< ಅರಸುಗಳು - ಪ್ರಥಮ ಭಾಗ 20 >

1 ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸರಿದ್ದರು. ಅವನು ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ, ಅದರ ಮೇಲೆ ಯುದ್ಧಮಾಡಿದನು.
וּבֶן־הֲדַד מֶֽלֶךְ־אֲרָם קָבַץ אֶת־כׇּל־חֵילוֹ וּשְׁלֹשִׁים וּשְׁנַיִם מֶלֶךְ אִתּוֹ וְסוּס וָרָכֶב וַיַּעַל וַיָּצַר עַל־שֹׁמְרוֹן וַיִּלָּחֶם בָּֽהּ׃
2 ಅವನು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ದೂತರನ್ನು ಪಟ್ಟಣದೊಳಗೆ ಕಳುಹಿಸಿ, “ಬೆನ್ಹದದನು ಹೀಗೆ ಹೇಳುತ್ತಾನೆ:
וַיִּשְׁלַח מַלְאָכִים אֶל־אַחְאָב מֶֽלֶךְ־יִשְׂרָאֵל הָעִֽירָה׃
3 ‘ನಿನ್ನ ಬೆಳ್ಳಿಯೂ, ನಿನ್ನ ಬಂಗಾರವೂ ನನ್ನವು. ನಿನ್ನ ಪತ್ನಿಯರೂ, ನಿನ್ನ ಮಕ್ಕಳೆಲ್ಲರೂ ನನ್ನವರು,’” ಎಂಬುದಾಗಿ ಅವನಿಗೆ ಹೇಳಿದನು.
וַיֹּאמֶר לוֹ כֹּה אָמַר בֶּן־הֲדַד כַּסְפְּךָ וּֽזְהָבְךָ לִי־הוּא וְנָשֶׁיךָ וּבָנֶיךָ הַטּוֹבִים לִי־הֵֽם׃
4 ಇಸ್ರಾಯೇಲಿನ ಅರಸನು ಉತ್ತರವಾಗಿ, “ಅರಸನಾದ ನನ್ನ ಒಡೆಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು, ನನಗುಂಟಾದ ಸಮಸ್ತವೂ ನಿನ್ನದು,” ಎಂದನು.
וַיַּעַן מֶֽלֶךְ־יִשְׂרָאֵל וַיֹּאמֶר כִּדְבָרְךָ אֲדֹנִי הַמֶּלֶךְ לְךָ אֲנִי וְכׇל־אֲשֶׁר־לִֽי׃
5 ಆ ದೂತರು ತಿರುಗಿಬಂದು ಅವನಿಗೆ, “ಬೆನ್ಹದದನು ಹೇಳುವುದೇನೆಂದರೆ, ‘ನಿನ್ನ ಬೆಳ್ಳಿಯನ್ನೂ, ನಿನ್ನ ಬಂಗಾರವನ್ನೂ, ನಿನ್ನ ಸ್ತ್ರೀಯರನ್ನೂ, ನಿನ್ನ ಮಕ್ಕಳನ್ನೂ, ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನಲ್ಲವೇ?
וַיָּשֻׁבוּ הַמַּלְאָכִים וַיֹּאמְרוּ כֹּה־אָמַר בֶּן־הֲדַד לֵאמֹר כִּֽי־שָׁלַחְתִּי אֵלֶיךָ לֵאמֹר כַּסְפְּךָ וּֽזְהָבְךָ וְנָשֶׁיךָ וּבָנֶיךָ לִי תִתֵּֽן׃
6 ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು. ಅವರು ನಿನ್ನ ಅರಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ, ನಿಮಗೆ ಅಮೂಲ್ಯವಾದುವುಗಳನ್ನೆಲ್ಲಾ ಅವರು ತೆಗೆದುಕೊಂಡು ಹೋಗುವರು,’” ಎಂದನು.
כִּי ׀ אִם־כָּעֵת מָחָר אֶשְׁלַח אֶת־עֲבָדַי אֵלֶיךָ וְחִפְּשׂוּ אֶת־בֵּיתְךָ וְאֵת בָּתֵּי עֲבָדֶיךָ וְהָיָה כׇּל־מַחְמַד עֵינֶיךָ יָשִׂימוּ בְיָדָם וְלָקָֽחוּ׃
7 ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆ, “ಇವನು ಎಂಥಾ ಕೇಡನ್ನು ಹುಡುಕುತ್ತಾನೆ, ಎಂದು ನೋಡಿರಿ. ಏಕೆಂದರೆ ಅವನು ನನ್ನ ಹೆಂಡತಿಯರಿಗೋಸ್ಕರವೂ, ನನ್ನ ಮಕ್ಕಳಿಗೋಸ್ಕರವೂ, ನನ್ನ ಬೆಳ್ಳಿಗೋಸ್ಕರವೂ, ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ, ನಾನು ಕೊಡುವುದಿಲ್ಲವೆಂದು ಅವನಿಗೆ ಹೇಳಲಿಲ್ಲ,” ಎಂದನು.
