< ಸಮುವೇಲನು - ಪ್ರಥಮ ಭಾಗ 15 >

1 ಸಮುಯೇಲನು ಸೌಲನಿಗೆ, “ಯೆಹೋವ ದೇವರು ತಮ್ಮ ಜನರಾದ ಇಸ್ರಾಯೇಲರ ಮೇಲೆ ನಿನ್ನನ್ನು ಅರಸನಾಗಿರಲು ಅಭಿಷೇಕಿಸಲು ನನ್ನನ್ನು ಕಳುಹಿಸಿದರು. ಈಗ ನೀನು ಯೆಹೋವ ದೇವರ ಮಾತುಗಳನ್ನು ಕೇಳು.
וַיֹּאמֶר שְׁמוּאֵל אֶל־שָׁאוּל אֹתִי שָׁלַח יְהֹוָה לִמְשׇׁחֳךָ לְמֶלֶךְ עַל־עַמּוֹ עַל־יִשְׂרָאֵל וְעַתָּה שְׁמַע לְקוֹל דִּבְרֵי יְהֹוָֽה׃
2 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಇಸ್ರಾಯೇಲರು ಈಜಿಪ್ಟಿನಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿ ತೊಂದರೆಪಡಿಸಿದರು, ಆದ್ದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.
כֹּה אָמַר יְהֹוָה צְבָאוֹת פָּקַדְתִּי אֵת אֲשֶׁר־עָשָׂה עֲמָלֵק לְיִשְׂרָאֵל אֲשֶׁר־שָׂם לוֹ בַּדֶּרֶךְ בַּעֲלֹתוֹ מִמִּצְרָֽיִם׃
3 ಈಗ ನೀನು ಹೋಗಿ ಅಮಾಲೇಕ್ಯರನ್ನು ಹೊಡೆದು, ಅವರಿಗೆ ಉಂಟಾದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿಬಿಟ್ಟು, ಅವರನ್ನು ಕನಿಕರಿಸದೆ ಪುರುಷರನ್ನೂ, ಸ್ತ್ರೀಯರನ್ನೂ, ಚಿಕ್ಕವರನ್ನೂ, ಹಸುಗೂಸುಗಳನ್ನೂ, ದನಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಂದುಹಾಕು,’” ಎಂಬದು.
עַתָּה לֵךְ וְהִכִּיתָה אֶת־עֲמָלֵק וְהַֽחֲרַמְתֶּם אֶת־כׇּל־אֲשֶׁר־לוֹ וְלֹא תַחְמֹל עָלָיו וְהֵמַתָּה מֵאִישׁ עַד־אִשָּׁה מֵֽעֹלֵל וְעַד־יוֹנֵק מִשּׁוֹר וְעַד־שֶׂה מִגָּמָל וְעַד־חֲמֽוֹר׃
4 ಆಗ ಸೌಲನು ತೆಲಾಯಿಮಿನಲ್ಲಿ ಜನರನ್ನು ಕೂಡಿಸಿ, ಲೆಕ್ಕ ಮಾಡಿದನು. ಇಸ್ರಾಯೇಲರ ಕಾಲಾಳುಗಳು ಎರಡು ಲಕ್ಷ ಜನರೂ, ಯೆಹೂದನ ಮನುಷ್ಯರು ಹತ್ತು ಸಾವಿರ ಜನರೂ ಇದ್ದರು.
וַיְשַׁמַּע שָׁאוּל אֶת־הָעָם וַֽיִּפְקְדֵם בַּטְּלָאִים מָאתַיִם אֶלֶף רַגְלִי וַעֲשֶׂרֶת אֲלָפִים אֶת־אִישׁ יְהוּדָֽה׃
5 ಸೌಲನು ಅಮಾಲೇಕ್ಯರ ಪಟ್ಟಣದವರೆಗೂ ಬಂದು, ತಗ್ಗಿನಲ್ಲಿ ಹೊಂಚಿಹಾಕಿದ್ದನು.
וַיָּבֹא שָׁאוּל עַד־עִיר עֲמָלֵק וַיָּרֶב בַּנָּֽחַל׃
6 ಕೇನ್ಯರಿಗೆ, “ಇಸ್ರಾಯೇಲರು ಈಜಿಪ್ಟಿನಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ, ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ, ನೀವು ಅವರ ಮಧ್ಯದಲ್ಲಿಂದ ಹೊರಟು ಹೋಗಿರಿ,” ಎಂದು ಹೇಳಿದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.
