< ಸಮುವೇಲನು - ಪ್ರಥಮ ಭಾಗ 21 >

1 ದಾವೀದನು ನೋಬಿನಲ್ಲಿರುವ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ, “ಒಬ್ಬರೂ ನಿನ್ನ ಸಂಗಡ ಬಾರದೆ, ನೀನು ಒಂಟಿಯಾಗಿ ಬಂದದ್ದೇನು?” ಎಂದು ಅವನನ್ನು ಕೇಳಿದನು.
A HELE aku la o Davida ma Noba io Ahimeleka la ke kahuna: a makau iho la o Ahimeleka i ka halawai ana me Davida, i aku la ia ia, No ke aha la o oe wale no, aohe kanaka me oe.
2 ದಾವೀದನು ಯಾಜಕನಾದ ಅಹೀಮೆಲೆಕನಿಗೆ, “ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿದ್ದು, ಇಂಥದ್ದೆಂದು ಒಬ್ಬರಿಗೂ ತಿಳಿಯಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.
I mai la o Davida ia Ahimeleka i ke kahuna, Ua kauoha mai ke alii ia'u i kekahi mea, a ua i mai ia'u, Mai hoike iki i kekahi kanaka i ka mea a'u i hoouna aku ai ia oe, a me ka mea a'u i kauoha aku ai ia oe: a ua hoonoho aku au i na kauwa no kela wahi a me keia wahi.
3 ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ಐದು ರೊಟ್ಟಿಗಳನ್ನಾದರೂ, ನಿನಗೆ ದೊರಕಿದ ಯಾವುದನ್ನಾದರೂ ನನಗೆ ಕೊಡು,” ಎಂದನು.
Ano hoi, heaha ka mea malalo o kou lima? e haawi mai oe ma kuu lima i na pai berena elima, a i na mea paha i loaa.
4 ಯಾಜಕನು ದಾವೀದನಿಗೆ ಉತ್ತರವಾಗಿ, “ಪರಿಶುದ್ಧವಾಗಿಸಿದ ರೊಟ್ಟಿಯ ಹೊರತಾಗಿ, ನನ್ನ ಕೈಯಲ್ಲಿ ಸಾಧಾರಣವಾದ ಒಂದು ರೊಟ್ಟಿಯಾದರೂ ಇಲ್ಲ. ಆ ರೊಟ್ಟಿಗಳನ್ನು ಸ್ತ್ರೀಯರೊಂದಿಗೆ ಸಂಪರ್ಕ ಮಾಡದವರಿಗೆ ಕೊಡಬಹುದು,” ಎಂದನು.
Olelo aku la ke kahuna ia Davida, i aku la, Aohe berena laa ole malalo o kuu lima, aka, he berena laa no nae; ina paha ua hookaokoa na kanaka ui mai na wahine aku.
5 ದಾವೀದನು ಯಾಜಕನಿಗೆ ಉತ್ತರವಾಗಿ, “ನಾನು ಹೊರಡುವುದಕ್ಕಿಂತ ಮುಂಚೆ ನಿನ್ನೆಯೂ, ಮೊನ್ನೆಯೂ ಸ್ತ್ರೀಯರು ನಮಗೆ ದೂರವಾಗಿದ್ದರು. ಅಪವಿತ್ರವಾದ ಕಾರ್ಯಗಳಿಗೆ ಹೋಗುವಾಗಲೂ ಪುರುಷರು ಶುದ್ಧರಾಗಿರುತ್ತಾರೆ. ಇಂದು ಅದಕ್ಕಿಂತಲೂ ಹೆಚ್ಚಾಗಿರುವರಲ್ಲವೇ?” ಎಂದನು.
Olelo aku la o Davida i ke kahuna, i aku la ia ia, He oiaio, ua hookaawaleia na wahine mai o makou aku i neia mau la ekolu paha, i ko'u hele ana mai, a ua maemae na ipu o na kanaka ui nei, a ua like keia me ka berena laa ole, oiaio hoi ka mea i hoolaaia i keia la ilalo o na ipu.
6 ಆಗ ಯೆಹೋವ ದೇವರ ಸನ್ನಿಧಿಯಿಂದ ತೆಗೆಯಲಾದ ಸಮ್ಮುಖದ ರೊಟ್ಟಿಗಳ ಹೊರತು, ಬೇರೆ ರೊಟ್ಟಿ ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧವಾಗಿಸಿದ ರೊಟ್ಟಿಯನ್ನು ಕೊಟ್ಟನು. ಏಕೆಂದರೆ ಅವುಗಳನ್ನು ತೆಗೆದುಕೊಳ್ಳುವ ದಿನದಲ್ಲಿ ಅವುಗಳಿಗೆ ಬದಲಾಗಿ ಬಿಸಿ ರೊಟ್ಟಿಗಳನ್ನು ಇಡಲೇಬೇಕು.
A haawi aku la ke kahuna i ka berena laa ia ia; no ka mea, aohe berena e ae malaila, o ka berena hoike wale no, i laweia mai ke alo o Iehova mai, no ka waiho ana i ka berena mahana i ka la i laweia aku ai oia.
7 ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಯೆಹೋವ ದೇವರ ಆಲಯದ ಮುಂದೆ ಉಳಿದುಕೊಂಡಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.
