< ಅರಸುಗಳು - ಪ್ರಥಮ ಭಾಗ 2 >

1 ಆದರೆ ದಾವೀದನ ಸಾಯುವ ಕಾಲ ಸಮೀಪಿಸಿದ್ದರಿಂದ ಅವನು ತನ್ನ ಮಗ ಸೊಲೊಮೋನನಿಗೆ ಆಜ್ಞಾಪಿಸಿದ್ದೇನೆಂದರೆ,
Давутниң өлидиған вақти йеқинлашқанда, оғли Сулайманға тапилап мундақ деди: —
2 “ಭೂಮಿಯಲ್ಲಿರುವವರೆಲ್ಲರು ಹೋಗುವ ಮಾರ್ಗವಾಗಿ ನಾನು ಹೋಗುತ್ತೇನೆ. ನೀನು ಬಲಗೊಂಡು ಶೂರನಾಗಿರು.
«Әнди йәр йүзидикиләрниң һәммиси баридиған йол билән кетимән. Жүрәклик болуп, әркәктәк болғин!
3 ನಿನ್ನ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಅನುಸರಿಸಿ ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ನಿಯಮದಲ್ಲಿ ಬರೆದಿರುವ ಅವರ ಆಜ್ಞಾನಿಯಮಗಳಿಗೂ, ವಿಧಿನಿರ್ಣಯಗಳಿಗೂ ವಿಧೇಯನಾಗಿರು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ, ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿಯೂ ಯಶಸ್ವಿಯಾಗುವೆ.
Сән барлиқ қиливатқан ишлириңда һәмдә барлиқ нийәт қилған ишлириңда раваҗ тепишиң үчүн Мусаға чүшүрүлгән қанунда пүтүлгәндәк, Пәрвәрдигар Худайиңниң йоллирида меңип, Униң бәлгүлимилири, Униң әмирлири, Униң һөкүмлири вә агаһ-гувалиқлирида чиң туруп, Униң тапшуруғини чиң тутқин.
4 ಯೆಹೋವ ದೇವರು, ‘ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನನ್ನ ಮುಂದೆ ನಂಬಿಗಸ್ತರಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಅವರು ಇಸ್ರಾಯೇಲಿನ ಸಿಂಹಾಸನದ ಮೇಲೆ ತಪ್ಪದೇ ಕುಳಿತುಕೊಳ್ಳುವರು,’ ಎಂದು ನನಗೆ ಹೇಳಿದ ತಮ್ಮ ವಾಕ್ಯವನ್ನು ಸ್ಥಿರಪಡಿಸುವರು.
Шундақ қилғанда Пәрвәрдигар маңа: «Әгәр әвлатлириң өз йолиға көңүл бөлүп, Мениң алдимда пүтүн қәлби вә пүтүн җени билән һәқиқәттә маңса, саңа әвладиңдин Исраилниң тәхтидә олтиришқа бир зат кам болмайду» дәп ейтқан сөзигә әмәл қилиду.
5 “ಇದಲ್ಲದೆ ಚೆರೂಯಳ ಮಗ ಯೋವಾಬನು ನನಗೂ, ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗ ಅಬ್ನೇರನಿಗೂ, ಯೆತೆರನ ಮಗ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಅವನು ಅವರನ್ನು ಕೊಂದು, ಸಮಾಧಾನ ಕಾಲದಲ್ಲಿ ಯುದ್ಧದ ರಕ್ತವನ್ನು ಚೆಲ್ಲಿ, ತನ್ನ ನಡುವಲ್ಲಿರುವ ನಡುಕಟ್ಟಿನ ಮೇಲೆಯೂ, ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.
Амма Зәруияниң оғли Йоабниң маңа қилғинини, йәни униң өзи қандақ қилип Исраилниң қошунидики икки сәрдарни, йәни Нерияниң оғли Абнәр билән Йәтәрниң оғли Амасани уруп өлтүрүп, тинич мәзгилдә җәңдә төкүлгәндәк қан төкүп, белигә бағлиған кәмәргә вә путиға кийгән кәшигә җәңдә төкүлгәндәк қан чечип, дағ қилғанлиғини билисән.
