< ಅರಸುಗಳು - ಪ್ರಥಮ ಭಾಗ 16 >

1 ಬಾಷನಿಗೆ ವಿರೋಧವಾಗಿ ಹನಾನೀಯ ಮಗ ಯೇಹುವಿಗೆ ಯೆಹೋವ ದೇವರ ವಾಕ್ಯ ಬಂತು,
וַיְהִ֤י דְבַר־יְהוָה֙ אֶל־יֵה֣וּא בֶן־חֲנָ֔נִי עַל־בַּעְשָׁ֖א לֵאמֹֽר׃
2 “ನಾನು ನಿನ್ನನ್ನು ಧೂಳಿನಿಂದ ಎಬ್ಬಿಸಿ, ನಿನ್ನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ಇರಿಸಿದೆನು. ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು, ನನ್ನ ಜನರಾದ ಇಸ್ರಾಯೇಲರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪಮಾಡಲು ಪ್ರೇರೇಪಿಸಿದೆ.
יַ֗עַן אֲשֶׁ֤ר הֲרִימֹתִ֙יךָ֙ מִן־הֶ֣עָפָ֔ר וָאֶתֶּנְךָ֣ נָגִ֔יד עַ֖ל עַמִּ֣י יִשְׂרָאֵ֑ל וַתֵּ֣לֶךְ ׀ בְּדֶ֣רֶךְ יָרָבְעָ֗ם וַֽתַּחֲטִא֙ אֶת־עַמִּ֣י יִשְׂרָאֵ֔ל לְהַכְעִיסֵ֖נִי בְּחַטֹּאתָֽם׃
3 ನಾನು ಬಾಷನ ಸಂತತಿಯನ್ನೂ, ಅವನ ಮನೆಯ ಸಂತತಿಯನ್ನೂ ತೆಗೆದುಹಾಕಿ, ನಿನ್ನ ಮನೆಯನ್ನು ನೆಬಾಟನ ಮಗ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.
הִנְנִ֥י מַבְעִ֛יר אַחֲרֵ֥י בַעְשָׁ֖א וְאַחֲרֵ֣י בֵית֑וֹ וְנָֽתַתִּי֙ אֶת־בֵּ֣יתְךָ֔ כְּבֵ֖ית יָרָבְעָ֥ם בֶּן־נְבָֽט׃
4 ಬಾಷನ ಕಡೆಯವರಲ್ಲಿ ಪಟ್ಟಣದೊಳಗೆ ಸಾಯುವವನನ್ನು ನಾಯಿಗಳು ತಿನ್ನುವುವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವುವು,” ಎಂಬುದೇ ಆ ವಾಕ್ಯ.
הַמֵּ֤ת לְבַעְשָׁא֙ בָּעִ֔יר יֹֽאכְל֖וּ הַכְּלָבִ֑ים וְהַמֵּ֥ת לוֹ֙ בַּשָּׂדֶ֔ה יֹאכְל֖וּ ע֥וֹף הַשָּׁמָֽיִם׃
5 ಬಾಷನ ಇತರ ಕಾರ್ಯಗಳೂ, ಅವನು ಮಾಡಿದ್ದೂ, ಅವನ ಪರಾಕ್ರಮವೂ ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆದಿರುತ್ತವೆ.
וְיֶ֨תֶר דִּבְרֵ֥י בַעְשָׁ֛א וַאֲשֶׁ֥ר עָשָׂ֖ה וּגְבֽוּרָת֑וֹ הֲלֹא־הֵ֣ם כְּתוּבִ֗ים עַל־סֵ֛פֶר דִּבְרֵ֥י הַיָּמִ֖ים לְמַלְכֵ֥י יִשְׂרָאֵֽל׃
6 ಬಾಷನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ತಿರ್ಚದಲ್ಲಿ ಅವನ ಶವವನ್ನು ಸಮಾಧಿಮಾಡಿದರು. ಅವನ ಮಗ ಏಲನು ಅವನಿಗೆ ಬದಲಾಗಿ ಅರಸನಾದನು.
