< ಸಮುವೇಲನು - ಪ್ರಥಮ ಭಾಗ 13 >
1 ಸೌಲನು ಅರಸನಾದಾಗ ಮೂವತ್ತು ವರ್ಷ ಪ್ರಾಯದವನಾಗಿದ್ದನು. ಅವನು ಇಸ್ರಾಯೇಲರ ಮೇಲೆ ನಲವತ್ತೆರಡು ವರ್ಷಕಾಲ ಆಳಿದನು.
১শৌল ত্রিশ বছর বয়সে রাজা হন৷ দুই বছর ইস্রায়েলের উপরে রাজত্ব করার পর
2 ಸೌಲನು ಇಸ್ರಾಯೇಲರೊಳಗಿಂದ ಮೂರು ಸಾವಿರ ಜನ ಪುರುಷರನ್ನು ಆಯ್ದುಕೊಂಡನು. ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯು, ಬೇತೇಲಿನ ದಿನ್ನೆ ಪ್ರದೇಶಗಳಲ್ಲಿಯು ಇದ್ದರು. ಒಂದು ಸಾವಿರ ಜನರು ಬೆನ್ಯಾಮೀನ್ಯರ ಗಿಬೆಯದಲ್ಲಿ ಯೋನಾತಾನನ ಜೊತೆಗಿದ್ದರು. ಉಳಿದ ಜನರನ್ನು ಅವನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.
২শৌল নিজেদের জন্য ইস্রায়েলের মধ্যে তিন হাজার জন লোক নির্বাচন করলেন; তার মধ্যে দুহাজার মিকমসে ও বৈথেল পর্বতে শৌলের সঙ্গে থাকল এবং এক হাজার বিন্যামীন প্রদেশের গিবিয়াতে যোনাথনের সঙ্গে থাকল; আর অন্য সব লোককে তিনি নিজেদের তাঁবুতে পাঠিয়ে দিলেন৷
3 ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ತಿಳಿದುಬಂತು. ಆದ್ದರಿಂದ ಸೌಲನು ದೇಶದಲ್ಲೆಲ್ಲಾ ಹಿಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.
৩পরে যোনাথন গেবাতে থাকা পলেষ্টীয়দের পাহারাদার সৈন্যদলকে আঘাত করলেন ও পলেষ্টীয়েরা তা শুনল; তখন শৌল দেশের সব জায়গায় তূরী বাজিয়ে বললেন, “ইব্রীয়েরা শুনুক৷”
4 “ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ಸೌಲನು ನಾಶಮಾಡಿದ್ದರಿಂದ, ಇಸ್ರಾಯೇಲರು ಈಗ ಫಿಲಿಷ್ಟಿಯರಿಗೆ ಅಸಹ್ಯಕರ ಶತ್ರುವಾದರು,” ಎಂಬ ವರ್ತಮಾನವನ್ನು ಸಮಸ್ತ ಇಸ್ರಾಯೇಲರು ಕೇಳಿದರು. ಮತ್ತು ಗಿಲ್ಗಾಲಿಗೆ ಬಂದು ಸೌಲನನ್ನು ಸೇರಿಕೊಳ್ಳಲು ಜನರನ್ನು ಕರೆದರು.
৪তখন সমস্ত ইস্রায়েল এই কথা শুনল যে, শৌল পলেষ্টীয়দের সেই পাহারাদার সৈন্যদলকে আঘাত করেছেন, আর ইস্রায়েলের জন্য পলেষ্টীয়দের তীব্র ঘৃণা জন্মেছে৷ পরে লোকেরা শৌলের সঙ্গে গিলগলে যোগ দিল৷
5 ಆಗ ಇಸ್ರಾಯೇಲರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ, ಆರು ಸಾವಿರ ಕುದುರೆ ಸವಾರರೂ, ಸಮುದ್ರತೀರದ ಮರಳಷ್ಟು ಜನರೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳಿದುಕೊಂಡರು.
৫পরে পলেষ্টীয়েরা ইস্রায়েলের সঙ্গে যুদ্ধ করতে এল; ত্রিশ হাজার রথ, ছয় হাজার ঘোড়াচালক ও সমুদ্রতীরের বালির মতো অগুন্তি লোক আসল; তারা এসে বৈৎ-আবনের পূর্বদিকে মিকমসে শিবির তৈরী করল৷
6 ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದದ್ದರಿಂದ ತಾವು ಇಕ್ಕಟ್ಟಿನಲ್ಲಿ ಇರುವುದನ್ನು ಕಂಡು, ಗವಿಗಳಲ್ಲಿಯೂ, ಮುಳ್ಳಿನ ಪೊದೆಗಳಲ್ಲಿಯೂ, ಗುಡ್ಡಗಳಲ್ಲಿಯೂ, ಕುಣಿಗಳಲ್ಲಿಯೂ ಬಾವಿಗಳಲ್ಲಿಯೂ ಅಡಗಿಕೊಂಡರು.
৬তখন ইস্রায়েলের লোকেরা নিজেদেরকে বিপদের মধ্যে দেখল, কারণ লোকেরা পীড়িত হচ্ছিল; তখন লোকেরা গুহাতে, ঝোপে, শৈলে, উঁচু জায়গায় ও গর্তে লুকাল৷
7 ಇದಲ್ಲದೆ ಹಿಬ್ರಿಯರಲ್ಲಿ ಕೆಲವರು ಯೊರ್ದನನ್ನು ದಾಟಿ, ಗಾದ್ ದೇಶಕ್ಕೂ, ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು. ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು.
৭আর কয়েকজন ইব্রীয় যর্দ্দন পার হয়ে গাদ ও গিলিয়দ দেশে গেল৷ কিন্তু তখনও শৌল গিলগলে ছিলেন এবং তাঁর পিছনে আসা লোকেরা সবাই কাঁপতে লাগল৷
8 ಸೌಲನು ತನಗೆ ಸಮುಯೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುಯೇಲನು ಗಿಲ್ಗಾಲಿಗೆ ಬಾರದೆ ಇದ್ದುದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.
৮পরে শৌল শমূয়েলের ঠিক করা দিন অনুসারে সাত দিন অপেক্ষা করলেন; কিন্তু শমূয়েল গিলগলে এলেন না এবং লোকেরা তাঁর কাছ থেকে ছড়িয়ে পড়তে লাগল৷
9 ಆಗ ಸೌಲನು, “ದಹನಬಲಿಯನ್ನೂ, ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ,” ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು.
৯তাতে শৌল বললেন, “এই জায়গায় আমার কাছে হোমবলি ও মঙ্গলার্থক বলি আন৷” পরে তিনি হোমবলি উত্সর্গ করলেন৷
10 ಆದರೆ ಅವನು ದಹನಬಲಿಯನ್ನು ಅರ್ಪಿಸಿ, ತೀರಿಸುವಷ್ಟರೊಳಗೆ ಸಮುಯೇಲನು ಬಂದನು. ಆಗ ಅವನನ್ನು ವಂದಿಸುವುದಕ್ಕಾಗಿ ಸೌಲನು ಅವನನ್ನು ಎದುರುಗೊಳ್ಳಲು ಹೋದನು.
১০হোমবলি উত্সর্গ শেষ করার সঙ্গে সঙ্গেই শমূয়েল উপস্থিত হলেন; তাতে শৌল তাঁকে অভিবাদন করার জন্য তাঁর সঙ্গে দেখা করতে গেলেন৷
11 ಆದರೆ ಸಮುಯೇಲನು, “ನೀನೇನು ಮಾಡಿದಿ?” ಎಂದು ಸೌಲನನ್ನು ಕೇಳಿದನು. ಸೌಲನು, “ಸೈನಿಕರು ನನ್ನನ್ನು ಬಿಟ್ಟು ಹೋಗುತ್ತಿರುವುದನ್ನು, ನೀನು ನೇಮಿಸಿದ ದಿವಸಗಳ ಪ್ರಕಾರ ಬಾರದಿರುವುದನ್ನು ಮತ್ತು ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವುದನ್ನು ಕಂಡೆನು.