וַיִּקְרָא מֶֽלֶךְ־יִשְׂרָאֵל לְכׇל־זִקְנֵי הָאָרֶץ וַיֹּאמֶר דְּעוּ־נָא וּרְאוּ כִּי רָעָה זֶה מְבַקֵּשׁ כִּֽי־שָׁלַח אֵלַי לְנָשַׁי וּלְבָנַי וּלְכַסְפִּי וְלִזְהָבִי וְלֹא מָנַעְתִּי מִמֶּֽנּוּ׃
8 ಆಗ ಹಿರಿಯರೂ, ಜನರೂ ಅವನಿಗೆ, “ಅವನ ಮಾತು ಕೇಳದೆ ಒಪ್ಪದಿರು,” ಎಂದರು.
וַיֹּאמְרוּ אֵלָיו כׇּל־הַזְּקֵנִים וְכׇל־הָעָם אַל־תִּשְׁמַע וְלוֹא תֹאבֶֽה׃
9 ಆದ್ದರಿಂದ ಅವನು ಬೆನ್ಹದದನ ದೂತರಿಗೆ, “ನೀವು ಅರಸನಾದ ನನ್ನ ಒಡೆಯನಿಗೆ ಹೇಳಬೇಕಾದದ್ದೇನೆಂದರೆ, ‘ನೀನು ಮೊದಲು ಹೇಳಿದ ಸಮಸ್ತವನ್ನೂ ಮಾಡುವೆನು. ಆದರೆ ಈ ಸಾರಿ ಹೇಳಿದ ಕಾರ್ಯವನ್ನು ನಾನು ಮಾಡಲಾರೆ,’ ಎಂದು ಹೇಳಿರಿ,” ಎಂದನು. ದೂತರು ಹೋಗಿ ಈ ಮಾತುಗಳನ್ನು ಬೆನ್ಹದದನಿಗೆ ಹೇಳಿದರು.
וַיֹּאמֶר לְמַלְאֲכֵי בֶן־הֲדַד אִמְרוּ לַאדֹנִי הַמֶּלֶךְ כֹּל אֲשֶׁר־שָׁלַחְתָּ אֶל־עַבְדְּךָ בָרִֽאשֹׁנָה אֶעֱשֶׂה וְהַדָּבָר הַזֶּה לֹא אוּכַל לַעֲשׂוֹת וַיֵּֽלְכוּ הַמַּלְאָכִים וַיְשִׁבֻהוּ דָּבָֽר׃
10 ಆಗ ಬೆನ್ಹದದನು ದೂತರನ್ನು ಕಳುಹಿಸಿ ಅಹಾಬನಿಗೆ, “ನನ್ನ ಸೈನಿಕರು ಸಮಾರ್ಯದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಬಿಟ್ಟರೆ ದೇವರುಗಳು ನನಗೆ ಇದಕ್ಕಿಂತ ಹೆಚ್ಚಾಗಿ ನನಗೆ ಕೆಟ್ಟದ್ದನ್ನು ಮಾಡಲಿ,” ಎಂದು ಅವನಿಗೆ ಇನ್ನೊಂದು ಸುದ್ದಿಯನ್ನು ಹೇಳಿ ಕಳುಹಿಸಿದನು.
וַיִּשְׁלַח אֵלָיו בֶּן־הֲדַד וַיֹּאמֶר כֹּה־יַעֲשׂוּן לִי אֱלֹהִים וְכֹה יוֹסִפוּ אִם־יִשְׂפֹּק עֲפַר שֹׁמְרוֹן לִשְׁעָלִים לְכׇל־הָעָם אֲשֶׁר בְּרַגְלָֽי׃
11 ಅದಕ್ಕೆ ಇಸ್ರಾಯೇಲಿನ ಅರಸನು ಉತ್ತರವಾಗಿ, “ಅವನಿಗೆ ಹೇಳು, ‘ತನ್ನ ಆಯುಧಗಳನ್ನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೊಗಳಿಕೊಳ್ಳದೆ ಇರಲಿ’” ಎಂದನು.