6 ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರಮಾಡಿ, ಅವನ ನರೆತಲೆಯನ್ನು ಸಮಾಧಾನದಿಂದ ಸಮಾಧಿ ಸೇರದಂತೆ ಮಾಡು. (Sheol h7585)
Сән уни даналиғиңға мувапиқ бир тәрәп қилип, униң ақ бешиниң гөргә саламәт чүшүшигә йол қоймиғайсән. (Sheol h7585)
7 “ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ದಯೆತೋರಿಸು. ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಏಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.
Лекин Гилеадлиқ Барзиллайниң оғуллириға меһриванлиқ көрситип, дәстихиниңдин нан йегүзгин; чүнки мән акаң Абшаломдин қачқинимда, улар йенимға келип маңа шундақ қилған.
8 “ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾಮೀನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನ್ ನದಿ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದ್ದರಿಂದ, ‘ನಾನು ನಿನ್ನನ್ನು ಖಡ್ಗದಿಂದ ಕೊಲ್ಲುವುದಿಲ್ಲ,’ ಎಂದು ಯೆಹೋವ ದೇವರ ಹೆಸರಿನಲ್ಲಿ ಆಣೆಯಿಟ್ಟೆನು.
Вә мана Баһуримдин кәлгән Бинямин қәбилисидин Гераниң оғли Шимәй йениңда туриду. У мән Маһанаимға баридиғанда, әшәддий ләнәт билән мени қарғиди. Кейин у Иордан дәриясиға берип мениң алдимға кәлгәндә, мән Пәрвәрдигарниң [нами] билән униңға: «Сени қилич билән өлтүрмәймән» дәп қәсәм қилдим.
9 ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ನೀನು ಬುದ್ಧಿವಂತನಾಗಿರುವುದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ. ಆದರೆ ಅವನ ನರೆತಲೆಯನ್ನು ರಕ್ತದಿಂದ ಸಮಾಧಿ ಸೇರುವಂತೆ ಮಾಡು,” ಎಂದನು. (Sheol h7585)
Амма һазир уни гунасиз дәп санимиғин. Өзүң дана киши болғандин кейин униңға қандақ қилишни билисән; һәрһалда униң ақ бешини қанитип гөргә чүшүргин». (Sheol h7585)
10 ಹೀಗೆಯೇ ದಾವೀದನು ಮರಣಹೊಂದಿ ತನ್ನ ಪಿತೃಗಳ ಜೊತೆ ಸೇರಿದನು. ದಾವೀದನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು.
Давут өз ата-бовлири билән бир йәрдә ухлиди. У «Давутниң шәһири» [дегән җайда] дәпнә қилинди.
11 ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರ್ಷಗಳು. ಏಳು ವರ್ಷ ಹೆಬ್ರೋನಿನಲ್ಲಿ ಆಳಿದನು. ಮೂವತ್ತಮೂರು ವರ್ಷ ಯೆರೂಸಲೇಮಿನಲ್ಲಿ ಆಳಿದನು.
Давутниң Исраилға сәлтәнәт қилған вақти қириқ жил еди; у Һебронда йәттә жил сәлтәнәт қилип, Йерусалимда оттуз үч жил сәлтәнәт қилди.
12 ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ಕುಳಿತನು. ಅವನ ರಾಜ್ಯವು ಬಹು ಸ್ಥಿರವಾಗಿತ್ತು.
Сулайман атиси Давутниң тәхтидә олтарди; униң сәлтәнити хелә мустәһкәмләнди.
13 ಆದರೆ ಹಗ್ಗೀತಳ ಮಗ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಬತ್ಷೆಬೆಳು ಅವನಿಗೆ, “ಸಮಾಧಾನವಾಗಿ ಬರುತ್ತೀಯೋ?” ಎಂದಳು. ಅದಕ್ಕೆ ಅವನು, “ಸಮಾಧಾನವೇ,” ಎಂದನು.
