< ಸಮುವೇಲನು - ಪ್ರಥಮ ಭಾಗ 18 >
1 ದಾವೀದನು ಸೌಲನ ಸಂಗಡ ಮಾತನಾಡಿ ಮುಗಿಸಿದ ಮೇಲೆ, ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು.
Ahora, después de que terminó la conversación de David con Saúl, el alma de Jonatán se unió al alma de David, y David se volvió tan querido para él como su propia vida.
2 ಇದಲ್ಲದೆ ಸೌಲನು ಆ ದಿವಸ ಅವನನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡನು. ತಿರುಗಿ ಅವನ ತಂದೆಯ ಮನೆಗೆ ಹೋಗಗೊಡಿಸಲಿಲ್ಲ.
Y ese día Saúl tomó a David y no le permitió volver a la casa de su padre.
3 ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದನನ್ನು ಪ್ರೀತಿಮಾಡಿದ್ದರಿಂದ, ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು.
Entonces Jonatán y David llegaron a un acuerdo juntos, debido a que Jonatán lo amaba como a su propia alma.
4 ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ, ತನ್ನ ವಸ್ತ್ರಗಳನ್ನೂ, ಖಡ್ಗವನ್ನೂ, ಬಿಲ್ಲನ್ನೂ, ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು.
Y Jonatán se quitó la túnica que llevaba puesta y se la dio a David, con todo su atuendo militar, incluso su espada y su arco y la banda alrededor de su cuerpo.
5 ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ, ಅಲ್ಲಿಗೆ ಹೋಗಿ ಅವನು ಎಲ್ಲವನ್ನು ವಿವೇಕದಿಂದ ಬಹು ಯಶಸ್ವಿಯಾಗಿ ಮಾಡುತ್ತಿದ್ದನು. ಆದ್ದರಿಂದ ಸೌಲನು ಅವನನ್ನು ಸೈನ್ಯದ ಮೇಲೆ ಅಧಿಕಾರಿಯಾಗಿ ನೇಮಿಸಿದನು. ಇದು ಸಮಸ್ತ ಜನರಿಗೂ, ಸೌಲನ ಸಮಸ್ತ ಸೇವಕರಿಗೂ ಮೆಚ್ಚಿಕೆಯಾಗಿತ್ತು.
Y David fue a dondequiera que Saúl lo envió, e hizo con sabiduría: y Saúl lo puso a la cabeza de sus hombres de guerra, y esto agradó a todo el pueblo, así como a los siervos de Saúl.
6 ದಾವೀದನು ಫಿಲಿಷ್ಟಿಯರನ್ನು ಹೊಡೆದು ಜನರಸಹಿತವಾಗಿ ಬರುವಾಗ, ಇಸ್ರಾಯೇಲರ ಸಮಸ್ತ ಪಟ್ಟಣಗಳಿಂದ ಸ್ತ್ರೀಯರು ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಸಂತೋಷದಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು.
Ahora, en su camino, cuando David regresó después de la destrucción del filisteo, las mujeres salieron de todos los pueblos de Israel, con cantos y bailes, y se encontraron con David con melodía y alegría e instrumentos musicales.
7 ಆ ಸ್ತ್ರೀಯರು ಒಬ್ಬರಿಗೊಬ್ಬರು, “ಸೌಲನು ಸಾವಿರಗಳಷ್ಟು ಕೊಂದನು, ದಾವೀದನು ಹತ್ತು ಸಾವಿರಗಳಷ್ಟು ಕೊಂದನು,” ಎಂದು ಹಾಡಿದರು.
Y las mujeres, unas a otras en su canto, dijeron: Saúl ha matado a sus miles y David a sus decenas de miles.
8 ಇದರಿಂದ ಸೌಲನಿಗೆ ಬಹು ಕೋಪವಾಯಿತು. ಆ ಹಾಡಿನಿಂದ ಅವನಿಗೆ ಬಹುಬೇಸರವಾಯಿತು. “ಇವರು ದಾವೀದನಿಗೆ ಹತ್ತು ಸಾವಿರಗಳಷ್ಟು ಎಂದು ಹಾಡಿದ್ದಾರೆ; ನನಗೆ ಸಾವಿರಗಳಷ್ಟೇ ಎಂದು ಹಾಡಿದ್ದಾರೆ; ಹಾಗಾದರೆ, ಅವನಿಗೆ ರಾಜ್ಯವಲ್ಲದೆ ಇನ್ನು ಆಗಬೇಕಾದದ್ದೇನು?” ಎಂದುಕೊಂಡನು.
