< ಥೆಸಲೋನಿಕದವರಿಗೆ ಮೊದಲನೆಯ ಪತ್ರಿಕೆ 5 >
1 ಪ್ರಿಯರೇ, ಈ ಕಾಲಸಮಯಗಳನ್ನು ಕುರಿತು ನಿಮಗೆ ಬರೆಯುವುದು ಅವಶ್ಯವಿಲ್ಲ.
ಪ್ರಿಯರೇ, ಈ ಕಾಲಸಮಯಗಳನ್ನು ಕುರಿತು ನಿಮಗೆ ಬರೆಯುವುದು ಅವಶ್ಯವಿಲ್ಲ.
2 ರಾತ್ರಿಯಲ್ಲಿ ಕಳ್ಳನು ಬರುವಂತೆ ಕರ್ತ ಯೇಸುವಿನ ದಿನವು ಬರುವುದೆಂದು ನೀವೇ ಚೆನ್ನಾಗಿ ಬಲ್ಲಿರಿ.
ರಾತ್ರಿಯಲ್ಲಿ ಕಳ್ಳನು ಬರುವಂತೆ ಕರ್ತ ಯೇಸುವಿನ ದಿನವು ಬರುವುದೆಂದು ನೀವೇ ಚೆನ್ನಾಗಿ ಬಲ್ಲಿರಿ.
3 ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.
ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.
4 ಆದರೆ ಪ್ರಿಯರೇ, ಆ ದಿನವು ಕಳ್ಳನಂತೆ ನಿಮ್ಮನ್ನು ಆಶ್ಚರ್ಯಪಡಿಸುವುದಕ್ಕೆ ನೀವು ಕತ್ತಲೆಯಲ್ಲಿರುವವರಲ್ಲ.
ಆದರೆ ಪ್ರಿಯರೇ, ಆ ದಿನವು ಕಳ್ಳನಂತೆ ನಿಮ್ಮನ್ನು ಆಶ್ಚರ್ಯಪಡಿಸುವುದಕ್ಕೆ ನೀವು ಕತ್ತಲೆಯಲ್ಲಿರುವವರಲ್ಲ.
5 ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಿ. ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.
ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಿ. ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.
6 ಆದಕಾರಣ ನಾವು ಇತರರಂತೆ ನಿದ್ರೆ ಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿರೋಣ.
ಆದಕಾರಣ ನಾವು ಇತರರಂತೆ ನಿದ್ರೆ ಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿರೋಣ.
7 ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರೆ.
ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರೆ.
8 ನಾವಾದರೋ ಹಗಲಿಗೆ ಸೇರಿದವರಾಗಿ ಇರುವುದರಿಂದ ನಂಬಿಕೆ ಹಾಗೂ ಪ್ರೀತಿಯನ್ನು ಕವಚವನ್ನಾಗಿಯೂ ರಕ್ಷಣೆಯ ನಿರೀಕ್ಷೆಯನ್ನು ಶಿರಸ್ತ್ರಾಣವನ್ನಾಗಿಯೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.
ನಾವಾದರೋ ಹಗಲಿಗೆ ಸೇರಿದವರಾಗಿ ಇರುವುದರಿಂದ ನಂಬಿಕೆ ಹಾಗೂ ಪ್ರೀತಿಯನ್ನು ಕವಚವನ್ನಾಗಿಯೂ ರಕ್ಷಣೆಯ ನಿರೀಕ್ಷೆಯನ್ನು ಶಿರಸ್ತ್ರಾಣವನ್ನಾಗಿಯೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.
9 ಏಕೆಂದರೆ ದೇವರು ನಮ್ಮನ್ನು ಕೋಪಾಗ್ನಿಗೆ ನೇಮಿಸದೆ ನಾವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿ ರಕ್ಷಣೆಯನ್ನು ಹೊಂದಬೇಕೆಂದೇ ನೇಮಿಸಿದರು.
ಏಕೆಂದರೆ ದೇವರು ನಮ್ಮನ್ನು ಕೋಪಾಗ್ನಿಗೆ ನೇಮಿಸದೆ ನಾವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿ ರಕ್ಷಣೆಯನ್ನು ಹೊಂದಬೇಕೆಂದೇ ನೇಮಿಸಿದರು.
