< ಅರಸುಗಳು - ಪ್ರಥಮ ಭಾಗ 15 >

1 ನೆಬಾಟನ ಮಗ ಯಾರೊಬ್ಬಾಮನ ಹದಿನೆಂಟನೆಯ ವರ್ಷದಲ್ಲಿ ಅಬಿಯಾಮನು ಯೆಹೂದದ ಅರಸನಾಗಿ,
וּבִשְׁנַת֙ שְׁמֹנֶ֣ה עֶשְׂרֵ֔ה לַמֶּ֖לֶךְ יָרָבְעָ֣ם בֶּן־נְבָ֑ט מָלַ֥ךְ אֲבִיָּ֖ם עַל־יְהוּדָֽה׃
2 ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು. ಅವನ ತಾಯಿಯ ಹೆಸರು ಮಾಕಾ, ಇವಳು ಅಬ್ಷಾಲೋಮನ ಮಗಳಾಗಿದ್ದಳು.
שָׁלֹ֣שׁ שָׁנִ֔ים מָלַ֖ךְ בִּירוּשָׁלִָ֑ם וְשֵׁ֣ם אִמּ֔וֹ מַעֲכָ֖ה בַּת־אֲבִישָׁלֽוֹם׃
3 ಅಬಿಯಾಮನು, ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ, ಅವನ ಹೃದಯವು ತನ್ನ ದೇವರಾದ ಯೆಹೋವ ದೇವರ ಮುಂದೆ ಪೂರ್ಣವಾಗಿರದೆ, ತನಗೆ ಮುಂಚೆ ಇದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.
וַיֵּ֕לֶךְ בְּכָל־חַטֹּ֥אות אָבִ֖יו אֲשֶׁר־עָשָׂ֣ה לְפָנָ֑יו וְלֹא־הָיָ֨ה לְבָב֤וֹ שָׁלֵם֙ עִם־יְהוָ֣ה אֱלֹהָ֔יו כִּלְבַ֖ב דָּוִ֥ד אָבִֽיו׃
4 ಅವನ ತರುವಾಯ ಅವನ ಮಗನನ್ನು ನೇಮಿಸುವುದಕ್ಕೂ, ಯೆರೂಸಲೇಮನ್ನು ಸ್ಥಿರಪಡಿಸುವುದಕ್ಕೂ, ತನ್ನ ದೇವರಾದ ಯೆಹೋವ ದೇವರು ದಾವೀದನ ನಿಮಿತ್ತ ಯೆರೂಸಲೇಮಿನಲ್ಲಿ ಅವನಿಗೆ ದೀಪವನ್ನು ಉಳಿಸಿದರು.
כִּ֚י לְמַ֣עַן דָּוִ֔ד נָתַן֩ יְהוָ֨ה אֱלֹהָ֥יו ל֛וֹ נִ֖יר בִּירוּשָׁלִָ֑ם לְהָקִ֤ים אֶת־בְּנוֹ֙ אַחֲרָ֔יו וּֽלְהַעֲמִ֖יד אֶת־יְרוּשָׁלִָֽם׃
5 ಏಕೆಂದರೆ ದಾವೀದನು ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟು, ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಯೆಹೋವ ದೇವರು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ, ಅವರ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡಿದನು.
אֲשֶׁ֨ר עָשָׂ֥ה דָוִ֛ד אֶת־הַיָּשָׁ֖ר בְּעֵינֵ֣י יְהוָ֑ה וְלֹֽא־סָ֞ר מִכֹּ֣ל אֲשֶׁר־צִוָּ֗הוּ כֹּ֚ל יְמֵ֣י חַיָּ֔יו רַ֕ק בִּדְבַ֖ר אוּרִיָּ֥ה הַחִתִּֽי׃
6 ಆದರೆ ರೆಹಬ್ಬಾಮನಿಗೂ, ಯಾರೊಬ್ಬಾಮನಿಗೂ ಅವರ ಜೀವಾಂತ್ಯದವರೆಗೆ ಯುದ್ಧ ಉಂಟಾಗಿತ್ತು.
וּמִלְחָמָ֨ה הָיְתָ֧ה בֵין־רְחַבְעָ֛ם וּבֵ֥ין יָרָבְעָ֖ם כָּל־יְמֵ֥י חַיָּֽיו׃
7 ಅಬಿಯಾಮನ ಮಿಕ್ಕಾದ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಯೆಹೂದದ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.
