< ಸಮುವೇಲನು - ಪ್ರಥಮ ಭಾಗ 4 >

1 ಸಮುಯೇಲನ ವಾಕ್ಯವು ಇಸ್ರಾಯೇಲದಲ್ಲಿ ಹರಡಿತು. ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು, ಎಬೆನೆಜೆರಿನ ಸಮೀಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.
וַיְהִי דְבַר־שְׁמוּאֵל לְכׇל־יִשְׂרָאֵל וַיֵּצֵא יִשְׂרָאֵל לִקְרַאת פְּלִשְׁתִּים לַמִּלְחָמָה וַֽיַּחֲנוּ עַל־הָאֶבֶן הָעֵזֶר וּפְלִשְׁתִּים חָנוּ בַאֲפֵֽק׃
2 ಫಿಲಿಷ್ಟಿಯರು ಇಸ್ರಾಯೇಲಿಗೆ ಎದುರಾಗಿ ವ್ಯೂಹವನ್ನು ಕಟ್ಟಿ ಯುದ್ಧಮಾಡಿದಾಗ, ಇಸ್ರಾಯೇಲರು ಫಿಲಿಷ್ಟಿಯರ ಮುಂದೆ ಸೋತರು. ಫಿಲಿಷ್ಟಿಯರು ಯುದ್ಧ ರಂಗದಲ್ಲಿ ಹೆಚ್ಚು ಕಡಿಮೆ ನಾಲ್ಕು ಸಾವಿರ ಜನರನ್ನು ಹತಮಾಡಿದರು.
וַיַּעַרְכוּ פְלִשְׁתִּים לִקְרַאת יִשְׂרָאֵל וַתִּטֹּשׁ הַמִּלְחָמָה וַיִּנָּגֶף יִשְׂרָאֵל לִפְנֵי פְלִשְׁתִּים וַיַּכּוּ בַמַּֽעֲרָכָה בַּשָּׂדֶה כְּאַרְבַּעַת אֲלָפִים אִֽישׁ׃
3 ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು, “ಈ ಹೊತ್ತು ಯೆಹೋವ ದೇವರು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿದ್ದೇನು? ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ, ನಾವು ಅದನ್ನು ಶೀಲೋವಿನಿಂದ ತರಿಸೋಣ,” ಎಂದರು.
וַיָּבֹא הָעָם אֶל־הַֽמַּחֲנֶה וַיֹּֽאמְרוּ זִקְנֵי יִשְׂרָאֵל לָמָּה נְגָפָנוּ יְהֹוָה הַיּוֹם לִפְנֵי פְלִשְׁתִּים נִקְחָה אֵלֵינוּ מִשִּׁלֹה אֶת־אֲרוֹן בְּרִית יְהֹוָה וְיָבֹא בְקִרְבֵּנוּ וְיֹשִׁעֵנוּ מִכַּף אֹיְבֵֽינוּ׃
4 ಕೆರೂಬಿಗಳ ಮಧ್ಯದಲ್ಲಿರುವ ಸೇನಾಧೀಶ್ವರ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬರಲು ಶೀಲೋವಿಗೆ ಜನರನ್ನು ಕಳುಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ, ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು.
וַיִּשְׁלַח הָעָם שִׁלֹה וַיִּשְׂאוּ מִשָּׁם אֵת אֲרוֹן בְּרִית־יְהֹוָה צְבָאוֹת יֹשֵׁב הַכְּרֻבִים וְשָׁם שְׁנֵי בְנֵֽי־עֵלִי עִם־אֲרוֹן בְּרִית הָאֱלֹהִים חׇפְנִי וּפִֽינְחָֽס׃
5 ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ, ಇಸ್ರಾಯೇಲರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.
וַיְהִי כְּבוֹא אֲרוֹן בְּרִית־יְהֹוָה אֶל־הַֽמַּחֲנֶה וַיָּרִעוּ כׇל־יִשְׂרָאֵל תְּרוּעָה גְדוֹלָה וַתֵּהֹם הָאָֽרֶץ׃
6 ಅವರ ಆರ್ಭಟವು ಫಿಲಿಷ್ಟಿಯರಿಗೆ ಕೇಳಿದಾಗ, “ಹಿಬ್ರಿಯರ ಪಾಳೆಯದ ಈ ಮಹಾ ಆರ್ಭಟವೇನು?” ಎಂದು ವಿಚಾರಿಸಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಪಾಳೆಯದಲ್ಲಿ ಬಂತೆಂದು ತಿಳಿದುಕೊಂಡರು.