וַיַּעַן מֶֽלֶךְ־יִשְׂרָאֵל וַיֹּאמֶר דַּבְּרוּ אַל־יִתְהַלֵּל חֹגֵר כִּמְפַתֵּֽחַ׃
12 ಬೆನ್ಹದದನೂ, ಅವನ ಸಂಗಡ ಡೇರೆಗಳಲ್ಲಿ ಕುಡಿಯುತ್ತಿದ್ದ ಅರಸರು, ಈ ವಾರ್ತೆಯನ್ನು ಕೇಳುತ್ತಲೇ, ಅವನು ತನ್ನ ಸೇವಕರಿಗೆ, “ಆಕ್ರಮಣ ಮಾಡುವುದಕ್ಕೆ ಸಿದ್ಧಮಾಡಿರಿ,” ಎಂದನು. ಹಾಗೆಯೇ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು.
וַיְהִי כִּשְׁמֹעַ אֶת־הַדָּבָר הַזֶּה וְהוּא שֹׁתֶה הוּא וְהַמְּלָכִים בַּסֻּכּוֹת וַיֹּאמֶר אֶל־עֲבָדָיו שִׂימוּ וַיָּשִׂימוּ עַל־הָעִֽיר׃
13 ಆಗ, ಒಬ್ಬ ಪ್ರವಾದಿಯು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ಬಂದು, “ಈ ದೊಡ್ಡ ಗುಂಪನ್ನು ನೋಡಿದೆಯೋ? ನಾನೇ ಯೆಹೋವ ದೇವರೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.
וְהִנֵּה ׀ נָבִיא אֶחָד נִגַּשׁ אֶל־אַחְאָב מֶלֶךְ־יִשְׂרָאֵל וַיֹּאמֶר כֹּה אָמַר יְהֹוָה הֲֽרָאִיתָ אֵת כׇּל־הֶהָמוֹן הַגָּדוֹל הַזֶּה הִנְנִי נֹתְנוֹ בְיָֽדְךָ הַיּוֹם וְיָדַעְתָּ כִּֽי־אֲנִי יְהֹוָֽה׃
14 ಅಹಾಬನು, “ಯಾರ ಕೈಯಿಂದ?” ಎಂದನು. ಅದಕ್ಕವನು, “‘ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳಿಂದಲೇ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಆಗ ಅಹಾಬನು, “ಯುದ್ಧ ಪ್ರಾರಂಭ ಮಾಡುವವನು ಯಾರು?” ಎಂದನು. ಅದಕ್ಕೆ ಆ ಪ್ರವಾದಿಯು, “ನೀನೇ,” ಎಂದನು.
וַיֹּאמֶר אַחְאָב בְּמִי וַיֹּאמֶר כֹּה־אָמַר יְהֹוָה בְּנַעֲרֵי שָׂרֵי הַמְּדִינוֹת וַיֹּאמֶר מִי־יֶאְסֹר הַמִּלְחָמָה וַיֹּאמֶר אָֽתָּה׃
15 ಅಹಾಬನು ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳನ್ನು ಲೆಕ್ಕಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಿದ್ದರು. ಅವರ ತರುವಾಯ ಇಸ್ರಾಯೇಲರಾದ ಸೈನಿಕರನ್ನು ಲೆಕ್ಕಮಾಡಿದಾಗ ಏಳು ಸಾವಿರ ಜನರಿದ್ದರು.
וַיִּפְקֹד אֶֽת־נַעֲרֵי שָׂרֵי הַמְּדִינוֹת וַיִּהְיוּ מָאתַיִם שְׁנַיִם וּשְׁלֹשִׁים וְאַחֲרֵיהֶם פָּקַד אֶת־כׇּל־הָעָם כׇּל־בְּנֵי יִשְׂרָאֵל שִׁבְעַת אֲלָפִֽים׃
16 ಅವರು ಮಧ್ಯಾಹ್ನದಲ್ಲಿ ಹೊರಟರು. ಆದರೆ ಬೆನ್ಹದದನೂ, ಅವರ ಸಹಾಯಕರಾದ ಮೂವತ್ತೆರಡು ಮಂದಿ ಅರಸರೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.
וַיֵּֽצְאוּ בַּֽצׇּהֳרָיִם וּבֶן־הֲדַד שֹׁתֶה שִׁכּוֹר בַּסֻּכּוֹת הוּא וְהַמְּלָכִים שְׁלֹשִֽׁים־וּשְׁנַיִם מֶלֶךְ עֹזֵר אֹתֽוֹ׃
17 ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳ ಮೊದಲು ಸೈನ್ಯವಾಗಿ ಬಂದರು. ಬೆನ್ಹದದನು ಪತ್ತೆದಾರರನ್ನು ಕಳುಹಿಸಿದನು. “ಅವರು ತಿರುಗಿಬಂದು ಸಮಾರ್ಯದಿಂದ ಸೈನಿಕರು ಬಂದಿದ್ದಾರೆ,” ಎಂದು ಅವನಿಗೆ ತಿಳಿಸಿದರು.
