< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 16 >

1 ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು, ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲೀ, ಹೊರಗಾಗಲೀ ಯಾರೂ ಹೋಗದ ಹಾಗೆ ಸುತ್ತಲೂ ರಾಮ ಪಟ್ಟಣದ ಸುತ್ತಲೂ ಕೋಟೆಯನ್ನು ಕಟ್ಟಿಸಿದನು.
בִּשְׁנַ֨ת שְׁלֹשִׁ֤ים וָשֵׁשׁ֙ לְמַלְכ֣וּת אָסָ֔א עָלָ֞ה בַּעְשָׁ֤א מֶֽלֶךְ־יִשְׂרָאֵל֙ עַל־יְהוּדָ֔ה וַיִּ֖בֶן אֶת־הָרָמָ֑ה לְבִלְתִּ֗י תֵּ֚ת יוֹצֵ֣א וָבָ֔א לְאָסָ֖א מֶ֥לֶךְ יְהוּדָֽה׃
2 ಆಗ ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಬೆಳ್ಳಿಬಂಗಾರವನ್ನು ತೆಗೆದು, ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ ಅವನಿಗೆ,
וַיֹּצֵ֨א אָסָ֜א כֶּ֣סֶף וְזָהָ֗ב מֵאֹֽצְר֛וֹת בֵּ֥ית יְהוָ֖ה וּבֵ֣ית הַמֶּ֑לֶךְ וַיִּשְׁלַ֗ח אֶל־בֶּן־הֲדַד֙ מֶ֣לֶךְ אֲרָ֔ם הַיּוֹשֵׁ֥ב בְּדַרְמֶ֖שֶׂק לֵאמֹֽר׃
3 “ನನ್ನ ತಂದೆ ಮತ್ತು ನಿನ್ನ ತಂದೆಯ ನಡುವೆ ಇದ್ದಂತೆ ನನ್ನ ಮತ್ತು ನಿನ್ನ ನಡುವೆ ಒಡಂಬಡಿಕೆ ಉಂಟು. ಇಗೋ ನಾನು ಬೆಳ್ಳಿಬಂಗಾರವನ್ನು ನಿನಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ, ನೀನು ಅವನ ಸಂಗಡ ಮಾಡಿದ ಒಡಂಬಡಿಕೆಯನ್ನು ಮುರಿಯಬೇಕು,” ಎಂದು ಹೇಳಿದನು.
בְּרִית֙ בֵּינִ֣י וּבֵינֶ֔ךָ וּבֵ֥ין אָבִ֖י וּבֵ֣ין אָבִ֑יךָ הִנֵּ֨ה שָׁלַ֤חְתִּֽי לְךָ֙ כֶּ֣סֶף וְזָהָ֔ב לֵ֞ךְ הָפֵ֣ר בְּרִֽיתְךָ֗ אֶת־בַּעְשָׁא֙ מֶ֣לֶךְ יִשְׂרָאֵ֔ל וְיַעֲלֶ֖ה מֵעָלָֽי׃
4 ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಅವರು ಇಯ್ಯೋನ್, ದಾನ್ ಆಬೇಲ್ಮಯಿಮ್, ನಫ್ತಾಲ್ಯರ ಸಮಸ್ತ ಉಗ್ರಾಣಗಳ ಪಟ್ಟಣಗಳನ್ನು ವಶಪಡಿಸಿಕೊಂಡರು.
וַיִּשְׁמַ֨ע בֶּן הֲדַ֜ד אֶל־הַמֶּ֣לֶךְ אָסָ֗א וַ֠יִּשְׁלַח אֶת־שָׂרֵ֨י הַחֲיָלִ֤ים אֲשֶׁר־לוֹ֙ אֶל־עָרֵ֣י יִשְׂרָאֵ֔ל וַיַּכּוּ֙ אֶת־עִיּ֣וֹן וְאֶת־דָּ֔ן וְאֵ֖ת אָבֵ֣ל מָ֑יִם וְאֵ֥ת כָּֽל־מִסְכְּנ֖וֹת עָרֵ֥י נַפְתָּלִֽי׃
5 ಬಾಷನು ಇದನ್ನು ಕೇಳಿದಾಗ ರಾಮ ಪಟ್ಟಣದ ಸುತ್ತಲೂ ಕೋಟೆ ಕಟ್ಟಿಸುವುದನ್ನು ಬಿಟ್ಟು, ಅದರ ಎಲ್ಲಾ ಕೆಲಸಗಳನ್ನು ನಿಲ್ಲಿಸಿಬಿಟ್ಟನು.
