< ಅರಸುಗಳು - ಪ್ರಥಮ ಭಾಗ 9 >
1 ಸೊಲೊಮೋನನು ಯೆಹೋವ ದೇವರ ಆಲಯವನ್ನೂ, ತನ್ನ ಅರಮನೆಯನ್ನೂ ತಾನು ಬಯಸಿದ್ದೆಲ್ಲವನ್ನೂ ಸಾಧಿಸಿದನು.
And it came to pass, when Solomon had finished building the house of the Lord, and the king's house, and all Solomon's desire which he was pleased to execute:
2 ಅನಂತರ ಯೆಹೋವ ದೇವರು ಸೊಲೊಮೋನನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷರಾದಂತೆ, ಅವನಿಗೆ ಎರಡನೆಯ ಸಾರಿ ಪ್ರತ್ಯಕ್ಷರಾದರು.
That the Lord appeared to Solomon the second time, as he had appeared unto him at Gib'on.
3 ಯೆಹೋವ ದೇವರು ಅವನಿಗೆ, “ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆಯನ್ನೂ ನಿನ್ನ ವಿಜ್ಞಾಪನೆಯನ್ನೂ ಕೇಳಿ ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಆಲಯವನ್ನು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.
And the Lord said unto him, I have heard thy prayer and thy supplication, that thou hast offered before me; I have hallowed this house, which thou hast built, to put my name there for ever; and my eyes and my heart shall be there at all times.
4 “ನೀನು ನಿನ್ನ ತಂದೆಯಾದ ದಾವೀದನಂತೆ ಸಂಪೂರ್ಣ ಹೃದಯದಿಂದಲೂ, ಯಥಾರ್ಥತೆಯಿಂದಲೂ ನಾನು ನಿನಗೆ ಆಜ್ಞಾಪಿಸಿದ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಿಷ್ಠೆಯಿಂದ ಕೈಗೊಂಡು ನಡೆದರೆ,
And as for thee, if thou wilt walk before me, as David thy father walked, in integrity of heart, and in rectitude, to do in accordance with all that I have commanded thee, [and] wilt keep my statutes and my ordinances:
5 ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ನಿನಗೆ ಉತ್ತರಾಧಿಕಾರಿಯ ಕೊರತೆಯಾಗುವುದಿಲ್ಲವೆಂದು ನಾನು ನಿನ್ನ ತಂದೆ ದಾವೀದನಿಗೆ ಮಾತುಕೊಟ್ಟ ಪ್ರಕಾರ, ‘ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.’
Then will I establish the throne of thy kingdom over Israel for ever; as I have spoken concerning David thy father, saying, There shall never fail thee a man upon the throne of Israel.
6 “ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ ನಾನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನೂ, ಕಟ್ಟಳೆಗಳನ್ನೂ ಕೈಗೊಂಡು ನಡೆಯದೆ ನನ್ನಿಂದ ದೂರಹೋಗಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ,
But if ye will at all turn away, ye or your children, from following me, and will not keep my commandments [and] my statutes which I have set before you, and go and serve other gods, and bow down to them:
7 ಆಗ ನಾನು ಇಸ್ರಾಯೇಲಿಗೆ ಕೊಟ್ಟ ದೇಶದೊಳಗಿಂದ ಅವರನ್ನು ತೆಗೆದುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಇಸ್ರಾಯೇಲರು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಗುರಿಯಾಗುವರು.
Then will I cut off Israel from the face of the land which I have given them; and the house, which I have hallowed unto my name, will I cast away from my sight; and Israel shall be a proverb and a by-word among all the nations;
8 ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.
And at this house, [which] should be so exalted, every one that passeth by it shall be astonished, and shall hiss; and men will say, Why hath the Lord done thus unto this land, and unto this house?
9 ಅದಕ್ಕೆ ಜನರು, ‘ತಮ್ಮ ತಂದೆಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಅನ್ಯದೇವರುಗಳನ್ನು ಹಿಂಬಾಲಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಯೆಹೋವ ದೇವರು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಾರೆಂದು ಹೇಳುವರು,’” ಎಂದರು.
