַיַּ֙עַל֙ עַל־הַמִּזְבֵּ֔חַ כֵּ֤ן עָשָׂה֙ בְּבֵֽית־אֵ֔ל לְזַבֵּ֖חַ לָעֲגָלִ֣ים אֲשֶׁר־עָשָׂ֑ה וְהֶעֱמִיד֙ בְּבֵ֣ית אֵ֔ל אֶת־כֹּהֲנֵ֥י הַבָּמֹ֖ות אֲשֶׁ֥ר עָשָֽׂה׃
33 ಹೀಗೆ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಅವನು ಬೇತೇಲಿನಲ್ಲಿ ಕಟ್ಟಿಸಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ, ಇಸ್ರಾಯೇಲರಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
וַיַּ֜עַל עַֽל־הַמִּזְבֵּ֣חַ ׀ אֲשֶׁר־עָשָׂ֣ה בְּבֵֽית־אֵ֗ל בַּחֲמִשָּׁ֨ה עָשָׂ֥ר יֹום֙ בַּחֹ֣דֶשׁ הַשְּׁמִינִ֔י בַּחֹ֖דֶשׁ אֲשֶׁר־בָּדָ֣א מִלִּבַּד (מִלִּבֹּ֑ו) וַיַּ֤עַשׂ חָג֙ לִבְנֵ֣י יִשְׂרָאֵ֔ל וַיַּ֥עַל עַל־הַמִּזְבֵּ֖חַ לְהַקְטִֽיר׃ פ

< ಅರಸುಗಳು - ಪ್ರಥಮ ಭಾಗ 12 >