Амма Һаггитниң оғли Адония Сулайманниң аниси Бат-Шебаниң қешиға барди. У униңдин: — Течлиқ мәхситидә кәлдиңму? — дәп сориди. У: — Шундақ, течлиқ мәхситидә, деди.
14 ಅವನು, “ನಿನಗೆ ಹೇಳತಕ್ಕ ಮಾತಿದೆ,” ಎಂದನು. ಬತ್ಷೆಬೆಳು, “ಹೇಳು,” ಎಂದಳು.
У йәнә: — Саңа бир сөзүм бар еди, деди. У: — Сөзүңни ейтқин, деди.
15 ಆಗ ಅವನು, “ರಾಜ್ಯವು ನನ್ನದಾಗಿತ್ತೆಂದೂ, ನಾನು ಆಳುವ ಸಮಸ್ತ ಇಸ್ರಾಯೇಲರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದೂ ನೀನು ಬಲ್ಲೆ. ಆದರೆ ಎಲ್ಲವೂ ಬದಲಾಗಿ, ರಾಜ್ಯವು ನನ್ನ ಸಹೋದರನಿಗೆ ದೊರಕಿತು. ಏಕೆಂದರೆ ಅದು ಅವನಿಗೆ ಯೆಹೋವ ದೇವರಿಂದ ಉಂಟಾಯಿತು.
У: — Билисәнки, падишалиқ әслидә мениңки еди, вә пүтүн Исраил мени падиша болиду дәп, маңа қарайтти. Лекин падишалиқ мәндин кетип, инимниң илкигә өтти; чүнки Пәрвәрдигарниң ирадиси билән у униңки болди.
16 ಆದರೆ ಈಗ ನನಗೆ ಒಂದು ಬಿನ್ನಹವಿದೆ. ಅದನ್ನು ತಿರಸ್ಕರಿಸಬೇಡ,” ಎಂದನು. ಬತ್ಷೆಬೆಳು ಅವನಿಗೆ, “ಅದೇನು ಹೇಳು,” ಎಂದಳು.
Әнди саңа бир илтимасим бар. Мени яндурмиғин, деди. У: — Ейтқин, деди.
17 ಆಗ ಅವನು, “ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇಮ್ಯಳಾದ ಅಬೀಷಗಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು. ಏಕೆಂದರೆ ಅವನು ನಿನಗೆ ಆಗುವುದಿಲ್ಲವೆಂದು ಹೇಳುವುದಿಲ್ಲ,” ಎಂದನು.
У: — Сәндин өтүнимән, Сулайман падишаға мән үчүн ейтқинки — чүнки у саңа яқ демәйду! — У Шунамлиқ Абишагни маңа хотунлуққа бәрсун, деди.
18 ಅದಕ್ಕೆ ಬತ್ಷೆಬೆಳು, “ಒಳ್ಳೆಯದು, ನಿನಗೋಸ್ಕರ ಅರಸನ ಸಂಗಡ ಮಾತನಾಡುವೆನು,” ಎಂದಳು.
Бат-Шеба: — Мақул; сән үчүн падишаға сөз қилай, деди.
19 ಆದ್ದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವುದಕ್ಕೆ ಅರಸನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು, ಅವಳಿಗೆ ಅಡ್ಡಬಿದ್ದು, ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜಮಾತೆಗೋಸ್ಕರ ಆಸನವನ್ನು ಹಾಕಿಸಿದನು. ಅವಳು ಅವನ ಬಲಗಡೆಯಲ್ಲಿ ಕುಳಿತುಕೊಂಡಳು.