And they shall say, For the cause that they forsook the Lord their God, who had brought forth their fathers out of the land of Egypt, and took hold of other gods, and bowed down to them, and served them: therefore hath the Lord brought upon them all this evil.
10 ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಆ ಎರಡು ಮನೆಗಳನ್ನು ಅಂದರೆ, ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ ಕಟ್ಟಿಸಿ ತೀರಿಸಿದ ತರುವಾಯ
And it came to pass at the end of twenty years, when Solomon had built the two houses, the house of the Lord, and the king's house,
11 ಸೊಲೊಮೋನನ ಇಷ್ಟದ ಪ್ರಕಾರ ಟೈರಿನ ಅರಸನಾದ ಹೀರಾಮನು ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಚಿನ್ನವನ್ನೂ ಕೊಟ್ಟಿದ್ದರಿಂದ ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ ಗಲಿಲಾಯ ದೇಶದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.
(Now Hiram the king of Tyre had supplied Solomon with cedar-trees and fir-trees, and with gold, according to all his desire, ) that king Solomon then gave to Hiram twenty cities in the land of Galilee.
12 ಆಗ ಹೀರಾಮನು ಟೈರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು. ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ.
And Hiram came out from Tyre to see the cities which Solomon had given him; but they were not right in his eyes.
13 ಆದ್ದರಿಂದ ಅವನು, “ನನ್ನ ಸಹೋದರನೇ, ನೀನು ನನಗೆ ಎಂಥಾ ಪಟ್ಟಣಗಳನ್ನು ಕೊಟ್ಟಿರುವೆ?” ಎಂದು ಹೇಳಿ, ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವಕ್ಕೆ ಅದೇ ಹೆಸರು.
And he said, What kind of cities are these which thou hast given me, my brother? And he called them, The land of Cabul, until this day.
14 ಹೀರಾಮನು ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂ ಚಿನ್ನವನ್ನು ಕಳುಹಿಸಿದನು.
And Hiram sent to the king one hundred and twenty talents of gold.
15 ಅರಸನಾದ ಸೊಲೊಮೋನನು ದಾಸರನ್ನು ಕೂಡಿಸಿದ ಕಾರಣವೇನೆಂದರೆ, ಯೆಹೋವ ದೇವರ ಮಂದಿರವನ್ನೂ, ತನ್ನ ಅರಮನೆಯನ್ನೂ, ಮಿಲ್ಲೋವನ್ನೂ, ಯೆರೂಸಲೇಮಿನ ಗೋಡೆಯನ್ನೂ, ಹಾಚೋರನ್ನೂ, ಮೆಗಿದ್ದೋವನ್ನೂ, ಗೆಜೆರನ್ನೂ ಕಟ್ಟುವುದಕ್ಕೋಸ್ಕರವೇ.
And this is the manner of the levy which king Solomon raised, to build the house of the Lord, and his own house, and the Millo, and the wall of Jerusalem, and Chazor, and Megiddo, and Gezer.
16 ಈಜಿಪ್ಟಿನ ಅರಸನಾದ ಫರೋಹನು ಹೊರಟುಹೋಗಿ, ಗೆಜೆರನ್ನು ತೆಗೆದುಕೊಂಡು, ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು, ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು, ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಅದನ್ನು ಬಹುಮಾನವಾಗಿ ಕೊಟ್ಟನು.
(Pharaoh king of Egypt had gone up, and captured Gezer, and burnt it with fire, and slain the Canaanites that dwelt in the city, and given it as a marriage-present unto his daughter, Solomon's wife.
17 ಹೀಗೆಯೇ ಸೊಲೊಮೋನನು ಗೆಜೆರನ್ನೂ, ಕೆಳಗಿನ ಬೇತ್ ಹೋರೋನನ್ನೂ,
And Solomon built Gezer, and lower Beth-choron,
18 ಬಾಲಾತನ್ನೂ, ಮರುಭೂಮಿಯಲ್ಲಿರುವ ತದ್ಮೋರ್ ಎಂಬ ಸ್ಥಳವನ್ನೂ ಕಟ್ಟಿಸಿದನು.
