< ಸಮುವೇಲನು - ಪ್ರಥಮ ಭಾಗ 6 >
1 ಯೆಹೋವ ದೇವರ ಮಂಜೂಷವು ಫಿಲಿಷ್ಟಿಯರ ಸೀಮೆಯಲ್ಲಿ ಏಳು ತಿಂಗಳು ಇದ್ದ ತರುವಾಯ
১সদাপ্রভুর সিন্দুক পলেষ্টীয়দের দেশে সাত মাস থাকলো।
2 ಫಿಲಿಷ್ಟಿಯರು ಯಾಜಕರನ್ನೂ ಕಣಿಹೇಳುವವರನ್ನೂ ಕರೆದು, “ಯೆಹೋವ ದೇವರ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವುದು ನಮಗೆ ತಿಳಿಸಿರಿ,” ಎಂದರು.
২পরে পলেষ্টীয়েরা যাজক ও গণকদের ডেকে বলল, “সদাপ্রভুর সিন্দুকের বিষয়ে আমাদের কি কর্তব্য? বল তো, আমরা কিভাবে এটাকে নিজের জায়গায় পাঠিয়ে দেব?”
3 ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ, ಅದರ ಸಂಗಡ ನಿಶ್ಚಯವಾಗಿ ದೋಷಪರಿಹಾರ ಕಾಣಿಕೆಯನ್ನು ಕಳುಹಿಸಿರಿ, ಆಗ ನೀವು ಸ್ವಸ್ಥರಾಗುವಿರಿ. ಅವರ ಕೈ ನಿಮ್ಮನ್ನು ಬಿಟ್ಟುಹೋಗದೆ ಇರುವ ಕಾರಣ ನಿಮಗೆ ತಿಳಿಯುವುದು,” ಎಂದರು.
৩তারা বলল, “তোমরা যদি ইস্রায়েলের ঈশ্বরের সিন্দুক পাঠিয়ে দাও; তবে খালি পাঠাবে না, কোনো প্রকারে দোষার্থক উপহার তাঁর কাছে পাঠিয়ে দাও; তাতে সুস্থ হতে পারবে এবং তোমাদের থেকে তাঁর হাত কেন সরছে না, তা জানতে পারবে।”
4 ಆಗ ಅವರು, “ದೋಷಪರಿಹಾರ ಕಾಣಿಕೆಗಾಗಿ ನಾವು ಅದರ ಸಂಗಡ ಕಳುಹಿಸತಕ್ಕದ್ದೇನು?” ಎಂದರು. ಅದಕ್ಕವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧ ವ್ಯಾಧಿಯಿರುವುದರಿಂದ ಫಿಲಿಷ್ಟಿಯರ ಅಧಿಪತಿಗಳ ಸಂಖ್ಯೆಗೆ ಸರಿಯಾಗಿ ಒಬ್ಬೊಬ್ಬರಿಗೆ ಬಂಗಾರದ ಐದು ಗಡ್ಡೆಗಳನ್ನು ಮತ್ತು ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ.
৪তারা জিজ্ঞাসা করল, “দোষার্থক উপহার হিসাবে তাঁর কাছে কি পাঠিয়ে দেব?” তারা বলল, “পলেষ্টীয়দের শাসনকর্ত্তাদের সংখ্যা অনুসারে সোনার পাঁচটা টিউমার ও পাঁচটা সোনার ইঁদুর দাও, কারণ তোমাদের সবার উপরে ও তোমাদের শাসনকর্ত্তাদের উপরে একই আঘাত এসেছে।
5 ಏಕೆಂದರೆ ನಿಮ್ಮೆಲ್ಲರ ನಾಶಕ್ಕೆ ಕಾರಣವಾದ ಈ ಗಡ್ಡೆಗಳ ಹಾಗು ಇಲಿಗಳ ಸ್ವರೂಪಗಳನ್ನು ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಅವರು ನಿಮ್ಮ ಮೇಲೆಯೂ, ನಿಮ್ಮ ದೇವರುಗಳ ಮೇಲೆಯೂ, ನಿಮ್ಮ ಭೂಮಿಯ ಮೇಲೆಯೂ ಇರುವ ತಮ್ಮ ಕೈಯನ್ನು ತೆಗೆದು ಹಗುರಮಾಡುವರು.
৫সেইজন্য তোমরা নিজেদের টিউমারের মূর্ত্তি দেশ ধ্বংসকারী ইঁদুরের মূর্ত্তি তৈরী কর এবং ইস্রায়েলের ঈশ্বরের গৌরব স্বীকার কর; হয়তো তিনি তোমাদের উপর থেকে, তোমাদের দেবতাদের ও দেশের উপর থেকে, তাঁর হাত সরিয়ে নেবেন।
6 ಈಜಿಪ್ಟಿನವರೂ, ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ, ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವುದೇನು? ದೇವರು ಅವರ ಮಧ್ಯದಲ್ಲಿ ಆಶ್ಚರ್ಯಕರವಾದ ಕ್ರಿಯೆಗಳನ್ನು ನಡಿಸಿದಾಗ, ಅವರು ಇಸ್ರಾಯೇಲರನ್ನು ಅವರು ಹೋಗುವಹಾಗೆ ಕಳುಹಿಸಲಿಲ್ಲವೋ?
