< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 18 >

1 ಯೆಹೋಷಾಫಾಟನಿಗೆ ಐಶ್ವರ್ಯವೂ, ಘನತೆಯೂ ಅಧಿಕವಾಗಿರುವಾಗ, ಅವನು ಅಹಾಬನ ಸಂಗಡ ಬಂಧುತ್ವ ಮಾಡಿದನು.
וַיְהִי לִֽיהוֹשָׁפָט עֹשֶׁר וְכָבוֹד לָרֹב וַיִּתְחַתֵּן לְאַחְאָֽב׃
2 ಕೆಲವು ವರ್ಷಗಳ ತರುವಾಯ ಅವನು ಅಹಾಬನ ಬಳಿಗೆ ಸಮಾರ್ಯಕ್ಕೆ ಹೋದನು. ಆಗ ಅಹಾಬನು ಅವನಿಗೋಸ್ಕರವೂ, ಅವನ ಸಂಗಡ ಇದ್ದ ಜನರಿಗೋಸ್ಕರವೂ ಅನೇಕ ಕುರಿದನಗಳನ್ನೂ ವಧಿಸಿ ಔತಣವನ್ನೇರ್ಪಡಿಸಿ, ತನ್ನ ಸಂಗಡ ಯುದ್ಧಕ್ಕಾಗಿ ಗಿಲ್ಯಾದಿನ ರಾಮೋತಿಗೆ ಹೋಗಲು ಪ್ರೇರೇಪಿಸಿದನು.
וַיֵּרֶד לְקֵץ שָׁנִים אֶל־אַחְאָב לְשֹׁמְרוֹן וַיִּֽזְבַּֽח־לוֹ אַחְאָב צֹאן וּבָקָר לָרֹב וְלָעָם אֲשֶׁר עִמּוֹ וַיְסִיתֵהוּ לַעֲלוֹת אֶל־רָמוֹת גִּלְעָֽד׃
3 ಇಸ್ರಾಯೇಲಿನ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಅದಕ್ಕವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಾವು ಯುದ್ಧದಲ್ಲಿ ನಿನ್ನ ಸಂಗಡ ಇರುವೆವು,” ಎಂದನು.
וַיֹּאמֶר אַחְאָב מֶֽלֶךְ־יִשְׂרָאֵל אֶל־יְהֽוֹשָׁפָט מֶלֶךְ יְהוּדָה הֲתֵלֵךְ עִמִּי רָמֹת גִּלְעָד וַיֹּאמֶר לוֹ כָּמוֹנִי כָמוֹךָ וּכְעַמְּךָ עַמִּי וְעִמְּךָ בַּמִּלְחָמָֽה׃
4 ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ಈ ಹೊತ್ತು ಮೊದಲು ಯೆಹೋವ ದೇವರ ಆಲೋಚನೆಯನ್ನು ವಿಚಾರಿಸಿರಿ,” ಎಂದನು.
וַיֹּאמֶר יְהוֹשָׁפָט אֶל־מֶלֶךְ יִשְׂרָאֵל דְּרָשׁ־נָא כַיּוֹם אֶת־דְּבַר יְהוָֽה׃
5 ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.
וַיִּקְבֹּץ מֶֽלֶךְ־יִשְׂרָאֵל אֶֽת־הַנְּבִאִים אַרְבַּע מֵאוֹת אִישׁ וַיֹּאמֶר אֲלֵהֶם הֲנֵלֵךְ אֶל־רָמֹת גִּלְעָד לַמִּלְחָמָה אִם־אֶחְדָּל וַיֹּאמְרוּ עֲלֵה וְיִתֵּן הָאֱלֹהִים בְּיַד הַמֶּֽלֶךְ׃
6 ಆದರೆ ಯೆಹೋಷಾಫಾಟನು, “ಯೆಹೋವ ದೇವರ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಬೇರೆ ಪ್ರವಾದಿ ಇಲ್ಲಿ ಇಲ್ಲವೋ?” ಎಂದು ಕೇಳಿದನು.
וַיֹּאמֶר יְהוֹשָׁפָט הַאֵין פֹּה נָבִיא לַיהוָה עוֹד וְנִדְרְשָׁה מֵאֹתֽוֹ׃
7 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.