Бат-Шеба Адония үчүн сөз қилғили Сулайман падишаниң алдиға барди. Падиша қопуп алдиға берип, анисиға тазим қилди. Андин тәхтигә берип олтирип падишаниң анисиға бир тәхтни кәлтүрди. Шуниң билән у униң оң йенида олтирип, униңға: —
20 ಅವಳು ಅವನಿಗೆ, “ನಿನ್ನಿಂದ ಒಂದು ಚಿಕ್ಕ ಬಿನ್ನಹವಿದೆ, ಆಗುವುದಿಲ್ಲವೆಂದು ಹೇಳಬೇಡ,” ಎಂದಳು. ಅರಸನು ಅವಳಿಗೆ, “ನನ್ನ ತಾಯಿಯೇ ಕೇಳು. ಏಕೆಂದರೆ ನಾನು ನಿನ್ನ ಮಾತಿಗೆ ಆಗುವುದಿಲ್ಲವೆಂದು ಹೇಳುವುದಿಲ್ಲ,” ಎಂದನು.
Саңа кичиккинә бир илтимасим бар. Мени яндурмиғин, деди. Падиша униңға: — И ана, соравәргин, мән сени яндурмаймән, деди.
21 ಅದಕ್ಕವಳು, “ಶೂನೇಮ್ಯಳಾದ ಅಬೀಷಗಳನ್ನು ನಿನ್ನ ಅಣ್ಣ ಅದೋನೀಯನಿಗೆ ಹೆಂಡತಿಯಾಗಲು ಅಪ್ಪಣೆಯಾಗಲಿ,” ಎಂದಳು.
У: — Акаң Адонияға Шунамлиқ Абишагни хотунлуққа бәргүзгин, деди.
22 ಅರಸನಾದ ಸೊಲೊಮೋನನು ತನ್ನ ತಾಯಿಗೆ ಉತ್ತರವಾಗಿ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನೀನು ಕೇಳುವುದೇಕೆ? ರಾಜ್ಯವನ್ನೂ ಕೇಳು. ಏಕೆಂದರೆ ಅವನು ನನ್ನ ಅಣ್ಣನಾಗಿದ್ದಾನೆ. ಯಾಜಕ ಅಬಿಯಾತರನಿಗೋಸ್ಕರವೂ, ಚೆರೂಯಳ ಮಗ ಯೋವಾಬನಿಗೋಸ್ಕರವೂ ಕೇಳು,” ಎಂದನು.
Сулайман падиша җавап берип анисиға: — Немишкә Адония үчүн Шунамлиқ Абишагни сорайсән? У акам болған екән, униң үчүн, Абиятар каһин үчүн вә Зәруияниң оғли Йоаб үчүн падишалиқниму соримамсән! — деди.
23 ತರುವಾಯ ಅರಸನಾದ ಸೊಲೊಮೋನನು, “ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ, ನನಗೆ ದೇವರು ಹಾಗೆಯೂ, ಅದಕ್ಕಿಂತಲೂ ಅಧಿಕವಾಗಿಯೂ ಮಾಡಲಿ,” ಎಂದು ಯೆಹೋವ ದೇವರ ಹೆಸರಿನಲ್ಲಿ ಆಣೆ ಇಟ್ಟನು.
Сулайман падиша Пәрвәрдигар билән қәсәм қилип мундақ деди: — Адония шу сөзни қилғини үчүн өлмисә, Худа мени урсун яки униңдин артуқ җазалисун!
24 “ಹಾಗಾದರೆ ನನ್ನನ್ನು ಸ್ಥಿರಪಡಿಸಿ, ನನ್ನ ತಂದೆ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡಿಸಿ, ತಾವು ಮಾತುಕೊಟ್ಟ ಪ್ರಕಾರ ನನಗೆ ಮನೆತನ ಕಟ್ಟಿಸಿದ ಯೆಹೋವ ದೇವರ ಜೀವದಾಣೆ, ಈ ಹೊತ್ತು ಅದೋನೀಯನು ಸಾಯಬೇಕು,” ಎಂದನು.
Мениң орнумни мустәһкәм қилған, атамниң тәхтидә олтарғузған, Өз вәдиси бойичә маңа бир өйни қурған Пәрвәрдигарниң һаяти билән қәсәм қилимәнки, Адония бүгүн өлүмгә мәһкүм қилиниду, деди.
