< ತಿಮೊಥೆಯನಿಗೆ ಬರೆದ ಮೊದಲನೆಯ ಪತ್ರಿಕೆ 1 >

1 ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ನಮಗೆ ರಕ್ಷಕ ಆಗಿರುವ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತ ಯೇಸುವಿನ ಆಜ್ಞಾನುಸಾರ,
奉我们救主 神和我们的盼望基督耶稣之命,作基督耶稣使徒的保罗
2 ನಂಬಿಕೆಯಲ್ಲಿ ನನ್ನ ನಿಜ ಪುತ್ರನಾಗಿರುವ ತಿಮೊಥೆಯನಿಗೆ ಬರೆಯುವುದು: ನಮ್ಮ ತಂದೆ ದೇವರಿಂದಲೂ, ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ದೊರೆಯಲಿ.
写信给那因信主作我真儿子的提摩太。愿恩惠、怜悯、平安从父 神和我们主基督耶稣归与你!
3 ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸದಲ್ಲಿ ಇದ್ದುಕೊಂಡು ಸುಳ್ಳು ಬೋಧನೆಯನ್ನು ಉಪದೇಶಿಸಬಾರದೆಂತಲೂ
我往马其顿去的时候,曾劝你仍住在以弗所,好嘱咐那几个人不可传异教,
4 ಕಟ್ಟುಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಕೆಲವರಿಗೆ ಆಜ್ಞಾಪಿಸಬೇಕೆಂದು ನಾನು ನಿನಗೆ ಖಂಡಿತವಾಗಿ ಹೇಳಿದಂತೆ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆಯಿಂದುಂಟಾಗುವ ದೇವರ ಕಾರ್ಯಭಾರವನ್ನು ವೃದ್ಧಿ ಮಾಡುವುದೇ ಇಲ್ಲ.
也不可听从荒渺无凭的话语和无穷的家谱;这等事只生辩论,并不发明 神在信上所立的章程。
5 ಈ ಆಜ್ಞೆಯ ಗುರಿಯು ಪ್ರೀತಿಯೇ ಆಗಿರುತ್ತದೆ. ಶುದ್ಧ ಹೃದಯ, ಒಳ್ಳೆಯ ಮನಸ್ಸಾಕ್ಷಿ ಹಾಗೂ ನಿಷ್ಕಪಟವಾದ ನಂಬಿಕೆಯಿಂದ ಈ ಪ್ರೀತಿಯು ಹುಟ್ಟುತ್ತದೆ.
但命令的总归就是爱;这爱是从清洁的心和无亏的良心,无伪的信心生出来的。
6 ಕೆಲವರು ಇವುಗಳನ್ನು ಬಿಟ್ಟುಬಿಟ್ಟು ವ್ಯರ್ಥವಾದ ಮಾತುಗಳಿಗೆ ತಿರುಗಿಕೊಂಡಿದ್ದಾರೆ.
有人偏离这些,反去讲虚浮的话,
7 ಅವರು ನಿಯಮದ ಬೋಧಕರಾಗಿರಲು ಬಯಸಿದರೂ ತಾವು ಹೇಳುವುದನ್ನಾಗಲಿ, ತಾವು ಸ್ಥಾಪಿಸುವುದನ್ನಾಗಲಿ ಏನೆಂದು ದೃಢನಿಶ್ಚಯವಿಲ್ಲದವರಾಗಿದ್ದಾರೆ.
想要作教法师,却不明白自己所讲说的所论定的。
8 ಒಬ್ಬನು ನಿಯಮವನ್ನು ಸರಿಯಾಗಿ ಉಪಯೋಗಿಸುವುದಾದರೆ ಅದು ಒಳ್ಳೆಯದೆಂದು ನಾವು ಬಲ್ಲೆವು.
我们知道律法原是好的,只要人用得合宜;
9 ನಿಯಮವು ನೀತಿವಂತರಿಗೋಸ್ಕರ ಅಲ್ಲ. ಬದಲಿಗೆ ಅದು ಅವಿಧೇಯರಿಗೆ, ಅಕ್ರಮಗಾರರಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಅಪವಿತ್ರರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ, ಕೊಲೆಗಾರರಿಗೆ,
因为律法不是为义人设立的,乃是为不法和不服的,不虔诚和犯罪的,不圣洁和恋世俗的,弑父母和杀人的,
10 ಜಾರರಿಗೆ, ಸಲಿಂಗಕಾಮಿಗಳಿಗೆ, ನರಚೋರರಿಗೆ, ಸುಳ್ಳುಗಾರರಿಗೆ, ಸುಳ್ಳಾಣೆಯಿಡುವವರಿಗೆ, ಸ್ವಸ್ಥಬೋಧನೆಯನ್ನು ವಿರೋಧಿಸುವ ಬೇರೆ ಏನಾದರೂ ಇದ್ದರೆ ಮೋಶೆಯ ನಿಯಮವು ಇಂಥವವರಿಗಾಗಿ ಕೊಡಲಾಗಿದೆ ಎಂದು ನಮಗೆ ತಿಳಿದಿದೆ.