וַיְהִי֙ כִּשְׁמֹ֣עַ בַּעְשָׁ֔א וַיֶּחְדַּ֕ל מִבְּנ֖וֹת אֶת־הָרָמָ֑ה וַיַּשְׁבֵּ֖ת אֶת־מְלַאכְתּֽוֹ׃ ס
6 ಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡು ಹೋದನು. ಬಾಷನು ಕಟ್ಟಿಸುತ್ತಾ ಇದ್ದ ರಾಮ ಪಟ್ಟಣದ ಕಲ್ಲುಗಳನ್ನೂ, ಅದರ ತೊಲೆಗಳನ್ನೂ ತೆಗೆದುಕೊಂಡುಹೋಗಿ, ಅವುಗಳಿಂದ ಗಿಬೆಯ ಮತ್ತು ಮಿಚ್ಪೆ ಎಂಬ ನಗರಗಳನ್ನು ಕಟ್ಟಿಸಿದನು.
וְאָסָ֣א הַמֶּ֗לֶךְ לָקַח֙ אֶת־כָּל־יְהוּדָ֔ה וַיִּשְׂא֞וּ אֶת־אַבְנֵ֤י הָֽרָמָה֙ וְאֶת־עֵצֶ֔יהָ אֲשֶׁ֥ר בָּנָ֖ה בַּעְשָׁ֑א וַיִּ֣בֶן בָּהֶ֔ם אֶת־גֶּ֖בַע וְאֶת־הַמִּצְפָּֽה׃ ס
7 ಅದೇ ಕಾಲದಲ್ಲಿ ದರ್ಶಿಯಾದ ಹನಾನೀಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವ ದೇವರ ಮೇಲೆ ಆತುಕೊಳ್ಳದೆ, ಅರಾಮಿನ ಅರಸನ ಮೇಲೆ ಆತುಕೊಂಡದ್ದರಿಂದ, ಅರಾಮಿನ ಅರಸನ ಸೈನ್ಯವು ನಿಮ್ಮ ಕೈಯಿಂದ ತಪ್ಪಿಸಿಕೊಂಡಿತು.
וּבָעֵ֣ת הַהִ֗יא בָּ֚א חֲנָ֣נִי הָרֹאֶ֔ה אֶל־אָסָ֖א מֶ֣לֶךְ יְהוּדָ֑ה וַיֹּ֣אמֶר אֵלָ֗יו בְּהִשָּׁ֨עֶנְךָ֜ עַל־מֶ֤לֶךְ אֲרָם֙ וְלֹ֤א נִשְׁעַ֙נְתָּ֙ עַל־יְהוָ֣ה אֱלֹהֶ֔יךָ עַל־כֵּ֗ן נִמְלַ֛ט חֵ֥יל מֶֽלֶךְ־אֲרָ֖ם מִיָּדֶֽךָ׃
8 ಕೂಷನವರೂ, ಲಿಬಿಯದವರೂ ಮಹಾ ಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ, ರಾಹುತರೂ ಇದ್ದರಲ್ಲವೇ? ಆಗ ನೀನು ಯೆಹೋವ ದೇವರನ್ನು ಆತುಕೊಂಡದ್ದರಿಂದ ದೇವರು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದರು.
הֲלֹ֧א הַכּוּשִׁ֣ים וְהַלּוּבִ֗ים הָי֨וּ לְחַ֧יִל ׀ לָרֹ֛ב לְרֶ֥כֶב וּלְפָרָשִׁ֖ים לְהַרְבֵּ֣ה מְאֹ֑ד וּבְהִשָּֽׁעֶנְךָ֥ עַל־יְהוָ֖ה נְתָנָ֥ם בְּיָדֶֽךָ׃
9 ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.