וַיֵּצְאוּ נַעֲרֵי שָׂרֵי הַמְּדִינוֹת בָּרִֽאשֹׁנָה וַיִּשְׁלַח בֶּן־הֲדַד וַיַּגִּידוּ לוֹ לֵאמֹר אֲנָשִׁים יָצְאוּ מִשֹּׁמְרֽוֹן׃
18 ಆಗ ಅವರು, “ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ, ಅವರನ್ನು ಜೀವಿತರಾಗಿ ಹಿಡಿಯಿರಿ. ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ, ಅವರನ್ನು ಜೀವಿತರಾಗಿ ಹಿಡಿಯಿರಿ,” ಎಂದನು.
וַיֹּאמֶר אִם־לְשָׁלוֹם יָצָאוּ תִּפְשׂוּם חַיִּים וְאִם לְמִלְחָמָה יָצָאוּ חַיִּים תִּפְשֽׂוּם׃
19 ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳೂ, ಅವರ ಹಿಂದೆ ಬಂದ ಸೈನಿಕರೂ, ಪಟ್ಟಣದಿಂದ ಹೊರಗೆ ಬಂದಾಗ,
וְאֵלֶּה יָצְאוּ מִן־הָעִיר נַעֲרֵי שָׂרֵי הַמְּדִינוֹת וְהַחַיִל אֲשֶׁר אַחֲרֵיהֶֽם׃
20 ಪ್ರತಿ ಸೈನಿಕನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದರು. ಆಗ ಅರಾಮ್ಯರು ಓಡಿಹೋದರು. ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.
וַיַּכּוּ אִישׁ אִישׁוֹ וַיָּנֻסֽוּ אֲרָם וַֽיִּרְדְּפֵם יִשְׂרָאֵל וַיִּמָּלֵט בֶּן־הֲדַד מֶלֶךְ אֲרָם עַל־סוּס וּפָרָשִֽׁים׃
21 ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ, ರಥಗಳನ್ನೂ ಹೊಡೆದು, ಅರಾಮ್ಯರನ್ನು ಮಹಾ ಸಂಹಾರದಿಂದ ನಾಶಮಾಡಿಬಿಟ್ಟನು.
וַיֵּצֵא מֶלֶךְ יִשְׂרָאֵל וַיַּךְ אֶת־הַסּוּס וְאֶת־הָרָכֶב וְהִכָּה בַאֲרָם מַכָּה גְדוֹלָֽה׃
22 ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಬಲಗೊಂಡು, ನೀನು ಏನು ಮಾಡಬೇಕೆಂಬುವುದನ್ನು ಆಲೋಚಿಸು. ಏಕೆಂದರೆ ವಸಂತ ಋತುವಿನಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು,” ಎಂದನು.
וַיִּגַּשׁ הַנָּבִיא אֶל־מֶלֶךְ יִשְׂרָאֵל וַיֹּאמֶר לוֹ לֵךְ הִתְחַזַּק וְדַע וּרְאֵה אֵת אֲשֶׁר־תַּעֲשֶׂה כִּי לִתְשׁוּבַת הַשָּׁנָה מֶלֶךְ אֲרָם עֹלֶה עָלֶֽיךָ׃
23 ಆದರೆ ಅರಾಮಿನ ಅರಸನ ಸೇವಕರು ಅವನಿಗೆ, “ಅವರ ದೇವರುಗಳು, ಪರ್ವತಗಳ ದೇವರುಗಳು, ಆದ್ದರಿಂದ ಅವರು ನಮ್ಮನ್ನು ಜಯಿಸಿದರು. ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧಮಾಡಿದರೆ, ನಿಶ್ಚಯವಾಗಿ ನಾವು ಅವರಿಗಿಂತ ಬಲಶಾಲಿಗಳಾಗಿರುವೆವು.
וְעַבְדֵי מֶלֶךְ־אֲרָם אָמְרוּ אֵלָיו אֱלֹהֵי הָרִים אֱלֹהֵיהֶם עַל־כֵּן חָזְקוּ מִמֶּנּוּ וְאוּלָם נִלָּחֵם אִתָּם בַּמִּישׁוֹר אִם־לֹא נֶחֱזַק מֵהֶֽם׃
24 ಇದಲ್ಲದೆ ನೀನು ಮಾಡಬೇಕಾದದ್ದೇನೆಂದರೆ, ಅರಸರನ್ನು ತೆಗೆದುಹಾಕಿ ಅವರಿಗೆ ಪ್ರತಿಯಾಗಿ ಅಧಿಪತಿಗಳನ್ನು ನೇಮಿಸಬೇಕು.