וְיֶ֨תֶר דִּבְרֵ֤י אֲבִיָּם֙ וְכָל־אֲשֶׁ֣ר עָשָׂ֔ה הֲלֽוֹא־הֵ֣ם כְּתוּבִ֗ים עַל־סֵ֛פֶר דִּבְרֵ֥י הַיָּמִ֖ים לְמַלְכֵ֣י יְהוּדָ֑ה וּמִלְחָמָ֥ה הָיְתָ֛ה בֵּ֥ין אֲבִיָּ֖ם וּבֵ֥ין יָרָבְעָֽם׃
8 ಅಬಿಯಾಮನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು, ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಸನು ಅವನಿಗೆ ಬದಲಾಗಿ ಅರಸನಾದನು.
וַיִּשְׁכַּ֤ב אֲבִיָּם֙ עִם־אֲבֹתָ֔יו וַיִּקְבְּר֥וּ אֹת֖וֹ בְּעִ֣יר דָּוִ֑ד וַיִּמְלֹ֛ךְ אָסָ֥א בְנ֖וֹ תַּחְתָּֽיו׃ פ
9 ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ಇಪ್ಪತ್ತನೆಯ ವರುಷದಲ್ಲಿ ಆಸನು ಯೆಹೂದದ ಮೇಲೆ ಅರಸನಾದನು.
וּבִשְׁנַ֣ת עֶשְׂרִ֔ים לְיָרָבְעָ֖ם מֶ֣לֶךְ יִשְׂרָאֵ֑ל מָלַ֥ךְ אָסָ֖א מֶ֥לֶךְ יְהוּדָֽה׃
10 ನಾಲ್ವತ್ತೊಂದು ವರುಷ ಅವನು ಯೆರೂಸಲೇಮಿನಲ್ಲಿ ಆಳಿದನು. ಅವನ ಅಜ್ಜಿ ಅಬ್ಷಾಲೋಮನ ಮಗಳಾಗಿದ್ದು ಮಾಕಾ ಎಂಬಾಕೆಯು ಇವನ ತಾಯಿ.
וְאַרְבָּעִ֤ים וְאַחַת֙ שָׁנָ֔ה מָלַ֖ךְ בִּירוּשָׁלִָ֑ם וְשֵׁ֣ם אִמּ֔וֹ מַעֲכָ֖ה בַּת־אֲבִישָׁלֽוֹם׃
11 ಆಸನು ತನ್ನ ತಂದೆಯಾದ ದಾವೀದನ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿದನು.
וַיַּ֧עַשׂ אָסָ֛א הַיָּשָׁ֖ר בְּעֵינֵ֣י יְהוָ֑ה כְּדָוִ֖ד אָבִֽיו׃
12 ಅವನು ಪೂಜಾ ಸ್ಥಳದ ಪುರುಷಗಾಮಿಗಳನ್ನು ದೇಶದಲ್ಲಿಂದ ಹೊರಡಿಸಿ, ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.
וַיַּעֲבֵ֥ר הַקְּדֵשִׁ֖ים מִן־הָאָ֑רֶץ וַיָּ֙סַר֙ אֶת־כָּל־הַגִּלֻּלִ֔ים אֲשֶׁ֥ר עָשׂ֖וּ אֲבֹתָֽיו׃
13 ಇದಲ್ಲದೆ, ಆಸನು ತನ್ನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಆ ಮೂರ್ತಿಯನ್ನು ಕಡಿದುಹಾಕಿ ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು.
וְגַ֣ם ׀ אֶת־מַעֲכָ֣ה אִמּ֗וֹ וַיְסִרֶ֙הָ֙ מִגְּבִירָ֔ה אֲשֶׁר־עָשְׂתָ֥ה מִפְלֶ֖צֶת לָאֲשֵׁרָ֑ה וַיִּכְרֹ֤ת אָסָא֙ אֶת־מִפְלַצְתָּ֔הּ וַיִּשְׂרֹ֖ף בְּנַ֥חַל קִדְרֽוֹן׃
14 ಅವನು ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.