And Ba'alath, and Thadmor in the wilderness, in the land,
19 ಇದಲ್ಲದೆ ಸೊಲೊಮೋನನು ಉಗ್ರಾಣದ ಪಟ್ಟಣಗಳನ್ನೂ, ತನ್ನ ರಾಹುತರಿಗೋಸ್ಕರ ಮತ್ತು ರಥಗಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿಸಿದನು. ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.
And all the treasure-cities that Solomon had, and the cities for the chariots, and the cities for the horsemen, and the [other] desire of Solomon which he desired to build in Jerusalem, and in Lebanon, and in all the land of his dominion.)
20 ಇಸ್ರಾಯೇಲರಲ್ಲದ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು, ಇವರಲ್ಲಿ ಉಳಿದ ಸಮಸ್ತ ಜನರನ್ನೂ
All the people that were left of the Emorites, the Hittites, the Perizzites, the Hivites, and the Jebusites, who were not of the children of Israel,
21 ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು.
Their children that were left after them in the land, whom the children of Israel had not been able utterly to destroy, these did Solomon levy as tributary laborers until this day.
22 ಆದರೆ ಸೊಲೊಮೋನನು ಇಸ್ರಾಯೇಲರನ್ನು ದಾಸರಾಗಿ ಮಾಡಲಿಲ್ಲ. ಅವರು ಯುದ್ಧಭಟರಾಗಿಯೂ, ಅವನ ಅಧಿಪತಿಯಾಗಿಯೂ, ತನ್ನ ಕೈಕೆಳಗಿರುವ ಅವನ ಪ್ರಧಾನರಾಗಿಯೂ, ಅಧಿಕಾರಿಗಳಾಗಿಯೂ, ತನ್ನ ರಥಗಳ ಮೇಲೆಯೂ, ರಾಹುತರ ಮೇಲೆಯೂ ಅಧಿಪತಿಗಳಾಗಿಯೂ ಇದ್ದರು.
Yet of the children of Israel did Solomon make no one a bond-man; but they were the men of war, and his servants, and his princes, and his captains, and the officers of his chariots, and of his horsemen.
23 ಇದರೊಳಗೆ ಐದು ನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು.
These [also] were the chiefs of the superintendents that were over Solomon's work, five hundred and fifty, who ruled over the people that wrought on the work.
24 ಆದರೆ ಫರೋಹನ ಮಗಳು ದಾವೀದನ ಪಟ್ಟಣದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು.
But Pharaoh's daughter came up out of the city of David unto her house which he had built for her: then did he build the Millo.
25 ವರುಷಕ್ಕೆ ಮೂರು ಸಾರಿ ಸೊಲೊಮೋನನು ಯೆಹೋವ ದೇವರಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ, ಯೆಹೋವ ದೇವರ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಡುತ್ತಿದ್ದನು. ಹೀಗೆ ಆಲಯದ ಅರ್ಪಣೆಗಳನ್ನು ಪೂರೈಸಿದನು.
And Solomon did offer three times in every year burnt-offerings and peace-offerings upon the altar which he had built unto the Lord, and he burnt incense upon the one that was before the Lord. So he finished the house.
26 ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದ ಕೆಂಪು ಸಮುದ್ರತೀರದ ಏಲೋತ್ ಎಂಬ ಊರ ಬಳಿಯಲ್ಲಿರುವ ಎಚ್ಯೋನ್ ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.
And king Solomon made a ship in 'Ezyon-geber, which is near Eloth, on the shore of the Red Sea, in the land of Edom.
27 ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರ ಸಂಗಡ ಆ ಹಡಗುಗಳಲ್ಲಿ ಕಳುಹಿಸಿದನು.
And Hiram sent in the ship his servants, seamen, that had knowledge of the sea, with the servants of Solomon.
28 ಅವರು ಓಫೀರಿಗೆ ಹೋಗಿ, ಅಲ್ಲಿಂದ ಹದಿನಾಲ್ಕು ಸಾವಿರ ಕಿಲೋಗ್ರಾಂ ಬಂಗಾರವನ್ನು ಅರಸನಾದ ಸೊಲೊಮೋನನಿಗೆ ತೆಗೆದುಕೊಂಡು ಬಂದರು.
And they came to Ophir, and fetched from there gold, four hundred and twenty talents, and brought it to king Solomon.