৬আর তোমরা কেন নিজেদের হৃদয় ভারী করবে? মিশরীয়রা ও ফরৌণ এই ভাবে নিজেদের হৃদয় কঠিন করেছিল; তিনি যখন তাদের মধ্য আশ্চর্য্য কাজ করলেন, তখন তারা কি লোকদেরকে বিদায় করলো না?
7 “ಆದರೆ ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿ, ನೊಗವನ್ನು ಹಾಕದೆ ಇರುವ ಹಾಲು ಕರೆಯುವ ಎರಡು ಹಸುಗಳನ್ನು ತೆಗೆದುಕೊಂಡು, ಅವುಗಳನ್ನು ಬಂಡಿಗೆ ಕಟ್ಟಿ, ಅವುಗಳ ಕರುಗಳನ್ನು ಅವುಗಳ ಹಿಂದೆ ಹೋಗದ ಹಾಗೆ ಮನೆಗೆ ತೆಗೆದುಕೊಂಡು ಬಂದು,
৭সেইজন্য এখন কাঠ নিয়ে একটা নতুন গাড়ী তৈরী কর এবং কখনও যোঁয়ালী বহন করে নি, দুধ দেয় এমন দুটো গরু নিয়ে সেই গাড়ীতে জুড়ে দেবে, কিন্তু তাদের বাছুরগুলো, তাদের কাছ থেকে ঘরে নিয়ে এস।
8 ಯೆಹೋವ ದೇವರ ಮಂಜೂಷವನ್ನು ಬಂಡಿಯ ಮೇಲೆ ಇಟ್ಟು, ನೀವು ಕಳುಹಿಸಿಕೊಡುವ ನಿಮ್ಮ ದೋಷಪರಿಹಾರ ಕಾಣಿಕೆಯ ಬಂಗಾರದ ವಸ್ತುಗಳನ್ನು ಅದರ ಪಕ್ಕದಲ್ಲಿ ಒಂದು ಚಿಕ್ಕ ಪೆಟ್ಟಿಗೆಯಲ್ಲಿ ಹಾಕಿ, ಅದು ಹೋಗುವಹಾಗೆ ಕಳುಹಿಸಿರಿ.
৮তারপর সদাপ্রভুর সিন্দুক নিয়ে সেই গাড়ীর উপর রাখ এবং ঐ যে সোনার জিনিসগুলি দোষার্থক উপহার হিসাবে তাঁকে দেবে, তা তার পাশে একটি বাক্সের মধ্যে রাখ; পরে বিদায় কর, তা যাক।
9 ಆಗ ನೋಡಿರಿ, ಅದು ತನ್ನ ಮೇರೆಯಾದ ಬೇತ್ ಷೆಮೆಷ್ ಎಂಬ ಮಾರ್ಗವನ್ನು ಹಿಡಿದು ಹೋದರೆ, ಯೆಹೋವ ದೇವರು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾರೆ, ಇಲ್ಲದೆ ಹೋದರೆ ಅವರ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ತಾನಾಗಿಯೇ ನಮಗೆ ಆಯಿತೆಂದು ತಿಳಿದುಕೊಳ್ಳಿರಿ,” ಎಂದರು.
৯আর দেখো, সিন্দুক যদি নিজের সীমার পথ দিয়ে বৈৎ-শেমশে যায়, তবে তিনিই আমাদের উপর এই ভীষণ অমঙ্গল এনেছেন; নাহলে জানব, আমাদেরকে যে হাত আঘাত করেছে সে তাঁর নয়, কিন্তু আমাদের প্রতি এইসব হঠাৎই ঘটেছে৷”
10 ಅವರು ಆ ಪ್ರಕಾರವೇ ಎರಡು ಹಾಲು ಕರೆಯುವ ಹಸುಗಳನ್ನು ತೆಗೆದುಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಮನೆಯಲ್ಲಿಟ್ಟು
১০লোকেরা সেই রকম করল; দুধ দেওয়া দুটো গরু নিয়ে গাড়ীতে জুড়ল ও তাদের বাছুরগুলোকে ঘরে আটকে রাখল।
11 ಯೆಹೋವ ದೇವರ ಮಂಜೂಷವನ್ನೂ, ಬಂಗಾರದ ಇಲಿಗಳನ್ನೂ, ತಮ್ಮ ಗಡ್ಡೆರೋಗದ ರೂಪಗಳನ್ನೂ ಇಟ್ಟಿರುವ ಚಿಕ್ಕ ಪೆಟ್ಟಿಗೆಯನ್ನೂ ಆ ಬಂಡಿಯ ಮೇಲಿಟ್ಟರು.