וְאֶת־הַדָּבָר הַזֶּה עֲשֵׂה הָסֵר הַמְּלָכִים אִישׁ מִמְּקֹמוֹ וְשִׂים פַּחוֹת תַּחְתֵּיהֶֽם׃
25 ನಂತರ ನೀನು ಕಳೆದುಕೊಂಡ ಸೈನ್ಯದ ಹಾಗೆ ಕುದುರೆಗೆ ಕುದುರೆಯೂ, ರಥಕ್ಕೆ ರಥವೂ ಬೇರೆ ಸೈನ್ಯವನ್ನು ಲೆಕ್ಕಿಸು. ಆಗ ನಾವು ಸಮಭೂಮಿಯಲ್ಲಿ ಅವರ ಸಂಗಡ ಯುದ್ಧ ಮಾಡೋಣ. ನಿಶ್ಚಯವಾಗಿ ನಾವು ಅವರಿಗಿಂತ ಬಲಶಾಲಿಗಳಾಗುವೆವು,” ಎಂದರು. ಅವನು ಅವರ ಮಾತನ್ನು ಕೇಳಿ ಹಾಗೆಯೇ ಮಾಡಿದನು.
וְאַתָּה תִֽמְנֶֽה־לְךָ ׀ חַיִל כַּחַיִל הַנֹּפֵל מֵאוֹתָךְ וְסוּס כַּסּוּס ׀ וְרֶכֶב כָּרֶכֶב וְנִֽלָּחֲמָה אוֹתָם בַּמִּישׁוֹר אִם־לֹא נֶחֱזַק מֵהֶם וַיִּשְׁמַע לְקֹלָם וַיַּעַשׂ כֵּֽן׃
26 ವಸಂತ ಕಾಲದಲ್ಲಿ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ, ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಅಫೇಕಿಗೆ ಹೋದನು.
וַֽיְהִי לִתְשׁוּבַת הַשָּׁנָה וַיִּפְקֹד בֶּן־הֲדַד אֶת־אֲרָם וַיַּעַל אֲפֵקָה לַמִּלְחָמָה עִם־יִשְׂרָאֵֽל׃
27 ಆದ್ದರಿಂದ ಇಸ್ರಾಯೇಲರು ಲೆಕ್ಕ ಮಾಡಿ ಆಹಾರವನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲರು ಅವರಿಗೆದುರಾಗಿ ದಂಡಿಳಿದಿರುವಾಗ, ಅವರು ಆಡುಮರಿಗಳ ಎರಡು ಮಂದೆಗಳ ಹಾಗಿದ್ದರು. ಆದರೆ ಅರಾಮ್ಯರು ಮೈದಾನದಲ್ಲಿ ಸಂಪೂರ್ಣವಾಗಿ ಆವರಿಸಿದ್ದರು.
וּבְנֵי יִשְׂרָאֵל הׇתְפָּקְדוּ וְכׇלְכְּלוּ וַיֵּלְכוּ לִקְרָאתָם וַיַּחֲנוּ בְנֵי־יִשְׂרָאֵל נֶגְדָּם כִּשְׁנֵי חֲשִׂפֵי עִזִּים וַאֲרָם מִלְאוּ אֶת־הָאָֽרֶץ׃
28 ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾಯೇಲಿನ ಅರಸನಿಗೆ, “ಯೆಹೋವ ದೇವರು ತಗ್ಗುಗಳ ದೇವರಾಗಿರದೆ ಪರ್ವತಗಳ ದೇವರಾಗಿದ್ದನೆಂಬುದಾಗಿ ಅರಾಮ್ಯರು ಹೇಳಿದ್ದರಿಂದ, ‘ನಾನು ಯೆಹೋವ ದೇವರಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.
וַיִּגַּשׁ אִישׁ הָאֱלֹהִים וַיֹּאמֶר אֶל־מֶלֶךְ יִשְׂרָאֵל וַיֹּאמֶר כֹּֽה־אָמַר יְהֹוָה יַעַן אֲשֶׁר אָמְרוּ אֲרָם אֱלֹהֵי הָרִים יְהֹוָה וְלֹֽא־אֱלֹהֵי עֲמָקִים הוּא וְנָתַתִּי אֶת־כׇּל־הֶהָמוֹן הַגָּדוֹל הַזֶּה בְּיָדֶךָ וִידַעְתֶּם כִּֽי־אֲנִי יְהֹוָֽה׃
29 ಏಳು ದಿವಸ ಎರಡು ಸೈನ್ಯಗಳೂ ಎದುರುಬದುರಾಗಿ ದಂಡಿಳಿದಿದ್ದರು. ಆದರೆ ಏಳನೆಯ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ, ಇಸ್ರಾಯೇಲರು ಅರಾಮ್ಯರಲ್ಲಿ ಲಕ್ಷಮಂದಿ ಕಾಲಾಳುಗಳನ್ನು ಒಂದೇ ದಿವಸದಲ್ಲಿ ಸಂಹರಿಸಿದರು.
