< ಸಮುವೇಲನು - ಪ್ರಥಮ ಭಾಗ 30 >

1 ದಾವೀದನೂ, ಅವನ ಜನರೂ ಮೂರನೆಯ ದಿವಸದಲ್ಲಿ ಚಿಕ್ಲಗ್ ಊರಿಗೆ ಬಂದು ಸೇರಿದರು. ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ, ಚಿಕ್ಲಗಿನ ಮೇಲೆಯೂ ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
Tres días después, David y sus hombres llegaron de nuevo a Siclag. Unos amalecitas habían hecho una incursión en el Néguev y en Siclag. Habían atacado Siclag y la habían incendiado.
2 ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರನ್ನಾದರೂ, ಕಿರಿಯರನ್ನಾದರೂ ಕೊಂದುಹಾಕದೆ, ಅವರನ್ನು ಸೆರೆಯಾಗಿ ತೆಗೆದುಕೊಂಡು, ತಮ್ಮ ಮಾರ್ಗವಾಗಿ ಹೊರಟು ಹೋದರು.
Habían capturado a las mujeres y a todos los demás allí, jóvenes y ancianos. No habían matado a nadie, pero se llevaron a todos con ellos al marcharse.
3 ದಾವೀದನೂ, ಅವನ ಜನರೂ ಆ ಪಟ್ಟಣಕ್ಕೆ ಬಂದಾಗ, ಅದು ಬೆಂಕಿಯಿಂದ ಸುಟ್ಟುಹೋಗಿರುವುದನ್ನೂ ಮತ್ತು ಆ ಜನರ ಹೆಂಡತಿಯರೂ ಅವರ ಪುತ್ರ ಪುತ್ರಿಯರೂ ಸೆರೆಯಾಗಿ ಹೋಗಿರುವುದನ್ನೂ ಕಂಡರು.
Cuando David y sus hombres volvieron a la ciudad, la encontraron quemada hasta los cimientos, y a sus mujeres e hijos capturados.
4 ಆಗ ದಾವೀದನೂ, ಅವನ ಸಂಗಡ ಇದ್ದ ಜನರೂ ಅಳುವುದಕ್ಕೆ ತಮ್ಮಲ್ಲಿ ಶಕ್ತಿಯಿಲ್ಲದೆ ಹೋಗುವವರೆಗೂ ತಮ್ಮ ಸ್ವರವನ್ನೆತ್ತಿ ಅತ್ತರು.
David y sus hombres lloraron a gritos hasta no poder más.
5 ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೆಯೇಲಿನವಳಾದ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ವಿಧವೆಯಾಗಿದ್ದ ಅಬೀಗೈಲಳು ಸೆರೆಯಾಗಿ ಹೋಗಿದ್ದರು.
Las dos esposas de David también habían sido tomadas como prisioneras: Ahinoam, de Jezreel, y Abigail, la viuda de Nabal, de Carmel.
6 ಜನರೆಲ್ಲರೂ ಪ್ರತಿಯೊಬ್ಬನು ತನ್ನ ಪುತ್ರಪುತ್ರಿಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು, ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ, ಅವನು ಬಹಳ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದನು. ಆದರೂ ದಾವೀದನು ಯೆಹೋವ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.
David estaba en un gran apuro, porque los hombres estaban tan molestos por la pérdida de sus hijos que empezaron a hablar de apedrearlo. Pero confiando en el Señor, su Dios,
7 ಆಗ ದಾವೀದನು ಅಹೀಮೆಲೆಕನ ಮಗ ಅಬಿಯಾತರನೆಂಬ ಯಾಜಕನಿಗೆ, “ನೀನು ದಯಮಾಡಿ ಏಫೋದನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದನು. ಹಾಗೆಯೇ ಅಬ್ಯತಾರನು ಏಫೋದನ್ನು ದಾವೀದನ ಬಳಿಗೆ ತಂದನು.
David fue a ver al sacerdote Abiatar, hijo de Ahimelec, y le dijo: “Tráeme el efod”. Y Abiatar se lo trajo.
8 ದಾವೀದನು ಯೆಹೋವ ದೇವರಿಗೆ, “ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ಅವರು ನನಗೆ ವಶವಾಗುವರೋ?” ಎಂದು ಕೇಳಿದನು. ಅದಕ್ಕೆ ಯೆಹೋವ ದೇವರು, “ಬೆನ್ನಟ್ಟು, ಅವರು ನಿನ್ನ ವಶವಾಗುವರು; ನೀನು ನಿನ್ನವರನ್ನು ಬಿಡಿಸಿಕೊಂಡು ಬರುವೆ,” ಎಂದರು.
