< ಅರಸುಗಳು - ಪ್ರಥಮ ಭಾಗ 3 >

1 ಸೊಲೊಮೋನನು ಈಜಿಪ್ಟಿನ ಅರಸನಾದ ಫರೋಹನ ಸಂಗಡ ಬಂಧುತ್ವ ಮಾಡಿ, ಫರೋಹನ ಮಗಳನ್ನು ಮದುವೆಮಾಡಿಕೊಂಡನು. ಅವನು ತನ್ನ ಮನೆಯನ್ನೂ, ಯೆಹೋವ ದೇವರ ಆಲಯವನ್ನೂ, ಯೆರೂಸಲೇಮಿನ ಗೋಡೆಯನ್ನೂ, ಸುತ್ತಲೂ ಕಟ್ಟಿ ತೀರಿಸುವ ಮಟ್ಟಿಗೂ ಅವಳನ್ನು ದಾವೀದನ ಪಟ್ಟಣದಲ್ಲಿ ತಂದು ಇಟ್ಟನು.
सोलोमनले विवाहद्वारा मिश्रका राजा फारोसित मैत्रीपूर्ण सम्बन्ध गाँसे । तिनले फारोकी छोरीसित विवाह गरे, र तिनले आफ्नै महल, परमप्रभुको मन्दिरसाथै यरूशलेमको पर्खाल निर्माण गरेपछि उनलाई दाऊदको सहरमा ल्याए ।
2 ಆ ಕಾಲದವರೆಗೂ ಯೆಹೋವ ದೇವರ ಹೆಸರಿಗಾಗಿ ಆಲಯ ಇರಲಿಲ್ಲ. ಆದುದರಿಂದ, ಜನರು ಎತ್ತರದ ಸ್ಥಳಗಳಲ್ಲಿ ಬಲಿ ಅರ್ಪಿಸುತ್ತಿದ್ದರು.
परमप्रभुको नाउँमा कुनै पनि घर निर्माण नभइसकेकोले मानिसहरूले उच्च स्थानहरूमा बलिदान चढाउँदै थिए ।
3 ಸೊಲೊಮೋನನು ಯೆಹೋವ ದೇವರನ್ನು ಪ್ರೀತಿಸಿ, ತನ್ನ ತಂದೆ ದಾವೀದನ ಕಟ್ಟಳೆಯಲ್ಲಿ ನಡೆಯುತ್ತಾ ಇದ್ದನು. ಆದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ, ಧೂಪವನ್ನೂ ಅರ್ಪಿಸುತ್ತಾ ಇದ್ದನು.
आफ्ना पिता दाऊदका विधिविधानहरूमा हिँडी सोलोमनले परमप्रभुप्रति आफ्नो प्रेम देखाए, तर तिनले उच्च स्थानहरूमा बलिदान चढाए र धूप बाले ।
4 ಗಿಬ್ಯೋನಿನ ಅತಿಮುಖ್ಯವಾದ ಉನ್ನತ ಸ್ಥಳಕ್ಕೆ ಅರಸನಾದ ಸೊಲೊಮೋನನು ಬಲಿಗಳನ್ನರ್ಪಿಸಲು ಹೋಗಿ, ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು.
राजा बलिदान चढाउन गिबोनमा गए किनकि त्यो निकै उच्च स्थान थियो । सोलोमनले त्यस वेदीमा एक हजारवटा होमबलि चढाए ।
5 ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿಯಲ್ಲಿ ಸ್ವಪ್ನದೊಳಗೆ ಯೆಹೋವ ದೇವರು ಸೊಲೊಮೋನನಿಗೆ ಕಾಣಿಸಿಕೊಂಡರು. ದೇವರು ಅವನಿಗೆ, “ನಾನು ನಿನಗೆ ಏನು ವರ ಕೊಡಬೇಕು? ಕೇಳಿಕೋ,” ಎಂದರು.
रातमा गिबोनमा परमप्रभु सपनामा सोलोमनकहाँ देखा पर्नुभयो । उहाँले भन्नुभयो, “तँ मबाट के चाहन्छस्, माग् ।”
6 ಅದಕ್ಕೆ ಸೊಲೊಮೋನನು, “ನನ್ನ ತಂದೆಯಾಗಿರುವ ನಿಮ್ಮ ಸೇವಕನಾದ ದಾವೀದನು ನಿಮ್ಮ ಮುಂದೆ ನೀತಿಯಿಂದಲೂ, ಯಥಾರ್ಥವಾದ ಹೃದಯವುಳ್ಳವನಾಗಿಯೂ ನಡೆದದ್ದರಿಂದ, ನೀವು ಅವನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ. ಈ ಮಹಾಕರುಣೆಯನ್ನು ಮುಂದುವರೆಸುತ್ತಾ ಈ ದಿನ ಅವನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಮಗನನ್ನು ಕೊಟ್ಟಿದ್ದೀರಿ.
त्यसैले सोलोमनले भने, “मेरा पिता दाऊद तपाईंको सामु विश्वसनियतामा, धार्मिकतामा र ह्रदयको सोझोपनमा हिँडेकाले तपाईंले आफ्ना दास दाऊदलाई करारको ठुलो विश्वसनीयता देखाउनुभएको छ । तपाईंले उहाँप्रति करारको ठुलो विश्वसनीयता कायमै राख्नुभएको छ, र आज उहाँको सिंहासनमा बस्न एक जना पुत्र दिनुभएको छ ।
7 “ಈಗ ನನ್ನ ದೇವರಾದ ಯೆಹೋವ ದೇವರೇ, ನೀವು ನನ್ನ ತಂದೆ ದಾವೀದನಿಗೆ ಬದಲಾಗಿ ನಿಮ್ಮ ಸೇವಕನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ನಾನು ಚಿಕ್ಕ ಬಾಲಕನಾಗಿದ್ದು, ನನ್ನ ಕರ್ತವ್ಯವನ್ನು ಹೇಗೆ ನಿರ್ವಹಿಸಬೇಕೆಂದು ತಿಳಿದಿಲ್ಲ.
अब हे परमप्रभु मेरा परमेश्वर, म सानो बालक भए तापनि तपाईंले आफ्ना दासलाई मेरा पिता दाऊदको ठाउँमा राजा बनाउनुभएको छ । मलाई मेरो कर्तव्य थाहा छैन ।
8 ಇದಲ್ಲದೆ ನಿಮ್ಮ ಸೇವಕನಾದ ನಾನು ನೀವು ಆಯ್ದುಕೊಂಡಂಥ ಅಸಂಖ್ಯಾತ ಜನರ ಮಧ್ಯದಲ್ಲಿ ಇದ್ದೇನೆ.
तपाईंका दास तपाईंले छान्नुभएका मानिसहरूका बिचमा छन् जो असङ्ख्य र अनगिन्ती छन् ।
9 ಆದ್ದರಿಂದ ನಿಮ್ಮ ಜನರನ್ನು ಪರಿಪಾಲಿಸುವುದಕ್ಕೆ, ಒಳ್ಳೆಯದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ, ನಿಮ್ಮ ಸೇವಕನಿಗೆ ತಿಳುವಳಿಕೆಯುಳ್ಳ ಹೃದಯವನ್ನು ಕೊಡಬೇಕು. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.
त्यसैले मैले खराब र असल छुट्ट्याउन सकूँ भनेर मानिसहरूको न्याय गर्न तपाईंका दासलाई समझशक्तिको ह्रदय दिनुहोस् । किनकि तपाईंको यस महान् जातिलाई न्याय गर्न को सक्षम छ?”
10 ಸೊಲೊಮೋನನು ಕೇಳಿದ ಈ ಮಾತು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದಾಗಿತ್ತು.
सोलोमनको यस बिन्तीले परमप्रभुलाई खुसी तुल्यायो ।
11 ಆದ್ದರಿಂದ ದೇವರು ಅವನಿಗೆ, “ನೀನು ನಿನಗಾಗಿ ದೀರ್ಘಾಯುಷ್ಯ ಅಥವಾ ಸಂಪತ್ತನ್ನು ಕೇಳಲಿಲ್ಲ, ಅಥವಾ ನಿನ್ನ ಶತ್ರುಗಳ ಮರಣವನ್ನು ಕೇಳಿಲ್ಲ, ಆದರೆ ನ್ಯಾಯವನ್ನು ನಿರ್ವಹಿಸುವುದಕ್ಕಾಗಿ ನಿನಗೋಸ್ಕರ ವಿವೇಕವನ್ನು ಕೇಳಿದ್ದರಿಂದ,
त्यसैले परमेश्वरले तिनलाई भन्नुभयो, “तैँले आफ्नो लागि लामो जीवन वा धनसम्पत्ति वा तेरा शत्रुहरूको जीवन नमागी न्याय छुट्ट्याउने समझशक्ति मागेको छस् ।
12 ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ನಿನಗೆ ಜ್ಞಾನವನ್ನೂ, ವಿವೇಚನೆಯುಳ್ಳ ಹೃದಯವನ್ನೂ ಕೊಟ್ಟಿದ್ದೇನೆ. ನಿನಗೆ ಸಮನಾದ ಜ್ಞಾನಿಯು ಈ ಮುಂಚೆಯೂ ಇರಲಿಲ್ಲ, ನಿನ್ನ ತರುವಾಯವೂ ಇರುವುದಿಲ್ಲ.
हेर्, अब तैँले मबाट मागेको सबै कुरा म पुरा गर्ने छु । म तँलाई बुद्धिमानी र समझशक्तिको हृदय दिने छु । यसरी तेरो सामु कोही पनि तँजस्तो हुने छैन, र तँपछि पनि कोही पनि तँजस्तो खडा हुने छैन ।
13 ನೀನು ಕೇಳದ ಐಶ್ವರ್ಯವನ್ನೂ, ಘನವನ್ನೂ ಕೊಟ್ಟಿದ್ದೇನೆ. ಆದ್ದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸುಗಳಲ್ಲಿ ಒಬ್ಬನೂ ಇರುವುದಿಲ್ಲ.
तैँले मबाट नमागेका कुराहरू अर्थात् धनसम्पत्ति र मान पनि मैले तँलाई दिएको छु ताकि राजाहरूका बिचमा तेरो जीवनभर तँजस्तो कोही पनि नहोस् ।
14 ನೀನು, ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು, ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಕೈಗೊಂಡರೆ, ನಿನ್ನ ದಿವಸಗಳನ್ನು ಹೆಚ್ಚಿಸುವೆನು,” ಎಂದರು.
तेरा पिता दाऊदझैँ मेरा विधिविधानहरू र मेरा आज्ञाहरू पालन गर्न तँ मेरो मार्गमा हिँडिस् भने म तेरो आयु लम्ब्याउने छु ।”
15 ತರುವಾಯ ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಸ್ವಪ್ನವೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು, ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ, ತನ್ನ ಸೇವಕರಿಗೆ ಔತಣವನ್ನು ಏರ್ಪಡಿಸಿದನು.
त्यसपछि सोलोमन ब्युँझे, र यो त सपना पो रहेछ! तिनी यरूशलेममा आए, र परमप्रभुको करारको सन्दुकको सामु खडा भए । तिनले होमबलि र मेलबलिहरू चढाए, अनि आफ्ना सबै सेवकहरूलाई भोज दिए ।
16 ಇಬ್ಬರು ವೇಶ್ಯೆಯರು ಅರಸನ ಬಳಿಗೆ ಬಂದು, ಅವನ ಮುಂದೆ ನಿಂತರು.
त्यसपछि दुई जना वेश्या स्त्री राजाकहाँ आई तिनको सामु खडा भए ।
17 ಅವರಲ್ಲಿ ಒಬ್ಬಳು, “ನನ್ನ ಒಡೆಯನೇ, ನಾನೂ, ಈ ಹೆಣ್ಣು ಮಗಳು ಒಂದೇ ಮನೆಯಲ್ಲಿ ವಾಸವಾಗಿದ್ದೇವೆ.
एक जना स्त्रीले भनी, “हे मेरा मालिक, यो स्त्री र म एउटै घरमा बस्छौँ, अनि त्यस घरमा मैले एउटा बालक जन्माएँ ।
18 ನಾನು ಅವಳ ಸಂಗಡ ಮನೆಯಲ್ಲಿರುವಾಗ, ಮಗುವನ್ನು ಹೆತ್ತೆನು. ನಾನು ಹೆತ್ತ ಮೂರು ದಿವಸಗಳ ತರುವಾಯ, ಈ ಹೆಣ್ಣು ಮಗಳು ಕೂಡ ಹೆತ್ತಳು. ನಾವು ಇಬ್ಬರೂ ಕೂಡಿಯೇ ಇದ್ದೆವು. ಮನೆಯಲ್ಲಿ ನಮ್ಮ ಇಬ್ಬರ ಹೊರತು ನಮ್ಮ ಸಂಗಡ ಮತ್ತ್ಯಾರೂ ಇಲ್ಲ.
मैले जन्म दिएको तेस्रो दिनमा यस स्त्रीले बालक जन्माई । हामी सँगसँगै थियौँ । घरमा हामीसित कोही पनि थिएन, तर हामी दुई जना मात्र थियौँ ।
19 “ಆದರೆ ಅವಳು ಕೂಸಿನ ಮೇಲೆ ಮಲಗಿದ್ದರಿಂದ, ರಾತ್ರಿಯಲ್ಲಿ ಆಕೆಯ ಮಗು ಸತ್ತು ಹೋಯಿತು.
त्यसपछि रातमा यो स्त्रीले बालकलाई थिचेर मारिछ ।
20 ಇವಳು ಮಧ್ಯರಾತ್ರಿಯಲ್ಲಿ ಎದ್ದು, ನಿನ್ನ ದಾಸಿಯು ನಿದ್ರೆಗೈಯುತ್ತಿರುವಾಗ, ನನ್ನ ಹತ್ತಿರ ಮಲಗಿದ್ದ ನನ್ನ ಮಗನನ್ನು ತೆಗೆದುಕೊಂಡು, ಅದನ್ನು ತನ್ನ ಎದೆಯ ಮೇಲೆ ಮಲಗಿಸಿಕೊಂಡು, ತನ್ನ ಸತ್ತ ಮಗುವನ್ನು ನನ್ನ ಎದೆಯ ಮೇಲೆ ಮಲಗಿಸಿದಳು.
त्यसैले मध्य रातमा तपाईंकी दासी सुतिरहेको बेलामा त्यो उठी र छेउमा राखिएको मेरो छोरो लिएर काखमा राखिछ अनि मेरो काखमा चाहिँ त्यसको मरेको छोरो राखिछ ।
21 ಉದಯದಲ್ಲಿ ನನ್ನ ಕೂಸಿಗೆ ಹಾಲು ಕುಡಿಸಲು ಎದ್ದಾಗ, ಅದು ಸತ್ತಿತ್ತು! ಉದಯದಲ್ಲಿ ಅದನ್ನು ಕಂಡಾಗ, ಅದು ನಾನು ಹೆತ್ತ ಮಗುವಾಗಿರಲಿಲ್ಲ,” ಎಂದಳು.
म मेरो बच्चालाई दूध खुवाउन बिहान उठ्दा त्यो मरेको रहेछ । बिहान मैले त्यसलाई नियालेर हेर्दा त्यो मैले जन्माएको मेरो छोरो थिएन ।”
22 ಆಗ ಆ ಬೇರೆ ಹೆಣ್ಣು ಮಗಳು, “ಇಲ್ಲ ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು,” ಎಂದಳು. ಮೊದಲನೆಯವಳು, “ಹಾಗಲ್ಲ, ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು,” ಎಂದಳು. ಹೀಗೆ ಅವರು ಅರಸನ ಮುಂದೆ ವಾದಿಸಿದರು.