Aia no ilaila kekahi kanaka o na kauwa a Saula ia la, e kali ana imua o Iehova, o Doega kona inoa, no Edoma, he luna o na kahuhipa o Saula.
8 ಆಗ ದಾವೀದನು ಅಹೀಮೆಲೆಕನಿಗೆ, “ಇಲ್ಲಿ ನಿನ್ನ ಕೈ ವಶದಲ್ಲಿ ಈಟಿಯಾದರೂ, ಖಡ್ಗವಾದರೂ ಇಲ್ಲವೋ? ಏಕೆಂದರೆ ಅರಸನ ಕಾರ್ಯವು ಅವಸರವಾದುದರಿಂದ ನಾನು ನನ್ನ ಖಡ್ಗವನ್ನಾದರೂ, ಆಯುಧಗಳನ್ನಾದರೂ ತೆಗೆದುಕೊಂಡು ಬರಲಿಲ್ಲ,” ಎಂದನು.
Ninau aku la o Davida ia Ahimeleka, Aole anei he ihe maanei malalo o kou lima, a he pahikaua paha? no ka mea, aole au i lawe mai nei i kuu pahikaua, aole hoi i ka'u mea kaua, no ka wikiwiki o ka ke alii mea.
9 ಅದಕ್ಕೆ ಯಾಜಕನು, “ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನು ಏಫೋದಿನ ಹಿಂದೆ ಒಂದು ಬಟ್ಟೆಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೋ. ಏಕೆಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ,” ಎಂದನು. ಅದಕ್ಕೆ ದಾವೀದನು, “ಅದರಂಥದ್ದು ಮತ್ತೊಂದಿಲ್ಲ, ಅದನ್ನೇ ಕೊಡು,” ಎಂದನು.
I mai la ke kahuna, O ka pahikaua a Golia ke kanaka Pilisetia au i pepehi ai ma ke awawa o Ela, aia hoi ia i wahiia i ka lole aahu mahope o ka epoda; a i lawe oe ia mea, e lawe, no ka mea, aohe pahi e ae, oia wale no. I aku la o Davida, Aohe mea e like ana me ia, e haawi mai ia ia'u.
10 ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.
Ku ae la o Davida, a holo ia la mai ke alo aku o Saula, a hele mai io Akisa la ke alii o Gata.
11 ಆಕೀಷನ ಸೇವಕರು ಅವನಿಗೆ, “ಇವನು ನಾಡಿನ ಅರಸನಾದ ದಾವೀದನಲ್ಲವೋ? “‘ಸೌಲನು ಸಾವಿರಗಳನ್ನೂ, ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನು,’ ಎಂದು ಸ್ತ್ರೀಯರು ನೃತ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ಇವನನ್ನು ಕುರಿತಲ್ಲವೋ?”
I mai la na kauwa a Akisa ia ia, Aole anei keia o Davida, ke alii o ka aina? aole anei lakou i mele ai kekahi i kekahi nona me ka haa ana, i ka i ana'e, He mau tausani ka Saula i pepehi ai, he umi tausani hoi ka Davida?
12 ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್ ಊರಿನ ಅರಸನಾದ ಆಕೀಷನಿಗೆ ಹೆದರಿ,
A waiho iho la o Davida i keia mau olelo maloko o kona naau, a makau nui iho la ia Akisa ke alii o Gata.
13 ಅವರ ಕಣ್ಣು ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ, ಅವರಿಗೆ ತನ್ನನ್ನು ಹುಚ್ಚನ ಹಾಗೆಯೇ ತೋರಮಾಡಿ, ದ್ವಾರದ ಕದಗಳನ್ನು ಕೆರೆಯುತ್ತಾ, ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.
A hoololi ae la ia i kona ano imua o lakou, a hoohalike ia ia iho me he hehena la iloko o ko lakou lima, a kahakaha aku la ia ma na pani o na ipuka, a helelei iho la kona kuha ma kona umiumi.
14 ಆಗ ಆಕೀಷನು ತನ್ನ ಸೇವಕರಿಗೆ, “ಈ ಮನುಷ್ಯನು ನೋಡಿರಿ! ಅವನು ಹುಚ್ಚನಾಗಿದ್ದಾನೆ. ಇವನನ್ನು ನನ್ನ ಬಳಿಗೆ ಏಕೆ ತೆಗೆದುಕೊಂಡು ಬಂದಿರಿ?
A olelo aku la o Akisa i kana poe kauwa, Aia hoi, e nana oukou, ua hehena neia kanaka: no ke aha la oukou i lawe mai ia ia io'u nei?
15 ಹುಚ್ಚರು ನನಗೆ ಅವಶ್ಯವೆಂದು ನೆನಸಿ ನನ್ನನ್ನು ಮರುಳುಮಾಡಿ ಬೇಸರಗೊಳಿಸುವುದಕ್ಕಾಗಿ ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇವನು ನನ್ನ ಮನೆಯಲ್ಲಿ ಬರಬೇಕೋ?” ಎಂದನು.
He pono anei au i na mea hehena, i lawe mai ai oukou ia ia nei e hoohalike me he hehena la imua ou? e komo anei ia maloko o kuu hale?

< ಸಮುವೇಲನು - ಪ್ರಥಮ ಭಾಗ 21 >