וַיֹּאמֶר שָׁאוּל אֶֽל־הַקֵּינִי לְכוּ סֻּרוּ רְדוּ מִתּוֹךְ עֲמָלֵקִי פֶּן־אֹֽסִפְךָ עִמּוֹ וְאַתָּה עָשִׂיתָֽה חֶסֶד עִם־כׇּל־בְּנֵי יִשְׂרָאֵל בַּעֲלוֹתָם מִמִּצְרָיִם וַיָּסַר קֵינִי מִתּוֹךְ עֲמָלֵֽק׃
7 ಆಗ ಸೌಲನು ಹವೀಲದಿಂದ ಈಜಿಪ್ಟಿನ ಪೂರ್ವದಿಕ್ಕಿನಲ್ಲಿರುವ ಶೂರಿಗೆ ಹೋಗುವ ಮೇರೆಯವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು,
וַיַּךְ שָׁאוּל אֶת־עֲמָלֵק מֵֽחֲוִילָה בּוֹאֲךָ שׁוּר אֲשֶׁר עַל־פְּנֵי מִצְרָֽיִם׃
8 ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು, ಆದರೆ ಸಮಸ್ತ ಜನರನ್ನು ಖಡ್ಗದಿಂದ ಸಂಪೂರ್ಣ ನಾಶಮಾಡಿದನು.
וַיִּתְפֹּשׂ אֶת־אֲגַג מֶלֶךְ־עֲמָלֵק חָי וְאֶת־כׇּל־הָעָם הֶחֱרִים לְפִי־חָֽרֶב׃
9 ಸೌಲನೂ, ಅವನ ಜನರೂ ಅಗಾಗನನ್ನೂ ಮೇಲ್ತರವಾದ ಕುರಿಗಳನ್ನೂ ದನಗಳನ್ನೂ ಕುರಿಮರಿಗಳನ್ನೂ, ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದರು. ಆದರೆ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.
וַיַּחְמֹל שָׁאוּל וְהָעָם עַל־אֲגָג וְעַל־מֵיטַב הַצֹּאן וְהַבָּקָר וְהַמִּשְׁנִים וְעַל־הַכָּרִים וְעַל־כׇּל־הַטּוֹב וְלֹא אָבוּ הַחֲרִימָם וְכׇל־הַמְּלָאכָה נְמִבְזָה וְנָמֵס אֹתָהּ הֶחֱרִֽימוּ׃
10 ಆಗ ಯೆಹೋವ ದೇವರ ವಾಕ್ಯವು ಸಮುಯೇಲನಿಗೆ ಉಂಟಾಗಿ,
וַֽיְהִי דְּבַר־יְהֹוָה אֶל־שְׁמוּאֵל לֵאמֹֽר׃
11 “ನಾನು ಸೌಲನನ್ನು ಅರಸನಾಗಿ ಮಾಡಿದ್ದರಿಂದ ದುಃಖಪಡುತ್ತೇನೆ. ಏಕೆಂದರೆ ಅವನು ನನ್ನನ್ನು ಹಿಂಬಾಲಿಸುವುದನ್ನು ಬಿಟ್ಟು, ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ,” ಎಂದರು. ಅದಕ್ಕೆ ಸಮುಯೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವ ದೇವರಿಗೆ ಮೊರೆಯಿಟ್ಟನು.
נִחַמְתִּי כִּֽי־הִמְלַכְתִּי אֶת־שָׁאוּל לְמֶלֶךְ כִּי־שָׁב מֵֽאַחֲרַי וְאֶת־דְּבָרַי לֹא הֵקִים וַיִּחַר לִשְׁמוּאֵל וַיִּזְעַק אֶל־יְהֹוָה כׇּל־הַלָּֽיְלָה׃
12 ಸಮುಯೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಅವನಿಗೆ ಹೀಗೆ ಹೇಳಲಾಗಿತ್ತು, “ಸೌಲನು ತನ್ನ ನೆನಪಿಗಾಗಿ ಒಂದು ಸ್ಮಾರಕವನ್ನು ನಿರ್ಮಿಸಲು ಕರ್ಮೆಲಿಗೆ ಹೋಗಿದ್ದಾನೆ. ನಂತರ ಅಲ್ಲಿಂದ ಮುಂದೆ ಹೋಗಿ ಗಿಲ್ಗಾಲಿಗೆ ಹೋಗಿದ್ದಾನೆ.”