וַיֹּאמֶר מֶֽלֶךְ־יִשְׂרָאֵל ׀ אֶֽל־יְהוֹשָׁפָט עוֹד אִישׁ־אֶחָד לִדְרוֹשׁ אֶת־יְהוָה מֽ͏ֵאֹתוֹ וַאֲנִי שְׂנֵאתִיהוּ כִּֽי־אֵינֶנּוּ מִתְנַבֵּא עָלַי לְטוֹבָה כִּי כָל־יָמָיו לְרָעָה הוּא מִיכָיְהוּ בֶן־יִמְלָא וַיֹּאמֶר יְהוֹשָׁפָט אַל־יֹאמַר הַמֶּלֶךְ כֵּֽן׃
8 ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು, “ಇಮ್ಲನ ಮಗನಾದ ಮೀಕಾಯನನ್ನು ಶೀಘ್ರವಾಗಿ ಕರೆದುಕೊಂಡು ಬಾ,” ಎಂದನು.
וַיִּקְרָא מֶלֶךְ יִשְׂרָאֵל אֶל־סָרִיס אֶחָד וַיֹּאמֶר מַהֵר מיכהו מִיכָיְהוּ בֶן־יִמְלָֽא׃
9 ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು, ಸಮಾರ್ಯದ ಬಾಗಿಲಿನ ಮುಂದೆ ಬಯಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತುಕೊಂಡಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸುತ್ತಿದ್ದರು.
וּמֶלֶךְ יִשְׂרָאֵל וִֽיהוֹשָׁפָט מֶֽלֶךְ־יְהוּדָה יוֹשְׁבִים אִישׁ עַל־כִּסְאוֹ מְלֻבָּשִׁים בְּגָדִים וְיֹשְׁבִים בְּגֹרֶן פֶּתַח שַׁעַר שֹׁמְרוֹן וְכָל־הַנְּבִיאִים מִֽתְנַבְּאִים לִפְנֵיהֶֽם׃
10 ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.
וַיַּעַשׂ לוֹ צִדְקִיָּהוּ בֶֽן־כְּנַעֲנָה קַרְנֵי בַרְזֶל וַיֹּאמֶר כֹּֽה־אָמַר יְהוָה בְּאֵלֶּה תְּנַגַּח אֶת־אֲרָם עַד־כַּלּוֹתָֽם׃
11 ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ, “ಗಿಲ್ಯಾದಿನ ರಾಮೋತಿಗೆ ಹೋಗಿ ಜಯ ಹೊಂದು. ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.
וְכָל־הַנְּבִאִים נִבְּאִים כֵּן לֵאמֹר עֲלֵה רָמֹת גִּלְעָד וְהַצְלַח וְנָתַן יְהוָה בְּיַד הַמֶּֽלֶךְ׃
12 ಆದರೆ ಮೀಕಾಯನನ್ನು ಕರೆಯಲು ಹೋದ ದೂತನು ಅವನಿಗೆ, “ನೋಡು, ಎಲ್ಲ ಪ್ರವಾದಿಗಳು ಏಕಮನಸ್ಸಿನಿಂದ ಅರಸನಿಗೆ ಒಳ್ಳೆಯದನ್ನೇ ಪ್ರವಾದಿಸಿದ್ದಾರೆ. ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೆಯ ಮಾತು ಆಡು,” ಎಂದನು.
וְהַמַּלְאָךְ אֲשֶׁר־הָלַךְ ׀ לִקְרֹא לְמִיכָיְהוּ דִּבֶּר אֵלָיו לֵאמֹר הִנֵּה דִּבְרֵי הַנְּבִאִים פֶּֽה־אֶחָד טוֹב אֶל־הַמֶּלֶךְ וִֽיהִי־נָא דְבָרְךָ כְּאַחַד מֵהֶם וְדִבַּרְתָּ טּֽוֹב׃
13 ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ನನ್ನ ದೇವರು ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು.
וַיֹּאמֶר מִיכָיְהוּ חַי־יְהוָה כִּי אֶת־אֲשֶׁר־יֹאמַר אֱלֹהַי אֹתוֹ אֲדַבֵּֽר׃
14 ಅವನು ಅರಸನ ಬಳಿಗೆ ಬಂದಾಗ, ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಅವರು ನಿಮ್ಮ ಕೈವಶರಾಗುವರು,” ಎಂದನು.