25 ಆಗ ಅರಸನಾದ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನನ್ನು ಕಳುಹಿಸಿದನು. ಇವನು ಹೋಗಿ ಅದೋನೀಯನನ್ನು ಕೊಂದುಹಾಕಿದನು.
Шуниң билән Сулайман падиша Йәһояданиң оғли Бенаяни бу ишқа әвәтти; у уни чепип өлтүрди.
26 ಯಾಜಕನಾದ ಅಬಿಯಾತರನಿಗೆ ಅರಸನು, “ನೀನು ಅನಾತೋತಿನಲ್ಲಿರುವ ನಿನ್ನ ಹೊಲಗಳಿಗೆ ಹೋಗು. ಏಕೆಂದರೆ ನೀನು ಸಾವಿಗೆ ಪಾತ್ರನಾಗಿದ್ದೀಯೆ. ಆದರೆ ನೀನು ಸಾರ್ವಭೌಮ ಯೆಹೋವ ದೇವರ ಮಂಜೂಷವನ್ನು ನನ್ನ ತಂದೆ ದಾವೀದನ ಮುಂದೆ ಹೊತ್ತದ್ದರಿಂದಲೂ, ನನ್ನ ತಂದೆಯ ಎಲ್ಲಾ ಕಷ್ಟಗಳಲ್ಲಿ ನೀನು ಪಾಲುಗಾರನಾಗಿದ್ದರಿಂದಲೂ, ನಾನು ಈಗ ನಿನ್ನನ್ನು ಸಾಯಿಸುವುದಿಲ್ಲ,” ಎಂದನು.
Падиша Абиятар каһинға: — Маң, Анатоттики өз етизлиғиңға барғин. Сән өлүмгә лайиқсән, лекин сән Рәб Пәрвәрдигарниң әһдә сандуғини атам Давутниң алдида көтәргәнлигиң түпәйлидин, вә атамниң тартқан һәммә азап-оқубәтлиридә униңға һәмдәрд болғиниң үчүн, мән һазир сени өлүмгә мәһкүм қилмаймән, деди.
27 ಹೀಗೆಯೇ ಯೆಹೋವ ದೇವರು ಶೀಲೋವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವುದಕ್ಕೆ ಸೊಲೊಮೋನನು ಅಬಿಯಾತರನನ್ನು ಯೆಹೋವ ದೇವರಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.
Андин Сулайман Абиятарни Пәрвәрдигарға каһин болуштин җуда қилип һайдиди. Шуниң билән Пәрвәрдигарниң Әлиниң җәмәти тоғрилиқ Шилоһда ейтқан сөзи әмәлгә ашурулди.
28 ಆಗ ಈ ಸುದ್ದಿ ಯೋವಾಬನಿಗೆ ಬಂತು. ಏಕೆಂದರೆ ಯೋವಾಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ, ಅದೋನೀಯನ ಹಿಂದೆ ಹೋದನು. ಆದ್ದರಿಂದ ಯೋವಾಬನು ಯೆಹೋವ ದೇವರ ಮಂದಿರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.
Буниң хәвири Йоабқа йәткәндә (чүнки Йоаб Абшаломға әгәшмигән болсиму, Адонияға әгәшкән еди) Йоаб Пәрвәрдигарниң чедириға қечип қурбангаһниң мүңгүзлирини тутти.
29 ಯೋವಾಬನು ಯೆಹೋವ ದೇವರ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಬಳಿಯಲ್ಲಿ ಇದ್ದಾನೆ, ಎಂಬ ಸುದ್ದಿ ಅರಸನಾದ ಸೊಲೊಮೋನನಿಗೆ ತಿಳಿಯಿತು. ಆಗ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನಿಗೆ, “ನೀನು ಹೋಗಿ ಅವನನ್ನು ಕೊಂದುಹಾಕು,” ಎಂದನು.
