< ಅರಸುಗಳು - ಪ್ರಥಮ ಭಾಗ 19 >

1 ಎಲೀಯನು ಮಾಡಿದ್ದೆಲ್ಲವನ್ನೂ, ಅವನು ಖಡ್ಗದಿಂದ ಎಲ್ಲಾ ಪ್ರವಾದಿಗಳನ್ನು ಕೊಂದು ಹಾಕಿದ್ದೆಲ್ಲವನ್ನೂ, ಅಹಾಬನು ಈಜೆಬೆಲಳಿಗೆ ತಿಳಿಸಿದಾಗ,
Ahabu akamwambia Yezebeli kila kitu Eliya alichokuwa amefanya na jinsi alivyowaua manabii wote kwa upanga.
2 ಈಜೆಬೆಲಳು ಎಲೀಯನ ಬಳಿಗೆ ದೂತನನ್ನು ಕಳುಹಿಸಿ, “ನಾನು ನಾಳೆ ಇಷ್ಟು ಹೊತ್ತಿಗೆ ಅವರಲ್ಲಿರುವ ಒಬ್ಬೊಬ್ಬನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ, ದೇವರುಗಳು ನನಗೆ ಬೇಕಾದದ್ದನ್ನು ಮಾಡಲಿ,” ಎಂದು ಹೇಳಿದಳು.
Hivyo Yezebeli akamtuma mjumbe kwa Eliya, kusema, “Hao miungu initendee hivyo na kuzidi, kama kufikia kesho wakati kama huu sitaifanya roho yako kama mmojawapo wa hao manabii.”
3 ಅವನು ಅದನ್ನು ಕೇಳಿ ಎದ್ದು, ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ, ಅಲ್ಲಿ ತನ್ನ ಸೇವಕನನ್ನು ಕಳುಹಿಸಿಬಿಟ್ಟನು.
Eliya aliogopa, na akakimbia kuokoa maisha yake. Alipofika Beer-Sheba katika Yuda, akamwacha mtumishi wake huko,
4 ಆದರೆ ಅವನು ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತು, ತಾನು ಸಾಯಬೇಕೆಂದು ಅಪೇಕ್ಷಿಸಿ, “ಯೆಹೋವ ದೇವರೇ, ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಕೋ. ಏಕೆಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ,” ಎಂದನು.
lakini yeye mwenyewe akatembea mwendo wa kutwa nzima katika jangwa. Akafika kwenye mti wa mretemu, akakaa chini yake na kuomba ili afe. Akasema, “Yatosha sasa, Bwana, ondoa roho yangu, kwani mimi si bora kuliko baba zangu.”
5 ಅವನು ಜಾಲೀಗಿಡದ ಕೆಳಗೆ ಮಲಗಿಕೊಂಡು ನಿದ್ರೆಮಾಡಿದನು. ಆಗ ಒಬ್ಬ ದೂತನು ಅವನನ್ನು ತಟ್ಟಿ, ಅವನಿಗೆ, “ಎದ್ದು ತಿನ್ನು,” ಎಂದನು.
Kisha akajinyoosha chini ya mti, akalala usingizi. Mara malaika akamgusa na akamwambia, “Inuka na ule.”
6 ಅವನು ಎದ್ದು ನೋಡಿದಾಗ, ಇಗೋ, ಕೆಂಡದಲ್ಲಿ ಬೇಯಿಸಿದ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು, ಕುಡಿದು ತಿರುಗಿ ಮಲಗಿಕೊಂಡನು.
Akatazama pande zote, napo hapo karibu na kichwa chake palikuwepo mkate uliookwa kwenye makaa ya moto na gudulia la maji. Akala na kunywa, kisha akajinyoosha tena.
7 ತಿರುಗಿ ಎರಡನೆಯ ಸಾರಿ ಯೆಹೋವ ದೇವರ ದೂತನು ಬಂದು, ಅವನನ್ನು ತಟ್ಟಿ ಅವನಿಗೆ, “ನೀನೆದ್ದು ತಿನ್ನು, ಏಕೆಂದರೆ ನೀನು ಬಹುದೂರ ಪ್ರಯಾಣ ಮಾಡಬೇಕಾಗಿದೆ,” ಎಂದನು.
Yule malaika wa Bwana akaja tena mara ya pili, akamgusa akamwambia, “Inuka na ule, kwa kuwa safari ni ndefu kwako.”