וַיָּבֹא אֶל־הַמֶּלֶךְ וַיֹּאמֶר הַמֶּלֶךְ אֵלָיו מִיכָה הֲנֵלֵךְ אֶל־רָמֹת גִּלְעָד לַמִּלְחָמָה אִם־אֶחְדָּל וַיֹּאמֶר עֲלוּ וְהַצְלִיחוּ וְיִנָּתְנוּ בְּיֶדְכֶֽם׃
15 ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು.
וַיֹּאמֶר אֵלָיו הַמֶּלֶךְ עַד־כַּמֶּה פְעָמִים אֲנִי מַשְׁבִּיעֶךָ אֲשֶׁר לֹֽא־תְדַבֵּר אֵלַי רַק־אֱמֶת בְּשֵׁם יְהוָֽה׃
16 ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ. ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು.
וַיֹּאמֶר רָאִיתִי אֶת־כָּל־יִשְׂרָאֵל נְפוֹצִים עַל־הֶֽהָרִים כַּצֹּאן אֲשֶׁר אֵין־לָהֶן רֹעֶה וַיֹּאמֶר יְהוָה לֹֽא־אֲדֹנִים לָאֵלֶּה יָשׁוּבוּ אִישׁ־לְבֵיתוֹ בְּשָׁלֽוֹם׃
17 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ಇವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು.
וַיֹּאמֶר מֶֽלֶךְ־יִשְׂרָאֵל אֶל־יְהוֹשָׁפָט הֲלֹא אָמַרְתִּי אֵלֶיךָ לֹא־יִתְנַבֵּא עָלַי טוֹב כִּי אִם־לְרָֽע׃
18 ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು. ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ ಮತ್ತು ಎಡಗಡೆಯಲ್ಲಿ ನಿಂತಿರುವುದನ್ನೂ ನಾನು ಕಂಡೆನು.
וַיֹּאמֶר לָכֵן שִׁמְעוּ דְבַר־יְהוָה רָאִיתִי אֶת־יְהוָה יוֹשֵׁב עַל־כִּסְאוֹ וְכָל־צְבָא הַשָּׁמַיִם עֹֽמְדִים עַל־יְמִינוֹ וּשְׂמֹאלֽוֹ׃
19 ಆಗ ಯೆಹೋವ ದೇವರು, ‘ಇಸ್ರಾಯೇಲಿನ ಅರಸನಾದ ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು.
וַיֹּאמֶר יְהוָה מִי יְפַתֶּה אֶת־אַחְאָב מֶֽלֶךְ־יִשְׂרָאֵל וְיַעַל וְיִפֹּל בְּרָמוֹת גִּלְעָד וַיֹּאמֶר זֶה אֹמֵר כָּכָה וְזֶה אֹמֵר כָּֽכָה׃
20 ಕೊನೆಯಲ್ಲಿ, ಒಂದು ಆತ್ಮವು ಹೊರಟುಬಂದು ಯೆಹೋವ ದೇವರ ಮುಂದೆ ನಿಂತು, ‘ನಾನು ಅವನನ್ನು ಮರುಳುಗೊಳಿಸುತ್ತೇನೆ,’ ಎಂದಿತು. “ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು.
וַיֵּצֵא הָרוּחַ וַֽיַּעֲמֹד לִפְנֵי יְהוָה וַיֹּאמֶר אֲנִי אֲפַתֶּנּוּ וַיֹּאמֶר יְהוָה אֵלָיו בַּמָּֽה׃
21 “ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಯೆಹೋವ ದೇವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ, ಹೊರಟುಹೋಗಿ ಹಾಗೆ ಮಾಡು,’ ಎಂದರು.
וַיֹּאמֶר אֵצֵא וְהָיִיתִי לְרוּחַ שֶׁקֶר בְּפִי כָּל־נְבִיאָיו וַיֹּאמֶר תְּפַתֶּה וְגַם־תּוּכָל צֵא וַעֲשֵׂה־כֵֽן׃
22 “ಆದ್ದರಿಂದ ಇಗೋ, ಯೆಹೋವ ದೇವರು ಈ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳನ್ನಾಡುವ ಆತ್ಮವನ್ನು ಇಟ್ಟಿದ್ದಾರೆ. ಇದಲ್ಲದೆ ಯೆಹೋವ ದೇವರು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾರೆ,” ಎಂದನು.