১১পরে সদাপ্রভুর সিন্দুক এবং ঐ সোনার ইঁদুর ও টিউমারের মূর্তিগুলি বাক্সে নিয়ে গাড়ীর উপরে রাখল।
12 ಆಗ ಹಸುಗಳು ಕೂಗುತ್ತಾ ಬೇತ್ ಷೆಮೆಷ್ ಕಡೆಗೆ ಹೋಗುವ ಮಾರ್ಗವನ್ನು ಹಿಡಿದು, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ ಹೆದ್ದಾರಿಯಲ್ಲಿ ಹೋದವು. ಫಿಲಿಷ್ಟಿಯರ ಅಧಿಪತಿಗಳು ಬೇತ್ ಷೆಮೆಷ್ ಊರಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು.
১২আর সেই দুটো গরু বৈৎ-শেমশের সোজা পথ ধরে চলল, রাজপথ দিয়ে হাম্বা রব করতে করতে চলল, ডানে কিম্বা বাঁয়ে ফিরল না এবং পলেষ্টীয়দের শাসনকর্তারা বৈৎ-শেমশের সীমা পর্যন্ত তাদের পিছনে পিছনে গেলেন।
13 ಬೇತ್ ಷೆಮೆಷ್ ಊರಿನವರು ತಗ್ಗಿನಲ್ಲಿ ಗೋಧಿಯ ಪೈರನ್ನು ಕೊಯ್ಯುತ್ತಿದ್ದರು. ಅವರು ತಮ್ಮ ಕಣ್ಣುಗಳನ್ನು ಎತ್ತಿ ಮಂಜೂಷವನ್ನು ಕಂಡು, ಅದನ್ನು ಕಂಡದ್ದಕ್ಕೆ ಸಂತೋಷಪಟ್ಟರು.
১৩ঐ দিনের বৈৎ-শেমশের লোকেরা উপত্যকায় গম কাটছিল। তারা চোখ তুলে সিন্দুকটি দেখল, দেখে খুবই খুশী হল।
14 ಆ ಬಂಡಿಯು ಬೇತ್ ಷೆಮೆಷ್ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು. ಅಲ್ಲಿ ಒಂದು ದೊಡ್ಡ ಬಂಡೆ ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಹಸುಗಳನ್ನು ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಿದರು.
১৪পরে ঐ গাড়ী বৈৎ-শেমশে যিহোশূয়ের ক্ষেতের মধ্যে উপস্থিত হয়ে থেমে গেল; সেখানে একটা বড় পাথর ছিল; পরে তারা গাড়ীটার কাঠ কেটে নিয়ে ঐ গরুগুলি হোমের জন্য সদাপ্রভুর উদ্দেশ্যে উৎসর্গ করল।
15 ಲೇವಿಯರು ಯೆಹೋವ ದೇವರ ಮಂಜೂಷವನ್ನೂ, ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳಿದ್ದ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ, ಆ ದೊಡ್ಡ ಬಂಡೆಯ ಮೇಲಿಟ್ಟುಕೊಂಡರು. ಬೇತ್ ಷೆಮೆಷ್ ಊರಿನವರು ಆ ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸಮರ್ಪಣೆಗಳನ್ನೂ ಅರ್ಪಿಸಿದರು.
১৫আর লেবীয়েরা সদাপ্রভুর সিন্দুক এবং তার সঙ্গে ঐ সোনার জিনিসগুলি সমেত বাক্সটা নামিয়ে সেই বড় পাথরটার উপর রাখল এবং বৈৎ-শেমশের লোকেরা সেই দিনের সদাপ্রভুর উদ্দেশ্যে হোম ও বলিদান করল।
16 ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ಕಂಡು, ಅದೇ ದಿನದಲ್ಲಿ ತಿರುಗಿ ಎಕ್ರೋನಿಗೆ ಹೋದರು.
১৬তখন পলেষ্টীয়দের সেই পাঁচজন শাসনকর্ত্তা তা দেখে সেই দিন ই ইক্রোণে ফিরে গেলেন।
17 ಫಿಲಿಷ್ಟಿಯರು ದೋಷಪರಿಹಾರ ಕಾಣಿಕೆಗಾಗಿ, ಗಡ್ಡೆರೋಗದ ಬಂಗಾರ ಸ್ವರೂಪಗಳನ್ನು ಅಷ್ಡೋದಿನಿಂದ ಒಂದೂ, ಗಾಜನಿಂದ ಒಂದೂ, ಅಷ್ಕೆಲೋನದಿಂದ ಒಂದೂ, ಗತ್‌ನಿಂದ ಒಂದೂ, ಎಕ್ರೋನಿನಿಂದ ಒಂದೂ ಯೆಹೋವ ದೇವರಿಗೆ ಅರ್ಪಿಸಿದರು.