Сулайман падишаға: «Мана, Йоаб Пәрвәрдигарниң чедириға қечип берип, қурбангаһниң йенида туриду» дегән хәвәр йәткүзүлди. Сулайман Йәһояданиң оғли Бенаяни шу йәргә әвәтип: — Маң, уни өлтүрүвәткин, деди.
30 ಬೆನಾಯನು ಯೆಹೋವ ದೇವರ ಗುಡಾರಕ್ಕೆ ಬಂದು ಯೋವಾಬನಿಗೆ, “ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ,” ಎಂದನು. ಅದಕ್ಕವನು, “ಇಲ್ಲ, ಇಲ್ಲಿಯೇ ಸಾಯುತ್ತೇನೆ,” ಎಂದನು. ಬೆನಾಯನು ಅರಸನ ಬಳಿಗೆ ತಿರುಗಿ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.
Беная Пәрвәрдигарниң чедириға берип униңға: — «Падиша сени буяққа чиқсун!» деди, деди. У: — Яқ, мошу йәрдә өлимән, деди. Беная падишаниң йениға қайтип униңға хәвәр берип: — Йоаб мундақ-мундақ деди, маңа шундақ җавап бәрди, деди.
31 ಅರಸನು ಬೆನಾಯನಿಗೆ, “ಅವನು ಹೇಳಿದ ಪ್ರಕಾರ ಮಾಡು. ಯೋವಾಬನು ನಿನ್ನ ಹಾಗೂ ನನ್ನ ತಂದೆಯ ಮನೆಯವರ ನಿರಪರಾಧ ರಕ್ತವನ್ನು ಚೆಲ್ಲಿದ ದೋಷವನ್ನು ತೊಲಗಿಸುವ ಹಾಗೆ ಅವನನ್ನು ಕೊಂದು, ಅವನ ಶವವನ್ನು ಸಮಾಧಿಮಾಡು.
Падиша униңға: — У өзи дегәндәк қилип, уни чепип өлтүргин вә уни дәпнә қилғин. Шуниң билән Йоаб төккән наһәқ қан мәндин вә атамниң җәмәтидин көтирилип кәткәй.
32 ಆಗ ಯೆಹೋವ ದೇವರು ಅವನ ತಲೆಯ ಮೇಲೆ ಅವನ ರಕ್ತಾಪರಾಧವನ್ನು ಬರಮಾಡುವರು. ಏಕೆಂದರೆ ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಖಡ್ಗದಿಂದ ಕೊಂದನು. ಅವರು ಯಾರೆಂದರೆ, ಇಸ್ರಾಯೇಲಿನ ಸೈನ್ಯಕ್ಕೆ ಅಧಿಪತಿಯೂ ನೇರನ ಮಗನೂ ಆದ ಅಬ್ನೇರನು, ಯೆಹೂದ ಸೈನ್ಯಕ್ಕೆ ಅಧಿಪತಿಯೂ ಯೆತೆರನ ಮಗನೂ ಆದ ಅಮಾಸನು.
Шундақ қилип атам Давут бехәвәр әһвалда у өзидин адил вә есил икки адәмни, йәни Исраилниң қошуниниң сәрдари нәрниң оғли Абнәр билән Йәһуданиң қошуниниң сәрдари Йәтәрниң оғли Амасани қиличлиғини үчүн, Пәрвәрдигар у төккән қанни өз бешиға яндуриду.
33 ಆದ್ದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆಯೂ, ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವುದು. ಆದರೆ ದಾವೀದನ ಮೇಲೆಯೂ, ಅವನ ಸಂತಾನದವರ ಮೇಲೆಯೂ, ಅವನ ಮನೆಯ ಮೇಲೆಯೂ, ಅವನ ಸಿಂಹಾಸನದ ಮೇಲೆಯೂ ಯೆಹೋವ ದೇವರಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವುದು,” ಎಂದನು.
Уларниң қени Йоабниң беши вә нәслиниң бешиға мәңгү янғай; лекин Давут, униң нәсли, җәмәти вә тәхтигә әбәдил-әбәткичә Пәрвәрдигардин тинич-хатирҗәмлик болғай, деди.