10 ನಾವು ಎಚ್ಚರವಾಗಿದ್ದರೂ ನಿದ್ರೆಯಲ್ಲಿದ್ದರೂ ತಮ್ಮ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಅವರು ನಮಗಾಗಿ ಸತ್ತರು.
ನಾವು ಎಚ್ಚರವಾಗಿದ್ದರೂ ನಿದ್ರೆಯಲ್ಲಿದ್ದರೂ ತಮ್ಮ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಅವರು ನಮಗಾಗಿ ಸತ್ತರು.
11 ಆದ್ದರಿಂದ ನೀವು ಈಗ ಮಾಡುತ್ತಿರುವಂತೆಯೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.
ಆದ್ದರಿಂದ ನೀವು ಈಗ ಮಾಡುತ್ತಿರುವಂತೆಯೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.
12 ಪ್ರಿಯರೇ, ಯಾರು ನಿಮ್ಮ ನಡುವೆ ಪ್ರಯಾಸಪಟ್ಟು ಕರ್ತ ಯೇಸುವಿನಲ್ಲಿ ನಿಮ್ಮನ್ನು ಪರಾಮರಿಸುವವರಾಗಿದ್ದು ನಿಮಗೆ ಬುದ್ಧಿ ಹೇಳುತ್ತಾರೋ ಅವರನ್ನು ಗೌರವಿಸಿರಿ.
ಪ್ರಿಯರೇ, ಯಾರು ನಿಮ್ಮ ನಡುವೆ ಪ್ರಯಾಸಪಟ್ಟು ಕರ್ತ ಯೇಸುವಿನಲ್ಲಿ ನಿಮ್ಮನ್ನು ಪರಾಮರಿಸುವವರಾಗಿದ್ದು ನಿಮಗೆ ಬುದ್ಧಿ ಹೇಳುತ್ತಾರೋ ಅವರನ್ನು ಗೌರವಿಸಿರಿ.
13 ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಅತ್ಯಧಿಕವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ನಿಮ್ಮನಿಮ್ಮೊಳಗೆ ಸಮಾಧಾನದಿಂದಿರಿ.
ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಅತ್ಯಧಿಕವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ನಿಮ್ಮನಿಮ್ಮೊಳಗೆ ಸಮಾಧಾನದಿಂದಿರಿ.
14 ಪ್ರಿಯರೇ, ಶಿಸ್ತು ಇಲ್ಲದವರನ್ನು ಎಚ್ಚರಿಸಿರಿ. ಮನಗುಂದಿದವರನ್ನು ಆದರಿಸಿರಿ. ಬಲಹೀನರಿಗೆ ಆಧಾರವಾಗಿರಿ. ಎಲ್ಲರೊಂದಿಗೂ ತಾಳ್ಮೆಯುಳ್ಳವರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
ಪ್ರಿಯರೇ, ಶಿಸ್ತು ಇಲ್ಲದವರನ್ನು ಎಚ್ಚರಿಸಿರಿ. ಮನಗುಂದಿದವರನ್ನು ಆದರಿಸಿರಿ. ಬಲಹೀನರಿಗೆ ಆಧಾರವಾಗಿರಿ. ಎಲ್ಲರೊಂದಿಗೂ ತಾಳ್ಮೆಯುಳ್ಳವರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
15 ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ. ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಳ್ಳುವುದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.
ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ. ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಳ್ಳುವುದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.
17 ಎಡೆಬಿಡದೆ ಪ್ರಾರ್ಥಿಸಿರಿ.
ಎಡೆಬಿಡದೆ ಪ್ರಾರ್ಥಿಸಿರಿ.
18 ಎಲ್ಲವುಗಳಿಗಾಗಿ ಕೃತಜ್ಞತೆ ಸಲ್ಲಿಸಿರಿ. ಏಕೆಂದರೆ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
ಎಲ್ಲವುಗಳಿಗಾಗಿ ಕೃತಜ್ಞತೆ ಸಲ್ಲಿಸಿರಿ. ಏಕೆಂದರೆ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
19 ಪವಿತ್ರಾತ್ಮ ದೇವರ ಸನ್ನಿಧಿಯನ್ನು ನಂದಿಸಬೇಡಿರಿ.