וַיַּשְׁכֵּם שְׁמוּאֵל לִקְרַאת שָׁאוּל בַּבֹּקֶר וַיֻּגַּד לִשְׁמוּאֵל לֵאמֹר בָּֽא־שָׁאוּל הַכַּרְמֶלָה וְהִנֵּה מַצִּיב לוֹ יָד וַיִּסֹּב וַֽיַּעֲבֹר וַיֵּרֶד הַגִּלְגָּֽל׃
13 ಸಮುಯೇಲನು ಸೌಲನ ಬಳಿಗೆ ಬಂದಾಗ, ಸೌಲನು ಅವನಿಗೆ, “ನಿನಗೆ ಯೆಹೋವ ದೇವರ ಆಶೀರ್ವಾದವಾಗಲಿ; ನಾನು ಯೆಹೋವ ದೇವರ ಆಜ್ಞೆಯನ್ನು ಈಡೇರಿಸಿದೆನು,” ಎಂದನು.
וַיָּבֹא שְׁמוּאֵל אֶל־שָׁאוּל וַיֹּאמֶר לוֹ שָׁאוּל בָּרוּךְ אַתָּה לַֽיהֹוָה הֲקִימֹתִי אֶת־דְּבַר יְהֹוָֽה׃
14 ಆಗ ಸಮುಯೇಲನು ಅವನಿಗೆ, “ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು?” ಎಂದನು.
וַיֹּאמֶר שְׁמוּאֵל וּמֶה קֽוֹל־הַצֹּאן הַזֶּה בְּאׇזְנָי וְקוֹל הַבָּקָר אֲשֶׁר אָנֹכִי שֹׁמֵֽעַ׃
15 ಅದಕ್ಕೆ ಸೌಲನು, “ಜನರು ಅಮಾಲೇಕ್ಯರ ಬಳಿಯಿಂದ ತೆಗೆದುಕೊಂಡು ಬಂದವುಗಳು; ಏಕೆಂದರೆ ನಿನ್ನ ದೇವರಾದ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸುವುದಕ್ಕೋಸ್ಕರ ಮೇಲ್ತರವಾದ ಪಶುಕುರಿಗಳನ್ನು ಉಳಿಸಿಟ್ಟು, ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು,” ಎಂದನು.
וַיֹּאמֶר שָׁאוּל מֵעֲמָלֵקִי הֱבִיאוּם אֲשֶׁר חָמַל הָעָם עַל־מֵיטַב הַצֹּאן וְהַבָּקָר לְמַעַן זְבֹחַ לַיהֹוָה אֱלֹהֶיךָ וְאֶת־הַיּוֹתֵר הֶחֱרַֽמְנוּ׃
16 ಆಗ ಸಮುಯೇಲನು ಸೌಲನಿಗೆ, “ಅದಿರಲಿ, ಯೆಹೋವ ದೇವರು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು,” ಎಂದನು. ಅದಕ್ಕವನು, “ಹೇಳು,” ಎಂದನು.
וַיֹּאמֶר שְׁמוּאֵל אֶל־שָׁאוּל הֶרֶף וְאַגִּידָה לְּךָ אֵת אֲשֶׁר דִּבֶּר יְהֹוָה אֵלַי הַלָּיְלָה (ויאמרו) [וַיֹּאמֶר] לוֹ דַּבֵּֽר׃
17 ಆಗ ಸಮುಯೇಲನು, “ನೀನು ನಿನ್ನ ದೃಷ್ಟಿಯಲ್ಲಿ ಚಿಕ್ಕವನಾಗಿರುವಾಗಲೇ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ನೇಮಕವಾದಿಯಲ್ಲವೆ? ಯೆಹೋವ ದೇವರು ನಿನ್ನನ್ನು ಇಸ್ರಾಯೇಲರ ಮೇಲೆ ಅರಸನಾಗಿ ಅಭಿಷೇಕಿಸಿದರಲ್ಲವೆ?