১৭পলেষ্টীয়েরা সদাপ্রভুর উদ্দেশ্যে দোষার্থক উপহার হিসাবে সেই সমস্ত সোনার ফোড়া উত্সর্গ করেছিল, অস্দোদের জন্য এক, ঘসার (গাজা) জন্য এক, অস্কিলোনের জন্য এক, গাতের জন্য এক ও ইক্রোণের জন্য এক এবং
18 ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಬಲವುಳ್ಳ ಪಟ್ಟಣಗಳ, ಗ್ರಾಮಗಳ ಲೆಕ್ಕಕ್ಕೆ ಸರಿಯಾಗಿದ್ದವು. ಯೆಹೋವ ದೇವರ ಮಂಜೂಷವನ್ನಿಟ್ಟ ದೊಡ್ಡ ಬಂಡೆಯು ಇಂದಿನವರೆಗೂ ಬೇತ್ ಷೆಮೆಷ್ ಊರಿನವನಾದ ಯೆಹೋಶುವನ ಹೊಲದಲ್ಲಿ ಸಾಕ್ಷಿಯಾಗಿದೆ.
১৮দেয়াল ঘেরা শহর হোক কিম্বা গ্রাম, পাঁচজন শাসনকর্ত্তার অধীনে পলেষ্টীয়দের যত শহর ছিল, ততগুলি সোনার ইঁদুর। সদাপ্রভুর সিন্দুক যার উপর রাখা হয়েছিল, সেই বড় পাথর সাক্ষী, সেটা বৈৎ-শেমশে যিহোশূয়ের ক্ষেতের মধ্যে আজও আছে।
19 ಬೇತ್ ಷೆಮೆಷ್ ಊರಿನ ಜನರು ಯೆಹೋವ ದೇವರ ಮಂಜೂಷದೊಳಗೆ ಇಣಿಕಿ ನೋಡಿದ್ದರಿಂದ, ಯೆಹೋವ ದೇವರು ಅವರೊಳಗೆ ಎಪ್ಪತ್ತು ಮಂದಿಯನ್ನು ಕಠಿಣವಾಗಿ ದಂಡಿಸಿದರು.
১৯পরে তিনি বৈৎ-শেমশের লোকদের মধ্যে কিছু জনকে আঘাত করলেন, কারণ তারা সদাপ্রভুর সিন্দুকে দৃষ্টিপাত করেছিল। তিনি সত্তর জন লোককে মেরে ফেললেন। লোকেরা শোক করেছিল, কারণ সদাপ্রভু মহাআঘাতে লোকদের আঘাত করেছিলেন।
20 ಯೆಹೋವ ದೇವರು ತಮ್ಮಲ್ಲಿ ದೊಡ್ಡ ನಾಶನಮಾಡಿದ್ದರಿಂದ, ಬೇತ್ ಷೆಮೆಷ್ ಊರಿನವರು ದುಃಖಪಟ್ಟು, “ಈ ಪರಿಶುದ್ಧ ದೇವರಾದ ಯೆಹೋವ ದೇವರ ಮುಂದೆ ನಿಲ್ಲತಕ್ಕವನ್ಯಾರು? ಇಲ್ಲಿಂದ ಮಂಜೂಷವು ಎಲ್ಲಿಗೆ ಹೋಗುವುದು?” ಎಂದು ಹೇಳಿದರು.
২০আর বৈৎ-শেমশের লোকেরা বলল, “সদাপ্রভুর সামনে, এই পবিত্র ঈশ্বরের সামনে, কে দাঁড়াতে পারে? আর তিনি আমাদের কাছ থেকে কার কাছে যাবেন?”
21 ಅವರು ಕಿರ್ಯತ್ ಯಾರೀಮಿನ ನಿವಾಸಿಗಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರು ಯೆಹೋವ ದೇವರ ಮಂಜೂಷವನ್ನು ತಿರುಗಿ ಕಳುಹಿಸಿದ್ದಾರೆ, ನೀವು ಬಂದು ಅದನ್ನು ನಿಮ್ಮ ಬಳಿಗೆ ತೆಗೆದುಕೊಂಡು ಹೋಗಿರಿ,” ಎಂದು ಹೇಳಿದರು.
২১পরে তারা কিরিয়ৎ যিয়ারীমের লোকদের কাছে দূত পাঠিয়ে বলল, “পলেষ্টীয়েরা সদাপ্রভুর সিন্দুক ফিরিয়ে নিয়ে এসেছে, তোমরা নেমে এস, তোমাদের কাছে তা তুলে নিয়ে যাও।”