וְהַבָּמ֖וֹת לֹא־סָ֑רוּ רַ֣ק לְבַב־אָסָ֗א הָיָ֥ה שָׁלֵ֛ם עִם־יְהוָ֖ה כָּל־יָמָֽיו׃
15 ತಾನು ಮತ್ತು ತನ್ನ ತಂದೆಯೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಲಕರಣೆಗಳನ್ನೂ ಯೆಹೋವ ದೇವರ ಆಲಯಕ್ಕೆ ತಂದನು.
וַיָּבֵא֙ אֶת־קָדְשֵׁ֣י אָבִ֔יו וקדשו בֵּ֣ית יְהוָ֑ה כֶּ֥סֶף וְזָהָ֖ב וְכֵלִֽים׃
16 ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ, ಅವರ ಜೀವಾಂತ್ಯದವರೆಗೂ ಯುದ್ಧ ನಡೆಯುತ್ತಿತ್ತು.
וּמִלְחָמָ֨ה הָיְתָ֜ה בֵּ֣ין אָסָ֗א וּבֵ֛ין בַּעְשָׁ֥א מֶֽלֶךְ־יִשְׂרָאֵ֖ל כָּל־יְמֵיהֶֽם׃
17 ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲೀ, ಹೊರಗಾಗಲೀ ಯಾರೂ ಹೋಗದ ಹಾಗೆ ಸುತ್ತಲೂ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.
וַיַּ֨עַל בַּעְשָׁ֤א מֶֽלֶךְ־יִשְׂרָאֵל֙ עַל־יְהוּדָ֔ה וַיִּ֖בֶן אֶת־הָרָמָ֑ה לְבִלְתִּ֗י תֵּ֚ת יֹצֵ֣א וָבָ֔א לְאָסָ֖א מֶ֥לֶךְ יְהוּדָֽה׃
18 ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಮಿಕ್ಕ ಸಮಸ್ತ ಬೆಳ್ಳಿಬಂಗಾರವನ್ನು ತೆಗೆದು, ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ, ದಮಸ್ಕದಲ್ಲಿ ವಾಸವಾಗಿರುವ ಹೆಜ್ಯೋನನ ಮಗನೂ, ಟಬ್ರಿಮ್ಮೋನನ ಮಗನೂ ಆದ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿದನು.
וַיִּקַּ֣ח אָ֠סָא אֶת־כָּל־הַכֶּ֨סֶף וְהַזָּהָ֜ב הַֽנּוֹתָרִ֣ים ׀ בְּאוֹצְר֣וֹת בֵּית־יְהוָ֗ה וְאֶת־אֽוֹצְרוֹת֙ בֵּ֣ית מלך וַֽיִּתְּנֵ֖ם בְּיַד־עֲבָדָ֑יו וַיִּשְׁלָחֵ֞ם הַמֶּ֣לֶךְ אָסָ֗א אֶל־בֶּן־הֲ֠דַד בֶּן־טַבְרִמֹּ֤ן בֶּן־חֶזְיוֹן֙ מֶ֣לֶךְ אֲרָ֔ם הַיֹּשֵׁ֥ב בְּדַמֶּ֖שֶׂק לֵאמֹֽר׃
19 ಅಲ್ಲದೆ ಅವನಿಗೆ, “ನನ್ನ ತಂದೆ ಮತ್ತು ನಿನ್ನ ತಂದೆಯ ನಡುವೆ ಇದ್ದಂತೆ ನನ್ನ ಮತ್ತು ನಿನ್ನ ನಡುವೆ ಒಡಂಬಡಿಕೆ ಉಂಟು. ಇಗೋ ನಾನು ಬೆಳ್ಳಿಬಂಗಾರವನ್ನು ದಾನವಾಗಿ ನಿನಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ, ನೀನು ಅವನ ಸಂಗಡ ಮಾಡಿದ ಒಡಂಬಡಿಕೆಯನ್ನು ಮುರಿಯಬೇಕು,” ಎಂದನು.