וַיֹּאמֶר שְׁמוּאֵל הֲלוֹא אִם־קָטֹן אַתָּה בְּעֵינֶיךָ רֹאשׁ שִׁבְטֵי יִשְׂרָאֵל אָתָּה וַיִּמְשָׁחֲךָ יְהֹוָה לְמֶלֶךְ עַל־יִשְׂרָאֵֽל׃
18 ಯೆಹೋವ ದೇವರು ನಿನಗೆ, ‘ಹೋಗು ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ, ಅವರು ತೀರಿ ಹೋಗುವವರೆಗೂ ಅವರ ಸಂಗಡ ಯುದ್ಧಮಾಡಬೇಕು,’ ಎಂದು ಆಜ್ಞಾಪಿಸಿದರು.
וַיִּשְׁלָחֲךָ יְהֹוָה בְּדָרֶךְ וַיֹּאמֶר לֵךְ וְהַחֲרַמְתָּה אֶת־הַֽחַטָּאִים אֶת־עֲמָלֵק וְנִלְחַמְתָּ בוֹ עַד כַּלּוֹתָם אֹתָֽם׃
19 ಹೀಗಿರುವಾಗ ನೀನು ಏಕೆ ಯೆಹೋವ ದೇವರ ಮಾತಿಗೆ ವಿಧೇಯನಾಗದೆ, ಕೊಳ್ಳೆಯ ಮೇಲೆ ಬಿದ್ದು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ?” ಎಂದನು.
וְלָמָּה לֹֽא־שָׁמַעְתָּ בְּקוֹל יְהֹוָה וַתַּעַט אֶל־הַשָּׁלָל וַתַּעַשׂ הָרַע בְּעֵינֵי יְהֹוָֽה׃
20 ಆಗ ಸೌಲನು ಸಮುಯೇಲನಿಗೆ, “ಹೌದು, ನಾನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ಯೆಹೋವ ದೇವರು ನನ್ನನ್ನು ಕಳುಹಿಸಿದ ಮಾರ್ಗವಾಗಿ ಹೋಗಿ, ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು, ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು.
וַיֹּאמֶר שָׁאוּל אֶל־שְׁמוּאֵל אֲשֶׁר שָׁמַעְתִּי בְּקוֹל יְהֹוָה וָאֵלֵךְ בַּדֶּרֶךְ אֲשֶׁר־שְׁלָחַנִי יְהֹוָה וָאָבִיא אֶת־אֲגַג מֶלֶךְ עֲמָלֵק וְאֶת־עֲמָלֵק הֶחֱרַֽמְתִּי׃
21 ಆದರೆ ಜನರು ನಿನ್ನ ದೇವರಾದ ಯೆಹೋವ ದೇವರಿಗೆ ಗಿಲ್ಗಾಲಿನಲ್ಲಿ ಬಲಿ ಕೊಡುವುದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣವಾಗಿ ನಾಶಮಾಡಬೇಕೆಂದಿರುವ ದನಕುರಿಗಳಲ್ಲಿ ಉತ್ತಮವಾದವುಗಳನ್ನು ಹಿಡಿದುಕೊಂಡು ಬಂದರು,” ಎಂದನು.
וַיִּקַּח הָעָם מֵהַשָּׁלָל צֹאן וּבָקָר רֵאשִׁית הַחֵרֶם לִזְבֹּחַ לַיהֹוָה אֱלֹהֶיךָ בַּגִּלְגָּֽל׃
22 ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ ಯಜ್ಞಗಳಲ್ಲಿಯೂ ಆಗುವುದೋ? ಇಗೋ, ಯಜ್ಞಕ್ಕಿಂತ ವಿಧೇಯತೆಯು, ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು.
וַיֹּאמֶר שְׁמוּאֵל הַחֵפֶץ לַֽיהֹוָה בְּעֹלוֹת וּזְבָחִים כִּשְׁמֹעַ בְּקוֹל יְהֹוָה הִנֵּה שְׁמֹעַ מִזֶּבַח טוֹב לְהַקְשִׁיב מֵחֵלֶב אֵילִֽים׃
23 ಏಕೆಂದರೆ ಪ್ರತಿಭಟಿಸುವುದು ಮಂತ್ರತಂತ್ರಗಳಷ್ಟು ಪಾಪವಾಗಿದೆ. ಹಟಮಾರಿತನವು ದುಷ್ಟತನಕ್ಕೂ ವಿಗ್ರಹಾರಾಧನೆಗೂ ಸಮಾನವಾಗಿದೆ. ನೀನು ಯೆಹೋವ ದೇವರ ವಾಕ್ಯವನ್ನು ಅಲಕ್ಷ್ಯಮಾಡಿದ್ದರಿಂದ ಅವರು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕರಿಸಿಬಿಟ್ಟಿದ್ದಾರೆ.”