וַיִּשְׁמְעוּ פְלִשְׁתִּים אֶת־קוֹל הַתְּרוּעָה וַיֹּאמְרוּ מֶה קוֹל הַתְּרוּעָה הַגְּדוֹלָה הַזֹּאת בְּמַחֲנֵה הָעִבְרִים וַיֵּדְעוּ כִּי אֲרוֹן יְהֹוָה בָּא אֶל־הַֽמַּחֲנֶֽה׃
7 “ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು, ಫಿಲಿಷ್ಟಿಯರು ಭಯಪಟ್ಟು, ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ.
וַיִּֽרְאוּ הַפְּלִשְׁתִּים כִּי אָֽמְרוּ בָּא אֱלֹהִים אֶל־הַֽמַּחֲנֶה וַיֹּֽאמְרוּ אוֹי לָנוּ כִּי לֹא הָיְתָה כָּזֹאת אֶתְמוֹל שִׁלְשֹֽׁם׃
8 ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವರ‍್ಯಾರು? ಈಜಿಪ್ಟಿನವರನ್ನು ಮರುಭೂಮಿಯಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.
אוֹי לָנוּ מִי יַצִּילֵנוּ מִיַּד הָאֱלֹהִים הָאַדִּירִים הָאֵלֶּה אֵלֶּה הֵם הָאֱלֹהִים הַמַּכִּים אֶת־מִצְרַיִם בְּכׇל־מַכָּה בַּמִּדְבָּֽר׃
9 ಫಿಲಿಷ್ಟಿಯರೇ, ನೀವು ಬಲಗೊಂಡು ಶೂರರಾಗಿರಿ. ಹಿಬ್ರಿಯರು ನಿಮಗೆ ಗುಲಾಮರಾಗಿ ಮಾಡಿದ ಪ್ರಕಾರ ನೀವು ಅವರಿಗೆ ಗುಲಾಮರಾಗದ ಹಾಗೆ ಶೂರರಾಗಿ ಇದ್ದು, ಯುದ್ಧಮಾಡಿರೆಂದು ಹೇಳಿಕೊಂಡರು.
הִֽתְחַזְּקוּ וִֽהְיוּ לַֽאֲנָשִׁים פְּלִשְׁתִּים פֶּן תַּעַבְדוּ לָֽעִבְרִים כַּאֲשֶׁר עָבְדוּ לָכֶם וִהְיִיתֶם לַאֲנָשִׁים וְנִלְחַמְתֶּֽם׃
10 ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲರು ಸೋತು, ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾ ಸಂಹಾರವಾಯಿತು. ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
וַיִּלָּחֲמוּ פְלִשְׁתִּים וַיִּנָּגֶף יִשְׂרָאֵל וַיָּנֻסוּ אִישׁ לְאֹהָלָיו וַתְּהִי הַמַּכָּה גְּדוֹלָה מְאֹד וַיִּפֹּל מִיִּשְׂרָאֵל שְׁלֹשִׁים אֶלֶף רַגְלִֽי׃
11 ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಮರಣಹೊಂದಿದರು.
וַאֲרוֹן אֱלֹהִים נִלְקָח וּשְׁנֵי בְנֵֽי־עֵלִי מֵתוּ חׇפְנִי וּפִֽינְחָֽס׃
12 ಅದೇ ದಿವಸದಲ್ಲಿ ಬೆನ್ಯಾಮೀನನಾದ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಯುದ್ಧರಂಗದಿಂದ ಶೀಲೋವಿಗೆ ಓಡಿಬಂದನು.
וַיָּרׇץ אִישׁ־בִּנְיָמִן מֵהַמַּעֲרָכָה וַיָּבֹא שִׁלֹה בַּיּוֹם הַהוּא וּמַדָּיו קְרֻעִים וַאֲדָמָה עַל־רֹאשֽׁוֹ׃
13 ಅವನು ಬರುವಾಗ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವುದರಿಂದ, ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನುಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.