כִּ֣י יְהוָ֗ה עֵינָ֞יו מְשֹׁטְט֤וֹת בְּכָל־הָאָ֙רֶץ֙ לְ֠הִתְחַזֵּק עִם־לְבָבָ֥ם שָׁלֵ֛ם אֵלָ֖יו נִסְכַּ֣לְתָּ עַל־זֹ֑את כִּ֣י מֵעַ֔תָּה יֵ֥שׁ עִמְּךָ֖ מִלְחָמֽוֹת׃
10 ಆಗ ಆಸನು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಇದರ ನಿಮಿತ್ತ ಅವನ ಮೇಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವರನ್ನು ಬಾಧಿಸಿದನು.
וַיִּכְעַ֨ס אָסָ֜א אֶל־הָרֹאֶ֗ה וַֽיִּתְּנֵ֙הוּ֙ בֵּ֣ית הַמַּהְפֶּ֔כֶת כִּֽי־בְזַ֥עַף עִמּ֖וֹ עַל־זֹ֑את וַיְרַצֵּ֥ץ אָסָ֛א מִן־הָעָ֖ם בָּעֵ֥ת הַהִֽיא׃
11 ಆಸನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಕಾರ್ಯಗಳು ಯೆಹೂದದ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ಬರೆದಿರುತ್ತವೆ.
וְהִנֵּה֙ דִּבְרֵ֣י אָסָ֔א הָרִאשׁוֹנִ֖ים וְהָאַחֲרוֹנִ֑ים הִנָּ֤ם כְּתוּבִים֙ עַל־סֵ֣פֶר הַמְּלָכִ֔ים לִיהוּדָ֖ה וְיִשְׂרָאֵֽל׃
12 ಆದರೆ ಆಸನು ತನ್ನ ಆಳಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ರೋಗ ತಗುಲಿತು. ಅವನ ರೋಗವು ಅತಿಘೋರವಾಯಿತು. ಆದರೆ ಅವನು ತನ್ನ ರೋಗದಲ್ಲಿ ಯೆಹೋವ ದೇವರನ್ನು ಹುಡುಕದೆ, ವೈದ್ಯರನ್ನು ಹುಡುಕಿದನು.
וַיֶּחֱלֶ֣א אָסָ֡א בִּשְׁנַת֩ שְׁלוֹשִׁ֨ים וָתֵ֤שַׁע לְמַלְכוּתוֹ֙ בְּרַגְלָ֔יו עַד־לְמַ֖עְלָה חָלְי֑וֹ וְגַם־בְּחָלְיוֹ֙ לֹא־דָרַ֣שׁ אֶת־יְהוָ֔ה כִּ֖י בָּרֹפְאִֽים׃
13 ಆಸನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ತನ್ನ ಆಳಿಕೆಯ ನಾಲ್ವತ್ತೊಂದನೆಯ ವರ್ಷದಲ್ಲಿ ಮರಣಹೊಂದಿದನು.
וַיִּשְׁכַּ֥ב אָסָ֖א עִם־אֲבֹתָ֑יו וַיָּ֕מָת בִּשְׁנַ֛ת אַרְבָּעִ֥ים וְאַחַ֖ת לְמָלְכֽוֹ׃
14 ಅವನು ತನಗೋಸ್ಕರ ದಾವೀದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು. ಅವರು ತೈಲಗಾರರ ವಿದ್ಯೆಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ, ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಿದ ಶವ ಪೆಟ್ಟಿಗೆಯಲ್ಲಿ ಅವನನ್ನು ಇಟ್ಟರು. ಅವನ ಗೌರವಕ್ಕಾಗಿ ಮಹಾ ಅಗ್ನಿಕುಂಡವನ್ನೇರ್ಪಡಿಸಿದರು.
וַיִּקְבְּרֻ֣הוּ בְקִבְרֹתָ֗יו אֲשֶׁ֣ר כָּֽרָה־לוֹ֮ בְּעִ֣יר דָּוִיד֒ וַיַּשְׁכִּיבֻ֗הוּ בַּמִּשְׁכָּב֙ אֲשֶׁ֤ר מִלֵּא֙ בְּשָׂמִ֣ים וּזְנִ֔ים מְרֻקָּחִ֖ים בְּמִרְקַ֣חַת מַעֲשֶׂ֑ה וַיִּשְׂרְפוּ־ל֥וֹ שְׂרֵפָ֖ה גְּדוֹלָ֥ה עַד־לִמְאֹֽד׃ פ

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 16 >