< ತಿಮೊಥೆಯನಿಗೆ ಬರೆದ ಮೊದಲನೆಯ ಪತ್ರಿಕೆ 4 >
1 ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಗೊಟ್ಟು ವಿಶ್ವಾಸದಲ್ಲಿ ಬಿದ್ದುಹೋಗುವರೆಂದು ಪವಿತ್ರಾತ್ಮ ದೇವರು ಸ್ಪಷ್ಟವಾಗಿ ಹೇಳುತ್ತಾರೆ.
Mweya anotaura pachena kuti panguva dzinouya vamwe vachatsauka kubva pakutenda vagotevera mweya inonyengera nedzidziso dzamadhimoni.
2 ಅವರು ಕಪಟಿಗಳೂ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಬರೆಯುಳ್ಳವರಾದರೂ ಆಗಿದ್ದು
Dzidziso dzakadai dzinouya navaya vanoreva nhema, vane hana dzakapiswa sokunge nesimbi inopisa.
3 ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ತಿಳಿದುಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವುದಕ್ಕೋಸ್ಕರ ದೇವರು ಸೃಷ್ಟಿಸಿದ ಆಹಾರವನ್ನು ತಿನ್ನಬಾರದೆಂತಲೂ ಆಜ್ಞಾಪಿಸುತ್ತಾರೆ.
Vanodzivisa vanhu kuwanana uye vachivarayira kuti varege kudya zvimwe zvokudya, izvo zvakasikwa naMwari kuti zvigamuchirwe nokuvonga naavo vanotenda uye vanoziva chokwadi.
4 ದೇವರು ಸೃಷ್ಟಿಸಿದ್ದೆಲ್ಲವೂ ಒಳ್ಳೆಯದಾಗಿದೆ. ಕೃತಜ್ಞತೆ ಮಾಡಿ ಸ್ವೀಕರಿಸುವ ಯಾವುದನ್ನೂ ತಿರಸ್ಕರಿಸಬೇಕಾಗಿಲ್ಲ.
Nokuti chose chakasikwa naMwari chakanaka, uye hapana chinofanira kuraswa kana chichigamuchirwa nokuvonga,
5 ಅದು ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಪವಿತ್ರವಾಗುತ್ತದೆ.
nokuti chinoitwa chitsvene neshoko raMwari nokunyengetera.
6 ಈ ವಿಷಯಗಳನ್ನು ಸಹೋದರರಿಗೆ ತಿಳಿಸುವವನಾದರೆ ನೀನು ಅನುಸರಿಸುತ್ತಿರುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ.
Kana ukadzidzisa hama zvinhu izvi, uchava mushumiri akanaka waKristu Jesu, akarerwa muzvokwadi yokutenda uye nedzidziso yakanaka yawakatevera.
7 ಪ್ರಾಪಂಚಿಕ ಹಾಗೂ ಅಜ್ಜಿ ಕಥೆಗಳನ್ನು ನಿರಾಕರಿಸಿ ನೀನು ದೇವಭಕ್ತಿಯನ್ನು ಅಭ್ಯಾಸ ಮಾಡಿಕೋ.
Siyana nengano dzisina umwari uye nengano dzechembere; asi uzvirovedzere paumwari.
8 ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.
Nokuti kurovedza muviri kunobatsira zvishoma hako asi umwari hunokosha pazvinhu zvose, hune vimbiso kune zvose muupenyu huno uye nomuupenyu hunouya.
9 ಈ ಮಾತು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ.
Iri ishoko rechokwadi rinofanira kutendwa zvizere
10 ಇದಕ್ಕಾಗಿ ನಾವು ಕಷ್ಟಪಡುತ್ತೇವೆ ಮತ್ತು ಪ್ರಯಾಸ ಪಡುತ್ತೇವೆ. ಏಕೆಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕ ಆಗಿರುವ ಜೀವಸ್ವರೂಪರಾದ ದೇವರನ್ನು ನಾವು ನಿರೀಕ್ಷಿಸಿದ್ದೇವೆ.
uye nokuda kwaizvozvi tinoshingaira nokurwa, nokuti takaisa tariro yedu muna Mwari mupenyu, anova ndiye muponesi wavanhu vose uye zvikuru sei vaya vanotenda.
11 ಈ ವಿಷಯಗಳನ್ನು ಆಜ್ಞಾಪಿಸಿ ಬೋಧಿಸು.
Rayira uye udzidzise zvinhu izvi.
12 ನಿನ್ನ ಯೌವನವನ್ನೂ ಯಾರೂ ತಾತ್ಸಾರ ಮಾಡದಿರಲಿ. ಆದರೆ ನಂಬುವವರಿಗೆ ನುಡಿಯಲ್ಲಿ, ನಡೆಯಲ್ಲಿ, ಪ್ರೀತಿಯಲ್ಲಿ, ವಿಶ್ವಾಸದಲ್ಲಿ, ಶುದ್ಧತ್ವದಲ್ಲಿ ನೀನೇ ಆದರ್ಶನಾಗಿರು.
Ngakurege kuva nomunhu anokuzvidza nokuda kwouduku hwako, asi uve muenzaniso kuvatendi mukutaura, muupenyu, murudo, mukutenda uye napakuchena kwomwoyo.
13 ನಾನು ಬರುವ ತನಕ ಓದುವುದರಲ್ಲಿಯೂ ಎಚ್ಚರಿಸುವುದರಲ್ಲಿಯೂ ಬೋಧಿಸುವುದರಲ್ಲಿಯೂ ಲಕ್ಷ್ಯಕೊಡು.
Kusvikira ndauya, shingaira pakuverenga Rugwaro kukereke, kuparidza nokudzidzisa.
14 ನಿನ್ನಲ್ಲಿರುವ ವರವನ್ನು ಅಲಕ್ಷ್ಯ ಮಾಡಬೇಡ. ಅದು ಸಭೆಯ ಹಿರಿಯರು ಪ್ರವಾದನೆಯ ಮೂಲಕ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ನಿನಗೆ ಕೊಡಲಾಯಿತಲ್ಲವೇ?
Usarega kushandisa chipo chako, chakapiwa kwauri kubudikidza neshoko rechiprofita pawakaiswa maoko pamusoro navakuru.
15 ಈ ವಿಷಯಗಳನ್ನು ಧ್ಯಾನಿಸುವವನಾಗಿರು. ಇವುಗಳಲ್ಲಿಯೇ ನೆಲೆಗೊಂಡಿರು. ಹೀಗೆ ನಿನ್ನ ಪ್ರಗತಿಯು ಎಲ್ಲರಿಗೂ ಪ್ರಕಟವಾಗುವುದು.
Shingaira pazvinhu izvi, uzviite nomwoyo wako wose, kuitira kuti munhu wose aone kupfuurira mberi kwako.
16 ನಿನ್ನ ವಿಷಯದಲ್ಲಿಯೂ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿಯೇ ನಿರತನಾಗಿರು. ಹೀಗೆ ಮಾಡುವುದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವೆ.
Uzvichengete kwazvo iwe nedzidziso yako. Utsungirire pazviri, nokuti kana ukazviita, uchazviponesa iwe navanokunzwa.