ಪವಿತ್ರಾತ್ಮ ದೇವರ ಸನ್ನಿಧಿಯನ್ನು ನಂದಿಸಬೇಡಿರಿ.
20 ಪ್ರವಾದನೆಗಳನ್ನು ಹೀನೈಸಬೇಡಿರಿ.
ಪ್ರವಾದನೆಗಳನ್ನು ಹೀನೈಸಬೇಡಿರಿ.
21 ಎಲ್ಲವನ್ನು ಪರಿಶೋಧಿಸಿ ಒಳ್ಳೆಯದನ್ನೇ ಬಿಗಿಯಾಗಿ ಹಿಡಿದುಕೊಳ್ಳಿರಿ.
ಎಲ್ಲವನ್ನು ಪರಿಶೋಧಿಸಿ ಒಳ್ಳೆಯದನ್ನೇ ಬಿಗಿಯಾಗಿ ಹಿಡಿದುಕೊಳ್ಳಿರಿ.
22 ಸಕಲ ವಿಧವಾದ ಕೆಟ್ಟತನಗಳಿಗೆ ದೂರವಾಗಿರಿ.
ಸಕಲ ವಿಧವಾದ ಕೆಟ್ಟತನಗಳಿಗೆ ದೂರವಾಗಿರಿ.
23 ಸಮಾಧಾನದ ದೇವರು ತಾವಾಗಿಯೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ. ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಪುನರಾಗಮನದಲ್ಲಿ ನಿಮ್ಮ ಆತ್ಮ, ಪ್ರಾಣ, ಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಸುರಕ್ಷಿತವಾಗಿರಲಿ.
ಸಮಾಧಾನದ ದೇವರು ತಾವಾಗಿಯೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ. ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಪುನರಾಗಮನದಲ್ಲಿ ನಿಮ್ಮ ಆತ್ಮ, ಪ್ರಾಣ, ಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಸುರಕ್ಷಿತವಾಗಿರಲಿ.
24 ನಿಮ್ಮನ್ನು ಕರೆಯುವ ದೇವರು ನಂಬಿಗಸ್ತರು, ಅವರೇ ಅದನ್ನು ಸಾಧಿಸುವವರೂ ಆಗಿದ್ದಾರೆ.
ನಿಮ್ಮನ್ನು ಕರೆಯುವ ದೇವರು ನಂಬಿಗಸ್ತರು, ಅವರೇ ಅದನ್ನು ಸಾಧಿಸುವವರೂ ಆಗಿದ್ದಾರೆ.
25 ಪ್ರಿಯರೇ, ನಮಗಾಗಿ ಪ್ರಾರ್ಥಿಸಿರಿ.
ಪ್ರಿಯರೇ, ನಮಗಾಗಿ ಪ್ರಾರ್ಥಿಸಿರಿ.
26 ಪವಿತ್ರವಾದ ಮುದ್ದಿಟ್ಟು ದೇವಜನರೆಲ್ಲರನ್ನೂ ವಂದಿಸಿರಿ.
ಪವಿತ್ರವಾದ ಮುದ್ದಿಟ್ಟು ದೇವಜನರೆಲ್ಲರನ್ನೂ ವಂದಿಸಿರಿ.
27 ಈ ಪತ್ರವನ್ನು ಸಹೋದರ ಸಹೋದರಿಯರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತ ಯೇಸುವಿನ ಹೆಸರಿನಲ್ಲಿ ಆಜ್ಞಾಪಿಸುತ್ತೇನೆ.
ಈ ಪತ್ರವನ್ನು ಸಹೋದರ ಸಹೋದರಿಯರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತ ಯೇಸುವಿನ ಹೆಸರಿನಲ್ಲಿ ಆಜ್ಞಾಪಿಸುತ್ತೇನೆ.
28 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೊಂದಿಗಿರಲಿ.
ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೊಂದಿಗಿರಲಿ.