< ಅರಸುಗಳು - ಪ್ರಥಮ ಭಾಗ 5 >
1 ಸೊಲೊಮೋನನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕ ಪಡೆದಿದ್ದಾನೆಂದು ಟೈರಿನ ಅರಸನಾದ ಹೀರಾಮನು ಕೇಳಿದಾಗ, ಅವನು ತನ್ನ ರಾಜದೂತರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಏಕೆಂದರೆ ಹೀರಾಮನು ಯಾವಾಗಲೂ ದಾವೀದನಿಗೆ ಆಪ್ತಮಿತ್ರನಾಗಿದ್ದನು.
泰尔王希兰,平素爱大卫;他听见以色列人膏所罗门,接续他父亲作王,就差遣臣仆来见他。
2 ಸೊಲೊಮೋನನು ರಾಜದೂತರ ಮುಖಾಂತರ ಹೀರಾಮನಿಗೆ ಈ ಸಂದೇಶವನ್ನು ಕಳುಹಿಸಿದನು:
所罗门也差遣人去见希兰,说:
3 “ನನ್ನ ತಂದೆ ದಾವೀದನು ತನ್ನ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಏಕೆಂದರೆ ಯೆಹೋವ ದೇವರು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವವರೆಗೂ, ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಯಿತು.
“你知道我父亲大卫因四围的争战,不能为耶和华—他 神的名建殿,直等到耶和华使仇敌都服在他脚下。
4 ಆದರೆ ಈಗ ನನ್ನ ದೇವರಾದ ಯೆಹೋವ ದೇವರು, ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ, ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾರೆ.
现在耶和华—我的 神使我四围平安,没有仇敌,没有灾祸。
5 ಆದ್ದರಿಂದ, ನನ್ನ ದೇವರಾದ ಯೆಹೋವ ದೇವರ ಹೆಸರಿಗೆ ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಯೆಹೋವ ದೇವರು ನನ್ನ ತಂದೆಯಾದ ದಾವೀದನಿಗೆ, ‘ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಕುಳ್ಳಿರಿಸುವ ನಿನ್ನ ಮಗನೇ ನನ್ನ ಹೆಸರಿಗೆ ದೇವಾಲಯವನ್ನು ಕಟ್ಟಿಸುವನು,’ ಎಂದು ಹೇಳಿದ್ದಾರಲ್ಲವೇ.
我定意要为耶和华—我 神的名建殿,是照耶和华应许我父亲大卫的话说:‘我必使你儿子接续你坐你的位,他必为我的名建殿。’
6 “ಆದ್ದರಿಂದ ನೀನು ನನಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ, ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಪ್ರಕಾರ, ನಿನ್ನ ಸೇವಕರ ಕೂಲಿಯನ್ನು ಕೊಡುತ್ತೇನೆ. ಏಕೆಂದರೆ ನಮ್ಮಲ್ಲಿ ಸೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲ ಎಂದು ನೀನು ಬಲ್ಲೆ,” ಎಂದು ಹೇಳಿದನು.
所以求你吩咐你的仆人在黎巴嫩为我砍伐香柏木,我的仆人也必帮助他们,我必照你所定的,给你仆人的工价;因为你知道,在我们中间没有人像西顿人善于砍伐树木。”
7 ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹು ಸಂತೋಷಪಟ್ಟು, “ಈ ಮಹಾಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಯೆಹೋವ ದೇವರಿಗೆ ಇಂದು ಸ್ತೋತ್ರವಾಗಲಿ,” ಎಂದನು.
希兰听见所罗门的话,就甚喜悦,说:“今日应当称颂耶和华;因他赐给大卫一个有智慧的儿子,治理这众多的民。”
8 ಹೀರಾಮನು ಸೊಲೊಮೋನನಿಗೆ ಸಂದೇಶವನ್ನು ಕಳುಹಿಸಿ, “ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿದ್ದೇನೆ. ದೇವದಾರು ಮರಗಳ ವಿಷಯವೂ, ತುರಾಯಿ ಮರಗಳ ವಿಷಯವೂ ನೀನು ಇಚ್ಛಿಸಿದ್ದನ್ನೆಲ್ಲಾ ನಾನು ಮಾಡುವೆನು.
希兰打发人去见所罗门,说:“你差遣人向我所提的那事,我都听见了;论到香柏木和松木,我必照你的心愿而行。
9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತಂದಮೇಲೆ, ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿ, ಸಮುದ್ರದಿಂದ ಕಳುಹಿಸಿ, ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತೆಗೆದುಕೊಂಡು ನನ್ನ ಮನೆಯವರಿಗೊಸ್ಕರ ಆಹಾರವನ್ನು ಕೊಟ್ಟು, ನನ್ನ ಇಚ್ಛೆಯನ್ನು ತೀರಿಸುವೆ,” ಎಂದನು.
我的仆人必将这木料从黎巴嫩运到海里,扎成筏子,浮海运到你所指定我的地方,在那里拆开,你就可以收取;你也要成全我的心愿,将食物给我的家。”
10 ಹೀಗೆಯೇ ಹೀರಾಮನು ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸೊಲೊಮೋನನ ಇಚ್ಛೆಯ ಪ್ರಕಾರವೆಲ್ಲಾ ಕೊಟ್ಟನು.
于是希兰照着所罗门所要的,给他香柏木和松木;
11 ಸೊಲೊಮೋನನು ಹೀರಾಮನಿಗೆ ಅವನ ಮನೆಯವರ ಆಹಾರಕ್ಕೋಸ್ಕರ ಸುಮಾರು ಮೂರು ಸಾವಿರ ಆರನೂರು ಟನ್ ಗೋಧಿಯನ್ನೂ, ನಾಲ್ಕು ಲಕ್ಷ ನಲವತ್ತು ಸಾವಿರ ಲೀಟರ್ ಅಪ್ಪಟವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು.
所罗门给希兰麦子二万歌珥,清油二十歌珥,作他家的食物。所罗门每年都是这样给希兰。
12 ಇದಲ್ಲದೆ ಯೆಹೋವ ದೇವರು ಸೊಲೊಮೋನನಿಗೆ ವಾಗ್ದಾನ ಮಾಡಿದಂತೆ ಜ್ಞಾನವನ್ನು ಕೊಟ್ಟರು. ಹೀರಾಮನಿಗೂ, ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.
耶和华照着所应许的赐智慧给所罗门。希兰与所罗门和好,彼此立约。
13 ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲರೊಳಗಿಂದ ಆಳುಗಳನ್ನು ತೆಗೆದುಕೊಂಡನು. ಆ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು.
所罗门王从以色列人中挑取服苦的人共有三万,
14 ಅವನು ಅವರನ್ನು ಲೆಬನೋನಿಗೆ ಕಳುಹಿಸಿದನು. ತಿಂಗಳು ತಿಂಗಳಿಗೂ ನೇಮಕದ ಪ್ರಕಾರ, ಹತ್ತು ಸಾವಿರ ಜನರನ್ನು ಕಳುಹಿಸಿದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು, ಎರಡು ತಿಂಗಳು ತಮ್ಮ ಮನೆಗಳಲ್ಲಿದ್ದರು. ಅದೋನೀರಾಮನು ಆಳುಗಳ ಮೇಲೆ ಯಜಮಾನನಾಗಿದ್ದನು.
派他们轮流每月一万人上黎巴嫩去;一个月在黎巴嫩,两个月在家里。亚多尼兰掌管他们。
15 ಇದಲ್ಲದೆ ಸೊಲೊಮೋನನಿಗೆ ಹೊರೆ ಹೊರುವವರು ಎಪ್ಪತ್ತು ಸಾವಿರವೂ, ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಬತ್ತು ಸಾವಿರವೂ ಇದ್ದರು.
所罗门用七万扛抬的,八万在山上凿石头的。
16 ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲಸದ ಮೇಲೆ ಇದ್ದರು. ಕೆಲಸ ಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳಿದ್ದರು.
此外,所罗门用三千三百督工的,监管工人。
17 ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ, ಬೆಲೆಯುಳ್ಳ ಕಲ್ಲುಗಳನ್ನೂ ದೇವಾಲಯ ಅಸ್ತಿವಾರವನ್ನು ಹಾಕಲು ಕೆತ್ತಿದ ಕಲ್ಲುಗಳನ್ನು ತಂದರು.
王下令,人就凿出又大又宝贵的石头来,用以立殿的根基。
18 ಸೊಲೊಮೋನನ ಶಿಲ್ಪಕಾರರೂ, ಹೀರಾಮನ ಶಿಲ್ಪಕಾರರೂ, ಗೆಬಾಲ್ಯರೂ ಅವುಗಳನ್ನು ಕಡಿದು, ಆಲಯವನ್ನು ಕಟ್ಟುವುದಕ್ಕೆ ಕಲ್ಲುಗಳನ್ನೂ, ಮರಗಳನ್ನೂ ಸಿದ್ಧಮಾಡಿದರು.
所罗门的匠人和希兰的匠人,并迦巴勒人,都将石头凿好,预备木料和石头建殿。