וַיָּבוֹא וְהִנֵּה עֵלִי יֹשֵׁב עַֽל־הַכִּסֵּא (יך) [יַד] דֶּרֶךְ מְצַפֶּה כִּֽי־הָיָה לִבּוֹ חָרֵד עַל אֲרוֹן הָאֱלֹהִים וְהָאִישׁ בָּא לְהַגִּיד בָּעִיר וַתִּזְעַק כׇּל־הָעִֽיר׃
14 ಕೂಗುವ ಶಬ್ದವನ್ನು ಏಲಿಯು ಕೇಳಿದಾಗ, “ಆ ಗುಂಪಿನ ಶಬ್ದ ಏನು?” ಎಂದನು. ಆಗ ಆ ಮನುಷ್ಯನು ತ್ವರೆಯಾಗಿ ಬಂದು ಏಲಿಗೆ ತಿಳಿಸಿದನು.
וַיִּשְׁמַע עֵלִי אֶת־קוֹל הַצְּעָקָה וַיֹּאמֶר מֶה קוֹל הֶהָמוֹן הַזֶּה וְהָאִישׁ מִהַר וַיָּבֹא וַיַּגֵּד לְעֵלִֽי׃
15 ಏಲಿಯು ತೊಂಬತ್ತೆಂಟು ವರುಷ ಪ್ರಾಯದವನಾಗಿದ್ದನು. ಅವನು ಕಾಣದ ಹಾಗೆ ಅವನ ಕಣ್ಣುಗಳು ಮಬ್ಬಾಗಿದ್ದವು.
וְעֵלִי בֶּן־תִּשְׁעִים וּשְׁמֹנֶה שָׁנָה וְעֵינָיו קָמָה וְלֹא יָכוֹל לִרְאֽוֹת׃
16 ಆ ಮನುಷ್ಯನು ಏಲಿಗೆ, “ಯುದ್ಧರಂಗದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿ ಬಂದೆನು,” ಎಂದನು. ಆಗ ಅವನು, “ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು?” ಎಂದನು.
וַיֹּאמֶר הָאִישׁ אֶל־עֵלִי אָֽנֹכִי הַבָּא מִן־הַמַּעֲרָכָה וַאֲנִי מִן־הַמַּעֲרָכָה נַסְתִּי הַיּוֹם וַיֹּאמֶר מֶה־הָיָה הַדָּבָר בְּנִֽי׃
17 ಅದಕ್ಕೆ ವರ್ತಮಾನ ತಂದವನು, “ಇಸ್ರಾಯೇಲರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ, ಫೀನೆಹಾಸನೂ ಮರಣಹೊಂದಿದರು. ದೇವರ ಮಂಜೂಷವು ಶತ್ರುವಶವಾಯಿತು,” ಎಂದನು.
וַיַּעַן הַֽמְבַשֵּׂר וַיֹּאמֶר נָס יִשְׂרָאֵל לִפְנֵי פְלִשְׁתִּים וְגַם מַגֵּפָה גְדוֹלָה הָיְתָה בָעָם וְגַם־שְׁנֵי בָנֶיךָ מֵתוּ חׇפְנִי וּפִינְחָס וַאֲרוֹן הָאֱלֹהִים נִלְקָֽחָה׃
18 ವೃದ್ಧನೂ ಸ್ಥೂಲಕಾಯನೂ ಆದ ಏಲಿಯು ದೇವರ ಮಂಜೂಷದ ಮಾತನ್ನು ಕೇಳಿದಾಗ, ಆಸನದ ಮೇಲಿಂದ ಬಾಗಿಲಿನ ಕಡೆಗೆ ಹಿಂದಕ್ಕೆ ಬಿದ್ದು, ಕುತ್ತಿಗೆ ಮುರಿದು ಮರಣಹೊಂದಿದನು. ಅವನು ನಾಲ್ವತ್ತು ವರುಷ ಇಸ್ರಾಯೇಲರಿಗೆ ನ್ಯಾಯತೀರಿಸಿದನು.