בְּרִית֙ בֵּינִ֣י וּבֵינֶ֔ךָ בֵּ֥ין אָבִ֖י וּבֵ֣ין אָבִ֑יךָ הִנֵּה֩ שָׁלַ֨חְתִּֽי לְךָ֥ שֹׁ֙חַד֙ כֶּ֣סֶף וְזָהָ֔ב לֵ֣ךְ הָפֵ֗רָה אֶת־בְּרִֽיתְךָ֙ אֶת־בַּעְשָׁ֣א מֶֽלֶךְ־יִשְׂרָאֵ֔ל וְיַעֲלֶ֖ה מֵעָלָֽי׃
20 ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಇಯ್ಯೋನ್, ದಾನ್, ಆಬೇಲ್ ಬೇತ್ ಮಾಕಾ ಹಾಗೂ ಸಮಸ್ತ ಕಿನ್ನೆರೆತ್, ಸಮಸ್ತ ನಫ್ತಾಲಿ ಪ್ರಾಂತ ಇವುಗಳನ್ನು ಹಾಳುಮಾಡಿದರು.
וַיִּשְׁמַ֨ע בֶּן־הֲדַ֜ד אֶל־הַמֶּ֣לֶךְ אָסָ֗א וַ֠יִּשְׁלַח אֶת־שָׂרֵ֨י הַחֲיָלִ֤ים אֲשֶׁר־לוֹ֙ עַל־עָרֵ֣י יִשְׂרָאֵ֔ל וַיַּךְ֙ אֶת־עִיּ֣וֹן וְאֶת־דָּ֔ן וְאֵ֖ת אָבֵ֣ל בֵּֽית־מַעֲכָ֑ה וְאֵת֙ כָּל־כִּנְר֔וֹת עַ֖ל כָּל־אֶ֥רֶץ נַפְתָּלִֽי׃
21 ಬಾಷನು ಇದನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವುದನ್ನು ಬಿಟ್ಟು, ತಿರ್ಚಕ್ಕೆ ಹೋಗಿ ವಾಸಿಸಿದನು.
וַֽיְהִי֙ כִּשְׁמֹ֣עַ בַּעְשָׁ֔א וַיֶּחְדַּ֕ל מִבְּנ֖וֹת אֶת־הָֽרָמָ֑ה וַיֵּ֖שֶׁב בְּתִרְצָֽה׃
22 ಆಗ ಅರಸನಾದ ಆಸನು ಯೆಹೂದರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ಕಟ್ಟಿಸುತ್ತಾ ಇದ್ದ ರಾಮ ಪಟ್ಟಣದ ಕಲ್ಲುಗಳನ್ನೂ, ಅದರ ತೊಲೆಗಳನ್ನೂ ತೆಗೆದುಕೊಂಡುಹೋಗಿ ಅವುಗಳಿಂದ ಬೆನ್ಯಾಮೀನನ ಗಿಬೆಯ ಮತ್ತು ಮಿಚ್ಪೆ ಎಂಬ ನಗರಗಳನ್ನು ಕಟ್ಟಿಸಿದನು.
וְהַמֶּ֨לֶךְ אָסָ֜א הִשְׁמִ֤יעַ אֶת־כָּל־יְהוּדָה֙ אֵ֣ין נָקִ֔י וַיִּשְׂא֞וּ אֶת־אַבְנֵ֤י הָֽרָמָה֙ וְאֶת־עֵצֶ֔יהָ אֲשֶׁ֥ר בָּנָ֖ה בַּעְשָׁ֑א וַיִּ֤בֶן בָּם֙ הַמֶּ֣לֶךְ אָסָ֔א אֶת־גֶּ֥בַע בִּנְיָמִ֖ן וְאֶת־הַמִּצְפָּֽה ׃
23 ಆಸನ ಉಳಿದ ಎಲ್ಲಾ ಕಾರ್ಯಗಳೂ, ಅವನ ಸಮಸ್ತ ಪರಾಕ್ರಮವೂ, ಅವನು ಮಾಡಿದ್ದೆಲ್ಲವೂ, ಅವನು ಕಟ್ಟಿಸಿದ ಪಟ್ಟಣಗಳೂ, ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಆದರೆ ತನ್ನ ವೃದ್ಧಾಪ್ಯದಲ್ಲಿ ಅವನ ಕಾಲುಗಳಿಗೆ ರೋಗ ತಗುಲಿತು.
וְיֶ֣תֶר כָּל־דִּבְרֵֽי ־אָ֠סָא וְכָל־גְּב֨וּרָת֜וֹ וְכָל־אֲשֶׁ֣ר עָשָׂ֗ה וְהֶֽעָרִים֙ אֲשֶׁ֣ר בָּנָ֔ה הֲלֹֽא־הֵ֣מָּה כְתוּבִ֗ים עַל־סֵ֛פֶר דִּבְרֵ֥י הַיָּמִ֖ים לְמַלְכֵ֣י יְהוּדָ֑ה רַ֚ק לְעֵ֣ת זִקְנָת֔וֹ חָלָ֖ה אֶת־רַגְלָֽיו׃
24 ಆಸನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ತನ್ನ ತಂದೆ ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸಮಾಧಿ ಬಳಿ ಅವನನ್ನು ಹೂಳಿಟ್ಟರು. ಅವನಿಗೆ ಬದಲಾಗಿ ಅವನ ಮಗ ಯೆಹೋಷಾಫಾಟನು ಅರಸನಾದನು.
וַיִּשְׁכַּ֤ב אָסָא֙ עִם־אֲבֹתָ֔יו וַיִּקָּבֵר֙ עִם־אֲבֹתָ֔יו בְּעִ֖יר דָּוִ֣ד אָבִ֑יו וַיִּמְלֹ֛ךְ יְהוֹשָׁפָ֥ט בְּנ֖וֹ תַּחְתָּֽיו׃ פ
25 ಯೆಹೂದದ ಅರಸನಾದ ಆಸನ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗ ನಾದಾಬನು ಅರಸನಾಗಿ ಎರಡು ವರುಷ ಇಸ್ರಾಯೇಲಿನ ಮೇಲೆ ಆಳಿದನು.
וְנָדָ֣ב בֶּן־יָרָבְעָ֗ם מָלַךְ֙ עַל־יִשְׂרָאֵ֔ל בִּשְׁנַ֣ת שְׁתַּ֔יִם לְאָסָ֖א מֶ֣לֶךְ יְהוּדָ֑ה וַיִּמְלֹ֥ךְ עַל־יִשְׂרָאֵ֖ל שְׁנָתָֽיִם׃
26 ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಪಾಪಮಾಡಲು ಇಸ್ರಾಯೇಲನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ, ಅವನ ಮಾರ್ಗದಲ್ಲಿಯೂ ನಡೆದನು.
וַיַּ֥עַשׂ הָרַ֖ע בְּעֵינֵ֣י יְהוָ֑ה וַיֵּ֙לֶךְ֙ בְּדֶ֣רֶךְ אָבִ֔יו וּ֨בְחַטָּאת֔וֹ אֲשֶׁ֥ר הֶחֱטִ֖יא אֶת־יִשְׂרָאֵֽל׃
27 ನಾದಾಬನೂ, ಸಮಸ್ತ ಇಸ್ರಾಯೇಲರೂ ಫಿಲಿಷ್ಟಿಯರ ಪಟ್ಟಣವಾದ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು. ಆದುದರಿಂದ ಇಸ್ಸಾಕಾರನ ಗೋತ್ರದ ಅಹೀಯನ ಮಗ ಬಾಷನು ನಾದಾಬನಿಗೆ ವಿರೋಧವಾಗಿ ಒಳಸಂಚುಮಾಡಿ, ನಾದಾಬನನ್ನು ಕೊಂದುಬಿಟ್ಟನು.
וַיִּקְשֹׁ֨ר עָלָ֜יו בַּעְשָׁ֤א בֶן־אֲחִיָּה֙ לְבֵ֣ית יִשָּׂשכָ֔ר וַיַּכֵּ֣הוּ בַעְשָׁ֔א בְּגִבְּת֖וֹן אֲשֶׁ֣ר לַפְּלִשְׁתִּ֑ים וְנָדָב֙ וְכָל־יִשְׂרָאֵ֔ל צָרִ֖ים עַֽל־גִּבְּתֽוֹן׃
28 ಯೆಹೂದದ ಅರಸನಾದ ಆಸನ ಮೂರನೆಯ ವರುಷದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು.
וַיְמִתֵ֣הוּ בַעְשָׁ֔א בִּשְׁנַ֣ת שָׁלֹ֔שׁ לְאָסָ֖א מֶ֣לֶךְ יְהוּדָ֑ה וַיִּמְלֹ֖ךְ תַּחְתָּֽיו׃
29 ಅವನು ಆಳುತ್ತಿರುವಾಗ, ಯಾರೊಬ್ಬಾಮನ ಮನೆಯವರನ್ನೆಲ್ಲಾ ಸಂಹರಿಸಿಬಿಟ್ಟನು. ಯಾರೊಬ್ಬಾಮನು ಪಾಪಮಾಡಿ, ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನಿಮಿತ್ತವಾಗಿಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ, ಯೆಹೋವ ದೇವರು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ನೆರವೇರಿತು.