34 ಹಾಗೆಯೇ ಯೆಹೋಯಾದಾವನ ಮಗ ಬೆನಾಯನು ಹೋಗಿ ಯೋವಾಬನನ್ನು ಕೊಂದುಹಾಕಿದನು. ಅವನ ಶವಕ್ಕೆ ಮರುಭೂಮಿಯಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು.
Йәһояданиң оғли Беная чиқип уни чепип, өлүмгә мәһкүм қилди. Андин у чөлдики өз өйидә дәпнә қилинди.
35 ಆಗ ಅರಸನು ಯೆಹೋಯಾದಾವನ ಮಗ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಅಬಿಯಾತರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.
Падиша Йәһояданиң оғли Бенаяни униң орниға қошунниң сәрдари қилди; падиша Абиятарниң орниға Задокни каһин қилип тайинлиди.
36 ಆಗ ಅರಸನು ಶಿಮ್ಮಿಯನ್ನು ಕರೆಯಿಸಿ ಅವನಿಗೆ, “ನೀನು ಯೆರೂಸಲೇಮಿನಲ್ಲಿ, ನಿನಗೆ ಮನೆಯನ್ನು ಕಟ್ಟಿಸಿಕೊಂಡು, ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು.
Андин кейин падиша Шимәйни чақирип униңға: — Йерусалимда өзүңгә бир өй селип у йәрдә олтарғин. Башқа һеч йәргә чиқма.
37 ಯಾವ ದಿವಸದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವೆಯೋ, ಆ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ ಎಂದು ಖಂಡಿತ ತಿಳಿದುಕೋ ಮತ್ತು ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವುದು,” ಎಂದನು.
Әгәр сән чиқип Кидрон җилғисидин өтсәң, шуни ениқ билип қойки, шу күндә сән шәксиз өлисән. Сениң қениң өз бешиңға чүшиду, деди.
38 ಶಿಮ್ಮಿ ಅರಸನಿಗೆ, “ನಿಮ್ಮ ಮಾತು ಒಳ್ಳೆಯದು. ಅರಸನಾದ ನನ್ನ ಒಡೆಯನು ಹೇಳಿದ ಪ್ರಕಾರವೇ, ನಿನ್ನ ಸೇವಕನು ಮಾಡುವನು,” ಎಂದನು. ಶಿಮ್ಮಿ ಯೆರೂಸಲೇಮಿನಲ್ಲಿ ಬಹಳ ದಿವಸ ವಾಸವಾಗಿದ್ದನು.
Шимәй падишаға: — Ғоҗамниң сөзи бәрһәқтур. Ғоҗам падиша ейтқандәк қуллири шундақ қилиду, деди. Шуниң билән Шимәй узун вақитқичә Йерусалимда турди.
39 ಮೂರು ವರ್ಷಗಳ ಅಂತ್ಯದಲ್ಲಿ ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್‌ನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆ, “ನಿನ್ನ ಸೇವಕರು ಗತ್‌ನಲ್ಲಿ ಇದ್ದಾರೆ” ಎಂದು ತಿಳಿಸಿದರು.
Үч жилдин кейин шундақ болдики, Шимәйниң қуллиридин иккиси қечип Маакаһниң оғли, Гатниң падишаси Ақишниң қешиға барди. Шимәйгә: — Мана қуллириң Гат шәһиридә туриду, дегән хәвәр йәткүзүлди.
40 ಆದ್ದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ, ತನ್ನ ಸೇವಕರನ್ನು ಹುಡುಕಲು ಗತ್‌ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್‌ನಿಂದ ತನ್ನ ಸೇವಕರನ್ನು ಕರೆದುಕೊಂಡು ಬಂದನು.
Шимәй ешигини тоқуп қуллирини издигили Гатқа, Ақишниң йениға барди. Андин у йенип өз қуллирини Гаттин елип кәлди.