כִּי חַטַּאת־קֶסֶם מֶרִי וְאָוֶן וּתְרָפִים הַפְצַר יַעַן מָאַסְתָּ אֶת־דְּבַר יְהֹוָה וַיִּמְאָסְךָ מִמֶּֽלֶךְ׃
24 ಆಗ ಸೌಲನು ಸಮುಯೇಲನಿಗೆ, “ನಾನು ಯೆಹೋವ ದೇವರ ಆಜ್ಞೆಯನ್ನೂ, ನಿನ್ನ ಮಾತುಗಳನ್ನೂ ಮೀರಿದ್ದರಿಂದ ನಾನು ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
וַיֹּאמֶר שָׁאוּל אֶל־שְׁמוּאֵל חָטָאתִי כִּֽי־עָבַרְתִּי אֶת־פִּֽי־יְהֹוָה וְאֶת־דְּבָרֶיךָ כִּי יָרֵאתִי אֶת־הָעָם וָאֶשְׁמַע בְּקוֹלָֽם׃
25 ಆದ್ದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ, ನಾನು ಯೆಹೋವ ದೇವರನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರುಗಿ ಬಾ,” ಎಂದು ಬೇಡಿಕೊಂಡನು.
וְעַתָּה שָׂא נָא אֶת־חַטָּאתִי וְשׁוּב עִמִּי וְאֶֽשְׁתַּחֲוֶה לַיהֹוָֽה׃
26 ಆದರೆ ಸಮುಯೇಲನು ಸೌಲನಿಗೆ, “ನಾನು ನಿನ್ನ ಸಂಗಡ ಹಿಂದಿರುಗಿ ಬರುವುದಿಲ್ಲ. ಏಕೆಂದರೆ ನೀನು ಯೆಹೋವ ದೇವರ ವಾಕ್ಯವನ್ನು ತಿರಸ್ಕರಿಸಿದ್ದೀ. ಯೆಹೋವ ದೇವರು ನಿನ್ನನ್ನು ಇಸ್ರಾಯೇಲರ ಮೇಲೆ ಅರಸನಾಗಿರದ ಹಾಗೆ ತಿರಸ್ಕಾರಮಾಡಿಬಿಟ್ಟರು,” ಎಂದು ಹೇಳಿದನು.
וַיֹּאמֶר שְׁמוּאֵל אֶל־שָׁאוּל לֹא אָשׁוּב עִמָּךְ כִּי מָאַסְתָּה אֶת־דְּבַר יְהֹוָה וַיִּמְאָסְךָ יְהֹוָה מִֽהְיוֹת מֶלֶךְ עַל־יִשְׂרָאֵֽל׃
27 ಸಮುಯೇಲನು ಹೋಗುವುದಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡಿದುಕೊಂಡನು. ಆಗ ಅದು ಹರಿದುಹೋಯಿತು.
וַיִּסֹּב שְׁמוּאֵל לָלֶכֶת וַיַּחֲזֵק בִּכְנַף־מְעִילוֹ וַיִּקָּרַֽע׃
28 ಸಮುಯೇಲನು ಅವನಿಗೆ, “ನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಯೆಹೋವ ದೇವರು ಈ ಹೊತ್ತು ಕಿತ್ತು, ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟರು.
וַיֹּאמֶר אֵלָיו שְׁמוּאֵל קָרַע יְהֹוָה אֶֽת־מַמְלְכוּת יִשְׂרָאֵל מֵעָלֶיךָ הַיּוֹם וּנְתָנָהּ לְרֵעֲךָ הַטּוֹב מִמֶּֽךָּ׃
29 ಇಸ್ರಾಯೇಲಿನ ಪ್ರತಾಪರು ಸುಳ್ಳು ಹೇಳುವವರಲ್ಲ, ಮಾತನ್ನು ಹಿಂತೆಗೆದುಕೊಳ್ಳುವವರಲ್ಲ. ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದನು.