וַֽיַּחֲנוּ אֵלֶּה נֹכַח־אֵלֶּה שִׁבְעַת יָמִים וַיְהִי ׀ בַּיּוֹם הַשְּׁבִיעִי וַתִּקְרַב הַמִּלְחָמָה וַיַּכּוּ בְנֵי־יִשְׂרָאֵל אֶת־אֲרָם מֵאָה־אֶלֶף רַגְלִי בְּיוֹם אֶחָֽד׃
30 ಮಿಕ್ಕಾದವರು ಅಫೇಕೆಂಬ ಪಟ್ಟಣದೊಳಗೆ ಓಡಿಹೋದರು. ಅಲ್ಲಿ ಒಂದು ಗೋಡೆ ಉಳಿದುಕೊಂಡವರಲ್ಲಿ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿದ್ದಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
וַיָּנֻסוּ הַנּוֹתָרִים ׀ אֲפֵקָה אֶל־הָעִיר וַתִּפֹּל הַחוֹמָה עַל־עֶשְׂרִים וְשִׁבְעָה אֶלֶף אִישׁ הַנּוֹתָרִים וּבֶן־הֲדַד נָס וַיָּבֹא אֶל־הָעִיר חֶדֶר בְּחָֽדֶר׃
31 ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲಿನ ಮನೆಯ ಅರಸರು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿಯನ್ನು ಸೊಂಟಕ್ಕೆ ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ. ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು,” ಎಂದರು.
וַיֹּאמְרוּ אֵלָיו עֲבָדָיו הִנֵּה־נָא שָׁמַעְנוּ כִּי מַלְכֵי בֵּית יִשְׂרָאֵל כִּֽי־מַלְכֵי חֶסֶד הֵם נָשִׂימָה נָּא שַׂקִּים בְּמׇתְנֵינוּ וַחֲבָלִים בְּרֹאשֵׁנוּ וְנֵצֵא אֶל־מֶלֶךְ יִשְׂרָאֵל אוּלַי יְחַיֶּה אֶת־נַפְשֶֽׁךָ׃
32 ಹಾಗೆಯೇ ಅವರು ಗೋಣಿಯನ್ನು ತಮ್ಮ ನಡುವುಗಳಿಗೆ ಕಟ್ಟಿಕೊಂಡು, ಹಗ್ಗಗಳನ್ನು ತಮ್ಮ ತಲೆಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು, “ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ,” ಎಂದರು. ಅದಕ್ಕೆ ಅರಸನು, “ಅವನು ಇನ್ನೂ ಬದುಕಿದ್ದಾನೋ? ಅವನು ನನ್ನ ಸಹೋದರನು,” ಎಂದನು.
וַיַּחְגְּרוּ שַׂקִּים בְּמׇתְנֵיהֶם וַֽחֲבָלִים בְּרָאשֵׁיהֶם וַיָּבֹאוּ אֶל־מֶלֶךְ יִשְׂרָאֵל וַיֹּאמְרוּ עַבְדְּךָ בֶן־הֲדַד אָמַר תְּחִי־נָא נַפְשִׁי וַיֹּאמֶר הַעוֹדֶנּוּ חַי אָחִי הֽוּא׃
33 ಆದರೆ ಆ ಮನುಷ್ಯರು ಈ ಮಾತನ್ನು ಶುಭಸೂಚನೆಯಾಗಿ ನೆನಸಿ, ಅವನ ಮಾತಿಗೆ ಉತ್ತರವಾಗಿ, “ನಿನ್ನ ಸಹೋದರನಾದ ಬೆನ್ಹದದನು ಇದ್ದಾನೆ,” ಎಂದು ಹೇಳಿದರು. ಆಗ ಅಹಾಬನು, “ನೀವು ಹೋಗಿ ಅವನನ್ನು ಕರೆದುಕೊಂಡು ಬನ್ನಿರಿ,” ಎಂದನು. ಬೆನ್ಹದದನು ಅವನ ಬಳಿಗೆ ಹೊರಟುಬಂದಾಗ ಅಹಾಬನು ಅವನನ್ನು ರಥದಲ್ಲಿ ಕುಳ್ಳಿರಿಸಿಕೊಂಡನು.