8 ಆಗ ಅವನೆದ್ದು ತಿಂದು, ಕುಡಿದು ಆ ಭೋಜನದ ಶಕ್ತಿಯಿಂದ ರಾತ್ರಿ ಹಗಲು ನಾಲ್ವತ್ತು ದಿವಸ ಹೋರೇಬ್ ಎಂಬ ದೇವರ ಬೆಟ್ಟದವರೆಗೂ ನಡೆದನು.
Kwa hiyo akainuka, akala na kunywa. Akiwa ametiwa nguvu na kile chakula, akasafiri siku arobaini usiku na mchana mpaka akafika Horebu, mlima wa Mungu.
9 ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಅಲ್ಲಿ ಅವನಿಗೆ ಯೆಹೋವ ದೇವರ ವಾಕ್ಯವು ಬಂದು, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದರು.
Huko akaingia katika pango, akalala humo usiku ule. Nalo neno la Bwana likamjia, kusema, “Unafanya nini hapa, Eliya?”
10 ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.
Akajibu, “Nimeona wivu mwingi kwa ajili ya Bwana Mungu Mwenye Nguvu Zote. Waisraeli wamelikataa Agano lako, wamevunja madhabahu zako na kuwaua manabii wako kwa upanga. Ni mimi, mimi peke yangu, niliyebaki, nao sasa wananitafuta ili waniangamize.”
11 ಆಗ ಯೆಹೋವ ದೇವರು, “ನೀನು ಹೊರಗೆ ಬಂದು ಬೆಟ್ಟದ ಮೇಲೆ ನನ್ನ ಮುಂದೆ ನಿಲ್ಲು. ಏಕೆಂದರೆ ನಾನು ನಿನ್ನ ಮುಂದೆ ಹಾದು ಹೋಗುತ್ತಿದ್ದೇನೆ,” ಎಂದನು. ಯೆಹೋವ ದೇವರ ಮುಂದೆ ಬೆಟ್ಟಗಳನ್ನು ಭೇದಿಸಿ, ಗುಡ್ಡಗಳನ್ನು ಒಡೆಯುವಂಥ ಮಹಾಬಲವಾದ ಗಾಳಿ, ಆ ಗಾಳಿಯಲ್ಲಿ ಯೆಹೋವ ದೇವರು ಇರಲಿಲ್ಲ. ಗಾಳಿಯ ತರುವಾಯ ಭೂಕಂಪವು, ಆ ಭೂಕಂಪದಲ್ಲಿ ಯೆಹೋವ ದೇವರು ಇರಲಿಲ್ಲ.
Bwana akasema, “Toka nje ukasimame juu ya mlima mbele za Bwana, kwa kuwa Bwana yu karibu kupita hapo.” Kisha upepo mwingi na wenye nguvu ukapasua milima ile na kuvunjavunja miamba mbele za Bwana, lakini Bwana hakuwamo katika ule upepo. Baada ya upepo palikuwa na tetemeko la nchi, lakini Bwana hakuwamo kwenye lile tetemeko.
12 ಭೂಕಂಪದ ತರುವಾಯ ಬೆಂಕಿಯು, ಆ ಬೆಂಕಿಯಲ್ಲಿ ಯೆಹೋವ ದೇವರು ಇರಲಿಲ್ಲ. ಬೆಂಕಿಯ ತರುವಾಯ ಮೃದುವಾದ ಸ್ವರವು ಕೇಳಿಸಿತು.
Baada ya tetemeko la nchi ukaja moto, lakini Bwana hakuwamo katika ule moto. Baada ya moto ikaja sauti ya utulivu ya kunongʼona.
13 ಎಲೀಯನು ಅದನ್ನು ಕೇಳಿದಾಗ, ತನ್ನ ಕಂಬಳಿಯಿಂದ ತನ್ನ ಮುಖವನ್ನು ಮುಚ್ಚಿಕೊಂಡು, ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದು ವಾಣಿ ಕೇಳಿಸಿತು.
Eliya alipoisikia, akafunika uso kwa vazi lake, akatoka na kusimama kwenye mdomo wa pango. Kisha ile sauti ikamwambia, “Eliya, unafanya nini hapa?”
14 ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.
Akajibu, “Nimeona wivu mwingi kwa ajili ya Bwana Mungu Mwenye Nguvu Zote. Waisraeli wamelikataa Agano lako, wamevunja madhabahu zako na kuwaua manabii wako kwa upanga. Ni mimi, mimi peke yangu, niliyebaki, nao sasa wananitafuta ili waniangamize.”