וְעַתָּה הִנֵּה נָתַן יְהוָה רוּחַ שֶׁקֶר בְּפִי נְבִיאֶיךָ אֵלֶּה וַֽיהוָה דִּבֶּר עָלֶיךָ רָעָֽה׃
23 ಆಗ ಕೆನಾನನ ಮಗನಾದ ಚಿದ್ಕೀಯನು ಸಮೀಪಕ್ಕೆ ಬಂದು ಮೀಕಾಯನ ಕೆನ್ನೆಯ ಮೇಲೆ ಹೊಡೆದು, “ಯೆಹೋವ ದೇವರ ಆತ್ಮವು ನನ್ನನ್ನು ಬಿಟ್ಟು, ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಬಂದಿತು?” ಎಂದನು.
וַיִּגַּשׁ צִדְקִיָּהוּ בֶֽן־כְּנַעֲנָה וַיַּךְ אֶת־מִיכָיְהוּ עַל־הַלֶּחִי וַיֹּאמֶר אֵי זֶה הַדֶּרֶךְ עָבַר רֽוּחַ־יְהוָה מֵאִתִּי לְדַבֵּר אֹתָֽךְ׃
24 ಅದಕ್ಕೆ ಮೀಕಾಯನು, “ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ನೀನು ಹೋಗುವ ದಿವಸದಲ್ಲಿ ನೋಡುವೆ,” ಎಂದನು.
וַיֹּאמֶר מִיכָיְהוּ הִנְּךָ רֹאֶה בַּיּוֹם הַהוּא אֲשֶׁר תָּבוֹא חֶדֶר בְּחֶדֶר לְהֵחָבֵֽא׃
25 ಆಗ ಇಸ್ರಾಯೇಲಿನ ಅರಸನು ಹೇಳಿದ್ದೇನೆಂದರೆ, “ನೀವು ಮೀಕಾಯನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ, ಅರಸನ ಮಗನಾದ ಯೋವಾಷನ ಬಳಿಗೂ ತೆಗೆದುಕೊಂಡುಹೋಗಿ,
וַיֹּאמֶר מֶלֶךְ יִשְׂרָאֵל קְחוּ אֶת־מִיכָיְהוּ וַהֲשִׁיבֻהוּ אֶל־אָמוֹן שַׂר־הָעִיר וְאֶל־יוֹאָשׁ בֶּן־הַמֶּֽלֶךְ׃
26 ‘ನಾನು ಸಮಾಧಾನವಾಗಿ ತಿರುಗಿ ಬರುವವರೆಗೂ ನೀವು ಇವನನ್ನು ಸೆರೆಮನೆಯಲ್ಲಿಟ್ಟು, ಅವನಿಗೆ ರೊಟ್ಟಿ ಮತ್ತು ನೀರನ್ನು ಬಿಟ್ಟು ಮತ್ತೇನೂ ಕೊಡಬೇಡಿರೆಂದು ಅರಸನು ಹೇಳಿದ್ದಾನೆ’ ಎಂದು ತಿಳಿಸು,” ಎಂದನು.
וַאֲמַרְתֶּם כֹּה אָמַר הַמֶּלֶךְ שִׂימוּ זֶה בֵּית הַכֶּלֶא וְהַאֲכִלֻהוּ לֶחֶם לַחַץ וּמַיִם לַחַץ עַד שׁוּבִי בְשָׁלֽוֹם׃
27 ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ, ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.
וַיֹּאמֶר מִיכָיְהוּ אִם־שׁוֹב תָּשׁוּב בְּשָׁלוֹם לֹא־דִבֶּר יְהוָה בִּי וַיֹּאמֶר שִׁמְעוּ עַמִּים כֻּלָּֽם׃
28 ಹೀಗೆಯೇ ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.
וַיַּעַל מֶֽלֶךְ־יִשְׂרָאֵל וִֽיהוֹשָׁפָט מֶֽלֶךְ־יְהוּדָה אֶל־רָמֹת גִּלְעָֽד׃
29 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ಯುದ್ಧದಲ್ಲಿ ಪ್ರವೇಶಿಸುವೆನು. ಆದರೆ ನೀನು ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡಿರು,” ಎಂದನು. ಹಾಗೆಯೇ ಇಸ್ರಾಯೇಲಿನ ಅರಸನು ವೇಷಹಾಕಿಕೊಂಡು ಯುದ್ಧಕ್ಕೆ ಹೋದನು.