Entonces David le preguntó al Señor: “¿Debo perseguir a estos asaltantes? ¿Los alcanzaré?” “Sí, persíguelos”, contestó el Señor, “porque definitivamente los alcanzarás y rescatarás a los prisioneros”.
9 ಆಗ ದಾವೀದನೂ, ಅವನ ಸಂಗಡ ಇದ್ದ ಆರುನೂರು ಜನರೂ ಹೋದರು. ಅವರು ಬೆಸೋರ್ ಎಂಬ ಹಳ್ಳದ ಬಳಿಗೆ ಬಂದಾಗ, ಹಿಂದುಳಿದವರು ಅಲ್ಲಿಯೇ ನಿಂತರು.
David y seiscientos de sus hombres partieron hacia el valle de Besor.
10 ದಾವೀದನು ತಾನೂ, ನಾನೂರು ಜನರೂ ಹಿಂದಟ್ಟಿ ಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದರಿಂದ, ಇನ್ನೂರು ಜನರು ಅಲ್ಲಿ ನಿಂತರು.
Doscientos de ellos se quedaron allí porque estaban demasiado cansados para cruzar el valle, mientras que David siguió adelante con cuatrocientos hombres.
11 ಅವನ ಜನರು ಒಬ್ಬ ಈಜಿಪ್ಟಿನವನು ಅಡವಿಯಲ್ಲಿ ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ಕೊಟ್ಟರು. ಅವನು ತಿಂದನು.
Se encontraron con un egipcio en el campo y se lo llevaron a David. Le dieron de comer y de beber.
12 ಅವನಿಗೆ ನೀರನ್ನು ಕುಡಿಸಿ, ಅಂಜೂರ ಹಣ್ಣಿನ ಉಂಡೆಯನ್ನೂ, ಒಣಗಿದ ಎರಡು ದ್ರಾಕ್ಷಿ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದಾಗ ಚೇತರಿಸಿಕೊಂಡನು. ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.
También le dieron un trozo de una torta de higos y dos tortas de pasas. Se los comió y se recuperó, porque llevaba tres días y tres noches sin comer ni beber.
13 ದಾವೀದನು ಅವನನ್ನು, “ನೀನು ಯಾರ ಕಡೆಯವನು? ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ಈಜಿಪ್ಟಿನವನು, ಒಬ್ಬ ಅಮಾಲೇಕ್ಯನ ಸೇವಕನು. ಮೂರು ದಿನಗಳಿಂದ ನಾನು ರೋಗದಲ್ಲಿ ಬಿದ್ದುದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.
“¿De quién eres esclavo y de dónde vienes?” le preguntó David. “Soy egipcio – respondió –, esclavo de un amalecita. Mi amo me abandonó hace tres días cuando me enfermé.
14 ನಾವು ಕೆರೇತ್ಯರ ದಕ್ಷಿಣ ಪ್ರಾಂತದ ಮೇಲೆಯೂ, ಯೆಹೂದದ ಮೇರೆಯ ಮೇಲೆಯೂ, ಕಾಲೇಬನ ದಕ್ಷಿಣ ಪ್ರಾಂತದ ಮೇಲೆಯೂ ದಾಳಿಮಾಡಿ, ಚಿಕ್ಲಗ್ ಊರನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು,” ಎಂದನು.
Asaltamos a los queretanos en el Neguev, así como la parte que pertenece a Judá y el Neguev de Caleb. También quemamos Siclag”.
15 ದಾವೀದನು ಅವನಿಗೆ, “ನೀನು ನನ್ನನ್ನು ಆ ಗುಂಪಿನ ಬಳಿಗೆ ಕರೆದುಕೊಂಡು ಹೋಗುತ್ತೀಯಾ?” ಎಂದು ಕೇಳಿದನು. ಅದಕ್ಕವನು, “ನೀನು ನನ್ನನ್ನು ಕೊಂದುಹಾಕುವುದಿಲ್ಲ ಇಲ್ಲವೆ ನನ್ನನ್ನು ನನ್ನ ಯಜಮಾನನ ಕೈಯಲ್ಲಿ ಒಪ್ಪಿಸಿಕೊಡುವುದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಮಾಡಿದರೆ, ನಿನ್ನನ್ನು ಅಲ್ಲಿಗೆ ಕರೆದುಕೊಂಡು ಹೋಗುತ್ತೇನೆ,” ಎಂದನು.