וְהָאֲנָשִׁים יְנַחֲשׁוּ וַֽיְמַהֲרוּ וַיַּחְלְטוּ הֲמִמֶּנּוּ וַיֹּאמְרוּ אָחִיךָ בֶן־הֲדַד וַיֹּאמֶר בֹּאוּ קָחֻהוּ וַיֵּצֵא אֵלָיו בֶּן־הֲדַד וַֽיַּעֲלֵהוּ עַל־הַמֶּרְכָּבָֽה׃
34 ಆಗ ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣಗಳನ್ನು ತಿರುಗಿಕೊಡುತ್ತೇನೆ. ನನ್ನ ತಂದೆ ಸಮಾರ್ಯದಲ್ಲಿ ಮಾಡಿದ ಹಾಗೆಯೇ, ದಮಸ್ಕದಲ್ಲಿ ನೀನು ನಿನಗಾಗಿ ಬೀದಿಗಳನ್ನು ಮಾಡಿಸಬೇಕು,” ಎಂದನು. ಅದಕ್ಕೆ ಅಹಾಬನು, “ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳುಹಿಸಿಬಿಡುತ್ತೇನೆ,” ಎಂದನು. ಹೀಗೆಯೇ ಅಹಾಬನು ಬೆನ್ಹದದನ ಸಂಗಡ ಒಡಂಬಡಿಕೆಯನ್ನು ಮಾಡಿ, ಅವನನ್ನು ಕಳುಹಿಸಿಬಿಟ್ಟನು.
וַיֹּאמֶר אֵלָיו הֶעָרִים אֲשֶׁר־לָֽקַח־אָבִי מֵאֵת אָבִיךָ אָשִׁיב וְחֻצוֹת תָּשִׂים לְךָ בְדַמֶּשֶׂק כַּֽאֲשֶׁר־שָׂם אָבִי בְּשֹׁמְרוֹן וַאֲנִי בַּבְּרִית אֲשַׁלְּחֶךָּ וַיִּכְרׇת־לוֹ בְרִית וַֽיְשַׁלְּחֵֽהוּ׃
35 ಆದರೆ ಪ್ರವಾದಿಗಳ ಮಂಡಲಿಯಲ್ಲಿ ಒಬ್ಬನು ಯೆಹೋವ ದೇವರ ಮಾತಿನಿಂದ ತನ್ನ ಜೊತೆಗಾರನಿಗೆ, “ನೀನು ನಿನ್ನ ಆಯುಧದಿಂದ ನನ್ನನ್ನು ಹೊಡೆ,” ಎಂದನು. ಆದರೆ ಆ ಜೊತೆಗಾರನನ್ನು ಹೊಡೆಯಲೊಲ್ಲದೆ ಇದ್ದನು.
וְאִישׁ אֶחָד מִבְּנֵי הַנְּבִיאִים אָמַר אֶל־רֵעֵהוּ בִּדְבַר יְהֹוָה הַכֵּינִי נָא וַיְמָאֵן הָאִישׁ לְהַכֹּתֽוֹ׃
36 ಆಗ ಪ್ರವಾದಿಯು ಇವನಿಗೆ, “ನೀನು ಯೆಹೋವ ದೇವರ ಮಾತನ್ನು ಕೇಳದೆ ಹೋದದ್ದರಿಂದ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲುವುದು,” ಎಂದನು. ಅವನು ಪ್ರವಾದಿಯನ್ನು ಬಿಟ್ಟು ಹೋದಾಗಲೇ ಸಿಂಹವು ಅವನನ್ನು ಕಂಡು ಕೊಂದುಹಾಕಿತು.
וַיֹּאמֶר לוֹ יַעַן אֲשֶׁר לֹא־שָׁמַעְתָּ בְּקוֹל יְהֹוָה הִנְּךָ הוֹלֵךְ מֵֽאִתִּי וְהִכְּךָ הָאַרְיֵה וַיֵּלֶךְ מֵֽאֶצְלוֹ וַיִּמְצָאֵהוּ הָאַרְיֵה וַיַּכֵּֽהוּ׃
37 ಪ್ರವಾದಿಯು ಮತ್ತೊಬ್ಬನನ್ನು ಕಂಡುಕೊಂಡು, “ದಯಮಾಡಿ, ನನ್ನನ್ನು ಹೊಡೆ,” ಎಂದನು. ಆ ಮನುಷ್ಯನು ಅವನನ್ನು ಗಾಯವಾಗುವಷ್ಟು ಹೊಡೆದನು.
וַיִּמְצָא אִישׁ אַחֵר וַיֹּאמֶר הַכֵּינִי נָא וַיַּכֵּהוּ הָאִישׁ הַכֵּה וּפָצֹֽעַ׃
38 ಆಗ ಪ್ರವಾದಿಯು ಹೋಗಿ ತನ್ನ ಕಣ್ಣುಗಳನ್ನು ಮುಂಡಾಸದಿಂದ ಮುಚ್ಚಿಕೊಂಡು ತನ್ನನ್ನು ಮರೆಮಾಡಿಕೊಂಡು, ಅರಸನಾದ ಅಹಾಬನಿಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು.