וַיִּשְׁכַּ֤ב בַּעְשָׁא֙ עִם־אֲבֹתָ֔יו וַיִּקָּבֵ֖ר בְּתִרְצָ֑ה וַיִּמְלֹ֛ךְ אֵלָ֥ה בְנ֖וֹ תַּחְתָּֽיו׃
7 ಬಾಷನು ಯಾರೊಬ್ಬಾಮನ ಮನೆಯವರ ಹಾಗಿದ್ದು, ಅವರನ್ನು ಸಂಹರಿಸಿದ್ದರಿಂದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿ, ಯೆಹೋವ ದೇವರ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ, ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿ ಯೇಹುವಿನ ಮುಖಾಂತರ ಯೆಹೋವ ದೇವರ ವಾಕ್ಯ ಬಂತು.
וְגַ֡ם בְּיַד־יֵה֨וּא בֶן־חֲנָ֜נִי הַנָּבִ֗יא דְּבַר־יְהוָ֡ה הָיָה֩ אֶל־בַּעְשָׁ֨א וְאֶל־בֵּית֜וֹ וְעַ֥ל כָּל־הָרָעָ֣ה ׀ אֲשֶׁר־עָשָׂ֣ה ׀ בְּעֵינֵ֣י יְהוָ֗ה לְהַכְעִיסוֹ֙ בְּמַעֲשֵׂ֣ה יָדָ֔יו לִהְי֖וֹת כְּבֵ֣ית יָרָבְעָ֑ם וְעַ֥ל אֲשֶׁר־הִכָּ֖ה אֹתֽוֹ׃ פ
8 ಯೆಹೂದದ ಅರಸನಾದ ಆಸನ ಇಪ್ಪತ್ತಾರನೆಯ ವರುಷದಲ್ಲಿ ಬಾಷನ ಮಗ ಏಲನು ಇಸ್ರಾಯೇಲಿನ ಮೇಲೆ ತಿರ್ಚದಲ್ಲಿ ಎರಡು ವರ್ಷ ಆಳಿದನು.
בִּשְׁנַ֨ת עֶשְׂרִ֤ים וָשֵׁשׁ֙ שָׁנָ֔ה לְאָסָ֖א מֶ֣לֶךְ יְהוּדָ֑ה מָ֠לַךְ אֵלָ֨ה בֶן־בַּעְשָׁ֧א עַל־יִשְׂרָאֵ֛ל בְּתִרְצָ֖ה שְׁנָתָֽיִם׃
9 ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿರುವಾಗ, ಅರ್ಧ ರಥಗಳಿಗೆ ಅಧಿಪತಿಯಾಗಿರುವ ಅವನ ಸೇವಕನಾದ ಜಿಮ್ರಿಯನು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದನು.
וַיִּקְשֹׁ֤ר עָלָיו֙ עַבְדּ֣וֹ זִמְרִ֔י שַׂ֖ר מַחֲצִ֣ית הָרָ֑כֶב וְה֤וּא בְתִרְצָה֙ שֹׁתֶ֣ה שִׁכּ֔וֹר בֵּ֣ית אַרְצָ֔א אֲשֶׁ֥ר עַל־הַבַּ֖יִת בְּתִרְצָֽה׃
10 ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೆಯ ವರ್ಷದಲ್ಲಿ, ಅವನನ್ನು ಕೆಡವಿ ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು.
וַיָּבֹ֤א זִמְרִי֙ וַיַּכֵּ֣הוּ וַיְמִיתֵ֔הוּ בִּשְׁנַת֙ עֶשְׂרִ֣ים וָשֶׁ֔בַע לְאָסָ֖א מֶ֣לֶךְ יְהוּדָ֑ה וַיִּמְלֹ֖ךְ תַּחְתָּֽיו׃
11 ಜಿಮ್ರಿಯು ಆಳಲು ಆರಂಭಿಸಿದಾಗ, ಅವನು ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಲೇ, ಬಾಷನ ಮನೆಯವರನ್ನೆಲ್ಲಾ ಸಂಹರಿಸಿ, ಅವನ ಬಂಧುಗಳಲ್ಲಿಯೂ, ಅವನ ಸ್ನೇಹಿತರಲ್ಲಿಯೂ ಒಬ್ಬ ಗಂಡಸನನ್ನೂ ಉಳಿಸಲಿಲ್ಲ.