১১পরে শমূয়েল বললেন, “তুমি কি করলে?” শৌল বললেন, “আমি দেখলাম, লোকেরা আমার কাছ থেকে ছড়িয়ে পড়ছে এবং নির্ধারিত দিনের র মধ্যে আপনিও আসেন নি, আর পলেষ্টীয়েরা মিকমসে জড়ো হয়েছে;
12 ಆಗ ನಾನು ನನ್ನಲ್ಲಿಯೇ ಯೋಚಿಸುತ್ತಾ, ‘ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ದಾಳಿಮಾಡುವುದು ಖಚಿತ ಮತ್ತು ನಾನು ಎಂದಿಗೂ ಯೆಹೋವ ದೇವರ ಸಹಾಯವನ್ನು ಕೇಳಲಿಲ್ಲ.’ ಆದ್ದರಿಂದ ನನ್ನಲ್ಲಿಯೇ ಆದ ಒತ್ತಡದಿಂದ ದಹನಬಲಿಯನ್ನು ಅರ್ಪಿಸಿದೆನು,” ಎಂದನು.
১২তাই আমি মনে মনে বললাম, ‘পলেষ্টীয়েরা এখনই আমার বিরুদ্ধে গিলগলে নেমে আসবে,’ আর আমি সদাপ্রভুর দয়া চাই নি; তাই ইচ্ছা না থাকলেও আমি হোমবলি উত্সর্গ করলাম৷”
13 ಸಮುಯೇಲನು ಸೌಲನಿಗೆ, “ನೀನು ಬುದ್ಧಿಹೀನವಾದ ಕೆಲಸಮಾಡಿದ್ದೀ; ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಯೆಹೋವ ದೇವರು ಇಸ್ರಾಯೇಲರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವುದಕ್ಕೆ ಇದ್ದರು.
১৩শমূয়েল শৌলকে বললেন, “তুমি বোকার মত কাজ করেছ; তোমার ঈশ্বর সদাপ্রভু তোমাকে যে আদেশ দিয়েছেন, তা মেনে চলনি; মানলে সদাপ্রভু এখন ইস্রায়েলের উপরে তোমার রাজত্ব চিরকাল স্থায়ী করতেন৷
14 ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದನ್ನು ನೀನು ಕೈಗೊಳ್ಳದೆ ಹೋದದ್ದರಿಂದ, ಅವರು ತಮ್ಮ ಹೃದಯಕ್ಕೆ ತಕ್ಕಂಥ ಒಬ್ಬ ಮನುಷ್ಯನನ್ನು ಹುಡುಕಿ, ಅವನನ್ನು ತಮ್ಮ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾರೆ,” ಎಂದನು.
১৪কিন্তু এখন তোমার রাজত্ব স্থির থাকবে না; সদাপ্রভু নিজের মনের মত এক জনকে বেছে নিয়ে তাকেই নিজের প্রজাদের শাসনকর্ত্তার পদে নিযুক্ত করেছেন; কারণ সদাপ্রভু তোমাকে যা আদেশ করেছিলেন, তুমি তা পালন করনি৷”
15 ಸಮುಯೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾಮೀನ್ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ, ಅವರು ಸುಮಾರು ಆರುನೂರು ಜನರಿದ್ದರು.
১৫পরে শমূয়েল উঠে গিলগল থেকে বিন্যামীনের গিবিয়াতে চলে গেলেন; তখন শৌল নিজের কাছের বর্তমান লোকদেরকে গণনা করলেন, তারা অনুমান ছশো জন৷
16 ಸೌಲನೂ, ಅವನ ಮಗ ಯೋನಾತಾನನೂ, ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾಮೀನ್ಯರ ಗಿಬೆಯದಲ್ಲಿ ಇದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು.
১৬শৌল তাঁর ছেলে যোনাথন ও তাদের কাছের বর্তমান লোকেরা বিন্যামীনের গেবাতে থাকলেন এবং পলেষ্টীয়েরা মিকমসে শিবির তৈরী করে থাকলো৷
17 ಆಗ ಫಿಲಿಷ್ಟಿಯರ ಪಾಳೆಯದಿಂದ ಸುಲಿದುಕೊಳ್ಳುವವರು ಮೂರು ಗುಂಪಾಗಿ ಹೊರಟರು. ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ದೇಶದ ಕಡೆಗೆ ಹೋಯಿತು.