41 ಶಿಮ್ಮಿ ಯೆರೂಸಲೇಮನ್ನು ಬಿಟ್ಟು ಗತ್ ಊರಿಗೆ ಹೋಗಿ, ತಿರುಗಿ ಬಂದಿದ್ದಾನೆಂದು ಸೊಲೊಮೋನನಿಗೆ ತಿಳಿಯಿತು.
Сулайманға: — Шимәй Йерусалимдин Гатқа берип кәлди, дәп хәвәр йәткүзүлди.
42 ಆಗ ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ, “ನೀನು ಯಾವ ದಿವಸದಲ್ಲಿ ಹೊರಟು ಎಲ್ಲಿಗಾದರೂ ಹೋದರೆ, ಅದೇ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ, ಎಂದು ಖಂಡಿತವಾಗಿ ತಿಳಿದುಕೋ, ಎಂಬುದಾಗಿ ನಾನು ನಿನಗೆ ದೃಢವಾಗಿ ಹೇಳಿ, ಯೆಹೋವ ದೇವರ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ಮಾಡಿಸಲಿಲ್ಲವೋ? ನಾನು ಹೇಳಿದ ಮಾತುಒಳ್ಳೆಯದೆಂದು ನೀನು ಹೇಳಲಿಲ್ಲವೋ?
Падиша Шимәйни чақиртип униңға: — Мән сени Пәрвәрдигар билән қәсәм қилдуруп: — Шуни ениқ билип қойки, сән қайси күни чиқип бирәр йәргә барған болсаң, сән шу күнидә шәксиз өлисән, дәп агаһландуруп ейтмиғанмидим? Өзүңму, мән аңлиған сөз бәрһәқ, дегән едиңғу?
43 ನೀನು ಯೆಹೋವ ದೇವರ ಆಣೆಯನ್ನೂ, ನಾನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನೂ ನೀನು ಕೈಗೊಳ್ಳದೆ ಇದ್ದದ್ದೇನು?” ಎಂದನು.
Шундақ болған екән, немишкә өзүң Пәрвәрдигар алдида қилған қәсимиңни бузуп, мән саңа буйруған буйруғумниму тутмидиң? — деди.
44 ಅರಸನು ಶಿಮ್ಮಿಗೆ, “ನೀನು ನನ್ನ ತಂದೆ ದಾವೀದನಿಗೆ ಮಾಡಿದ ಕೇಡನ್ನು ನಿನ್ನ ಹೃದಯವು ತಿಳಿದಿದೆ. ಯೆಹೋವ ದೇವರು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವರು.
Падиша Шимәйгә йәнә: Сән атам Давутқа қилған һәммә рәзилликни убдан билисән, у көңлүңгә аяндур. Мана Пәрвәрдигар рәзиллигиңни өз бешиңға яндуриду.
45 ಆದರೆ ಅರಸನಾದ ಸೊಲೊಮೋನನಿಗೆ ಆಶೀರ್ವಾದವಾಗಲಿ. ದಾವೀದನ ಸಿಂಹಾಸನವು ಯೆಹೋವ ದೇವರ ಮುಂದೆ ಯುಗಯುಗಾಂತರಕ್ಕೂ ಸ್ಥಿರವಾಗಿರುವುದು,” ಎಂದನು.
Лекин Сулайман падиша болса бәрикәтлинип, Давутниң тәхти Пәрвәрдигарниң алдида әбәдил-әбәт мустәһкәм қилиниду, деди.
46 ಆಗ ಅರಸನಾದ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನಿಗೆ ಆಜ್ಞಾಪಿಸಿದ್ದರಿಂದ, ಅವನು ಹೊರಟು ಹೋಗಿ ಶಿಮ್ಮಿಯ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರವಾಯಿತು.
Андин падишаниң буйруғи билән Йәһояданиң оғли Беная чиқип уни чепип өлтүрди. Падишаһлиқ болса Сулайманниң қолида мустәһкәм қилинди.

< ಅರಸುಗಳು - ಪ್ರಥಮ ಭಾಗ 2 >