Y Saúl estaba muy enojado, y esta frase le resultaba desagradable; y él dijo: Le han dado crédito a David por decenas de miles, y para mí solo por miles: ¿qué más hay para él sino el reino?
9 ಆ ದಿವಸ ಮೊದಲುಗೊಂಡು ಸೌಲನು ದಾವೀದನ ಮೇಲೆ ಮತ್ಸರದ ಕಣ್ಣಿಟ್ಟನು.
Y desde aquel día Saúl miraba con envidia a David.
10 ಮಾರನೆಯ ದಿವಸದಲ್ಲಿ ದೇವರಿಂದ ಅನುಮತಿಸಿದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಬುದ್ಧಿಗೆಟ್ಟು ಮನೆಯಲ್ಲಿ ಕೂಗಾಡತೊಡಗಿದನು. ಆಗ ದಾವೀದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಕಿನ್ನರಿಯನ್ನು ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.
Al día siguiente, un espíritu maligno de Dios vino sobre Saúl y empezó a hablar incoherencias entre los sirvientes de su casa, mientras que David tocaba música para él, como lo hacía día tras día. y Saúl tenía su lanza en la mano.
11 ಆಗ ಸೌಲನು, “ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನು,” ಎಂದು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.
Y Saúl, balanceando la lanza en su mano, dijo: Le daré un golpe a David y lo clavaré en la pared. Y David se escapó de él dos veces.
12 ಸೌಲನು ದಾವೀದನಿಗೆ ಭಯಪಟ್ಟನು. ಏಕೆಂದರೆ ಯೆಹೋವ ದೇವರು ಅವನ ಸಂಗಡ ಇದ್ದರು. ಸೌಲನ ಕಡೆಯಿಂದ ಹೊರಟು ಹೋಗಿದ್ದರು.
Entonces Saúl temió a David, porque el Señor estaba con David y se había ido de Saúl.
13 ಆದ್ದರಿಂದ ಸೌಲನು ಅವನನ್ನು ತನ್ನ ಬಳಿಯಿಂದ ಹೊರಡಿಸಿಬಿಟ್ಟು, ಸಾವಿರ ಜನರಿಗೆ ಪ್ರಧಾನನ್ನಾಗಿ ಮಾಡಿದನು. ಹಾಗೆಯೇ ಅವನು ದಳಪತಿಯಾಗಿ ಸೈನಿಕರನ್ನು ಕರೆದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇದ್ದನು.
Entonces Saúl lo despidió y lo convirtió en capitán de más de mil; y salía a campaña y volvía.
14 ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ತನ್ನ ಸಕಲ ಮಾರ್ಗಗಳಲ್ಲಿ ವಿವೇಕದಿಂದ ವರ್ತಿಸಿ ಜಯಶಾಲಿಯಾಗುತ್ತಿದ್ದನು.
Y en todas sus obras David hizo sabiamente; y el Señor estaba con él.
15 ಅವನು ಜಯಶಾಲಿಯಾಗುತ್ತಿದ್ದದ್ದನ್ನು ಸೌಲನು ಕಂಡು ಅವನಿಗೆ ಭಯಪಟ್ಟಿದ್ದನು.
Y cuando Saúl vio lo sabio que lo había hecho, tuvo miedo de él.
16 ಆದರೆ ಇಸ್ರಾಯೇಲ್ ಜನರೂ ಯೆಹೂದ ಜನರೂ ದಾವೀದನು ತಮ್ಮ ಮುಂದೆ ಹೊರಟು ಹೋಗುತ್ತಾ ಬರುತ್ತಾ ಇರುವುದರಿಂದ ಅವನನ್ನು ಪ್ರೀತಿ ಮಾಡಿದರು.
Pero todo Israel y Judá amaban a David, porque él salía y regresaba delante de ellos.