וַיְהִ֨י בְמָלְכ֜וֹ כְּשִׁבְתּ֣וֹ עַל־כִּסְא֗וֹ הִכָּה֙ אֶת־כָּל־בֵּ֣ית בַּעְשָׁ֔א לֹֽא־הִשְׁאִ֥יר ל֖וֹ מַשְׁתִּ֣ין בְּקִ֑יר וְגֹאֲלָ֖יו וְרֵעֵֽהוּ׃
12 ಹೀಗೆಯೇ ಬಾಷನೂ ಅವನ ಮಗ ಏಲನೂ ತಮ್ಮ ಎಲ್ಲಾ ಪಾಪಗಳಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕೋಪವನ್ನು ಎಬ್ಬಿಸಿ, ತಾವು ಮಾಡಿದ ಪಾಪಗಳಿಂದಲೂ,
וַיַּשְׁמֵ֣ד זִמְרִ֔י אֵ֖ת כָּל־בֵּ֣ית בַּעְשָׁ֑א כִּדְבַ֤ר יְהוָה֙ אֲשֶׁ֣ר דִּבֶּ֣ר אֶל־בַּעְשָׁ֔א בְּיַ֖ד יֵה֥וּא הַנָּבִֽיא׃
13 ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದರಿಂದಲೂ, ಯೆಹೋವ ದೇವರು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯವರನ್ನೆಲ್ಲಾ ನಾಶಮಾಡಿದನು.
אֶ֚ל כָּל־חַטֹּ֣אות בַּעְשָׁ֔א וְחַטֹּ֖אות אֵלָ֣ה בְנ֑וֹ אֲשֶׁ֣ר חָטְא֗וּ וַאֲשֶׁ֤ר הֶחֱטִ֙יאוּ֙ אֶת־יִשְׂרָאֵ֔ל לְהַכְעִ֗יס אֶת־יְהוָ֛ה אֱלֹהֵ֥י יִשְׂרָאֵ֖ל בְּהַבְלֵיהֶֽם׃
14 ಏಲನ ಇತರ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ ಇಸ್ರಾಯೇಲ್ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
וְיֶ֛תֶר דִּבְרֵ֥י אֵלָ֖ה וְכָל־אֲשֶׁ֣ר עָשָׂ֑ה הֲלֽוֹא־הֵ֣ם כְּתוּבִ֗ים עַל־סֵ֛פֶר דִּבְרֵ֥י הַיָּמִ֖ים לְמַלְכֵ֥י יִשְׂרָאֵֽל׃ פ
15 ಯೆಹೂದದ ಅರಸನಾದ ಆಸನ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಏಳು ದಿನ ಆಳಿದನು. ಆಗ ಇಸ್ರಾಯೇಲರು ಫಿಲಿಷ್ಟಿಯರಿಗೆ ಸಂಬಂಧಪಟ್ಟ ಗಿಬ್ಬೆತೋನಿನ ಬಳಿಯಲ್ಲಿ ದಂಡಿಳಿಸಿದ್ದರು.
בִּשְׁנַת֩ עֶשְׂרִ֨ים וָשֶׁ֜בַע שָׁנָ֗ה לְאָסָא֙ מֶ֣לֶךְ יְהוּדָ֔ה מָלַ֥ךְ זִמְרִ֛י שִׁבְעַ֥ת יָמִ֖ים בְּתִרְצָ֑ה וְהָעָ֣ם חֹנִ֔ים עַֽל־גִּבְּת֖וֹן אֲשֶׁ֥ר לַפְּלִשְׁתִּֽים׃
16 ಜಿಮ್ರಿಯು ಒಳಸಂಚುಮಾಡಿ, ಅರಸನನ್ನು ಕೊಂದು ಹಾಕಿದ್ದಾನೆಂದು ಅಲ್ಲಿ ಇಳಿದಿರುವ ದಂಡಿನವರು ಕೇಳಿದ್ದರಿಂದ, ಇಸ್ರಾಯೇಲರೆಲ್ಲರು ಅದೇ ದಿವಸದಲ್ಲಿ ದಂಡಿನ ಅಧಿಪತಿಯಾದ ಒಮ್ರಿಯನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ನೇಮಿಸಿದರು.
וַיִּשְׁמַ֤ע הָעָם֙ הַחֹנִ֣ים לֵאמֹ֔ר קָשַׁ֣ר זִמְרִ֔י וְגַ֖ם הִכָּ֣ה אֶת־הַמֶּ֑לֶךְ וַיַּמְלִ֣כוּ כָֽל־יִ֠שְׂרָאֵל אֶת־עָמְרִ֨י שַׂר־צָבָ֧א עַל־יִשְׂרָאֵ֛ל בַּיּ֥וֹם הַה֖וּא בַּֽמַּחֲנֶֽה׃
17 ಆಗ ಒಮ್ರಿಯೂ ಅವನ ಸಂಗಡ ಇಸ್ರಾಯೇಲರೆಲ್ಲರೂ ಗಿಬ್ಬೆತೋನನ್ನು ಬಿಟ್ಟು ಹೋಗಿ ತಿರ್ಚವನ್ನು ಮುತ್ತಿಗೆ ಹಾಕಿದರು.