行淫和亲男色的,抢人口和说谎话的,并起假誓的,或是为别样敌正道的事设立的。
11 ಈ ಬೋಧನೆಯು ಭಾಗ್ಯವಂತರಾದ ದೇವರ ಮಹಿಮೆಯ ಸುವಾರ್ತೆಗೆ ಅನುರೂಪವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲಾಗಿದೆ.
这是照着可称颂之 神交托我荣耀福音说的。
12 ನನ್ನನ್ನು ಬಲಪಡಿಸುವ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವು ನನ್ನನ್ನು ನಂಬಿಗಸ್ತನೆಂದು ಎಣಿಸಿ ಸೇವೆಗೆ ನೇಮಿಸಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
我感谢那给我力量的我们主基督耶稣,因他以我有忠心,派我服事他。
13 ಮೊದಲು ದೇವದೂಷಕನೂ ಹಿಂಸಕನೂ ಅಪಮಾನ ಮಾಡುವವನೂ ಆಗಿದ್ದ ನಾನು ಅಜ್ಞಾನಿಯಾಗಿ ಅಪನಂಬಿಕೆಯಲ್ಲಿ ಹಾಗೆ ವರ್ತಿಸಿದ್ದರೂ ದೇವರು ನನಗೆ ಕರುಣೆತೋರಿದರು.
我从前是亵渎 神的,逼迫人的,侮慢人的;然而我还蒙了怜悯,因我是不信不明白的时候而做的。
14 ಆದರೆ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನನಗೆ ಧಾರಾಳವಾಗಿ ಸುರಿಯಲಾಯಿತು. ಮಾತ್ರವಲ್ಲದೆ ವಿಶ್ವಾಸ ಪ್ರೀತಿಯೊಂದಿಗೆ ಅತ್ಯಧಿಕವಾಯಿತು.
并且我主的恩是格外丰盛,使我在基督耶稣里有信心和爱心。
15 ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದರು, ಎಂಬ ವಾಕ್ಯವು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ. ಆ ಪಾಪಿಗಳಲ್ಲಿ ನಾನೇ ಮುಖ್ಯನು.
“基督耶稣降世,为要拯救罪人。”这话是可信的,是十分可佩服的。在罪人中我是个罪魁。
16 ಆದರೂ ಇನ್ನು ಮುಂದೆ ನಿತ್ಯಜೀವಕ್ಕೆ ತಮ್ಮ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಾಗಿರಬೇಕೆಂದು ಕ್ರಿಸ್ತ ಯೇಸು ಮುಖ್ಯ ಪಾಪಿಯಾದ ನನ್ನಲ್ಲಿ ತಮ್ಮ ಪೂರ್ಣ ಸಹನೆಯನ್ನು ತೋರ್ಪಡಿಸಿರುವುದಕ್ಕಾಗಿ ನನಗೆ ಕರುಣೆ ದೊರೆಯಿತು. (aiōnios g166)
然而,我蒙了怜悯,是因耶稣基督要在我这罪魁身上显明他一切的忍耐,给后来信他得永生的人作榜样。 (aiōnios g166)
17 ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್. (aiōn g165)
但愿尊贵、荣耀归与那不能朽坏、不能看见、永世的君王、独一的 神,直到永永远远。阿们! (aiōn g165)
18 ಮಗನಾದ ತಿಮೊಥೆಯನೇ, ನಿನ್ನ ವಿಷಯವಾಗಿ ಮೊದಲು ಉಂಟಾದ ಪ್ರವಾದನೆಗಳ ಪ್ರಕಾರವೇ ನೀನು ಅವುಗಳಿಂದ ಒಳ್ಳೆಯ ಯುದ್ಧವನ್ನು ನಡಿಸಬೇಕೆಂದು ಈ ಆಜ್ಞೆಯನ್ನು ನಿನಗೆ ಒಪ್ಪಿಸುತ್ತೇನೆ.
我儿提摩太啊,我照从前指着你的预言,将这命令交托你,叫你因此可以打那美好的仗。
19 ನಂಬಿಗಸ್ತನೂ ಒಳ್ಳೆಯ ಮನಸ್ಸಾಕ್ಷಿಯುಳ್ಳವನೂ ಆಗಿರು. ಕೆಲವರು ಈ ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ಹಡಗನ್ನು ಒಡೆದವರ ಹಾಗೆ ಇದ್ದಾರೆ.
常存信心和无亏的良心。有人丢弃良心,就在真道上如同船破坏了一般。
20 ಹುಮೆನಾಯನೂ ಅಲೆಕ್ಸಾಂಡರನೂ ಅಂಥವರಾಗಿದ್ದಾರೆ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನಿಗೆ ಒಪ್ಪಿಸಿಬಿಟ್ಟಿದ್ದೇನೆ.
其中有许米乃和亚历山大;我已经把他们交给撒但,使他们受责罚就不再谤渎了。

< ತಿಮೊಥೆಯನಿಗೆ ಬರೆದ ಮೊದಲನೆಯ ಪತ್ರಿಕೆ 1 >