וַיְהִ֣י כְמָלְכ֗וֹ הִכָּה֙ אֶת־כָּל־בֵּ֣ית יָרָבְעָ֔ם לֹֽא־הִשְׁאִ֧יר כָּל־נְשָׁמָ֛ה לְיָרָבְעָ֖ם עַד־הִשְׁמִד֑וֹ כִּדְבַ֣ר יְהוָ֔ה אֲשֶׁ֣ר דִּבֶּ֔ר בְּיַד־עַבְדּ֖וֹ אֲחִיָּ֥ה הַשִּׁילֹנִֽי׃
30 ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಪ್ರಚೋದಿಸಿದ ಕಾರಣ ಇದು ಸಂಭವಿಸಿತು.
עַל־חַטֹּ֤אות יָרָבְעָם֙ אֲשֶׁ֣ר חָטָ֔א וַאֲשֶׁ֥ר הֶחֱטִ֖יא אֶת־יִשְׂרָאֵ֑ל בְּכַעְס֕וֹ אֲשֶׁ֣ר הִכְעִ֔יס אֶת־יְהוָ֖ה אֱלֹהֵ֥י יִשְׂרָאֵֽל׃
31 ನಾದಾಬನ ಮಿಕ್ಕಾದ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ, ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
וְיֶ֛תֶר דִּבְרֵ֥י נָדָ֖ב וְכָל־אֲשֶׁ֣ר עָשָׂ֑ה הֲלֹא־הֵ֣ם כְּתוּבִ֗ים עַל־סֵ֛פֶר דִּבְרֵ֥י הַיָּמִ֖ים לְמַלְכֵ֥י יִשְׂרָאֵֽל׃
32 ಇದಲ್ಲದೆ ಆಸನಿಗೂ, ಇಸ್ರಾಯೇಲಿನ ಅರಸನಾದ ಬಾಷನಿಗೂ ಅವರ ಜೀವಾಂತ್ಯದವರೆಗೂ ಯುದ್ಧ ನಡೆಯುತ್ತಿತ್ತು.
וּמִלְחָמָ֨ה הָיְתָ֜ה בֵּ֣ין אָסָ֗א וּבֵ֛ין בַּעְשָׁ֥א מֶֽלֶךְ־יִשְׂרָאֵ֖ל כָּל־יְמֵיהֶֽם׃ פ
33 ಯೆಹೂದದ ಅರಸನಾದ ಆಸನ ಮೂರನೆಯ ವರ್ಷದಲ್ಲಿ ಅಹೀಯನ ಮಗ ಬಾಷನು ಸಮಸ್ತ ಇಸ್ರಾಯೇಲಿನ ಮೇಲೆ ತಿರ್ಚದಲ್ಲಿ ಇಪ್ಪತ್ತನಾಲ್ಕು ವರ್ಷ ಆಳಿದನು.
בִּשְׁנַ֣ת שָׁלֹ֔שׁ לְאָסָ֖א מֶ֣לֶךְ יְהוּדָ֑ה מָ֠לַךְ בַּעְשָׁ֨א בֶן־אֲחִיָּ֤ה עַל־כָּל־יִשְׂרָאֵל֙ בְּתִרְצָ֔ה עֶשְׂרִ֥ים וְאַרְבַּ֖ע שָׁנָֽה׃
34 ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಯಾರೊಬ್ಬಾಮನ ಮಾರ್ಗದಲ್ಲಿಯೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದಲ್ಲಿಯೂ ಭಾಗಿಯಾದನು.
וַיַּ֥עַשׂ הָרַ֖ע בְּעֵינֵ֣י יְהוָ֑ה וַיֵּ֙לֶךְ֙ בְּדֶ֣רֶךְ יָרָבְעָ֔ם וּ֨בְחַטָּאת֔וֹ אֲשֶׁ֥ר הֶחֱטִ֖יא אֶת־יִשְׂרָאֵֽל׃ ס

< ಅರಸುಗಳು - ಪ್ರಥಮ ಭಾಗ 15 >