וַיַּעֲלֶ֥ה עָמְרִ֛י וְכָל־יִשְׂרָאֵ֥ל עִמּ֖וֹ מִֽגִּבְּת֑וֹן וַיָּצֻ֖רוּ עַל־תִּרְצָֽה׃
18 ಪಟ್ಟಣವು ವಶವಾದದ್ದನ್ನು ಕಂಡಾಗ, ಜಿಮ್ರಿಯು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ, ತನ್ನ ಅರಮನೆಯನ್ನು ಬೆಂಕಿಯಿಂದ ಸುಟ್ಟು ತಾನೂ ಸತ್ತನು.
וַיְהִ֞י כִּרְא֤וֹת זִמְרִי֙ כִּֽי־נִלְכְּדָ֣ה הָעִ֔יר וַיָּבֹ֖א אֶל־אַרְמ֣וֹן בֵּית־הַמֶּ֑לֶךְ וַיִּשְׂרֹ֨ף עָלָ֧יו אֶת־בֵּֽית־מֶ֛לֶךְ בָּאֵ֖שׁ וַיָּמֹֽת׃
19 ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತಾನು ಮಾಡಿದ ಪಾಪಗಳ ನಿಮಿತ್ತವಾಗಿಯೂ, ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಆಯಿತು.
עַל־חטאתו אֲשֶׁ֣ר חָטָ֔א לַעֲשׂ֥וֹת הָרַ֖ע בְּעֵינֵ֣י יְהוָ֑ה לָלֶ֙כֶת֙ בְּדֶ֣רֶךְ יָרָבְעָ֔ם וּבְחַטָּאתוֹ֙ אֲשֶׁ֣ר עָשָׂ֔ה לְהַחֲטִ֖יא אֶת־יִשְׂרָאֵֽל׃
20 ಜಿಮ್ರಿಯ ಇತರ ಕಾರ್ಯಗಳೂ, ಅವನು, ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
וְיֶ֙תֶר֙ דִּבְרֵ֣י זִמְרִ֔י וְקִשְׁר֖וֹ אֲשֶׁ֣ר קָשָׁ֑ר הֲלֹֽא־הֵ֣ם כְּתוּבִ֗ים עַל־סֵ֛פֶר דִּבְרֵ֥י הַיָּמִ֖ים לְמַלְכֵ֥י יִשְׂרָאֵֽל׃ פ
21 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು, ಅರ್ಧ ಜನರು ಗೀನಾತನ ಮಗ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು, ಅರ್ಧ ಜನರು ಒಮ್ರಿಯ ಹಿಂದೆ ಹೋದರು.
אָ֧ז יֵחָלֵ֛ק הָעָ֥ם יִשְׂרָאֵ֖ל לַחֵ֑צִי חֲצִ֨י הָעָ֜ם הָ֠יָה אַחֲרֵ֨י תִבְנִ֤י בֶן־גִּינַת֙ לְהַמְלִיכ֔וֹ וְהַחֲצִ֖י אַחֲרֵ֥י עָמְרִֽי׃
22 ಆದರೆ ಒಮ್ರಿಯ ಸಮರ್ಥಕರು ಜಯಿಸಿದ್ದರಿಂದ ಗೀನಾತನ ಮಗನಾದ ತಿಬ್ನಿಯು ಸತ್ತುಹೋದನು, ಒಮ್ರಿಯು ಅರಸನಾದನು.
וַיֶּחֱזַ֤ק הָעָם֙ אֲשֶׁ֣ר אַחֲרֵ֣י עָמְרִ֔י אֶת־הָעָ֕ם אֲשֶׁ֥ר אַחֲרֵ֖י תִּבְנִ֣י בֶן־גִּינַ֑ת וַיָּ֣מָת תִּבְנִ֔י וַיִּמְלֹ֖ךְ עָמְרִֽי׃ פ
23 ಯೆಹೂದದ ಅರಸನಾದ ಆಸನ ಮೂವತ್ತೊಂದನೆಯ ವರ್ಷದಲ್ಲಿ, ಒಮ್ರಿಯು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ, ಹನ್ನೆರಡು ವರ್ಷ ಆಳಿದನು, ಅದರಲ್ಲಿ ಆರು ವರ್ಷ ತಿರ್ಚದಲ್ಲಿ ಆಳಿದನು.