১৭পরে পলেষ্টীয়দের শিবির থেকে তিনদল বিনাশকারী সৈন্য বেরিয়ে এল, তার একদল অফ্রার রাস্তা দিয়ে শূয়াল প্রদেশে গেল৷
18 ಮತ್ತೊಂದು ಗುಂಪು ಬೇತ್ ಹೋರೋನಿನ ಮಾರ್ಗವಾಗಿ ಹೋಯಿತು. ಬೇರೊಂದು ಗುಂಪು ಮರುಭೂಮಿಗೆ ಎದುರಾಗಿರುವ ಜೆಬೋಯಿಮ್ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು.
১৮আর একদল বৈৎ-হোরোণের পথের দিকে ফিরল এবং আর একদল মরুপ্রান্তের দিকে সিবোয়িম উপত্যকার দিকে সীমানার পথ দিয়ে গেল৷
19 “ಹಿಬ್ರಿಯರು ತಮಗೆ ಖಡ್ಗವನ್ನಾದರೂ ಈಟಿಯನ್ನಾದರೂ ಮಾಡಿಕೊಳ್ಳಬಾರದು,” ಎಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ, ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.
১৯ঐ দিনের সমস্ত ইস্রায়েল দেশে কামার পাওয়া যেত না; কারণ পলেষ্টীয়েরা বলত, “যদি ইব্রীয়েরা নিজেদের জন্য তরোয়াল কি বর্শা তৈরী করে৷”
20 ಆದ್ದರಿಂದ ಇಸ್ರಾಯೇಲರೆಲ್ಲಾ ತಮ್ಮ ತಮ್ಮ ನೇಗಿಲಿನ ಗುಳಗಳನ್ನೂ, ಸಲಿಕೆಗಳನ್ನೂ, ಕೊಡಲಿಗಳನ್ನೂ, ಗುದ್ದಲಿಗಳನ್ನೂ ಮೊನೆ ಮಾಡುವುದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾಗಿತ್ತು.
২০এই জন্য নিজেদের হলমুখ বা ফাল বা কুড়ুল বা কোদাল ধার দেবার জন্য ইস্রায়েলের সব লোককে পলেষ্টীয়দের কাছে নেমে আসতে হত৷
21 ಆದರೆ ಸಲಿಕೆ, ಗುದ್ದಲಿ, ಕುಂಟೆ, ಮುಳ್ಳುಗೋಲು, ಕೊಡಲಿ, ಅಂಕುಶ ಇವುಗಳನ್ನು ಹದಮಾಡುವುದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು.
২১সুতরাং সকলের কোদাল, (তিন ভাগের দুই ভাগ সেকল) ফাল (4 গ্রাম রৌপ্য মুদ্রা) বিদা, কুড়ুলের ধার এবং রাখালের লাঠির কাঁটা ভোঁতা ছিল;
22 ಯುದ್ಧದ ದಿವಸದಲ್ಲಿ ಸೌಲ ಯೋನಾತಾನರ ಜೊತೆಯಲ್ಲಿದ್ದ ಸಮಸ್ತ ಜನರಲ್ಲಿ ಒಬ್ಬನ ಕೈಯಲ್ಲಾದರೂ ಖಡ್ಗವಾಗಲಿ, ಈಟಿಯಾಗಲಿ ಇರಲಿಲ್ಲ. ಆದರೆ ಸೌಲನಿಗೂ, ಅವನ ಪುತ್ರನಾದ ಯೋನಾತಾನನಿಗೂ ಮಾತ್ರವೇ ಇತ್ತು.
২২আর যুদ্ধের দিনের শৌলের ও যোনাথনের সঙ্গী লোকদের কারও হাতে তরোয়াল বা বর্শা পাওয়া গেল না, শুধুমাত্র শৌলের ও তাঁর ছেলে যোনাথনের হাতে পাওয়া গেল৷
23 ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗದತ್ತ ಹೊರಟಿತು.
২৩পরে পলেষ্টীয়দের পাহারাদার সৈন্যদল বেরিয়ে এসে মিকমসের গিরিপথে এল