त्यसपछि अर्की स्त्रीले भनी, “त्यसो होइन । जीवित छोरोचाहिँ मेरो छोरो हो, र मरेकोचाहिँ तेरो छोरो हो ।” पहिलो स्त्रीले भनी, “त्यसो होइन । मरेकोचाहिँ तेरो छोरो हो, र जीवितचाहिँ मेरो छोरो हो ।” यसरी तिनीहरूले राजाको सामु बताए ।
23 ಆಗ ಅರಸನು, “‘ಇವಳು ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು,’ ಎನ್ನುತ್ತಾಳೆ. ಅವಳು, ಹಾಗಲ್ಲ, ‘ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು,’ ಎನ್ನುತ್ತಾಳೆ,” ಎಂದು ಹೇಳಿ,
तब राजाले भने, “तिमीहरूमध्ये एउटीले भन्छौ, 'यो जीवितचाहिँ मेरो छोरो हो, र तेरो छोरोचाहिँ मरेको छ ।' त्यसै गरी, अर्कीले भन्छौ, 'त्यसो होइन । तेरो छोरो मरेको छ, र मेरो छोरोचाहिँ जीवितै छ' ।”
24 ಅರಸನು, “ಖಡ್ಗವನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದನು. ಅವರು ಖಡ್ಗವನ್ನು ಅರಸನ ಬಳಿಗೆ ತಂದರು.
राजाले भने, “मलाई एउटा तरवार ल्याइदेऊ ।” त्यसैले तिनीहरूले राजाको सामु एउटा तरवार ल्याइदिए ।
25 ಆಗ ಅರಸನು, “ಬದುಕಿರುವ ಕೂಸನ್ನು ಎರಡು ತುಂಡಾಗಿ ಕಡಿದು, ಇವಳಿಗೆ ಅರ್ಧ ಪಾಲನ್ನೂ, ಅವಳಿಗೆ ಅರ್ಧ ಪಾಲನ್ನೂ ಕೊಡಿರಿ,” ಎಂದನು.
तब राजाले भने, “जीवित छोरोलाई काटेर दुई भाग लगा अनि आधा भाग एउटी स्त्रीलाई र बाँकी आधा भाग अर्की स्त्रीलाई दिनू ।”
26 ಆಗ ಬದುಕಿರುವ ಕೂಸಿನ ತಾಯಿಯಾಗಿರುವವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ, “ನನ್ನ ಒಡೆಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು, ಕೊಲ್ಲಬೇಡ,” ಎಂದಳು. ಆದರೆ, ಮತ್ತೊಬ್ಬಳು, ಅದು ನನಗಾಗಲಿ ನಿನಗಾಗಲಿ ಆಗಿರಬಾರದು, ಕಡಿಯಿರಿ. ಎಂದಳು.
तब आफ्नो छोरोको निम्ति दयाले भरिएर जीवित छोरोकी आमाले राजालाई भनी, “हे मेरा मालिक, जीवित बालक त्यसलाई नै दिनू र त्यसलाई कुनै पनि हालतमा नमार्नू ।” तर अर्की स्त्रीले भनी, “त्यो न मेरो हुने छ न तेरो । त्यसलाई दुई टुक्रा पारियोस् ।”
27 ಆಗ ಅರಸನು ಉತ್ತರವಾಗಿ, “ಬದುಕಿರುವ ಕೂಸನ್ನು ಮೊದಲನೆಯವಳಿಗೆ ಕೊಡಿರಿ, ಕೊಲ್ಲಬೇಡಿರಿ, ಇವಳೇ ಅದರ ತಾಯಿ,” ಎಂದನು.
तब राजाले जवाफ दिए, “जीवित बालक पहिलो स्त्रीलाई दिनू, र त्यसलाई कुनै पनि हालतमा नमार्नू । त्यो नै बालककी आमा हो ।”
28 ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು.
जब सारा इस्राएलले राजाले गरेको न्याय सुने तिनीहरू राजादेखि डराए किनकि न्याय सम्पादन गर्न परमेश्वरको बुद्धि तिनमा थियो भनी तिनीहरूले देखे ।

< ಅರಸುಗಳು - ಪ್ರಥಮ ಭಾಗ 3 >