בִּשְׁנַת֩ שְׁלֹשִׁ֨ים וְאַחַ֜ת שָׁנָ֗ה לְאָסָא֙ מֶ֣לֶךְ יְהוּדָ֔ה מָלַ֤ךְ עָמְרִי֙ עַל־יִשְׂרָאֵ֔ל שְׁתֵּ֥ים עֶשְׂרֵ֖ה שָׁנָ֑ה בְּתִרְצָ֖ה מָלַ֥ךְ שֵׁשׁ־שָׁנִֽים׃
24 ಅವನು ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟು ಸಮಾರಿಯ ಎಂಬ ಬೆಟ್ಟವನ್ನು ಕೊಂಡುಕೊಂಡನು. ಆ ಬೆಟ್ಟದ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಜಮೀನಿನ ಯಜಮಾನನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ಎಂದು ಹೆಸರಿಟ್ಟನು.
וַיִּ֜קֶן אֶת־הָהָ֥ר שֹׁמְר֛וֹן מֵ֥אֶת שֶׁ֖מֶר בְּכִכְּרַ֣יִם כָּ֑סֶף וַיִּ֙בֶן֙ אֶת־הָהָ֔ר וַיִּקְרָ֗א אֶת־שֵׁ֤ם הָעִיר֙ אֲשֶׁ֣ר בָּנָ֔ה עַ֣ל שֶׁם־שֶׁ֔מֶר אֲדֹנֵ֖י הָהָ֥ר שֹׁמְרֽוֹן׃
25 ಆದರೆ ಒಮ್ರಿಯು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು.
וַיַּעֲשֶׂ֥ה עָמְרִ֛י הָרַ֖ע בְּעֵינֵ֣י יְהוָ֑ה וַיָּ֕רַע מִכֹּ֖ל אֲשֶׁ֥ר לְפָנָֽיו׃
26 ಅವನು ನೆಬಾಟನ ಮಗ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.
וַיֵּ֗לֶךְ בְּכָל־דֶּ֙רֶךְ֙ יָרָבְעָ֣ם בֶּן־נְבָ֔ט ובחטאתיו אֲשֶׁ֥ר הֶחֱטִ֖יא אֶת־יִשְׂרָאֵ֑ל לְהַכְעִ֗יס אֶת־יְהוָ֛ה אֱלֹהֵ֥י יִשְׂרָאֵ֖ל בְּהַבְלֵיהֶֽם׃
27 ಒಮ್ರಿಯು ಮಾಡಿದ ಇತರ ಕಾರ್ಯಗಳೂ, ಅವನು ತೋರಿಸಿದ ಪರಾಕ್ರಮವೂ, ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
וְיֶ֨תֶר דִּבְרֵ֤י עָמְרִי֙ אֲשֶׁ֣ר עָשָׂ֔ה וּגְבוּרָת֖וֹ אֲשֶׁ֣ר עָשָׂ֑ה הֲלֹֽא־הֵ֣ם כְּתוּבִ֗ים עַל־סֵ֛פֶר דִּבְרֵ֥י הַיָּמִ֖ים לְמַלְכֵ֥י יִשְׂרָאֵֽל׃
28 ಒಮ್ರಿಯು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಸಮಾರ್ಯ ಪಟ್ಟಣದಲ್ಲಿ ಅವನ ಶವವನ್ನು ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಅರಸನಾದನು.
וַיִּשְׁכַּ֤ב עָמְרִי֙ עִם־אֲבֹתָ֔יו וַיִּקָּבֵ֖ר בְּשֹׁמְר֑וֹן וַיִּמְלֹ֛ךְ אַחְאָ֥ב בְּנ֖וֹ תַּחְתָּֽיו׃ פ
29 ಯೆಹೂದದ ಅರಸನಾದ ಆಸನ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗ ಅಹಾಬನು ಇಸ್ರಾಯೇಲಿನ ಮೇಲೆ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತೆರಡು ವರ್ಷ ಆಳಿದನು.