“¿Puedes guiarme hasta esos asaltantes?” preguntó David. “Si me juras por Dios que no me matarás ni me entregarás a mi amo, entonces te llevaré hasta ellos”, respondió el hombre.
16 ಇವನು ದಾವೀದನನ್ನು ಕರೆದುಕೊಂಡು ಅಲ್ಲಿಗೆ ಹೋದಾಗ, ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶದಲ್ಲಿಯೂ, ಯೆಹೂದ ದೇಶದಲ್ಲಿಯೂ ವ್ಯಾಪಿಸಿಕೊಂಡು, ಸಮಸ್ತ ಕೊಳ್ಳೆ ತೆಗೆದುಕೊಂಡು ಬಂದುದರಿಂದ, ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.
Entonces llevó a David hasta donde los amalecitas, quienes estaban esparcidos por todo el lugar, comiendo, bebiendo y bailando debido al gran botín que habían tomado de las tierras de los filisteos y de Judá.
17 ಆಗ ದಾವೀದನು ಅವರ ಮೇಲೆ ಬೆಳಗಿನಜಾವದಿಂದ ಮಾರನೆಯ ದಿವಸದ ಸಾಯಂಕಾಲದವರೆಗೂ ದಾಳಿಮಾಡುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿ ಹೋದ ನಾನೂರು ಮಂದಿ ಯುವಜನರ ಹೊರತು ಒಬ್ಬನಾದರೂ ತಪ್ಪಿಸಿಕೊಳ್ಳಲಿಲ್ಲ.
David los atacó desde el atardecer hasta la noche siguiente. Nadie escapó, excepto cuatrocientos hombres que lograron huir, montados en camellos.
18 ಅಮಾಲೇಕ್ಯರು ತೆಗೆದುಕೊಂಡು ಹೋದದ್ದನ್ನೆಲ್ಲವನ್ನೂ ತನ್ನ ಇಬ್ಬರು ಹೆಂಡತಿಯರನ್ನೂ ದಾವೀದನು ಬಿಡಿಸಿಕೊಂಡನು.
David recuperó todo lo que los amalecitas habían tomado, incluidas sus dos esposas.
19 ಅವರು ತೆಗೆದುಕೊಂಡು ಹೋದ ಕಿರಿಯರಲ್ಲಾದರೂ, ಹಿರಿಯರಲ್ಲಾದರೂ, ಪುತ್ರರಲ್ಲಾದರೂ, ಪುತ್ರಿಯರಲ್ಲಾದರೂ, ಕೊಳ್ಳೆಯಾದ ಯಾವ ವಸ್ತುಗಳಲ್ಲಾದರೂ ಒಂದೂ ಕಡಿಮೆ ಇಲ್ಲದ ಹಾಗೆ, ದಾವೀದನು ಎಲ್ಲವನ್ನು ತಿರುಗಿ ತೆಗೆದುಕೊಂಡು ಬಂದನು.
Todo fue contabilizado: todos los adultos y niños, así como todo el botín que los amalecitas habían tomado. David recuperó todo.
20 ಇದಲ್ಲದೆ ದಾವೀದನು ಶತ್ರುಗಳ ಸಮಸ್ತ ದನಕುರಿಗಳ ಮಂದೆಗಳನ್ನು ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ” ಎಂದು ಹೇಳಿ ಅವುಗಳನ್ನು ತಮ್ಮ ಪಶುಗಳ ಮುಂದಾಗಿ ಹೊಡೆದುಕೊಂಡು ಬಂದರು.
También recuperó todos los rebaños y manadas. Sus hombres los llevaron por delante del resto del ganado, gritando: “¡Este es el botín de David!”.
21 ಆದರೆ ದಣಿದಿದ್ದರಿಂದ ದಾವೀದನ ಹಿಂದೆ ಬರಲಾರದೆ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ, ಅವರು ದಾವೀದನನ್ನೂ, ಅವನ ಸಂಗಡ ಇದ್ದ ಜನರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ, ಅವರ ಕ್ಷೇಮಸಮಾಚಾರವನ್ನು ಕೇಳಿದನು.