17 ಆಗ ಸೌಲನು, “ನಾನು ಅವನ ಮೇಲೆ ವಿರೋಧವಾಗಿ ಕೈಯೆತ್ತಬಾರದು. ಫಿಲಿಷ್ಟಿಯರು ಅದನ್ನು ಮಾಡಲಿ,” ಎಂದು ತನ್ನಷ್ಟಕ್ಕೆ ಅಂದುಕೊಂಡು ದಾವೀದನಿಗೆ, “ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು, ನೀನು ನನಗೋಸ್ಕರ ಪರಾಕ್ರಮಶಾಲಿಯಾಗಿದ್ದು ಯೆಹೋವ ದೇವರ ಯುದ್ಧಗಳನ್ನು ನಡೆಸು,” ಎಂದನು.
Entonces Saúl dijo a David: Aquí está mi hija mayor, Merab, a quien te daré por tu esposa: sé fuerte conmigo, luchando en las guerras del Señor. Porque dijo Saúl: Que no sea por mí que venga su muerte, sino por los filisteos.
18 ದಾವೀದನು ಸೌಲನಿಗೆ, “ಅರಸನಿಗೆ ಅಳಿಯನಾಗಿರುವುದಕ್ಕೆ ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು? ಇಸ್ರಾಯೇಲಿನಲ್ಲಿ ನನ್ನ ತಂದೆಯ ಗೋತ್ರವು ಎಷ್ಟು ಮಾತ್ರವು?” ಎಂದನು.
Entonces David dijo a Saúl: ¿Quién soy yo, y cuál es la familia de mi padre en Israel, para que yo sea yerno del rey?
19 ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಮದುವೆಮಾಡಿಕೊಡುವ ಸಮಯ ಬಂದಾಗ, ಅವಳನ್ನು ಮೆಹೋಲದವನಾದ ಅದ್ರಿಯೇಲ್ ಎಂಬವನಿಗೆ ಕೊಟ್ಟು ಮದುವೆಮಾಡಿದನು.
Pero cuando llegó el momento de entregar a Merab, la hija de Saúl, a David, ella fue entregada a Adriel de Mehola.
20 ಸೌಲನ ಮತ್ತೊಬ್ಬ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಅದು ಸೌಲನಿಗೆ ತಿಳಿದುಬಂದಾಗ, ಆ ಕಾರ್ಯವು ಅವನಿಗೆ ಮೆಚ್ಚಿಕೆಯಾಯಿತು.
Y la hija de Saúl, Mical, estaba enamorada de David, y Saúl se lo dijo y se alegró.
21 “ಅವನಿಗೆ ಉರುಲಾಗಿರುವ ಹಾಗೆಯೂ, ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು,” ಎಂದುಕೊಂಡನು. ಆದ್ದರಿಂದ ಸೌಲನು ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೆಯ ಅವಕಾಶ,” ಎಂದನು.
Entonces Saúl dijo: Se la daré, para que pueda ser un peligro para él, y para que las manos de los filisteos estén contra él. Entonces Saúl dijo a David: Hoy serás mi yerno por segunda vez.
22 ಸೌಲನು ತನ್ನ ಸೇವಕರಿಗೆ, “ನೀವು ದಾವೀದನ ಸಂಗಡ ಅಂತರಂಗವಾಗಿ ಮಾತನಾಡಿ, ಇಗೋ, ಅರಸನು ನಿನ್ನ ಮೇಲೆ ಪ್ರೀತಿಯುಳ್ಳವನಾಗಿದ್ದಾನೆ; ಈಗ ನೀನು ಅರಸನಿಗೆ ಅಳಿಯನಾಗೆಂದು, ಹೇಳಿರಿ,” ಎಂದು ಆಜ್ಞಾಪಿಸಿದನು.
Entonces Saúl dio órdenes a sus siervos, diciendo: Habla en secreto con David y dile: Mira cómo el rey se deleita en ti y cómo te aman todos sus siervos; sé el yerno del rey.
23 ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು, “ನಾನು ದರಿದ್ರನೂ ಅಲ್ಪನೂ ಆಗಿರುವಾಗ, ನಾನು ಅರಸನಿಗೆ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿಯೆಂದು ನೆನಸುತ್ತೀರೋ?” ಎಂದನು.