וְאַחְאָ֣ב בֶּן־עָמְרִ֗י מָלַךְ֙ עַל־יִשְׂרָאֵ֔ל בִּשְׁנַ֨ת שְׁלֹשִׁ֤ים וּשְׁמֹנֶה֙ שָׁנָ֔ה לְאָסָ֖א מֶ֣לֶךְ יְהוּדָ֑ה וַ֠יִּמְלֹךְ אַחְאָ֨ב בֶּן־עָמְרִ֤י עַל־יִשְׂרָאֵל֙ בְּשֹׁ֣מְר֔וֹן עֶשְׂרִ֥ים וּשְׁתַּ֖יִם שָׁנָֽה׃
30 ಒಮ್ರಿಯ ಮಗ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಯೆಹೋವ ದೇವರ ಮುಂದೆ ಹೆಚ್ಚು ಕೆಟ್ಟತನ ಮಾಡಿದನು.
וַיַּ֨עַשׂ אַחְאָ֧ב בֶּן־עָמְרִ֛י הָרַ֖ע בְּעֵינֵ֣י יְהוָ֑ה מִכֹּ֖ל אֲשֶׁ֥ר לְפָנָֽיו׃
31 ನೆಬಾಟನ ಮಗ ಯಾರೊಬ್ಬಾಮನ ಪಾಪಗಳಲ್ಲಿ ನಡೆಯುವುದು ಅವನಿಗೆ ಅಲ್ಪವಾಗಿತ್ತು. ಅವನು ಸೀದೋನ್ಯರ ಅರಸನಾದ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡಬಿದ್ದನು.
וַיְהִי֙ הֲנָקֵ֣ל לֶכְתּ֔וֹ בְּחַטֹּ֖אות יָרָבְעָ֣ם בֶּן־נְבָ֑ט וַיִּקַּ֨ח אִשָּׁ֜ה אֶת־אִיזֶ֗בֶל בַּת־אֶתְבַּ֙עַל֙ מֶ֣לֶךְ צִידֹנִ֔ים וַיֵּ֙לֶךְ֙ וַֽיַּעֲבֹ֣ד אֶת־הַבַּ֔עַל וַיִּשְׁתַּ֖חוּ לֽוֹ׃
32 ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿದನು.
וַיָּ֥קֶם מִזְבֵּ֖חַ לַבָּ֑עַל בֵּ֣ית הַבַּ֔עַל אֲשֶׁ֥ר בָּנָ֖ה בְּשֹׁמְרֽוֹן׃
33 ಅಹಾಬನು ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆಯೇ ಅಹಾಬನು ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಉಕ್ಕುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕವಾಗಿ ಕೆಟ್ಟತನ ಮಾಡಿದನು.
וַיַּ֥עַשׂ אַחְאָ֖ב אֶת־הָאֲשֵׁרָ֑ה וַיּ֨וֹסֶף אַחְאָ֜ב לַעֲשׂ֗וֹת לְהַכְעִיס֙ אֶת־יְהֹוָה֙ אֱלֹהֵ֣י יִשְׂרָאֵ֔ל מִכֹּ֨ל מַלְכֵ֣י יִשְׂרָאֵ֔ל אֲשֶׁ֥ר הָי֖וּ לְפָנָֽיו׃
34 ಅವನ ದಿವಸಗಳಲ್ಲಿ ಬೇತೇಲಿನ ಹೀಯೇಲನು ಯೆರಿಕೋವನ್ನು ಕಟ್ಟಿಸಿದನು. ಯೆಹೋವ ದೇವರು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ, ತನ್ನ ಚೊಚ್ಚಲಮಗನಾದ ಅಬೀರಾಮನನ್ನೂ, ಅದರ ಬಾಗಿಲುಗಳನ್ನು ಇಟ್ಟಾಗ ತನ್ನ ಕಿರಿ ಮಗನಾದ ಸೆಗೂಬನನ್ನೂ ಕಳೆದುಕೊಂಡನು.
בְּיָמָ֞יו בָּנָ֥ה חִיאֵ֛ל בֵּ֥ית הָאֱלִ֖י אֶת־יְרִיחֹ֑ה בַּאֲבִירָ֨ם בְּכֹר֜וֹ יִסְּדָ֗הּ ובשגיב צְעִירוֹ֙ הִצִּ֣יב דְּלָתֶ֔יהָ כִּדְבַ֣ר יְהוָ֔ה אֲשֶׁ֣ר דִּבֶּ֔ר בְּיַ֖ד יְהוֹשֻׁ֥עַ בִּן־נֽוּן׃ ס

< ಅರಸುಗಳು - ಪ್ರಥಮ ಭಾಗ 16 >