וַיֵּלֶךְ הַנָּבִיא וַיַּעֲמֹד לַמֶּלֶךְ עַל־הַדָּרֶךְ וַיִּתְחַפֵּשׂ בָּאֲפֵר עַל־עֵינָֽיו׃
39 ಅರಸನು ಹಾದು ಹೋಗುತ್ತಿರುವಾಗ, ಪ್ರವಾದಿಯು ಅರಸನಿಗೆ ಕೂಗಿ ಹೇಳಿದ್ದೇನೆಂದರೆ, “ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ಸೆರೆಯವನನ್ನು ನನ್ನ ಬಳಿಗೆ ಹಿಡಿದುಕೊಂಡು ಬಂದು, ‘ಈ ಮನುಷ್ಯನನ್ನು ಕಾಯಿ. ಇವನು ತಪ್ಪಿಸಿಕೊಂಡುಹೋದರೆ ನಿನ್ನ ಪ್ರಾಣವು ಇವನ ಪ್ರಾಣಕ್ಕೆ ಬದಲಾಗಿರುವುದು. ಇಲ್ಲವೆ ನೀನು ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಡಬೇಕು,’ ಎಂದನು.
וַיְהִי הַמֶּלֶךְ עֹבֵר וְהוּא צָעַק אֶל־הַמֶּלֶךְ וַיֹּאמֶר עַבְדְּךָ ׀ יָצָא בְקֶרֶב־הַמִּלְחָמָה וְהִנֵּֽה־אִישׁ סָר וַיָּבֵא אֵלַי אִישׁ וַיֹּאמֶר שְׁמֹר אֶת־הָאִישׁ הַזֶּה אִם־הִפָּקֵד יִפָּקֵד וְהָיְתָה נַפְשְׁךָ תַּחַת נַפְשׁוֹ אוֹ כִכַּר־כֶּסֶף תִּשְׁקֽוֹל׃
40 ಆದರೆ ನಿನ್ನ ಸೇವಕನು ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ತಪ್ಪಿಸಿಕೊಂಡುಹೋದನು,” ಎಂದನು. ಇಸ್ರಾಯೇಲಿನ ಅರಸನು ಅವನಿಗೆ, “ನಿನ್ನ ತೀರ್ಪಿನ ಹಾಗೆಯೇ ಆಗಲಿ, ನೀನು ಸರಿಯಾಗಿ ನಿರ್ಣಯಿಸಿದಿ,” ಎಂದನು.
וַיְהִי עַבְדְּךָ עֹשֵׂה הֵנָּה וָהֵנָּה וְהוּא אֵינֶנּוּ וַיֹּאמֶר אֵלָיו מֶֽלֶךְ־יִשְׂרָאֵל כֵּן מִשְׁפָּטֶךָ אַתָּה חָרָֽצְתָּ׃
41 ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಮುಂಡಾಸವನ್ನು ತೆಗೆದು ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳಿದುಕೊಂಡನು.
וַיְמַהֵר וַיָּסַר אֶת־הָאֲפֵר (מעל) [מֵעֲלֵי] עֵינָיו וַיַּכֵּר אֹתוֹ מֶלֶךְ יִשְׂרָאֵל כִּי מֵהַנְּבִיאִים הֽוּא׃
42 ಆಗ ಪ್ರವಾದಿಯು ಅಹಾಬನಿಗೆ, “ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಪೂರ್ಣ ನಾಶಕ್ಕೆ ಒಪ್ಪಿಸಿದ ಮನುಷ್ಯನನ್ನು ನೀನು ಬಿಟ್ಟುಬಿಟ್ಟ ಕಾರಣ, ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣ ಹೋಗುವುದು, ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು,’” ಎಂದನು.
וַיֹּאמֶר אֵלָיו כֹּה אָמַר יְהֹוָה יַעַן שִׁלַּחְתָּ אֶת־אִישׁ־חֶרְמִי מִיָּד וְהָיְתָה נַפְשְׁךָ תַּחַת נַפְשׁוֹ וְעַמְּךָ תַּחַת עַמּֽוֹ׃
43 ಆಗ ಇಸ್ರಾಯೇಲಿನ ಅರಸನು ಬೇಸರದಿಂದಲೂ, ಕೋಪದಿಂದಲೂ ತನ್ನ ಅರಮನೆಗೆ ಹೋಗಲು ಹೊರಟು ಸಮಾರ್ಯಕ್ಕೆ ಬಂದನು.
וַיֵּלֶךְ מֶלֶךְ־יִשְׂרָאֵל עַל־בֵּיתוֹ סַר וְזָעֵף וַיָּבֹא שֹֽׁמְרֽוֹנָה׃

< ಅರಸುಗಳು - ಪ್ರಥಮ ಭಾಗ 20 >