Y los criados de Saúl dijeron estas cosas a David. Y David dijo: ¿Te parece algo pequeño ser el yerno del rey, ya que soy un hombre pobre, que no tiene gran nombre?
24 ಆಗ ಸೌಲನ ಸೇವಕರು ಸೌಲನಿಗೆ, ದಾವೀದನು ಈ ಪ್ರಕಾರವಾಗಿ ಮಾತನಾಡಿದನೆಂದು ಹೇಳಿದರು.
Y los criados de Saúl le contaron lo que David había dicho.
25 ಆದರೆ ಸೌಲನು ದಾವೀದನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ, “ನೀವು ದಾವೀದನಿಗೆ ಅರಸನು ಯಾವ ತೆರವನ್ನು ಅಪೇಕ್ಷಿಸದೆ, ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸುತ್ತಾನೆಂದು ಹೇಳಿರಿ,” ಎಂದನು.
Entonces Saúl dijo: Entonces dile a David: El rey no desea ningún precio de novia, sino solo los prepucios de cien filisteos para que el rey pueda vencer a sus enemigos. Pero fue en la mente de Saúl que David podría llegar a su fin por las manos de los filisteos.
26 ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ, ಅರಸನಿಗೆ ಅಳಿಯನಾಗುವುದು ಅವನಿಗೆ ಚೆನ್ನಾಗಿ ಕಾಣಿಸಿತು.
Y cuando sus siervos dijeron estas palabras a David, se alegró mucho de ser el yerno del rey. Y los días aún no habían pasado.
27 ಆದ್ದರಿಂದ ನೇಮಿಸಿದ ದಿವಸಗಳು ಈಡೇರುವುದಕ್ಕಿಂತ ಮುಂಚೆ ದಾವೀದನು ಎದ್ದು, ತನ್ನ ಜನರನ್ನು ಕರಕೊಂಡು ಹೋಗಿ, ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಹೊಡೆದು, ಅವರ ಮುಂದೊಗಲುಗಳನ್ನು ತಂದು, ತಾನು ಅರಸನಿಗೆ ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಪುತ್ರಿಯಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು.
Entonces David y sus hombres se levantaron y fueron y mataron a doscientos de los filisteos; y David tomó sus prepucios y dio el número completo de ellos al rey, para que él pudiera ser el yerno del rey. Y Saúl le dio a su hija Mical por su esposa.
28 ಸೌಲನು, ಯೆಹೋವ ದೇವರು ದಾವೀದನ ಸಂಗಡ ಇದ್ದಾರೆಂದೂ, ತನ್ನ ಮಗಳಾದ ಮೀಕಲಳು ಅವನನ್ನು ಪ್ರೀತಿ ಮಾಡಿದ್ದಳೆಂದು ತಿಳಿದುಕೊಂಡನು.
Y a Saúl le quedó claro que el Señor estaba con David; y fue amado por todo Israel.
29 ಸೌಲನು ದಾವೀದನಿಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು. ಸೌಲನು ದಾವೀದನಿಗೆ ಜೀವಮಾನವೆಲ್ಲಾ ಶತ್ರುವಾಗಿದ್ದನು.
Y el temor de Saúl a David se hizo aún mayor, y él siguió odiándolo, día tras día.
30 ಫಿಲಿಷ್ಟಿಯರ ಪ್ರಧಾನರು ಯುದ್ಧಕ್ಕೆ ಬರುತ್ತಿದ್ದರು. ಅವರು ಹೊರಟು ಬಂದಾಗಲೆಲ್ಲಾ ದಾವೀದನು ಸೌಲನ ಸಮಸ್ತ ಸೇನಾಪತಿಗಳಿಗಿಂತ ಅತ್ಯಧಿಕ ಜಯಶೀಲನಾಗಿ ಹಿಂದಿರುಗುತ್ತಿದ್ದನು. ಆದ್ದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.
Entonces los gobernantes de los filisteos salieron a la guerra: y cada vez que salían, David hacía más sabiamente que todos los demás siervos de Saúl, para que su nombre se honrara grandemente.