15 ಆಗ ಯೆಹೋವ ದೇವರು ಅವನಿಗೆ, “ನೀನು ಬಂದ ಮಾರ್ಗದಲ್ಲಿ ದಮಸ್ಕದ ಮರುಭೂಮಿಗೆ ತಿರುಗಿಕೊಂಡು ಹೋಗಿ, ಅಲ್ಲಿ ತಲುಪಿದಾಗ, ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು.
Bwana akamwambia, “Rudi kwa njia uliyoijia, uende kwenye Jangwa la Dameski. Wakati utakapofika huko, mtie Hazaeli mafuta awe mfalme wa Aramu
16 ಇದಲ್ಲದೆ ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಆಬೇಲ್ ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷನನ್ನು ನಿನಗೆ ಪ್ರತಿಯಾಗಿ ಪ್ರವಾದಿಯಾಗಿರಲು ಅಭಿಷೇಕಿಸು.
Pia mtie mafuta Yehu mwana wa Nimshi awe mfalme wa Israeli, na umtie Elisha mwana wa Shafati kutoka Abel-Mehola mafuta awe nabii badala yako.
17 ಹಜಾಯೇಲನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಯೇಹುವಿನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಎಲೀಷನು ಕೊಂದುಹಾಕುವನು.
Yehu atamuua yeyote atakayeutoroka upanga wa Hazaeli, naye Elisha atamuua yeyote atakayeutoroka upanga wa Yehu.
18 ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿಯನ್ನು ಇಸ್ರಾಯೇಲಿನಲ್ಲಿ ನನಗೋಸ್ಕರ ಉಳಿಸುವೆನು,” ಎಂದರು.
Hata sasa nimeweka akiba watu elfu saba katika Israeli, wote ambao hawajampigia Baali magoti, na wote ambao midomo yao haijambusu.”
19 ಹಾಗೆಯೇ ಎಲೀಯನು ಅಲ್ಲಿಂದ ಹೊರಟು ಶಾಫಾಟನ ಮಗ ಎಲೀಷನನ್ನು ಕಂಡುಕೊಂಡನು. ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡಿ ಎತ್ತುಗಳಿಂದ ಹೊಲವನ್ನು ಉಳುತ್ತಿದ್ದನು. ಅವನು ಹನ್ನೆರಡನೆಯ ಜೋಡಿನ ಸಂಗಡ ಇದ್ದಾಗ, ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ, ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
Hivyo Eliya akaondoka kutoka huko na kumkuta Elisha mwana wa Shafati. Alikuwa akilima kwa jozi kumi na mbili za maksai, na yeye mwenyewe aliongoza ile jozi ya kumi na mbili. Eliya akapita karibu naye, akamrushia vazi lake.
20 ಆಗ ಅವನು ಎತ್ತುಗಳನ್ನು ಬಿಟ್ಟು, ಎಲೀಯನ ಹಿಂದೆ ಓಡಿಹೋಗಿ ಅವನಿಗೆ, “ಅಪ್ಪಣೆಯಾದರೆ, ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬಂದು ನಿನ್ನನ್ನು ಹಿಂಬಾಲಿಸುವೆನು,” ಎಂದನು. ಎಲೀಯನು, “ಹೋಗು, ನಾನು ನಿನಗೆ ಏನು ಮಾಡಿದೆ?” ಎಂದನು.
Kisha Elisha akawaacha maksai wake, akamkimbilia Eliya, akamwambia, “Niruhusu nikawabusu baba yangu na mama yangu, halafu nitafuatana nawe.” Eliya akajibu, “Rudi zako, kwani nimekutendea nini?”
21 ಆಗ ಎಲೀಷನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ, ನೊಗದ ಕಟ್ಟಿಗೆಯಿಂದ ಅವುಗಳ ಮಾಂಸವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.
Basi Elisha akamwacha Eliya, naye akarudi. Akachukua ile jozi yake ya maksai na kuwachinja. Akaipika ile nyama kwa kutumia miti ya nira kama kuni na kuwapa watu, nao wakala. Kisha akaondoka, akamfuata Eliya, akamtumikia.

< ಅರಸುಗಳು - ಪ್ರಥಮ ಭಾಗ 19 >