Cuando David recuperó a los doscientos hombres que habían estado demasiado cansados para seguir con él desde el valle de Besor, salieron a recibirlo a él y a los hombres que lo acompañaban. Cuando David se acercó a los hombres para saludarlos,
22 ಆಗ ದಾವೀದನ ಸಂಗಡ ಬಂದ ಮನುಷ್ಯರಲ್ಲಿ ದುಷ್ಟರಾದ ಕೆಲವರು, “ನಮ್ಮ ಸಂಗಡ ಬಾರದೆ ಇದ್ದುದರಿಂದ, ನಾವು ತೆಗೆದುಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವುದಿಲ್ಲ. ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ, ಮಕ್ಕಳನ್ನು ಮಾತ್ರವೇ ಕರೆದುಕೊಂಡು ಹೋಗಲಿ,” ಎಂದರು.
todos los hombres desagradables y buenos para nada de los que habían ido con David dijeron: “Ellos no estaban con nosotros, así que no compartiremos el botín que tomamos, excepto para devolverles a sus esposas e hijos. Que los tomen y se vayan”.
23 ಅದಕ್ಕೆ ದಾವೀದನು, “ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟ ಯೆಹೋವ ದೇವರು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು?
Pero David intervino diciendo: “No, hermanos míos, no deben hacer esto con lo que el Señor nos ha dado. Él nos ha protegido y nos ha entregado a los asaltantes que nos habían atacado.
24 ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಲಕರಣೆಗಳ ಬಳಿಯಲ್ಲಿ ಕಾದಿರುವವನಿಗೂ ಪಾಲು ಇರಲಿ. ಅವರವರ ಪಾಲು ಇರಲಿ,” ಎಂದನು.
¿Quién los va a escuchar cuando digan tales cosas? La parte que reciban los que fueron a la batalla será la misma que la de los que se quedaron para guardar las provisiones”.
25 ಹಾಗೆಯೇ ದಾವೀದನು ಆ ದಿವಸ ಮೊದಲ್ಗೊಂಡು ಇಂದಿನವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ, ಕಟ್ಟಳೆಯಾಗಿಯೂ ಮಾಡಿದನು.
David hizo que esta fuera la regla y norma para Israel desde ese día hasta ahora.
26 ದಾವೀದನು ಚಿಕ್ಲಗನ್ನು ತಲುಪಿದಾಗ ಕೊಳ್ಳೆಯಿಂದ ತಂದದ್ದರಲ್ಲಿ ಒಂದು ಭಾಗವನ್ನು ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕಳುಹಿಸಿದನು. “ಯೆಹೋವ ದೇವರ ವೈರಿಗಳಿಂದ ಕೊಳ್ಳೆ ಹೊಡೆದದ್ದರಿಂದ ಈ ಬಹುಮಾನ ನಿಮಗಾಗಿದೆ,” ಎಂದು ಹೇಳಿದನು.
Cuando David regresó a Siclag, envió parte del botín a cada uno de sus amigos entre los ancianos de Judá, diciendo: “Aquí tienen un regalo para ustedes del botín de los enemigos del Señor”.
27 ಹೀಗೆ ದಾವೀದನು ಬೇತೇಲಿನವರು, ನೆಗೆಬನ ರಾಮೋತನವರು ಹಾಗೂ ಯತ್ತೀರಿನವರು,
David lo envió a los que vivían en Betuel, Ramot Néguev, Jattir,
28 ಅರೋಯೇರಿನವರು, ಸಿಪ್ಮೋತಿನವರು, ಎಷ್ಟೆಮೋವದವರು,
Aroer, Sifmot, Eshtemoa,
29 ರಾಕಾಲಿನವರು, ಯೆರಹ್ಮೇಲ್ಯರು, ಕೇನ್ಯರು,
Racal, y las ciudades de los jeraelitas y ceneos,
30 ಹೊರ್ಮಾದವರು, ಬೋರಾಷಾನಿನವರು, ಅತಾಕಿನವರು,
Hormah, Bor-ashan, Athach,
31 ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳದವರಿಗೂ ಬಹುಮಾನಗಳನ್ನು ಕಳುಹಿಸಿಕೊಟ್ಟನು.
Hebrón: todos los lugares a los que David y sus hombres habían ido.

< ಸಮುವೇಲನು - ಪ್ರಥಮ ಭಾಗ 30 >