וַיֹּאמֶר מֶלֶךְ יִשְׂרָאֵל אֶל־יְהוֹשָׁפָט הִתְחַפֵּשׂ וָבוֹא בַמִּלְחָמָה וְאַתָּה לְבַשׁ בְּגָדֶיךָ וַיִּתְחַפֵּשׂ מֶלֶךְ יִשְׂרָאֵל וַיָּבֹאוּ בַּמִּלְחָמָֽה׃
30 ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು.
וּמֶלֶךְ אֲרָם צִוָּה אֶת־שָׂרֵי הָרֶכֶב אֲשֶׁר־לוֹ לֵאמֹר לֹא תִּלָּחֲמוּ אֶת־הַקָּטֹן אֶת־הַגָּדוֹל כִּי אִֽם־אֶת־מֶלֶךְ יִשְׂרָאֵל לְבַדּֽוֹ׃
31 ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆದರೆ ಯೆಹೋಷಾಫಾಟನು ಕೂಗಿಕೊಂಡನು. ಆಗ ಯೆಹೋವ ದೇವರು ಅವನಿಗೆ ಸಹಾಯಮಾಡಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.
וַיְהִי כִּרְאוֹת שָׂרֵי הָרֶכֶב אֶת־יְהוֹשָׁפָט וְהֵמָּה אָֽמְרוּ מֶלֶךְ יִשְׂרָאֵל הוּא וַיָּסֹבּוּ עָלָיו לְהִלָּחֵם וַיִּזְעַק יְהֽוֹשָׁפָט וַֽיהוָה עֲזָרוֹ וַיְסִיתֵם אֱלֹהִים מִמֶּֽנּוּ׃
32 ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳಿಗೆ ಗೊತ್ತಾದಾಗ, ಅವರು ಅವನನ್ನು ಬಿಟ್ಟುಹೋದರು.
וַיְהִי כִּרְאוֹת שָׂרֵי הָרֶכֶב כִּי לֹא־הָיָה מֶלֶךְ יִשְׂרָאֵל וַיָּשֻׁבוּ מֵאַחֲרָֽיו׃
33 ಆದರೆ ಅರಾಮ್ಯರ ಸೈನಿಕನೊಬ್ಬನು ಗುರಿ ಇಡದೆ ಬಿಲ್ಲಿಗೆ ಬಾಣವನ್ನೇರಿಸಿ ಹೊಡೆಯಲು, ಅದು ಇಸ್ರಾಯೇಲಿನ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆದ್ದರಿಂದ ಅವನು ತನ್ನ ರಥ ನಡೆಸುವವನಿಗೆ, “ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆಗೆ ತೆಗೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ,” ಎಂದನು.
וְאִישׁ מָשַׁךְ בַּקֶּשֶׁת לְתֻמּוֹ וַיַּךְ אֶת־מֶלֶךְ יִשְׂרָאֵל בֵּין הַדְּבָקִים וּבֵין הַשִּׁרְיָן וַיֹּאמֶר לָֽרַכָּב הֲפֹךְ ידיך יָדְךָ וְהוֹצֵאתַנִי מִן־הַֽמַּחֲנֶה כִּי הָחֳלֵֽיתִי׃
34 ಆ ದಿವಸವೆಲ್ಲಾ ಯುದ್ಧವು ಬಹು ಘೋರವಾದದ್ದರಿಂದ ಇಸ್ರಾಯೇಲಿನ ಅರಸನಾದ ಅಹಾಬನು ಸಾಯಂಕಾಲದವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲಿಯೇ ಆತುಕೊಂಡು ನಿಂತಿದ್ದನು, ಸೂರ್ಯನು ಅಸ್ತಮಿಸಿದಾಗ ಅವನು ಮರಣಹೊಂದಿದನು.
וַתַּעַל הַמִּלְחָמָה בַּיּוֹם הַהוּא וּמֶלֶךְ יִשְׂרָאֵל הָיָה מַעֲמִיד בַּמֶּרְכָּבָה נֹכַח אֲרָם עַד־הָעָרֶב וַיָּמָת לְעֵת בּוֹא הַשָּֽׁמֶשׁ׃

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 18 >