וַיְהִי כְּהַזְכִּירוֹ ׀ אֶת־אֲרוֹן הָאֱלֹהִים וַיִּפֹּל מֵֽעַל־הַכִּסֵּא אֲחֹרַנִּית בְּעַד ׀ יַד הַשַּׁעַר וַתִּשָּׁבֵר מַפְרַקְתּוֹ וַיָּמֹת כִּֽי־זָקֵן הָאִישׁ וְכָבֵד וְהוּא שָׁפַט אֶת־יִשְׂרָאֵל אַרְבָּעִים שָׁנָֽה׃
19 ಇದಲ್ಲದೆ ಫೀನೆಹಾಸನ ಹೆಂಡತಿಯಾದ ಅವನ ಸೊಸೆಯು ಗರ್ಭಿಣಿಯಾಗಿ ಹೆರುವ ಕಾಲದಲ್ಲಿದ್ದಳು. ಅವಳು, ದೇವರ ಮಂಜೂಷವು ಶತ್ರು ವಶವಾಯಿತೆಂಬ ವರ್ತಮಾನವನ್ನೂ ತನ್ನ ಮಾವನೂ ತನ್ನ ಗಂಡನೂ ಮರಣಹೊಂದಿದರೆಂಬುದನ್ನೂ ಕೇಳಿದಾಗ, ಅವಳಿಗೆ ಪ್ರಸವವೇದನೆ ಉಂಟಾಗಿ, ಅವಳು ಗಂಡು ಮಗುವನ್ನು ಹೆತ್ತಳು.
וְכַלָּתוֹ אֵשֶׁת־פִּֽינְחָס הָרָה לָלַת וַתִּשְׁמַע אֶת־הַשְּׁמוּעָה אֶל־הִלָּקַח אֲרוֹן הָאֱלֹהִים וּמֵת חָמִיהָ וְאִישָׁהּ וַתִּכְרַע וַתֵּלֶד כִּֽי־נֶהֶפְכוּ עָלֶיהָ צִרֶֽיהָ׃
20 ಅವಳು ಸಾಯುವ ವೇಳೆಯಲ್ಲಿ, ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು, “ಭಯಪಡಬೇಡ. ಗಂಡು ಮಗುವನ್ನು ಹೆತ್ತಿದ್ದೀ,” ಎಂದು ಅವಳಿಗೆ ಹೇಳಿದರು. ಆಕೆ ಅವರ ಮಾತಿಗೆ ಲಕ್ಷ್ಯವನ್ನೂ ಕೊಡಲಿಲ್ಲ, ಪ್ರತ್ಯುತ್ತರವನ್ನೂ ಕೊಡಲಿಲ್ಲ.
וּכְעֵת מוּתָהּ וַתְּדַבֵּרְנָה הַנִּצָּבוֹת עָלֶיהָ אַל־תִּֽירְאִי כִּי בֵן יָלָדְתְּ וְלֹא עָנְתָה וְלֹא־שָׁתָה לִבָּֽהּ׃
21 ಆದರೆ ಅವಳು ಅದಕ್ಕೆ ಉತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರು ವಶವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಮರಣಹೊಂದಿದರಿಂದಲೂ ದೇವರ ಮಹಿಮೆಯು ಇಸ್ರಾಯೇಲರನ್ನು ಬಿಟ್ಟುಹೋಯಿತು ಎಂದು ಹೇಳಿ, ಆ ಕೂಸಿಗೆ, “ಈಕಾಬೋದ್,” ಎಂದು ಹೆಸರಿಟ್ಟಳು.
וַתִּקְרָא לַנַּעַר אִֽיכָבוֹד לֵאמֹר גָּלָה כָבוֹד מִיִּשְׂרָאֵל אֶל־הִלָּקַח אֲרוֹן הָאֱלֹהִים וְאֶל־חָמִיהָ וְאִישָֽׁהּ׃
22 ಏಕೆಂದರೆ ಅವಳು, “ದೇವರ ಮಂಜೂಷವು ಶತ್ರು ವಶವಾಗಿ ಹೋದದ್ದರಿಂದ ಮಹಿಮೆಯು ಇಸ್ರಾಯೇಲರನ್ನು ಬಿಟ್ಟುಹೋಯಿತು,” ಎಂದು ಹೇಳಿದಳು.
וַתֹּאמֶר גָּלָה כָבוֹד מִיִּשְׂרָאֵל כִּי נִלְקַח אֲרוֹן הָאֱלֹהִֽים׃

< ಸಮುವೇಲನು - ಪ್ರಥಮ ಭಾಗ 4 >