וְגַם נֵצַח יִשְׂרָאֵל לֹא יְשַׁקֵּר וְלֹא יִנָּחֵם כִּי לֹא אָדָם הוּא לְהִנָּחֵֽם׃
30 ಅದಕ್ಕವನು, “ನಾನು ಪಾಪವನ್ನು ಮಾಡಿದೆನು. ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ, ಇಸ್ರಾಯೇಲರ ಮುಂದೆಯೂ ನನ್ನನ್ನು ಘನಪಡಿಸು. ನಾನು ನಿನ್ನ ದೇವರಾದ ಯೆಹೋವ ದೇವರಿಗೆ ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ,” ಎಂದನು.
וַיֹּאמֶר חָטָאתִי עַתָּה כַּבְּדֵנִי נָא נֶגֶד זִקְנֵֽי־עַמִּי וְנֶגֶד יִשְׂרָאֵל וְשׁוּב עִמִּי וְהִֽשְׁתַּחֲוֵיתִי לַיהֹוָה אֱלֹהֶֽיךָ׃
31 ಹಾಗೆಯೇ ಸಮುಯೇಲನು ತಿರುಗಿ ಸೌಲನ ಹಿಂದೆ ಹೋದನು. ಸೌಲನು ಯೆಹೋವ ದೇವರನ್ನು ಆರಾಧಿಸಿದನು.
וַיָּשׇׁב שְׁמוּאֵל אַחֲרֵי שָׁאוּל וַיִּשְׁתַּחוּ שָׁאוּל לַיהֹוָֽה׃
32 ಸಮುಯೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ,” ಎಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ, “ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತು,” ಎಂದುಕೊಂಡನು.
וַיֹּאמֶר שְׁמוּאֵל הַגִּישׁוּ אֵלַי אֶת־אֲגַג מֶלֶךְ עֲמָלֵק וַיֵּלֶךְ אֵלָיו אֲגַג מַעֲדַנֹּת וַיֹּאמֶר אֲגָג אָכֵן סָר מַר־הַמָּֽוֶת׃
33 ಆದರೆ ಸಮುಯೇಲನು ಅವನಿಗೆ, “ನಿನ್ನ ಖಡ್ಗವು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗಿ ಮಾಡಿತೋ, ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು,” ಎಂದು ಹೇಳಿ, ಸಮುಯೇಲನು ಗಿಲ್ಗಾಲಿನಲ್ಲಿ ಯೆಹೋವ ದೇವರ ಮುಂದೆ ಅಗಾಗನಿಗೆ ಮರಣದಂಡನೆ ವಿಧಿಸಿದನು.
וַיֹּאמֶר שְׁמוּאֵל כַּאֲשֶׁר שִׁכְּלָה נָשִׁים חַרְבֶּךָ כֵּן־תִּשְׁכַּל מִנָּשִׁים אִמֶּךָ וַיְשַׁסֵּף שְׁמוּאֵל אֶת־אֲגָג לִפְנֵי יְהֹוָה בַּגִּלְגָּֽל׃
34 ಸಮುಯೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು.
וַיֵּלֶךְ שְׁמוּאֵל הָרָמָתָה וְשָׁאוּל עָלָה אֶל־בֵּיתוֹ גִּבְעַת שָׁאֽוּל׃
35 ಸಮುಯೇಲನು ತಾನು ಸಾಯುವ ದಿವಸದವರೆಗೂ ಸೌಲನನ್ನು ತಿರುಗಿ ಕಾಣಲು ಬರಲಿಲ್ಲ. ಸಮುಯೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನಾಗಮಾಡಿದ್ದಕ್ಕೋಸ್ಕರ ಯೆಹೋವ ದೇವರು ದುಃಖಪಟ್ಟರು.
וְלֹֽא־יָסַף שְׁמוּאֵל לִרְאוֹת אֶת־שָׁאוּל עַד־יוֹם מוֹתוֹ כִּֽי־הִתְאַבֵּל שְׁמוּאֵל אֶל־שָׁאוּל וַיהֹוָה נִחָם כִּֽי־הִמְלִיךְ אֶת־שָׁאוּל עַל־יִשְׂרָאֵֽל׃

< ಸಮುವೇಲನು - ಪ್ರಥಮ ಭಾಗ 15 >